2 ತಿಮೊಥೆಯನಿಗೆ 2 : 1 (ERVKN)
ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕ ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.
2 ತಿಮೊಥೆಯನಿಗೆ 2 : 2 (ERVKN)
ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ.
2 ತಿಮೊಥೆಯನಿಗೆ 2 : 3 (ERVKN)
ನಮಗಿರುವ ತೊಂದರೆಗಳಲ್ಲಿ ನೀನೂ ಪಾಲುಗಾರನಾಗು. ಕ್ರಿಸ್ತ ಯೇಸುವಿನ ನಿಜವಾದ ಸೈನಿಕನಂತೆ ಆ ತೊಂದರೆಗಳನ್ನು ಸ್ವೀಕರಿಸು.
2 ತಿಮೊಥೆಯನಿಗೆ 2 : 4 (ERVKN)
ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.
2 ತಿಮೊಥೆಯನಿಗೆ 2 : 5 (ERVKN)
ಓಟದ ಸ್ಪರ್ಧೆಯಲ್ಲಿ ಗೆಲ್ಲಬೇಕಾದರೆ, ಓಟಗಾರನು ಎಲ್ಲಾ ನಿಯಮಗಳನ್ನು ಪಾಲಿಸಬೇಕು.
2 ತಿಮೊಥೆಯನಿಗೆ 2 : 6 (ERVKN)
ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು.
2 ತಿಮೊಥೆಯನಿಗೆ 2 : 7 (ERVKN)
ನಾನು ಹೇಳುತ್ತಿರುವ ಈ ಸಂಗತಿಗಳನ್ನು ಕುರಿತು ಆಲೋಚಿಸು. ಈ ಸಂಗತಿಗಳನ್ನೆಲ್ಲ ಅರ್ಥಮಾಡಿಕೊಳ್ಳುವ ವಿವೇಕವನ್ನು ಪ್ರಭುವು ನಿನಗೆ ದಯಪಾಲಿಸುವನು.
2 ತಿಮೊಥೆಯನಿಗೆ 2 : 8 (ERVKN)
ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.
2 ತಿಮೊಥೆಯನಿಗೆ 2 : 9 (ERVKN)
ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.
2 ತಿಮೊಥೆಯನಿಗೆ 2 : 10 (ERVKN)
ಆದ್ದರಿಂದ ನಾನು ತಾಳ್ಮೆಯಿಂದಲೇ ಈ ತೊಂದರೆಗಳನ್ನು ಅಂಗೀಕರಿಸಿದ್ದೇನೆ. ಏಕೆಂದರೆ ದೇವರು ಆರಿಸಿರುವ ಜನರೆಲ್ಲರಿಗೂ ಸಹಾಯ ಮಾಡಬೇಕೆಂಬುದು ನನ್ನ ಅಪೇಕ್ಷೆಯಾಗಿದೆ. ಆ ಜನರು ಕ್ರಿಸ್ತ ಯೇಸುವಿನಲ್ಲಿ ರಕ್ಷಣೆ ಪಡೆಯಲೆಂದು ನಾನು ಈ ತೊಂದರೆಗಳನ್ನೆಲ್ಲ ಸ್ವೀಕರಿಸಿಕೊಂಡಿದ್ದೇನೆ. ಈ ರಕ್ಷಣೆಯೊಂದಿಗೆ ನಿತ್ಯಪ್ರಭಾವವು ದೊರೆಯುತ್ತದೆ.
2 ತಿಮೊಥೆಯನಿಗೆ 2 : 11 (ERVKN)
ಈ ಉಪದೇಶವು ಸತ್ಯವಾದದ್ದು: ನಾವು ಆತನೊಂದಿಗೆ (ಯೇಸು) ಸತ್ತಿದ್ದರೆ, ಆತನೊಡನೆ ಜೀವಿಸುವೆವು.
2 ತಿಮೊಥೆಯನಿಗೆ 2 : 12 (ERVKN)
ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು.
ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ.
2 ತಿಮೊಥೆಯನಿಗೆ 2 : 13 (ERVKN)
ನಾವು ನಂಬಿಗಸ್ತರಾಗಿಲ್ಲದಿದ್ದರೂ, ಆತನು ಇನ್ನೂ ನಂಬಿಗಸ್ತನಾಗಿರುವನು; ಏಕೆಂದರೆ ಆತನು ತನ್ನ ಸ್ವಭಾವಕ್ಕೆ ವಿರುದ್ಧನಾಗಲಾರನು.
2 ತಿಮೊಥೆಯನಿಗೆ 2 : 14 (ERVKN)
ಯೋಗ್ಯನಾದ ಕೆಲಸಗಾರನು ಜನರಿಗೆ ಈ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
2 ತಿಮೊಥೆಯನಿಗೆ 2 : 15 (ERVKN)
ದೇವರ ದೃಷ್ಟಿಯಲ್ಲಿ ಯೋಗ್ಯ ವ್ಯಕ್ತಿಯಾಗಲು ನಿನ್ನಿಂದಾದಷ್ಟು ಪ್ರಯಾಸಪಡು ಮತ್ತು ನಿನ್ನನ್ನೇ ಒಪ್ಪಿಸಿಕೊಡು. ತನ್ನ ಕೆಲಸದಲ್ಲಿ ನಾಚಿಕೆಪಡದಿರುವ ಕೆಲಸಗಾರನಾಗು, ಅಂದರೆ ಸತ್ಯೋಪದೇಶವನ್ನು ಯೋಗ್ಯವಾದ ರೀತಿಯಲ್ಲಿ ತಿಳಿಸುವವನಾಗು.
2 ತಿಮೊಥೆಯನಿಗೆ 2 : 16 (ERVKN)
ದೇವರಿಂದ ಬಂದಿಲ್ಲದ ನಿರರ್ಥಕ ಸಂಗತಿಗಳನ್ನು ಮಾತನಾಡುವ ಜನರಿಂದ ದೂರವಾಗಿರು. ಆ ರೀತಿಯ ಮಾತುಗಳು ಜನರನ್ನು ದೇವರಿಂದ ಮತ್ತಷ್ಟು ದೂರ ಮಾಡುತ್ತವೆ.
2 ತಿಮೊಥೆಯನಿಗೆ 2 : 17 (ERVKN)
ಅವರ ಕೆಟ್ಟ ಉಪದೇಶಗಳು ದೇಹದಲ್ಲಿ ಹರಡಿಕೊಳ್ಳುವ ಕಾಯಿಲೆಯಂತೆ ವ್ಯಾಪಿಸಿಕೊಳ್ಳುತ್ತವೆ. ಹುಮೆನಾಯನು ಮತ್ತು ಪಿಲೇತನು ಅಂತಹ ಜನರಾಗಿದ್ದಾರೆ.
2 ತಿಮೊಥೆಯನಿಗೆ 2 : 18 (ERVKN)
ಅವರು ಸತ್ಯೋಪದೇಶವನ್ನು ತಿರಸ್ಕರಿಸಿದರು. ಎಲ್ಲಾ ಜನರಿಗೆ ಉಂಟಾಗುವ ಪುನರುತ್ಥಾನವು ಈಗಾಗಲೇ ಆಗಿ ಹೋಗಿದೆಯೆಂದು ಅವರು ಹೇಳುತ್ತಾರೆ. ಅವರಿಬ್ಬರು ಕೆಲವು ಜನರ ನಂಬಿಕೆಯನ್ನು ಹಾಳುಮಾಡುತ್ತಿದ್ದಾರೆ.
2 ತಿಮೊಥೆಯನಿಗೆ 2 : 19 (ERVKN)
ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಉಲ್ಲೇಖನ: ಯಾಜಕ. 16:5. ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ.
