ಅಪೊಸ್ತಲರ ಕೃತ್ಯಗ 11 : 1 (ERVKN)
{ಪೇತ್ರನು ಜೆರುಸಲೇಮಿಗೆ ಹಿಂತಿರುಗುವನು} [PS] ಯೆಹೂದ್ಯರಲ್ಲದವರು ಸಹ ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅಪೊಸ್ತಲರಿಗೂ ಜುದೇಯದ ಸಹೋದರರಿಗೂ ತಿಳಿಯಿತು.
ಅಪೊಸ್ತಲರ ಕೃತ್ಯಗ 11 : 2 (ERVKN)
ಆದರೆ ಪೇತ್ರನು ಜೆರುಸಲೇಮಿಗೆ ಬಂದಾಗ ಕೆಲವು ಯೆಹೂದ್ಯ ವಿಶ್ವಾಸಿಗಳು [*ಯೆಹೂದ್ಯ ವಿಶ್ವಾಸಿಗಳು ಅಕ್ಷರಶಃ, “ಸುನ್ನತಿಯಾದವರು.” ಕ್ರೈಸ್ತರೆಲ್ಲಾ ಸುನ್ನತಿ ಮಾಡಿಸಿಕೊಳ್ಳಬೇಕು ಮತ್ತು ಮೋಶೆಯ ಧರ್ಮಶಾಸ್ತ್ರಕ್ಕೆ ವಿಧೇಯರಾಗಬೇಕು ಎಂದು ಹೇಳುತ್ತಿದ್ದ ಯೆಹೂದ್ಯರೆಂಬ ಅರ್ಥವನ್ನು ಇದು ಕೊಡಬಹುದು] ಅವನೊಂದಿಗೆ ವಾದ ಮಾಡಿದರು.
ಅಪೊಸ್ತಲರ ಕೃತ್ಯಗ 11 : 3 (ERVKN)
ಅವರು, “ಯೆಹೂದ್ಯರಲ್ಲದವರ ಮತ್ತು ಸುನ್ನತಿ ಮಾಡಿಸಿಕೊಂಡಿಲ್ಲದವರ ಮನೆಗಳಿಗೆ ನೀನು ಹೋದೆ! ನೀನು ಅವರೊಂದಿಗೆ ಊಟವನ್ನು ಸಹ ಮಾಡಿದೆ!” ಎಂದು ಹೇಳಿದರು. [PE][PS]
ಅಪೊಸ್ತಲರ ಕೃತ್ಯಗ 11 : 4 (ERVKN)
ಆದ್ದರಿಂದ ಪೇತ್ರನು ನಡೆದ ಸಂಗತಿಯನ್ನೆಲ್ಲಾ ಅವರಿಗೆ ವಿವರಿಸಿದನು.
ಅಪೊಸ್ತಲರ ಕೃತ್ಯಗ 11 : 5 (ERVKN)
ಪೇತ್ರನು ಅವರಿಗೆ, “ನಾನು ಜೊಪ್ಪ ಪಟ್ಟಣದಲ್ಲಿದ್ದೆನು. ನಾನು ಪ್ರಾರ್ಥಿಸುತ್ತಿದ್ದಾಗ ನನಗೊಂದು ದರ್ಶನವಾಯಿತು. ಆ ದರ್ಶನದಲ್ಲಿ, ಆಕಾಶದಿಂದ ಇಳಿದುಬರುತ್ತಿರುವ ಒಂದು ವಸ್ತುವನ್ನು ಕಂಡೆನು. ಅದು ದೊಡ್ಡ ತಟ್ಟೆಯಂತಿತ್ತು. ಅದರ ನಾಲ್ಕು ಮೂಲೆಗಳಲ್ಲಿ ಹಗ್ಗವನ್ನು ಕಟ್ಟಿ ಭೂಮಿಗೆ ಇಳಿಯಬಿಡಲಾಗಿತ್ತು. ಅದು ಇಳಿದು ಬಂದು ನನ್ನ ಸಮೀಪದಲ್ಲೇ ನಿಂತುಕೊಂಡಿತು.
