2 ಥೆಸಲೊನೀಕದವರಿಗೆ 1 : 1 (ERVKN)
ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲನು, ಸಿಲ್ವಾನನು ಮತ್ತು ತಿಮೊಥೆಯನು ಬರೆಯುವ ಪತ್ರ.
2 ಥೆಸಲೊನೀಕದವರಿಗೆ 1 : 2 (ERVKN)
ತಂದೆಯಾದ ದೇವರ ಮತ್ತು ಪ್ರಭುವಾದ ಯೇಸು ಕ್ರಿಸ್ತನ ಕೃಪೆಯೂ ಶಾಂತಿಯೂ ನಿಮಗಿರಲಿ.
2 ಥೆಸಲೊನೀಕದವರಿಗೆ 1 : 3 (ERVKN)
ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಸ್ತೋತ್ರ ಸಲ್ಲಿಸುತ್ತೇವೆ. ನಿಮ್ಮ ನಂಬಿಕೆಯು ಮತ್ತು ಇತರರ ಮೇಲೆ ನಿಮಗಿರುವ ಪ್ರೀತಿಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ನಿಮ್ಮ ವಿಷಯದಲ್ಲಿ ಸ್ತೋತ್ರ ಸಲ್ಲಿಸುವುದು ಯೋಗ್ಯವಾದ ಕಾರ್ಯವಾಗಿದೆ.
2 ಥೆಸಲೊನೀಕದವರಿಗೆ 1 : 4 (ERVKN)
ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.
2 ಥೆಸಲೊನೀಕದವರಿಗೆ 1 : 5 (ERVKN)
ದೇವರ ತೀರ್ಪನ್ನು ಕುರಿತು ಪೌಲನ ವಿವರಣೆ ದೇವರು ನ್ಯಾಯವಾದ ತೀರ್ಪನ್ನು ನೀಡುತ್ತಾನೆಂಬುದಕ್ಕೆ ಅದೇ ಪ್ರಮಾಣವಾಗಿದೆ. ದೇವರ ರಾಜ್ಯಕ್ಕೆ ನೀವು ಯೋಗ್ಯರಾಗಿರಬೇಕೆಂಬುದು ಆತನ ಅಪೇಕ್ಷೆ. ನೀವು ಹಿಂಸೆಪಡುತ್ತಿರುವುದು ಆ ರಾಜ್ಯಕ್ಕೋಸ್ಕರವೇ.
2 ಥೆಸಲೊನೀಕದವರಿಗೆ 1 : 6 (ERVKN)
ದೇವರು ಯೋಗ್ಯವಾದುದ್ದನ್ನೇ ಮಾಡುತ್ತಾನೆ. ನಿಮಗೆ ತೊಂದರೆ ಕೊಡುವ ಜನರಿಗೆ ದೇವರು ತೊಂದರೆ ಕೊಡುತ್ತಾನೆ.
2 ಥೆಸಲೊನೀಕದವರಿಗೆ 1 : 7 (ERVKN)
ತೊಂದರೆಗೆ ಒಳಗಾಗಿರುವ ನಿಮಗೆ ದೇವರು ಶಾಂತಿಯನ್ನು ನೀಡುತ್ತಾನೆ. ಆತನು ನಮಗೂ ಶಾಂತಿಯನ್ನು ನೀಡುವನು. ಪ್ರಭುವಾದ ಯೇಸು ತನ್ನ ಶಕ್ತಿಶಾಲಿಗಳಾದ ದೂತರೊಂದಿಗೆ ಪರಲೋಕದಿಂದ ಪ್ರತ್ಯಕ್ಷನಾದಾಗ ಈ ಶಾಂತಿಯನ್ನು ದಯಪಾಲಿಸುತ್ತಾನೆ.
2 ಥೆಸಲೊನೀಕದವರಿಗೆ 1 : 8 (ERVKN)
ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.
2 ಥೆಸಲೊನೀಕದವರಿಗೆ 1 : 9 (ERVKN)
ಅವರಿಗೆ ನಿತ್ಯವಾದ ದಂಡನೆಯಾಗುವುದು. ಪ್ರಭುವಿನೊಂದಿಗಿರಲು ಅವರಿಗೆ ಅವಕಾಶ ದೊರೆಯುವುದಿಲ್ಲ. ಆತನು ತನ್ನ ಮಹಾಶಕ್ತಿಯಿಂದ ಅವರನ್ನು ದೂರವಿರಿಸುತ್ತಾನೆ.
2 ಥೆಸಲೊನೀಕದವರಿಗೆ 1 : 10 (ERVKN)
ಪ್ರಭುವಾದ ಯೇಸು ಪ್ರತ್ಯಕ್ಷನಾದಾಗ ಇದು ಸಂಭವಿಸುತ್ತದೆ. ಆತನು ತನಗೆ ದೊರೆಯ ಬೇಕಾದ ವೈಭವವನ್ನು ಸ್ವೀಕರಿಸಲು ತನ್ನ ಪರಿಶುದ್ಧ ಜನರೊಂದಿಗೆ ಪ್ರತ್ಯಕ್ಷನಾಗುತ್ತಾನೆ. ಆತನನ್ನು ನಂಬಿದ ಜನರೆಲ್ಲರೂ ಆತನನ್ನು ಕಂಡು ಆಶ್ಚರ್ಯಚಕಿತರಾಗುವರು. ನಾವು ಹೇಳಿದ್ದನ್ನು ನಂಬಿದ ನೀವೆಲ್ಲರೂ ವಿಶ್ವಾಸಿಗಳ ಆ ಸಮೂಹದಲ್ಲಿರುವಿರಿ.
2 ಥೆಸಲೊನೀಕದವರಿಗೆ 1 : 11 (ERVKN)
ಆದಕಾರಣವೇ ಯಾವಾಗಲೂ ನಿಮಗಾಗಿ ಪ್ರಾರ್ಥಿಸುತ್ತೇವೆ. ಯಾವ ಒಳ್ಳೆಯ ಮಾರ್ಗದಲ್ಲಿ ನೀವು ಜೀವಿಸಬೇಕೆಂದು ದೇವರು ನಿಮ್ಮನ್ನು ಕರೆದನೋ, ಆ ಮಾರ್ಗದಲ್ಲೇ ನೀವು ಜೀವಿಸಲಿಕ್ಕಾಗುವಂತೆ ಪ್ರಾರ್ಥಿಸುತ್ತೇವೆ. ನಿಮ್ಮಲ್ಲಿರುವ ಒಳ್ಳೆಯ ತನವು ಒಳ್ಳೆಯದನ್ನು ಮಾಡುವಂತೆ ನಿಮ್ಮನ್ನು ಪ್ರೇರೇಪಿಸುತ್ತದೆ. ನಿಮ್ಮಲ್ಲಿರುವ ನಂಬಿಕೆಯು ನಿಮ್ಮಿಂದ ಕಾರ್ಯ ಸಾಧಿಸುತ್ತದೆ. ಈ ಕಾರ್ಯಗಳನ್ನು ನೀವು ಹೆಚ್ಚುಹೆಚ್ಚಾಗಿ ಮಾಡಲು ದೇವರು ತನ್ನ ಶಕ್ತಿಯಿಂದ ನಿಮಗೆ ಸಹಾಯ ಮಾಡಲೆಂದು ಬೇಡಿಕೊಳ್ಳುತ್ತೇವೆ.
2 ಥೆಸಲೊನೀಕದವರಿಗೆ 1 : 12 (ERVKN)
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.

1 2 3 4 5 6 7 8 9 10 11 12