ಅಪೊಸ್ತಲರ ಕೃತ್ಯಗ 12 : 1 (ERVKN)
ಹೆರೋದ ಅಗ್ರಿಪ್ಪನಿಂದ ಸಭೆಗೆ ಹಿಂಸೆ ಆ ಕಾಲದಲ್ಲಿ ರಾಜ ಹೆರೋದನು ಸಭೆಯವರಲ್ಲಿ ಕೆಲವರನ್ನು ಹಿಂಸಿಸತೊಡಗಿ,
ಅಪೊಸ್ತಲರ ಕೃತ್ಯಗ 12 : 2 (ERVKN)
ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಯಾಕೋಬನು ಯೋಹಾನನ ಅಣ್ಣ.
ಅಪೊಸ್ತಲರ ಕೃತ್ಯಗ 12 : 3 (ERVKN)
ಯೆಹೂದ್ಯರು ಇದನ್ನು ಮೆಚ್ಚಿಕೊಂಡರೆಂಬುದು ಹೆರೋದನಿಗೆ ತಿಳಿಯಿತು. ಆದ್ದರಿಂದ ಅವನು ಪೇತ್ರನನ್ನು ಬಂಧಿಸಿ (ಇದು ನಡೆದದ್ದು ಯೆಹೂದ್ಯರ ಪಸ್ಕಹಬ್ಬದ ಕಾಲದಲ್ಲಿ) ಸೆರೆಮನೆಗೆ ಹಾಕಿಸಿದನು.
ಅಪೊಸ್ತಲರ ಕೃತ್ಯಗ 12 : 4 (ERVKN)
ಹದಿನಾರು ಮಂದಿ ಸಿಪಾಯಿಗಳು ಪೇತ್ರನನ್ನು ಕಾಯುತ್ತಿದ್ದರು. ಪಸ್ಕಹಬ್ಬದ ಕಾಲ ಮುಗಿದೊಡನೆ ಪೇತ್ರನನ್ನು ಜನರ ಮುಂದೆ ನಿಲ್ಲಿಸಬೇಕೆಂದಿದ್ದನು.
ಅಪೊಸ್ತಲರ ಕೃತ್ಯಗ 12 : 5 (ERVKN)
ಹೀಗೆ ಪೇತ್ರನು ಸೆರೆಮನೆಯಲ್ಲಿದ್ದಾಗ ಸಭೆಯವರು ಅವನಿಗಾಗಿ ಎಡಬಿಡದೆ ದೇವರಲ್ಲಿ ಪ್ರಾರ್ಥಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 12 : 6 (ERVKN)
ಪೇತ್ರನಿಗೆ ಸೆರೆಮನೆಯಿಂದ ಬಿಡುಗಡೆ ಪೇತ್ರನು ಇಬ್ಬರು ಸೈನಿಕರ ಮಧ್ಯೆ ನಿದ್ರೆಮಾಡುತ್ತಿದ್ದನು. ಅವನನ್ನು ಎರಡು ಸರಪಣಿಗಳಿಂದ ಕಟ್ಟಲಾಗಿತ್ತು. ಅನೇಕ ಸೈನಿಕರು ಸೆರೆಮನೆಯ ಬಾಗಿಲನ್ನು ಕಾಯುತ್ತಿದ್ದರು. ಆಗ ರಾತ್ರಿಯಾಗಿತ್ತು. ಮರುದಿನ ಪೇತ್ರನನ್ನು ಜನರ ಮುಂದೆ ತರಬೇಕೆಂದು ಹೆರೋದನು ಯೋಚಿಸಿಕೊಂಡಿದ್ದನು.
ಅಪೊಸ್ತಲರ ಕೃತ್ಯಗ 12 : 7 (ERVKN)
ಇದ್ದಕ್ಕಿದ್ದಂತೆ, ಪ್ರಭುವಿನ ದೂತನೊಬ್ಬನು ಅಲ್ಲಿ ನಿಂತುಕೊಂಡನು. ಬೆಳಕು ಕೋಣೆಯಲ್ಲಿ ಪ್ರಕಾಶಿಸಿತು. ದೇವದೂತನು ಪೇತ್ರನ ಪಕ್ಕೆಯನ್ನು ಮುಟ್ಟಿ ಅವನನ್ನು ಎಬ್ಬಿಸಿ, “ಬೇಗನೆ ಎದ್ದೇಳು!” ಎಂದನು. ಆ ಕೂಡಲೆ ಸರಪಣಿಗಳು ಪೇತ್ರನ ಕೈಗಳಿಂದ ಕಳಚಿಬಿದ್ದವು.
ಅಪೊಸ್ತಲರ ಕೃತ್ಯಗ 12 : 8 (ERVKN)
ದೇವದೂತನು ಪೇತ್ರನಿಗೆ, “ಬಟ್ಟೆ ಧರಿಸಿಕೊ, ಪಾದರಕ್ಷೆಗಳನ್ನು ಮೆಟ್ಟಿಕೊ” ಎಂದು ಹೇಳಿದನು. ಅಂತೆಯೇ ಪೇತ್ರನು ಮಾಡಿದನು. ಬಳಿಕ ದೇವದೂತನು, “ನಿನ್ನ ಮೇಲಂಗಿಯನ್ನು ಧರಿಸಿಕೊಂಡು ನನ್ನನ್ನು ಹಿಂಬಾಲಿಸು” ಎಂದನು.
ಅಪೊಸ್ತಲರ ಕೃತ್ಯಗ 12 : 9 (ERVKN)
ದೇವದೂತನು ಹೊರಗೆ ಹೋದನು. ಪೇತ್ರನು ಅವನನ್ನು ಹಿಂಬಾಲಿಸಿದನು. ದೇವದೂತನು ನಿಜವಾಗಿಯೂ ಹೀಗೆ ಮಾಡುತ್ತಿದ್ದಾನೆಂಬುದು ಪೇತ್ರನಿಗೆ ತಿಳಿದಿರಲಿಲ್ಲ. ತಾನು ಕನಸು ಕಾಣುತ್ತಿರಬಹುದೆಂದು ಅವನು ಯೋಚಿಸಿಕೊಂಡನು.
ಅಪೊಸ್ತಲರ ಕೃತ್ಯಗ 12 : 10 (ERVKN)
ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.
ಅಪೊಸ್ತಲರ ಕೃತ್ಯಗ 12 : 11 (ERVKN)
ನಡೆದ ಸಂಗತಿಯನ್ನು ಆಗ ಅರಿತುಕೊಂಡ ಪೇತ್ರನು, “ಪ್ರಭುವು ನನ್ನ ಬಳಿಗೆ ತನ್ನ ದೇವದೂತನನ್ನು ನಿಜವಾಗಿಯೂ ಕಳುಹಿಸಿದನೆಂದು ಈಗ ನನಗೆ ತಿಳಿಯಿತು. ಆತನು ನನ್ನನ್ನು ಹೆರೋದನ ಕೈಯಿಂದ ಪಾರುಮಾಡಿದನು. ನನಗೆ ಕೇಡು ಸಂಭವಿಸುತ್ತದೆಯೆಂದು ಯೆಹೂದ್ಯರು ಯೋಚಿಸಿಕೊಂಡಿದ್ದರು. ಆದರೆ ಪ್ರಭುವು ನನ್ನನ್ನು ಆ ಕೇಡಿನಿಂದ ರಕ್ಷಿಸಿದನು” ಎಂದುಕೊಂಡನು.
ಅಪೊಸ್ತಲರ ಕೃತ್ಯಗ 12 : 12 (ERVKN)
ಬಳಿಕ ಪೇತ್ರನು ಮರಿಯಳ ಮನೆಗೆ ಹೋದನು. ಆಕೆಯು ಯೋಹಾನನ ತಾಯಿ. (ಯೋಹಾನನನ್ನು ಮಾರ್ಕನೆಂದು ಕರೆಯುತ್ತಿದ್ದರು.) ಅನೇಕ ಜನರು ಅಲ್ಲಿ ಸೇರಿದ್ದರು. ಅವರೆಲ್ಲರೂ ಪ್ರಾರ್ಥಿಸುತ್ತಿದ್ದರು.
ಅಪೊಸ್ತಲರ ಕೃತ್ಯಗ 12 : 13 (ERVKN)
ಪೇತ್ರನು ಹೊರ ಬಾಗಲನ್ನು ತಟ್ಟಿದನು. ಯಾರೆಂದು ವಿಚಾರಿಸುವುದಕ್ಕಾಗಿ ರೋದೆ ಎಂಬ ಸೇವಕಿ ಬಂದಳು.
ಅಪೊಸ್ತಲರ ಕೃತ್ಯಗ 12 : 14 (ERVKN)
ರೋದೆಯು ಪೇತ್ರನ ಧ್ವನಿಯನ್ನು ಗುರುತಿಸಿದಳು. ಆಕೆಗೆ ತುಂಬಾ ಸಂತೋಷವಾಯಿತು. ಬಾಗಿಲು ತೆರೆಯುವುದನ್ನು ಆಕೆ ಮರೆತು, ನೆರೆದು ಬಂದಿದ್ದ ಜನರ ಬಳಿಗೆ ಓಡಿಹೋಗಿ, “ಪೇತ್ರನು ಬಾಗಿಲ ಬಳಿ ನಿಂತಿದ್ದಾನೆ!” ಎಂದು ಹೇಳಿದಳು.
ಅಪೊಸ್ತಲರ ಕೃತ್ಯಗ 12 : 15 (ERVKN)
ಆ ವಿಶ್ವಾಸಿಗಳು ಆಕೆಗೆ, “ನಿನಗೆ ಹುಚ್ಚು ಹಿಡಿದಿದೆ!” ಎಂದರು. ಆದರೆ ಅವಳು ತಾನು ಹೇಳುತ್ತಿರುವುದು ನಿಜವೆಂದು ಒತ್ತಿಹೇಳಿದಳು. ಆದ್ದರಿಂದ ಅವರು, “ಅವನು ಪೇತ್ರನ ದೂತನಿರಬೇಕು” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 12 : 16 (ERVKN)
ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.
ಅಪೊಸ್ತಲರ ಕೃತ್ಯಗ 12 : 17 (ERVKN)
ಪೇತ್ರನು ಅವರಿಗೆ ಸುಮ್ಮನಿರಬೇಕೆಂದು ಸನ್ನೆ ಮಾಡಿದನು. ಪ್ರಭುವು ತನ್ನನ್ನು ಸೆರೆಮನೆಯಿಂದ ಬಿಡಿಸಿದ ರೀತಿಯನ್ನು ಅವನು ಅವರಿಗೆ ವಿವರಿಸಿ, “ಯಾಕೋಬನಿಗೂ ಮತ್ತು ಸಹೋದರರಿಗೂ ಈ ಸಂಗತಿಯನ್ನು ತಿಳಿಸಿರಿ” ಎಂದು ಹೇಳಿದನು. ಬಳಿಕ ಪೇತ್ರನು ಬೇರೊಂದು ಸ್ಥಳಕ್ಕೆ ಅಲ್ಲಿಂದ ಹೊರಟುಹೋದನು.
ಅಪೊಸ್ತಲರ ಕೃತ್ಯಗ 12 : 18 (ERVKN)
ಮರುದಿನ, ಪೇತ್ರನು ಏನಾದನೆಂದು ಸೈನಿಕರ ನಡುವೆ ದೊಡ್ಡ ಗೊಂದಲವೇ ಎದ್ದಿತು.
ಅಪೊಸ್ತಲರ ಕೃತ್ಯಗ 12 : 19 (ERVKN)
ಹೆರೋದನು ಎಲ್ಲೆಲ್ಲಿ ಹುಡುಕಿದರೂ ಪೇತ್ರನನ್ನು ಕಂಡುಹಿಡಿಯಲಾಗಲಿಲ್ಲ. ಆದ್ದರಿಂದ ಹೆರೋದನು ಕಾವಲುಗಾರರನ್ನು ವಿಚಾರಿಸಿ ಅವರಿಗೇ ಮರಣದಂಡನೆ ವಿಧಿಸಿದನು. ತರುವಾಯ ಹೆರೋದನು ಜುದೇಯದಿಂದ ಹೊರಟು ಸೆಜರೇಯ ಪಟ್ಟಣಕ್ಕೆ ಬಂದು ಅಲ್ಲೇ ಸ್ವಲ್ಪಕಾಲ ನೆಲೆಸಿದ್ದನು.
ಅಪೊಸ್ತಲರ ಕೃತ್ಯಗ 12 : 20 (ERVKN)
ಹೆರೋದ ಅಗ್ರಿಪ್ಪನ ಮರಣ ಟೈರ್ ಮತ್ತು ಸಿದೋನ್ ಪಟ್ಟಣಗಳ ಜನರ ಮೇಲೆ ಹೆರೋದನು ಬಹು ಕೋಪಗೊಂಡಿದ್ದನು. ಆ ಜನರೆಲ್ಲರೂ ಹೆರೋದನನ್ನು ಭೇಟಿಯಾಗಲು ಒಟ್ಟಾಗಿ ಹೋದರು. ಅವರು ಬ್ಲಾಸ್ತನನ್ನು ತಮ್ಮ ಕಡೆಗೆ ಒಲಿಸಿಕೊಂಡರು. ಬ್ಲಾಸ್ತನು ರಾಜನ ವೈಯಕ್ತಿಕ ಸೇವಕನಾಗಿದ್ದನು. ಆ ಜನರು ತಮ್ಮೊಂದಿಗೆ ಶಾಂತಿಸಂಧಾನ ಮಾಡಿಕೊಳ್ಳಬೇಕೆಂದು ಹೆರೋದನನ್ನು ಕೇಳಿಕೊಂಡರು. ಯಾಕೆಂದರೆ ಅವರ ನಾಡಿಗೆ ಹೆರೋದನ ನಾಡಿನಿಂದ ಆಹಾರವನ್ನು ತರಿಸಿಕೊಳ್ಳಬೇಕಾಗಿತ್ತು.
ಅಪೊಸ್ತಲರ ಕೃತ್ಯಗ 12 : 21 (ERVKN)
ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು.
ಅಪೊಸ್ತಲರ ಕೃತ್ಯಗ 12 : 22 (ERVKN)
ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು.
ಅಪೊಸ್ತಲರ ಕೃತ್ಯಗ 12 : 23 (ERVKN)
ಹೆರೋದನು ಈ ಹೊಗಳಿಕೆಯನ್ನು ತಾನೇ ಸ್ವೀಕರಿಸಿಕೊಂಡನು. ದೇವರನ್ನು ಮಹಿಮೆಪಡಿಸಲಿಲ್ಲ. ಆದ್ದರಿಂದ ಆ ಕ್ಷಣವೇ, ಪ್ರಭುವಿನ ದೂತನೊಬ್ಬನು ಅವನಿಗೆ ಕಾಯಿಲೆಯನ್ನು ಬರಮಾಡಿದನು. ಅವನ ದೇಹದ ಒಳಭಾಗವನ್ನು ಹುಳಗಳು ತಿಂದುಹಾಕಿದ್ದರಿಂದ ಅವನು ಸತ್ತುಹೋದನು.
ಅಪೊಸ್ತಲರ ಕೃತ್ಯಗ 12 : 24 (ERVKN)
ದೇವರ ಸಂದೇಶವು ಹಬ್ಬುತ್ತಿತ್ತು ಮತ್ತು ಹೆಚ್ಚುಹೆಚ್ಚು ಜನರ ಮೇಲೆ ಪ್ರಭಾವ ಬೀರುತ್ತಿತ್ತು. ಇದರಿಂದ ವಿಶ್ವಾಸಿಗಳ ಸಮುದಾಯವು ದೊಡ್ಡದಾಗತೊಡಗಿತು.
ಅಪೊಸ್ತಲರ ಕೃತ್ಯಗ 12 : 25 (ERVKN)
ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25