ಅಪೊಸ್ತಲರ ಕೃತ್ಯಗ 11 : 6 (ERVKN)
ನಾನು ಅದರೊಳಗೆ ನೋಡಿದೆನು. ಅದರಲ್ಲಿ ಪಶುಗಳೂ ಕ್ರೂರಪ್ರಾಣಿಗಳೂ ಹರಿದಾಡುವ ಕ್ರಿಮಿಕೀಟಗಳೂ ಹಾರಾಡುವ ಪಕ್ಷಿಗಳೂ ಇದ್ದವು.
ಅಪೊಸ್ತಲರ ಕೃತ್ಯಗ 11 : 7 (ERVKN)
ಆಗ, ‘ಪೇತ್ರನೇ, ಎದ್ದೇಳು! ಇವುಗಳಲ್ಲಿ ಯಾವುದನ್ನು ಬೇಕಾದರೂ ಕೊಯ್ದುತಿನ್ನು!’ ಎಂದು ನನಗೆ ಹೇಳುವ ವಾಣಿಯನ್ನು ಕೇಳಿದೆನು. [PE][PS]
ಅಪೊಸ್ತಲರ ಕೃತ್ಯಗ 11 : 8 (ERVKN)
“ಆದರೆ ನಾನು, ‘ಪ್ರಭುವೇ, ನಾನು ಹಾಗೆ ಮಾಡಲಾರೆ! ಅಪವಿತ್ರವಾದ ಮತ್ತು ಅಶುದ್ಧವಾದ ಏನನ್ನಾಗಲಿ ನಾನೆಂದೂ ತಿಂದಿಲ್ಲ’ ಎಂದು ಹೇಳಿದೆನು. [PE][PS]
ಅಪೊಸ್ತಲರ ಕೃತ್ಯಗ 11 : 9 (ERVKN)
“ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು. [PE][PS]
ಅಪೊಸ್ತಲರ ಕೃತ್ಯಗ 11 : 10 (ERVKN)
“ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು.
ಅಪೊಸ್ತಲರ ಕೃತ್ಯಗ 11 : 11 (ERVKN)
ಅದೇ ಸಮಯದಲ್ಲಿ ನಾನಿದ್ದ ಮನೆಗೆ ಮೂರು ಮಂದಿ ಬಂದರು. ಈ ಮೂವರನ್ನು ಸೆಜರೇಯ ಪಟ್ಟಣದಿಂದ ಕಳುಹಿಸಲಾಗಿತ್ತು.
ಅಪೊಸ್ತಲರ ಕೃತ್ಯಗ 11 : 12 (ERVKN)
ಸಂದೇಹಪಡದೆ ಅವರೊಂದಿಗೆ ಹೋಗಬೇಕೆಂದು ಪವಿತ್ರಾತ್ಮನು ನನಗೆ ಹೇಳಿದನು. ಇಲ್ಲಿರುವ ಈ ಆರು ಮಂದಿ ಸಹೋದರರು ನನ್ನೊಂದಿಗೆ ಬಂದರು. ನಾವು ಕೊರ್ನೇಲಿಯನ ಮನೆಗೆ ಹೋದೆವು.
ಅಪೊಸ್ತಲರ ಕೃತ್ಯಗ 11 : 13 (ERVKN)
ತನ್ನ ಮನೆಯಲ್ಲಿ ದೇವದೂತನೊಬ್ಬನು ನಿಂತಿರುವುದನ್ನು ತಾನು ಕಂಡದ್ದರ ಬಗ್ಗೆ ಕೊರ್ನೇಲಿಯನು ನನಗೆ ಹೇಳಿದನು. ಆ ದೇವದೂತನು ಕೊರ್ನೇಲಿಯನಿಗೆ, ‘ಕೆಲವು ಜನರನ್ನು ಜೊಪ್ಪಕ್ಕೆ ಕಳುಹಿಸು. ಸೀಮೋನ್ ಪೇತ್ರನನ್ನು ಆಹ್ವಾನಿಸಿ ನಿಮ್ಮ ಬಳಿಗೆ ಬರಮಾಡಿಕೊ.
