2 ತಿಮೊಥೆಯನಿಗೆ 3 : 1 (ERVKN)
ಕೊನೆಯ ದಿನಗಳು ನೆನಪಿನಲ್ಲಿಡಿರಿ! ಕಡೇ ದಿನಗಳಲ್ಲಿ ಅನೇಕ ತೊಂದರೆಗಳು ಬರುತ್ತವೆ.
2 ತಿಮೊಥೆಯನಿಗೆ 3 : 2 (ERVKN)
ಆ ಕಾಲದಲ್ಲಿ ಜನರು ಸ್ವಾರ್ಥಿಗಳಾಗಿರುತ್ತಾರೆ, ಹಣದಾಸೆ ಉಳ್ಳವರಾಗಿರುತ್ತಾರೆ; ಬಡಾಯಿಕೊಚ್ಚುವವರಾಗಿರುತ್ತಾರೆ; ಗರ್ವಿಷ್ಠರಾಗಿರುತ್ತಾರೆ; ಚಾಡಿಕೋರರಾಗಿರುತ್ತಾರೆ; ತಂದೆತಾಯಿಗಳಿಗೆ ಅವಿಧೇಯರಾಗಿರುತ್ತಾರೆ; ಕೃತಜ್ಞತೆಯಿಲ್ಲದವರಾಗಿರುತ್ತಾರೆ; ಅಪವಿತ್ರರಾಗಿರುತ್ತಾರೆ;
2 ತಿಮೊಥೆಯನಿಗೆ 3 : 3 (ERVKN)
ಇತರರನ್ನು ಪ್ರೀತಿಸದವರಾಗಿರುತ್ತಾರೆ; ಕ್ಷಮಿಸದವರಾಗಿರುತ್ತಾರೆ; ದೂಷಿಸುವವರಾಗಿರುತ್ತಾರೆ. ತಮ್ಮ ಮೇಲೆ ತಮಗೇ ಹತೋಟಿಯಿಲ್ಲದವರಾಗಿರುತ್ತಾರೆ; ಉತ್ತಮವಾದದ್ದನ್ನು ದ್ವೇಷಿಸುವವರಾಗಿರುತ್ತಾರೆ; ಕೋಪಿಷ್ಠರಾಗಿರುತ್ತಾರೆ; ಸಂಕುಚಿತ ಗುಣವುಳ್ಳವರಾಗಿರುತ್ತಾರೆ.
2 ತಿಮೊಥೆಯನಿಗೆ 3 : 4 (ERVKN)
ಕೊನೆಯ ದಿನಗಳಲ್ಲಿ ಜನರು ಮಿತ್ರದ್ರೋಹಿಗಳಾಗಿರುತ್ತಾರೆ; ದುಡುಕಿ ಮೂರ್ಖ ಕೆಲಸಗಳನ್ನು ಮಾಡುವವರಾಗಿರುತ್ತಾರೆ; ಜಂಬದಿಂದ ಉಬ್ಬಿಕೊಂಡವರಾಗಿರುತ್ತಾರೆ; ದೇವರನ್ನು ಪ್ರೀತಿಸದೆ ವಿಲಾಸಪ್ರಿಯರಾಗಿರುತ್ತಾರೆ;
2 ತಿಮೊಥೆಯನಿಗೆ 3 : 5 (ERVKN)
ಆ ಜನರು ತಾವು ದೇವರ ಸೇವೆ ಮಾಡುತ್ತಿರುವುದಾಗಿ ನಟಿಸುತ್ತಲೇ ಇರುವರು. ಆದರೆ ಅವರು ನಿಜವಾಗಿಯೂ ದೇವರ ಸೇವೆ ಮಾಡುತ್ತಿಲ್ಲವೆಂಬುದನ್ನು ಅವರ ಜೀವಿತವೇ ತೋರ್ಪಡಿಸುತ್ತದೆ. ತಿಮೊಥೆಯನೇ, ಅಂತಹ ಜನರಿಂದ ದೂರವಾಗಿರು.
2 ತಿಮೊಥೆಯನಿಗೆ 3 : 6 (ERVKN)
ಅವರಲ್ಲಿ ಕೆಲವರು ಮನೆಗಳಿಗೆ ನುಸುಳಿಕೊಂಡು ಹೋಗಿ, ಪಾಪಿಷ್ಠರಾದ ಸ್ತ್ರೀಯರನ್ನು ವಶಪಡಿಸಿಕೊಳ್ಳುತ್ತಾರೆ. ಆ ಸ್ತ್ರೀಯರು ಅನೇಕ ಪಾಪದೋಷಗಳಿಂದ ತುಂಬಿದವರಾಗಿದ್ದಾರೆ.
2 ತಿಮೊಥೆಯನಿಗೆ 3 : 7 (ERVKN)
ಆ ಸ್ತ್ರೀಯರು ಯಾವಾಗಲೂ ಹೊಸ ಉಪದೇಶಗಳನ್ನು ಕಲಿಯಲು ಪ್ರಯತ್ನಿಸಿದರೂ ಸತ್ಯವನ್ನು ಪೂರ್ಣವಾಗಿ ಅರ್ಥಮಾಡಿಕೊಳ್ಳಲು ಅವರಿಗೆ ಸಾಧ್ಯವೇ ಇಲ್ಲ.
2 ತಿಮೊಥೆಯನಿಗೆ 3 : 8 (ERVKN)
ಯನ್ನ ಮತ್ತು ಯಂಬ್ರರನ್ನು ನೆನಪುಮಾಡಿಕೊ. ಅವರು ಮೋಶೆಯನ್ನು ವಿರೋಧಿಸಿದರು. ಈ ಜನರೂ ಅವರಂತೆಯೇ. ಅವರು ಸತ್ಯವನ್ನು ವಿರೋಧಿಸುತ್ತಾರೆ. ಆ ಜನರ ಆಲೋಚನೆಗಳೆಲ್ಲ ಗಲಿಬಿಲಿಗೊಂಡಿವೆ. ಅವರು ನಂಬಿಕೆಯನ್ನು ಅನುಸರಿಸುವ ತಮ್ಮ ಪ್ರಯತ್ನದಲ್ಲಿ ಸೋತುಹೋಗಿದ್ದಾರೆ.
2 ತಿಮೊಥೆಯನಿಗೆ 3 : 9 (ERVKN)
ಅವರ ಕಾರ್ಯಗಳಲ್ಲಿ ಅವರಿಗೆ ಯಶಸ್ಸಾಗುವುದಿಲ್ಲ. ಅವರು ಮೂರ್ಖರೆಂಬುದು ಜನರೆಲ್ಲರಿಗೂ ಕಾಣುತ್ತದೆ. ಯನ್ನ, ಯಂಬ್ರರಿಗೆ ಹೀಗೆಯೇ ಆಯಿತು.
2 ತಿಮೊಥೆಯನಿಗೆ 3 : 10 (ERVKN)
ಅಂತಿಮ ಸಲಹೆಗಳು ಆದರೆ ನನ್ನನ್ನು ಕುರಿತು ನಿನಗೆ ಎಲ್ಲವೂ ತಿಳಿದಿದೆ. ನನ್ನ ಬೋಧನೆ, ನಡತೆ, ಉದ್ದೇಶ, ನಂಬಿಕೆ, ತಾಳ್ಮೆ, ಪ್ರೀತಿ, ಸೈರಣೆ ನಿನಗೆ ತಿಳಿದಿವೆ.
2 ತಿಮೊಥೆಯನಿಗೆ 3 : 11 (ERVKN)
ನನಗೆ ಸಂಭವಿಸಿದ ಹಿಂಸೆ ಮತ್ತು ಸಂಕಟಗಳ ಬಗ್ಗೆಯೂ ನಿನಗೆ ತಿಳಿದಿದೆ. ಅಂತಿಯೋಕ್ಯ, ಇಕೋನ್ಯ, ಲುಸ್ತ್ರಗಳಲ್ಲಿ ನನಗೆ ಸಂಭವಿಸಿದ ಸಂಗತಿಗಳೆಲ್ಲವೂ ನಿನಗೆ ತಿಳಿದಿವೆ. ನಾನು ಆ ಸ್ಥಳಗಳಲ್ಲಿ ಅನುಭವಿಸಿದ ಹಿಂಸೆಯು ನಿನಗೆ ತಿಳಿದಿದೆ. ಆದರೆ ಆ ಎಲ್ಲ ತೊಂದರೆಗಳಿಂದ ಪ್ರಭುವು ನನ್ನನ್ನು ಕಾಪಾಡಿದನು.
2 ತಿಮೊಥೆಯನಿಗೆ 3 : 12 (ERVKN)
ಕ್ರಿಸ್ತ ಯೇಸುವಿನಲ್ಲಿ ದೇವರ ಚಿತ್ತಕ್ಕನುಸಾರವಾಗಿ ಜೀವಿಸುವ ಪ್ರತಿಯೊಬ್ಬರೂ ಹಿಂಸೆಗೆ ಒಳಗಾಗುವರು.
2 ತಿಮೊಥೆಯನಿಗೆ 3 : 13 (ERVKN)
ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.
2 ತಿಮೊಥೆಯನಿಗೆ 3 : 14 (ERVKN)
ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.
2 ತಿಮೊಥೆಯನಿಗೆ 3 : 15 (ERVKN)
ಚಿಕ್ಕಂದಿನಿಂದಲೂ ನಿನಗೆ ಪವಿತ್ರ ಗ್ರಂಥದ ಪರಿಚಯವಿದೆ. ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಆ ಪವಿತ್ರ ಗ್ರಂಥವು ಶಕ್ತವಾಗಿದೆ. ಕ್ರಿಸ್ತ ಯೇಸುವಿನಲ್ಲಿನ ನಂಬಿಕೆಯ ಮೂಲಕ ಆ ಜ್ಞಾನವು ರಕ್ಷಣೆಯ ಕಡೆಗೆ ನಡೆಸುತ್ತದೆ.
2 ತಿಮೊಥೆಯನಿಗೆ 3 : 16 (ERVKN)
ಪವಿತ್ರ ಗ್ರಂಥವನ್ನು ದೇವರು ದಯಪಾಲಿಸಿದನು. ಉಪದೇಶವನ್ನು ಮಾಡುವುದಕ್ಕೂ ಖಂಡನೆಗೂ ತಿದ್ದುಪಾಟಿಗೂ ನೀತಿಬೋಧೆಗೂ ಅದು ಉಪಯುಕ್ತವಾಗಿದೆ.
2 ತಿಮೊಥೆಯನಿಗೆ 3 : 17 (ERVKN)
ಆದ್ದರಿಂದ ದೇವರ ಸೇವಕರು ಸಿದ್ಧರೂ ಸಕಲ ಸತ್ಕಾರ್ಯಗಳಿಗೆ ಸನ್ನದ್ಧರೂ ಆಗಬಲ್ಲರು.
❮
❯
1
2
3
4
5
6
7
8
9
10
11
12
13
14
15
16
17