2 ತಿಮೊಥೆಯನಿಗೆ 4 : 1 (ERVKN)
ಜೀವಂತರಾಗಿರುವ ಜನರಿಗೂ ಸತ್ತುಹೋಗಿರುವ ಜನರಿಗೂ ನ್ಯಾಯತೀರಿಸುವಾತನು ಕ್ರಿಸ್ತ ಯೇಸುವೇ. ಆತನು ತನ್ನ ರಾಜ್ಯವನ್ನು ಹೊಂದಿದ್ದಾನೆ. ಆತನು ಮತ್ತೆ ಬರುವನು. ಆದ್ದರಿಂದ ಯೇಸು ಕ್ರಿಸ್ತನ ಮತ್ತು ದೇವರ ಸನ್ನಿಧಿಯಲ್ಲಿ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,
2 ತಿಮೊಥೆಯನಿಗೆ 4 : 2 (ERVKN)
ಸುವಾರ್ತೆಯನ್ನು ಜನರಿಗೆ ತಿಳಿಸು. ಕಾಲವು ಅನುಕೂಲವಾಗಿದ್ದರೂ ಅನಾನುಕೂಲವಾಗಿದ್ದರೂ ಬೋಧನೆಯನ್ನು ಮುಂದುವರಿಸು. ಜನರು ಮಾಡಬೇಕಾದುದನ್ನು ಅವರಿಗೆ ತಿಳಿಸು. ಅವರು ತಪ್ಪು ಮಾಡಿದಾಗ ಅದನ್ನು ಅವರಿಗೆ ತೋರಿಸಿಕೊಡು. ಅವರನ್ನು ಗದರಿಸು, ಇವುಗಳನ್ನು ಬಹಳ ತಾಳ್ಮೆಯಿಂದಲೂ ಎಚ್ಚರಿಕೆಯಿಂದಲೂ ಮಾಡು.
2 ತಿಮೊಥೆಯನಿಗೆ 4 : 3 (ERVKN)
ಜನರು ಸತ್ಯೋಪದೇಶವನ್ನು ಕೇಳದಿರುವ ಕಾಲವು ಬರಲಿದೆ. ಜನರು ತಮ್ಮನ್ನು ಮೆಚ್ಚಿಸುವಂಥ ಬೋಧಕರನ್ನು ಮತ್ತು ತಮ್ಮ ಕಿವಿಗೆ ಹಿತವೆನಿಸುವ ಬೋಧನೆಯನ್ನು ನೀಡುವ ಬೋಧಕರನ್ನು ಕಂಡುಕೊಳ್ಳುವರು.
2 ತಿಮೊಥೆಯನಿಗೆ 4 : 4 (ERVKN)
ಜನರು ಸತ್ಯವನ್ನು ಕೇಳದೆ ಸುಳ್ಳುಕಥೆಗಳನ್ನು ಕೇಳಲಾರಂಭಿಸುತ್ತಾರೆ.
2 ತಿಮೊಥೆಯನಿಗೆ 4 : 5 (ERVKN)
ಆದರೆ ನೀನು ಎಲ್ಲಾ ಕಾಲದಲ್ಲಿಯೂ ಸ್ವಸ್ಥಚಿತ್ತನಾಗಿರು. ತೊಂದರೆಗಳು ಬಂದಾಗ ಸಹಿಸಿಕೊ. ಸುವಾರ್ತೆಯನ್ನು ಪ್ರಚಾರಮಾಡು. ದೇವರ ಸೇವಕನಿಗೆ ಯೋಗ್ಯವಾದ ಎಲ್ಲಾ ಕಾರ್ಯಗಳನ್ನು ಮಾಡುತ್ತಿರು.
2 ತಿಮೊಥೆಯನಿಗೆ 4 : 6 (ERVKN)
ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.
2 ತಿಮೊಥೆಯನಿಗೆ 4 : 7 (ERVKN)
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ. ಪಂದ್ಯದಲ್ಲಿ ನನ್ನ ಓಟವನ್ನು ಮುಗಿಸಿದ್ದೇನೆ; ನನ್ನ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
2 ತಿಮೊಥೆಯನಿಗೆ 4 : 8 (ERVKN)
ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.
2 ತಿಮೊಥೆಯನಿಗೆ 4 : 9 (ERVKN)
ವೈಯಕ್ತಿಕ ಮಾತುಗಳು ನಿನಗೆ ಸಾಧ್ಯವಾದಷ್ಟು ಬೇಗನೆ ನನ್ನ ಬಳಿಗೆ ಬಾ.
2 ತಿಮೊಥೆಯನಿಗೆ 4 : 10 (ERVKN)
ದೇಮನು ಈ ಲೋಕವನ್ನು ಬಹಳ ಪ್ರೀತಿಸಿದನು. ಆದಕಾರಣವೇ ಅವನು ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೆ ಹೋದನು. ತೀತನು ದಲ್ಮಾತ್ಯಕ್ಕೆ ಹೋದನು.
2 ತಿಮೊಥೆಯನಿಗೆ 4 : 11 (ERVKN)
ಲೂಕನೊಬ್ಬನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ನೀನು ಬರುವಾಗ ಮಾರ್ಕನನ್ನೂ ನಿನ್ನ ಜೊತೆಯಲ್ಲಿ ಕರೆದುಕೊಂಡು ಬಾ. ಅವನು ನನ್ನ ಸೇವೆಗೆ ಸಹಾಯ ಮಾಡಬಲ್ಲನು.
2 ತಿಮೊಥೆಯನಿಗೆ 4 : 12 (ERVKN)
ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು.
2 ತಿಮೊಥೆಯನಿಗೆ 4 : 13 (ERVKN)
ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ.
2 ತಿಮೊಥೆಯನಿಗೆ 4 : 14 (ERVKN)
ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.
2 ತಿಮೊಥೆಯನಿಗೆ 4 : 15 (ERVKN)
ಅವನು ನಿನಗೂ ತೊಂದರೆ ಕೊಡಲಾಗದಂತೆ ಎಚ್ಚರವಾಗಿರು. ಅವನು ನಮ್ಮ ಉಪದೇಶದ ವಿರುದ್ಧ ಬಹಳ ಹೋರಾಡಿದನು.
2 ತಿಮೊಥೆಯನಿಗೆ 4 : 16 (ERVKN)
ಮೊದಲ ಸಲ ನಾನು ನನ್ನನ್ನು ಸಮರ್ಥಿಸಿಕೊಂಡಾಗ ನನಗೆ ಯಾರೂ ಸಹಾಯಮಾಡಲಿಲ್ಲ. ಎಲ್ಲರೂ ನನ್ನನ್ನು ಬಿಟ್ಟುಹೋದರು. ದೇವರು ಅವರನ್ನು ಕ್ಷಮಿಸಲಿ ಎಂದು ಪ್ರಾರ್ಥಿಸುತ್ತೇನೆ.
2 ತಿಮೊಥೆಯನಿಗೆ 4 : 17 (ERVKN)
ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.
2 ತಿಮೊಥೆಯನಿಗೆ 4 : 18 (ERVKN)
ಯಾರಾದರೂ ನನಗೆ ತೊಂದರೆ ಮಾಡಲು ಪ್ರಯತ್ನಿಸಿದರೆ, ಪ್ರಭುವು ನನ್ನನ್ನು ರಕ್ಷಿಸುವನು. ಪ್ರಭುವು ನನ್ನನ್ನು ಸುರಕ್ಷಿತವಾಗಿ ತನ್ನ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಪ್ರಭುವಿಗೆ ಮಹಿಮೆಯಾಗಲಿ.
2 ತಿಮೊಥೆಯನಿಗೆ 4 : 19 (ERVKN)
ಅಂತಿಮ ವಂದನೆಗಳು ಪ್ರಿಸ್ಕಳಿಗೆ, ಅಕ್ವಿಲ್ಲನಿಗೆ ಮತ್ತು ಒನೇಸಿಫೋರನ ಮನೆಯವರಿಗೆ ವಂದನೆಗಳನ್ನು ಹೇಳು.
2 ತಿಮೊಥೆಯನಿಗೆ 4 : 20 (ERVKN)
ಎರಸ್ತನು ಕೊರಿಂಥದಲ್ಲಿ ನೆಲಸಿದನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ನಾನು ಅವನನ್ನು ಮಿಲೇತದಲ್ಲಿ ಇರಿಸಬೇಕಾಯಿತು.
2 ತಿಮೊಥೆಯನಿಗೆ 4 : 21 (ERVKN)
ಚಳಿಗಾಲಕ್ಕೆ ಮುಂಚೆಯೇ ನನ್ನ ಬಳಿಗೆ ಬರಲು ನಿನ್ನಿಂದಾದಷ್ಟು ಪ್ರಯತ್ನಿಸು. ಯುಬೂಲ, ಪೊದೇಯ, ಲೀನ, ಕ್ಲೌದ್ಯ, ಇವರುಗಳು ಮತ್ತು ಇತರ ಸಹೋದರರೆಲ್ಲರೂ ನಿನಗೆ ವಂದನೆಗಳನ್ನು ಹೇಳಿದ್ದಾರೆ.
2 ತಿಮೊಥೆಯನಿಗೆ 4 : 22 (ERVKN)
ಪ್ರಭುವು ನಿನ್ನ ಆತ್ಮದ ಸಂಗಡ ಇರಲಿ. ಆತನ ಕೃಪೆಯು ನಿನ್ನೊಂದಿಗಿರಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22