ಅಪೊಸ್ತಲರ ಕೃತ್ಯಗ 11 : 14 (ERVKN)
ಅವನು ನಿಮ್ಮೊಂದಿಗೆ ಮಾತಾಡುವನು. ಅವನು ಹೇಳುವ ಸಂಗತಿಗಳು ನಿನ್ನನ್ನೂ ನಿನ್ನ ಕುಟಂಬದವರನ್ನೂ ರಕ್ಷಿಸುತ್ತವೆ’ ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 11 : 15 (ERVKN)
“ನಾನು ನನ್ನ ಉಪದೇಶವನ್ನು ಆರಂಭಿಸಿದ ಮೇಲೆ, ಪ್ರಾರಂಭದಲ್ಲಿ [†ಪ್ರಾರಂಭ ಪಂಚಾಶತ್ತಮ ದಿನದಂದು ಆರಂಭವಾದ ಸಭೆ.] ಪವಿತ್ರಾತ್ಮನು ನಮ್ಮ ಮೇಲೆ ಬಂದಂತೆ ಅವರ ಮೇಲೆಯೂ ಬಂದನು.
ಅಪೊಸ್ತಲರ ಕೃತ್ಯಗ 11 : 16 (ERVKN)
ಆಗ ನಾನು ಪ್ರಭುವಿನ ಮಾತುಗಳನ್ನು ಜ್ಞಾಪಿಸಿಕೊಂಡೆನು. ‘ಯೋಹಾನನು ಜನರಿಗೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸಿದನು, ಆದರೆ ನೀವು ಪವಿತ್ರಾತ್ಮನಲ್ಲಿ ದೀಕ್ಷಾಸ್ನಾನ ಪಡೆಯುವಿರಿ!’ ಎಂದು ಪ್ರಭುವು ಹೇಳಿದ್ದನು.
ಅಪೊಸ್ತಲರ ಕೃತ್ಯಗ 11 : 17 (ERVKN)
ಪ್ರಭುವಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟ ನಮಗೆ ಕೊಟ್ಟ ವರವನ್ನೇ ದೇವರು ಈ ಜನರಿಗೆ ಕೊಟ್ಟನು. ಹೀಗಿರಲು ನಾನು ದೇವರ ಕೆಲಸವನ್ನು ನಿಲ್ಲಿಸಲು ಸಾಧ್ಯವಿರಲಿಲ್ಲ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 11 : 18 (ERVKN)
ಯೆಹೂದ್ಯವಿಶ್ವಾಸಿಗಳು ಈ ಸಂಗತಿಗಳನ್ನು ಕೇಳಿದಾಗ ವಾದವನ್ನು ನಿಲ್ಲಿಸಿ, ದೇವರನ್ನು ಸ್ತುತಿಸುತ್ತಾ, “ಹಾಗಾದರೆ ನಮ್ಮಂತೆಯೇ ತಮ್ಮ ಹೃದಯಗಳನ್ನು ಮಾರ್ಪಡಿಸಿಕೊಂಡು ಜೀವವನ್ನು ಹೊಂದಿಕೊಳ್ಳಲು ದೇವರು ಯೆಹೂದ್ಯರಲ್ಲದವರಿಗೂ ಅವಕಾಶ ಕೊಟ್ಟಿದ್ದಾನೆ!” ಎಂದು ಹೇಳಿದರು. [PS]
ಅಪೊಸ್ತಲರ ಕೃತ್ಯಗ 11 : 19 (ERVKN)
{ಅಂತಿಯೋಕ್ಯಕ್ಕೆ ಸುವಾರ್ತೆ} [PS] ಸ್ತೆಫನನು ಕೊಲ್ಲಲ್ಪಟ್ಟ ನಂತರ ಉಂಟಾದ ಹಿಂಸೆಯಿಂದಾಗಿ ವಿಶ್ವಾಸಿಗಳು ಚದರಿಹೋದರು. ವಿಶ್ವಾಸಿಗಳಲ್ಲಿ ಕೆಲವರು ಬಹು ದೂರದ ಸ್ಥಳಗಳಾದ ಫೆನಿಷ್ಯ, ಸೈಪ್ರಸ್ ಮತ್ತು ಅಂತಿಯೋಕ್ಯಗಳಿಗೆ ಹೋದರು. ವಿಶ್ವಾಸಿಗಳು ಈ ಸ್ಥಳಗಳಲ್ಲಿ ಸುವಾರ್ತೆಯನ್ನು ತಿಳಿಸಿದರು. ಆದರೆ ಅವರು ಯೆಹೂದ್ಯರಿಗೆ ಮಾತ್ರ ತಿಳಿಸಿದರು.
