3 ಯೋಹಾನನು 1 : 1 (ERVKN)
ಸಭಾಹಿರಿಯನು, ತಾನು ಸತ್ಯವಾಗಿಯೂ ಪ್ರೀತಿಸುವ, ತನ್ನ ಪ್ರಿಯ ಸ್ನೇಹಿತನಾದ ಗಾಯನಿಗೆ ಬರೆಯುವ ಪತ್ರ.
3 ಯೋಹಾನನು 1 : 2 (ERVKN)
ನನ್ನ ಪ್ರಿಯ ಸ್ನೇಹಿತನೇ, ನಿನ್ನ ಆತ್ಮವು ಅಭಿವೃದ್ಧಿ ಹೊಂದುತ್ತಿದೆ ಎಂಬುದು ನನಗೆ ತಿಳಿದಿದೆ. ನೀನು ಸರ್ವವಿಧದಲ್ಲಿಯೂ ಅಭಿವೃದ್ಧಿ ಹೊಂದಬೇಕೆಂದೂ ಆರೋಗ್ಯದಿಂದಿರಬೇಕೆಂದೂ ನಾನು ಪ್ರಾರ್ಥಿಸುತ್ತೇನೆ.
3 ಯೋಹಾನನು 1 : 3 (ERVKN)
ಕ್ರಿಸ್ತನಲ್ಲಿ ಸಹೋದರರಾದ ಕೆಲವರು ಬಂದು, ನಿನ್ನ ಜೀವನದಲ್ಲಿರುವ ಸತ್ಯವನ್ನು ನನಗೆ ತಿಳಿಸಿದರು. ನೀನು ಸತ್ಯಮಾರ್ಗದಲ್ಲಿ ನಡೆಯುತ್ತಿರುವೆ ಎಂಬುದನ್ನು ಅವರು ನನಗೆ ಹೇಳಿದರು. ಇದು ನನಗೆ ಬಹಳ ಸಂತೋಷವನ್ನು ಉಂಟುಮಾಡಿತು.
3 ಯೋಹಾನನು 1 : 4 (ERVKN)
ನನ್ನ ಮಕ್ಕಳು ಸತ್ಯಮಾರ್ಗದಲ್ಲಿ ನಡೆಯುತ್ತಿದ್ದಾರೆ ಎಂಬುದನ್ನು ಕೇಳುವಾಗಲೆಲ್ಲಾ ನನಗೆ ಬಹಳ ಸಂತೋಷವಾಗುತ್ತದೆ.
3 ಯೋಹಾನನು 1 : 5 (ERVKN)
ನನ್ನ ಪ್ರಿಯ ಸ್ನೇಹಿತನೇ, ಕ್ರಿಸ್ತನಲ್ಲಿ ಸಹೋದರರಾದವರಿಗೆ ನೀನು ಸಹಾಯ ಮಾಡುತ್ತಿರುವುದು ಒಳ್ಳೆಯದೇ ಸರಿ. ನಿನಗೆ ಗೊತ್ತಿಲ್ಲದ ಸಹೋದರರಿಗೂ ನೀನು ಸಹಾಯ ಮಾಡುತ್ತಿರುವೆ!
3 ಯೋಹಾನನು 1 : 6 (ERVKN)
ನಿನಗಿರುವ ಪ್ರೀತಿಯನ್ನು ಕುರಿತು ಈ ಸಹೋದರರು ಸಭೆಗೆ ತಿಳಿಸಿದರು. ಅವರು ತಮ್ಮ ಪ್ರವಾಸವನ್ನು ಮುಂದುವರಿಸಲು ದಯವಿಟ್ಟು ಅವರಿಗೆ ಸಹಾಯಮಾಡು. ದೇವರಿಗೆ ಮೆಚ್ಚಿಗೆಕರವಾದ ರೀತಿಯಲ್ಲಿ ಅವರಿಗೆ ಸಹಾಯಮಾಡು.
3 ಯೋಹಾನನು 1 : 7 (ERVKN)
ಈ ಸಹೋದರರು ಕ್ರಿಸ್ತನ ಸೇವೆಗಾಗಿ ಪ್ರವಾಸಹೊರಟಿದ್ದಾರೆ. ಅವಿಶ್ವಾಸಿಗಳಿಂದ ಅವರು ಯಾವ ಸಹಾಯವನ್ನೂ ತೆಗೆದುಕೊಳ್ಳಲಿಲ್ಲ.
3 ಯೋಹಾನನು 1 : 8 (ERVKN)
ಆದ್ದರಿಂದ ನಾವು ಈ ಸಹೋದರರಿಗೆ ಸಹಾಯ ಮಾಡಬೇಕು. ನಾವು ಅವರಿಗೆ ಸಹಾಯಮಾಡಿದಾಗ, ಸತ್ಯಕ್ಕೋಸ್ಕರ ಅವರು ಮಾಡುವ ಕಾರ್ಯದಲ್ಲಿ ನಾವೂ ಪಾಲುಗಾರರಾಗುತ್ತೇವೆ.
3 ಯೋಹಾನನು 1 : 9 (ERVKN)
ನಾನು ಸಭೆಗೆ ಒಂದು ಪತ್ರವನ್ನು ಬರೆದೆನು. ಆದರೆ ನಾವು ಹೇಳಿದುದನ್ನು ದಿಯೊತ್ರೇಫನು ಕೇಳುವುದಿಲ್ಲ. ಅವನು ತಾನೇ ಅವರ ನಾಯಕನಾಗಿರಬೇಕೆಂದು ಯಾವಾಗಲೂ ಇಚ್ಛಿಸುತ್ತಾನೆ.
3 ಯೋಹಾನನು 1 : 10 (ERVKN)
ನಾನು ಬಂದಾಗ, ದಿಯೊತ್ರೇಫನು ಮಾಡುತ್ತಿರುವುದರ ಬಗ್ಗೆ ತಿಳಿಸುತ್ತೇನೆ. ಅವನು ನಮ್ಮನ್ನು ಕುರಿತು ಸುಳ್ಳನ್ನೂ ಕೆಟ್ಟ ಸಂಗತಿಗಳನ್ನೂ ಹೇಳುತ್ತಾನೆ. ಆದರೆ ಅಷ್ಟೇ ಅಲ್ಲ! ಕ್ರಿಸ್ತನ ಸೇವೆಮಾಡುತ್ತಿರುವ ಆ ಸಹೋದರರಿಗೆ ಸಹಾಯಮಾಡಲು ಅವನು ಒಪ್ಪುವುದಿಲ್ಲ. ಅಲ್ಲದೆ ಆ ಸಹೋದರರಿಗೆ ಸಹಾಯ ಮಾಡಲಿಚ್ಛಿಸುವ ಜನರನ್ನೂ ಅವನು ತಡೆಯುತ್ತಾನೆ. ಆ ಜನರು ಸಭೆಯನ್ನು ಬಿಟ್ಟುಹೋಗುವಂತೆ ಅವನು ಮಾಡುತ್ತಾನೆ.
3 ಯೋಹಾನನು 1 : 11 (ERVKN)
ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ.
3 ಯೋಹಾನನು 1 : 12 (ERVKN)
ದೇಮೇತ್ರಿಯನ ಬಗ್ಗೆ ಜನರೆಲ್ಲರೂ ಒಳ್ಳೆಯ ಸಂಗತಿಗಳನ್ನು ಹೇಳುತ್ತಾರೆ. ಅವರು ಹೇಳುವುದನ್ನು ಸತ್ಯವೂ ಅಂಗೀಕರಿಸುತ್ತದೆ. ಅವನನ್ನು ಕುರಿತು ನಾವೂ ಸಹ ಒಳ್ಳೆಯದನ್ನು ಹೇಳುತ್ತೇವೆ. ನಾವು ಹೇಳುವುದು ನಿಜವೆಂಬುದು ನಿನಗೆ ತಿಳಿದಿದೆ.
3 ಯೋಹಾನನು 1 : 13 (ERVKN)
ನಾನು ನಿನಗೆ ಹೇಳಲಿಚ್ಛಿಸುವ ಅನೇಕ ವಿಚಾರಗಳಿವೆ. ಆದರೆ ನಾನು ಕಾಗದವನ್ನೂ ಇಂಕನ್ನೂ ಬಳಸಲು ಇಚ್ಛಿಸುವುದಿಲ್ಲ.
3 ಯೋಹಾನನು 1 : 14 (ERVKN)
ನಾನು ನಿನ್ನನ್ನು ನೋಡಲು ಬರಬೇಕೆಂದಿದ್ದೇನೆ. ಆಗ ನಾವಿಬ್ಬರೂ ಒಟ್ಟಿಗೆ ಮಾತನಾಡಬಹುದು. 14 ನಿನಗೆ ಶಾಂತಿಯಿರಲಿ. ಸ್ನೇಹಿತರು ನಿನಗೆ ವಂದನೆ ತಿಳಿಸಿದ್ದಾರೆ. ಅಲ್ಲಿರುವ ಸ್ನೇಹಿತರಿಗೆಲ್ಲ ದಯವಿಟ್ಟು ನಮ್ಮ ವಂದನೆಯನ್ನು ತಿಳಿಸು.
❮
❯
1
2
3
4
5
6
7
8
9
10
11
12
13
14