2 ತಿಮೊಥೆಯನಿಗೆ 2 : 20 (ERVKN)
ದೊಡ್ಡ ಮನೆಯಲ್ಲಿ ಚಿನ್ನಬೆಳ್ಳಿಗಳಿಂದ ಮಾಡಿದ ವಸ್ತುಗಳಿರುತ್ತವೆ. ಅಲ್ಲದೆ ಮರದಿಂದ, ಮಣ್ಣಿನಿಂದ ಮಾಡಿದ ವಸ್ತುಗಳೂ ಇರುತ್ತವೆ. ಕೆಲವನ್ನು ವಿಶೇಷ ಕಾರ್ಯಕ್ಕಾಗಿ ಬಳಸುತ್ತಾರೆ. ಇತರ ವಸ್ತುಗಳನ್ನು ಹೀನವಾದ ಕೃತ್ಯಗಳಿಗೆ ಬಳಸುತ್ತಾರೆ.
2 ತಿಮೊಥೆಯನಿಗೆ 2 : 21 (ERVKN)
ಹೀಗಿರಲಾಗಿ ಒಬ್ಬನು ತನ್ನ ದುಷ್ಕೃತ್ಯಗಳನ್ನು ತೊರೆದು ತನ್ನನ್ನು ಶುದ್ಧೀಕರಿಸಿಕೊಂಡರೆ ಅವನನ್ನು ಬಳಸಲಾಗುವುದು. ಅವನು ದೇವರ ಸೇವೆಗೆ ಮೀಸಲಾಗುತ್ತಾನೆ; ಯಜಮಾನನಿಗೆ ಉಪಯುಕ್ತನಾಗುತ್ತಾನೆ; ಸತ್ಕಾರ್ಯಗಳನ್ನು ಕೈಕೊಳ್ಳಲು ಸಿದ್ಧನಾಗಿರುತ್ತಾನೆ.
2 ತಿಮೊಥೆಯನಿಗೆ 2 : 22 (ERVKN)
ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು.
2 ತಿಮೊಥೆಯನಿಗೆ 2 : 23 (ERVKN)
ಮೂಢತನದ ಮತ್ತು ಕ್ಷುಲ್ಲಕವಾದ ವಾದವಿವಾದಗಳಿಂದ ದೂರವಾಗಿರು. ಆ ವಾಗ್ವಾದಗಳು ಬೆಳೆದು ದೊಡ್ಡದಾಗುತ್ತವೆ ಎಂಬುದು ನಿನಗೆ ತಿಳಿದಿದೆ.
2 ತಿಮೊಥೆಯನಿಗೆ 2 : 24 (ERVKN)
ಪ್ರಭುವಿನ ಸೇವಕನು ವಾಗ್ವಾದ ಮಾಡಲೇಬಾರದು. ಅವನು ಪ್ರತಿಯೊಬ್ಬರಿಗೂ ದಯೆತೋರಬೇಕು; ಒಳ್ಳೆಯ ಉಪದೇಶಕನಾಗಿರಬೇಕು; ತಾಳ್ಮೆಯಿಂದಿರಬೇಕು.
2 ತಿಮೊಥೆಯನಿಗೆ 2 : 25 (ERVKN)
ಅವನು ತನ್ನೊಂದಿಗೆ ಸಮ್ಮತಿಸದಿರುವ ಜನರಿಗೆ ಸಾತ್ವಿಕ ರೀತಿಯಲ್ಲಿ ಉಪದೇಶ ಮಾಡಬೇಕು. ಅವರು ಸತ್ಯವನ್ನು ಅಂಗೀಕರಿಸಿಕೊಳ್ಳುವಂತೆ ದೇವರು ಅವರ ಹೃದಯಗಳನ್ನು ಪರಿವರ್ತಿಸಬಲ್ಲನು.
2 ತಿಮೊಥೆಯನಿಗೆ 2 : 26 (ERVKN)
ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26