ಅಪೊಸ್ತಲರ ಕೃತ್ಯಗ 11 : 20 (ERVKN)
ಈ ವಿಶ್ವಾಸಿಗಳಲ್ಲಿ ಕೆಲವರು ಸೈಪ್ರಸ್ ಮತ್ತು ಸಿರೇನ್ ಸ್ಥಳಗಳವರಾಗಿದ್ದರು. ಈ ಜನರು ಅಂತಿಯೋಕ್ಯಕ್ಕೆ ಬಂದಾಗ ಅವರು, ಪ್ರಭುವಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅಲ್ಲಿಯ ಗ್ರೀಕ್ ಜನರಿಗೆ ತಿಳಿಸಿದರು.
ಅಪೊಸ್ತಲರ ಕೃತ್ಯಗ 11 : 21 (ERVKN)
ಪ್ರಭುವು ವಿಶ್ವಾಸಿಗಳಿಗೆ ಸಹಾಯ ಮಾಡುತ್ತಿದ್ದನು. ಜನರು ಬಹು ಸಂಖ್ಯೆಯಲ್ಲಿ ಪ್ರಭುವನ್ನು ನಂಬಿಕೊಂಡು ಅನುಸರಿಸತೊಡಗಿದರು. [PE][PS]
ಅಪೊಸ್ತಲರ ಕೃತ್ಯಗ 11 : 22 (ERVKN)
ಅಂತಿಯೋಕ್ಯದಲ್ಲಿದ್ದ ಈ ಹೊಸ ವಿಶ್ವಾಸಿಗಳ ಬಗ್ಗೆ ಜೆರುಸಲೇಮಿನ ಸಭೆಯವರಿಗೆ ತಿಳಿಯಿತು. ಆದ್ದರಿಂದ ಜೆರುಸಲೇಮಿನ ವಿಶ್ವಾಸಿಗಳು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 11 : 23 (ERVKN)
(23-24) ಬಾರ್ನಬನು ಒಳ್ಳೆಯ ಮನುಷ್ಯನಾಗಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು ಮತ್ತು ಪೂರ್ಣನಂಬಿಕೆಯುಳ್ಳವನಾಗಿದ್ದನು. ಬಾರ್ನಬನು ಅಂತಿಯೋಕ್ಯಕ್ಕೆ ಹೋದಾಗ, ದೇವರು ಆ ಜನರನ್ನು ಅಧಿಕವಾಗಿ ಆಶೀರ್ವದಿಸಿರುವುದನ್ನು ಕಂಡನು. ಇದರಿಂದ ಬಾರ್ನಬನಿಗೆ ತುಂಬಾ ಸಂತೋಷವಾಯಿತು. ಅಂತಿಯೋಕ್ಯದಲ್ಲಿದ್ದ ವಿಶ್ವಾಸಿಗಳನ್ನೆಲ್ಲ ಅವನು ಪ್ರೋತ್ಸಾಹಿಸಿದನು. ಅವನು ಅವರಿಗೆ, “ನಿಮ್ಮ ನಂಬಿಕೆಯನ್ನು ಎಂದಿಗೂ ಕಳೆದುಕೊಳ್ಳಬೇಡಿ. ಪ್ರಭುವಿಗೆ ನಿಮ್ಮ ಪೂರ್ಣಹೃದಯಗಳಿಂದ ಯಾವಾಗಲೂ ವಿಧೇಯರಾಗಿರಿ” ಎಂದು ಹೇಳಿದನು. ಅನೇಕ ಜನರು ಪ್ರಭುವಾದ ಯೇಸುವಿನ ಹಿಂಬಾಲಕರಾದರು. [PE][PS]
ಅಪೊಸ್ತಲರ ಕೃತ್ಯಗ 11 : 24 (ERVKN)
ಅಪೊಸ್ತಲರ ಕೃತ್ಯಗ 11 : 25 (ERVKN)
ಬಳಿಕ ಬಾರ್ನಬನು ಸೌಲನನ್ನು ಹುಡುಕಿಕೊಂಡು ತಾರ್ಸಸ್ ಪಟ್ಟಣಕ್ಕೆ ಹೋದನು.
ಅಪೊಸ್ತಲರ ಕೃತ್ಯಗ 11 : 26 (ERVKN)
ಬಾರ್ನಬನು ಅಲ್ಲಿ ಸೌಲನನ್ನು ಕಂಡುಕೊಂಡು ಅವನನ್ನು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಸೌಲನು ಮತ್ತು ಬಾರ್ನಬನು ಅಂತಿಯೋಕ್ಯದಲ್ಲಿ ಒಂದು ವರ್ಷ ಪೂರ್ತಿ ಸಭೆಯ ಅನ್ಯೋನ್ಯತೆಯಲ್ಲಿ ಇದ್ದುಕೊಂಡು ಅನೇಕ ಜನರಿಗೆ ಬೋಧಿಸಿದರು. ಯೇಸುವಿನ ಹಿಂಬಾಲಕರಿಗೆ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲೇ. [PE][PS]
ಅಪೊಸ್ತಲರ ಕೃತ್ಯಗ 11 : 27 (ERVKN)
ಆ ಕಾಲದಲ್ಲಿ ಕೆಲವು ಪ್ರವಾದಿಗಳು ಜೆರುಸಲೇಮಿನಿಂದ ಅಂತಿಯೋಕ್ಯಕ್ಕೆ ಹೋದರು.
ಅಪೊಸ್ತಲರ ಕೃತ್ಯಗ 11 : 28 (ERVKN)
ಈ ಪ್ರವಾದಿಗಳಲ್ಲಿ “ಅಗಬ” ಎಂಬ ಒಬ್ಬನಿದ್ದನು. ಅಗಬನು ಅಂತಿಯೋಕ್ಯದಲ್ಲಿ ಪವಿತ್ರಾತ್ಮನ ಪ್ರೇರಣೆಯಿಂದ, “ಇಡೀ ಪ್ರಪಂಚಕ್ಕೆ ಭೀಕರ ಕ್ಷಾಮ ಬರಲಿದೆ” ಎಂದು ಹೇಳಿದನು. (ಈ ಬರಗಾಲವು ಕ್ಲಾಡಿಯಸ್ ಚಕ್ರವರ್ತಿಯ ಕಾಲದಲ್ಲಿ ಬಂದಿತು.)
ಅಪೊಸ್ತಲರ ಕೃತ್ಯಗ 11 : 29 (ERVKN)
ಜುದೇಯದಲ್ಲಿರುವ ಸಹೋದರ ಸಹೋದರಿಯರಿಗೆ ಸಹಾಯಮಾಡಲು ವಿಶ್ವಾಸಿಗಳು ನಿರ್ಧರಿಸಿದರು. ವಿಶ್ವಾಸಿಗಳಲ್ಲಿ ಪ್ರತಿಯೊಬ್ಬರೂ ತಮ್ಮಿಂದಾದಷ್ಟನ್ನು ಅವರಿಗೆ ಕಳುಹಿಸಿಕೊಡಲು ಯೋಜನೆ ಮಾಡಿದರು.
ಅಪೊಸ್ತಲರ ಕೃತ್ಯಗ 11 : 30 (ERVKN)
ಅವರು ಹಣವನ್ನು ಕೂಡಿಸಿ ಬಾರ್ನಬ ಮತ್ತು ಸೌಲರಿಗೆ ಕೊಟ್ಟರು. ಬಳಿಕ ಬಾರ್ನಬ ಮತ್ತು ಸೌಲರು ಅದನ್ನು ತಂದು ಜುದೇಯದಲ್ಲಿದ್ದ ಸಭಾಹಿರಿಯರಿಗೆ ಕೊಟ್ಟರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: