ಅಪೊಸ್ತಲರ ಕೃತ್ಯಗ 14 : 1 (ERVKN)
{ಇಕೋನಿಯಾದಲ್ಲಿ ಪೌಲ ಮತ್ತು ಬಾರ್ನಬ} [PS] ಪೌಲ ಬಾರ್ನಬರು ಇಕೋನಿಯಾ ಪಟ್ಟಣಕ್ಕೆ ಹೋದರು. (ಪ್ರತಿಯೊಂದು ಪಟ್ಟಣದಲ್ಲಿಯೂ ಅವರು ಮಾಡುತ್ತಿದ್ದಂತೆ) ಇಲ್ಲಿಯೂ ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಜನರಿಗೆ ಬೋಧಿಸಿದರು. ಪೌಲ ಬಾರ್ನಬರ ಅಮೋಘ ಬೋಧನೆಯನ್ನು ಕೇಳಿ ಅನೇಕ ಯೆಹೂದ್ಯರು ಮತ್ತು ಗ್ರೀಕರು ನಂಬಿಕೊಂಡರು.
ಅಪೊಸ್ತಲರ ಕೃತ್ಯಗ 14 : 2 (ERVKN)
ಆದರೆ ಯೆಹೂದ್ಯರಲ್ಲಿ ನಂಬದೆ ಹೋದ ಕೆಲವರು ಯೆಹೂದ್ಯರಲ್ಲದವರನ್ನು ಪ್ರಚೋಧಿಸಿ ಸಹೋದರರ ವಿರುದ್ಧ ಜನರನ್ನು ಎಬ್ಬಿಸಿದರು. [PE][PS]
ಅಪೊಸ್ತಲರ ಕೃತ್ಯಗ 14 : 3 (ERVKN)
ಆದರೆ ಪೌಲ ಬಾರ್ನಬರು ಇಕೋನಿಯಾದಲ್ಲಿ ಬಹುಕಾಲವಿದ್ದು ಪ್ರಭುವಿನ ಕುರಿತು ಧೈರ್ಯದಿಂದ ಮಾತಾಡಿದರು. ಪ್ರಭುವು ಅವರ ಮೂಲಕ ಸೂಚಕಕಾರ್ಯಗಳನ್ನು ಮತ್ತು ಅದ್ಭುತಕಾರ್ಯಗಳನ್ನು ಮಾಡಿ ತನ್ನ ಕೃಪಾಸಂದೇಶವನ್ನು ನಿರೂಪಿಸಿದನು.
ಅಪೊಸ್ತಲರ ಕೃತ್ಯಗ 14 : 4 (ERVKN)
ಆದರೆ ಪಟ್ಟಣದ ಜನರಲ್ಲಿ ಕೆಲವರು ಯೆಹೂದ್ಯರ ಮಾತನ್ನೂ ಇನ್ನು ಕೆಲವರು ಪೌಲ ಬಾರ್ನಬರ ಮಾತನ್ನೂ ನಂಬಿಕೊಂಡದ್ದರಿಂದ ಅವರಲ್ಲಿಯೇ ಎರಡು ಪಂಗಡವಾಯಿತು. [PE][PS]
ಅಪೊಸ್ತಲರ ಕೃತ್ಯಗ 14 : 5 (ERVKN)
ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು.
ಅಪೊಸ್ತಲರ ಕೃತ್ಯಗ 14 : 6 (ERVKN)
ಇದನ್ನು ಅರಿತುಕೊಂಡ ಪೌಲ ಬಾರ್ನಬರು ಆ ಪಟ್ಟಣವನ್ನು ಬಿಟ್ಟು ಲುಕವೋನಿಯಾದ ಪಟ್ಟಣಗಳಾದ ಲುಸ್ತ್ರ ಮತ್ತು ದರ್ಬೆಗಳಿಗೂ ಹಾಗೂ ಆ ಪಟ್ಟಣಗಳ ಸುತ್ತಮುತ್ತಲಿದ್ದ ಪ್ರದೇಶಗಳಿಗೂ ಹೋದರು.
ಅಪೊಸ್ತಲರ ಕೃತ್ಯಗ 14 : 7 (ERVKN)
ಅವರು ಅಲ್ಲಿಯೂ ಸುವಾರ್ತೆ ತಿಳಿಸಿದರು. [PS]
ಅಪೊಸ್ತಲರ ಕೃತ್ಯಗ 14 : 8 (ERVKN)
{ಲುಸ್ತ್ರ ಮತ್ತು ದರ್ಬೆಗಳಲ್ಲಿ ಪೌಲನು} [PS] ಲುಸ್ತ್ರದಲ್ಲಿ ಒಬ್ಬ ಮನುಷ್ಯನಿದ್ದನು. ಅವನ ಕಾಲುಗಳಲ್ಲಿ ಬಲವಿರಲಿಲ್ಲ. ಹುಟ್ಟುಕುಂಟನಾಗಿದ್ದ ಅವನು ಎಂದೂ ನಡೆದಿರಲಿಲ್ಲ.
ಅಪೊಸ್ತಲರ ಕೃತ್ಯಗ 14 : 9 (ERVKN)
ಈ ಮನುಷ್ಯನು ತಾನು ಕುಳಿತಲ್ಲೇ ಪೌಲನ ಮಾತನ್ನು ಆಲಿಸುತ್ತಿದ್ದನು. ಪೌಲನು ಅವನನ್ನು ದೃಷ್ಟಿಸಿ ನೋಡಿದನು. ದೇವರು ಗುಣಪಡಿಸಬಲ್ಲನೆಂಬ ನಂಬಿಕೆ ಅವನಲ್ಲಿರುವುದನ್ನು ಪೌಲನು ಕಂಡು,
ಅಪೊಸ್ತಲರ ಕೃತ್ಯಗ 14 : 10 (ERVKN)
ಅವನಿಗೆ, “ಎದ್ದೇಳು, ಕಾಲೂರಿ ನಿಂತುಕೊ!” ಎಂದು ಗಟ್ಟಿಯಾಗಿ ಹೇಳಿದನು. ಕೂಡಲೇ ಆ ಮನುಷ್ಯನು ಜಿಗಿದುನಿಂತು ನಡೆಯಲಾರಂಭಿಸಿದನು. [PE][PS]
ಅಪೊಸ್ತಲರ ಕೃತ್ಯಗ 14 : 11 (ERVKN)
ಪೌಲನು ಮಾಡಿದ ಈ ಕಾರ್ಯವನ್ನು ಕಂಡ ಜನರು ತಮ್ಮ ಸ್ವಂತ ಲುಕವೋನಿಯ ಭಾಷೆಯಲ್ಲಿ “ದೇವರುಗಳು ಮನುಷ್ಯರೂಪ ಧರಿಸಿ ನಮ್ಮ ಬಳಿಗೆ ಇಳಿದು ಬಂದಿದ್ದಾರೆ!” ಎಂದು ಆರ್ಭಟಿಸಿದರು.
ಅಪೊಸ್ತಲರ ಕೃತ್ಯಗ 14 : 12 (ERVKN)
ಜನರು ಬಾರ್ನಬನನ್ನು “ಜೆಯುಸ್” [*ಜೆಯುಸ್ ಅನೇಕ ಗ್ರೀಕ್ ದೇವರುಗಳಲ್ಲಿ ಅತ್ಯಂತ ಪ್ರಮುಖನಾದ ದೇವರು.] ದೇವರೆಂದೂ ಮುಖ್ಯ ಬೋಧಕನಾಗಿದ್ದ ಪೌಲನನ್ನು “ಹೆರ್ಮೆ” [†ಹೆರ್ಮೆ ಮತ್ತೊಬ್ಬ ಗ್ರೀಕ್ ದೇವರು. ಇತರ ದೇವರುಗಳಿಗೆ ಇವನು ಸಂದೇಶಕನೆಂದು ಗ್ರೀಕರು ನಂಬಿದ್ದರು.] ದೇವರೆಂದೂ ಕರೆದರು.
ಅಪೊಸ್ತಲರ ಕೃತ್ಯಗ 14 : 13 (ERVKN)
ಜೆಯುಸ್‌ನ ಗುಡಿಯು ಪಟ್ಟಣದ ಸಮೀಪದಲ್ಲಿತ್ತು. ಈ ಗುಡಿಯ ಅರ್ಚಕನು ಕೆಲವು ಹೋರಿಗಳನ್ನು ಮತ್ತು ಹೂವುಗಳನ್ನು ಪಟ್ಟಣದ ಬಾಗಿಲಿನ ಬಳಿಗೆ ತೆಗೆದುಕೊಂಡು ಬಂದನು. ಆ ಅರ್ಚಕನು ಮತ್ತು ಜನರು ಪೌಲ ಬಾರ್ನಬರಿಗೆ ಬಲಿಕೊಟ್ಟು ಅವರನ್ನು ಆರಾಧಿಸಬೇಕೆಂದಿದ್ದರು. [PE][PS]
ಅಪೊಸ್ತಲರ ಕೃತ್ಯಗ 14 : 14 (ERVKN)
ಇದನ್ನು ಕೇಳಿದ ಪೌಲ ಬಾರ್ನಬರು ತಮ್ಮ ಬಟ್ಟೆಗಳನ್ನು ಹರಿದುಕೊಂಡು [‡ಬಟ್ಟೆಗಳನ್ನು ಹರಿದುಕೊಂಡು ಇದು ಅವರ ಕೋಪವನ್ನು ಸೂಚಿಸುತ್ತದೆ.] ಜನಸಮೂಹದೊಳಕ್ಕೆ ಓಡಿಹೋಗಿ ಹೀಗೆಂದು ಕೂಗಿ ಹೇಳಿದರು:
ಅಪೊಸ್ತಲರ ಕೃತ್ಯಗ 14 : 15 (ERVKN)
“ಜನರೇ, ನೀವು ಈ ಕಾರ್ಯಗಳನ್ನು ಮಾಡುತ್ತಿರುವುದೇಕೆ? ನಾವು ದೇವರುಗಳಲ್ಲ. ನಾವು ನಿಮ್ಮಂತೆ ಕೇವಲ ಮನುಷ್ಯರು. ನಿಮಗೆ ಸುವಾರ್ತೆಯನ್ನು ಹೇಳುವುದಕ್ಕಾಗಿ ನಾವು ಬಂದೆವು. ವ್ಯರ್ಥವಾದ ಈ ಕಾರ್ಯಗಳನ್ನು ನೀವು ಬಿಟ್ಟುಬಿಡಿರಿ; ಜೀವಸ್ವರೂಪನಾದ ದೇವರ ಕಡೆಗೆ ತಿರುಗಿಕೊಳ್ಳಿರಿ. ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಮತ್ತು ಅವುಗಳಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಮಾಡಿದಾತನು ಆತನೇ. [PE][PS]
ಅಪೊಸ್ತಲರ ಕೃತ್ಯಗ 14 : 16 (ERVKN)
“ಹಿಂದಿನ ಕಾಲದಲ್ಲಿ ದೇವರು ಎಲ್ಲಾ ಜನಾಂಗಗಳನ್ನು ಅವುಗಳ ಇಷ್ಟಕ್ಕನುಸಾರವಾಗಿ ನಡೆಯಲು ಬಿಟ್ಟುಕೊಟ್ಟನು.
ಅಪೊಸ್ತಲರ ಕೃತ್ಯಗ 14 : 17 (ERVKN)
ಆದರೆ ತಾನೊಬ್ಬನೇ ನಿಜದೇವರೆಂಬುದನ್ನು ಆತನು ತನ್ನ ಒಳ್ಳೆಯ ಕಾರ್ಯಗಳಿಂದ ನಿರೂಪಿಸುತ್ತಿದ್ದಾನೆ. ಆತನು ನಿಮಗೆ ಆಕಾಶದಿಂದ ಮಳೆಯನ್ನೂ ನಿಮ್ಮ ಆಹಾರಕೋಸ್ಕರ ಸಕಾಲದಲ್ಲಿ ಸುಗ್ಗಿಯನ್ನೂ ದಯಪಾಲಿಸಿ ನಿಮ್ಮ ಹೃದಯಗಳನ್ನು ಆನಂದದಿಂದ ತುಂಬಿಸುತ್ತಿದ್ದಾನೆ.” [PE][PS]
ಅಪೊಸ್ತಲರ ಕೃತ್ಯಗ 14 : 18 (ERVKN)
ಪೌಲ ಬಾರ್ನಬರು ಇಷ್ಟೆಲ್ಲಾ ಹೇಳಿದರೂ ಯಜ್ಞವರ್ಪಿಸಿ ಆರಾಧಿಸದಂತೆ ಜನರನ್ನು ತಡೆಯಲು ಬಹಳ ಪ್ರಯಾಸಪಡಬೇಕಾಯಿತು. [PE][PS]
ಅಪೊಸ್ತಲರ ಕೃತ್ಯಗ 14 : 19 (ERVKN)
ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.
ಅಪೊಸ್ತಲರ ಕೃತ್ಯಗ 14 : 20 (ERVKN)
ಆದರೆ, ಯೇಸುವಿನ ಶಿಷ್ಯರು ಅವನ ಸುತ್ತಲೂ ನೆರೆದು ಬಂದಾಗ ಅವನು ಎದ್ದು ಪಟ್ಟಣದೊಳಗೆ ಹೋದನು. ಮರುದಿನ ಅವನು ಮತ್ತು ಬಾರ್ನಬನು ದರ್ಬೆಪಟ್ಟಣಕ್ಕೆ ಹೋದರು. [PS]
ಅಪೊಸ್ತಲರ ಕೃತ್ಯಗ 14 : 21 (ERVKN)
{ಸಿರಿಯದ ಅಂತಿಯೋಕ್ಯಕ್ಕೆ ಮರುಪ್ರಯಾಣ} [PS] ಪೌಲ ಬಾರ್ನಬರು ದರ್ಬೆ ಪಟ್ಟಣದಲ್ಲೂ ಸುವಾರ್ತೆಯನ್ನು ತಿಳಿಸಿದರು. ಅನೇಕ ಜನರು ಯೇಸುವಿನ ಶಿಷ್ಯರಾದರು. ಪೌಲಬಾರ್ನಬರು ಲುಸ್ತ್ರ, ಇಕೋನಿಯ ಮತ್ತು ಅಂತಿಯೋಕ್ಯ ಪಟ್ಟಣಗಳಿಗೆ ಹಿಂತಿರುಗಿ,
ಅಪೊಸ್ತಲರ ಕೃತ್ಯಗ 14 : 22 (ERVKN)
ಯೇಸುವಿನ ಶಿಷ್ಯರನ್ನು ಬಲಗೊಳಿಸಿ, ನಂಬಿಕೆಯಲ್ಲಿ ದೃಢವಾಗಿರಲು ಅವರಿಗೆ ಪ್ರೋತ್ಸಾಹಿಸಿದರು, “ನಾವು ದೇವರ ರಾಜ್ಯಕ್ಕೆ ಅನೇಕ ಕಷ್ಟಗಳ ಮೂಲಕ ಹೋಗಬೇಕಾಗಿದೆ” ಎಂದು ಬೋಧಿಸಿದರು.
ಅಪೊಸ್ತಲರ ಕೃತ್ಯಗ 14 : 23 (ERVKN)
ಪೌಲ ಬಾರ್ನಬರು ಪ್ರತಿಯೊಂದು ಸಭೆಗೂ ಹಿರಿಯರನ್ನು ಆಯ್ಕೆ ಮಾಡಿದರು. ಅವರು ಈ ಹಿರಿಯರಿಗೋಸ್ಕರ ಉಪವಾಸವಿದ್ದು ಪ್ರಾರ್ಥನೆ ಮಾಡಿ ಅವರನ್ನು ಪ್ರಭುವಿನ ಕೈಗೆ ಒಪ್ಪಿಸಿಕೊಟ್ಟರು. [PE][PS]
ಅಪೊಸ್ತಲರ ಕೃತ್ಯಗ 14 : 24 (ERVKN)
ಪೌಲ ಬಾರ್ನಬರು ಪಿಸಿದಿಯ ನಾಡಿನ ಮೂಲಕವಾಗಿ ಪಾಂಫೀಲಿಯ ನಾಡಿಗೆ ಬಂದರು.
ಅಪೊಸ್ತಲರ ಕೃತ್ಯಗ 14 : 25 (ERVKN)
ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು.
ಅಪೊಸ್ತಲರ ಕೃತ್ಯಗ 14 : 26 (ERVKN)
ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ. [PE][PS]
ಅಪೊಸ್ತಲರ ಕೃತ್ಯಗ 14 : 27 (ERVKN)
ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.
ಅಪೊಸ್ತಲರ ಕೃತ್ಯಗ 14 : 28 (ERVKN)
ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28

BG:

Opacity:

Color:


Size:


Font: