ಅಪೊಸ್ತಲರ ಕೃತ್ಯಗ 2 : 1 (ERVKN)
ಪವಿತ್ರಾತ್ಮನ ಆಗಮನ ಪಂಚಾಶತ್ತಮ ಹಬ್ಬದ *ಪಂಚಾಶತ್ತಮ ಹಬ್ಬ ಯೆಹೂದ್ಯರ ಹಬ್ಬವಿದು. ಇದು ಗೋಧಿಯ ಸುಗ್ಗಿಹಬ್ಬ. ದಿನ ಬಂದಾಗ ಅವರೆಲ್ಲರು ಒಂದು ಸ್ಥಳದಲ್ಲಿ ಒಟ್ಟಾಗಿ ಸೇರಿದ್ದರು.
ಅಪೊಸ್ತಲರ ಕೃತ್ಯಗ 2 : 2 (ERVKN)
ಆಗ, ಆಕಾಶದಿಂದ ಒಂದು ಶಬ್ದ ಇದ್ದಕ್ಕಿದ್ದಂತೆ ಬಂದಿತು. ಬಿರುಗಾಳಿ ಬೀಸುತ್ತಿದೆಯೋ ಎಂಬಂತಿತ್ತು ಆ ಶಬ್ದ. ಅವರು ಕುಳಿತುಕೊಂಡಿದ್ದ ಮನೆಯಲ್ಲೆಲ್ಲಾ ಆ ಶಬ್ದ ತುಂಬಿಕೊಂಡಿತು.
ಅಪೊಸ್ತಲರ ಕೃತ್ಯಗ 2 : 3 (ERVKN)
ಬೆಂಕಿಯ ಜ್ವಾಲೆಗಳಂತಿದ್ದ ಏನನ್ನೊ ಅವರು ಕಂಡರು. ಜ್ವಾಲೆಗಳು ವಿಂಗಡವಾಗಿ ಅಲ್ಲಿದ್ದ ಪ್ರತಿಯೊಬ್ಬ ವ್ಯಕ್ತಿಯ ಮೇಲೆ ನೆಲೆಸಿದವು.
ಅಪೊಸ್ತಲರ ಕೃತ್ಯಗ 2 : 4 (ERVKN)
ಅವರೆಲ್ಲರೂ ಪವಿತ್ರಾತ್ಮಭರಿತರಾದರು ಮತ್ತು ವಿವಿಧ ಭಾಷೆಗಳಲ್ಲಿ ಮಾತಾಡತೊಡಗಿದರು. ಪವಿತ್ರಾತ್ಮನೇ ಅವರಿಗೆ ಆ ಶಕ್ತಿಯನ್ನು ಕೊಟ್ಟನು.
ಅಪೊಸ್ತಲರ ಕೃತ್ಯಗ 2 : 5 (ERVKN)
ಬಹು ಧಾರ್ಮಿಕರಾದ ಅನೇಕ ಯೆಹೂದ್ಯರು ಆ ಸಮಯದಲ್ಲಿ ಜೆರುಸಲೇಮಿನಲ್ಲಿದ್ದರು. ಇವರಲ್ಲಿ ಪ್ರಪಂಚದ ಪ್ರತಿಯೊಂದು ದೇಶದಿಂದ ಬಂದ ಜನರಿದ್ದರು.
ಅಪೊಸ್ತಲರ ಕೃತ್ಯಗ 2 : 6 (ERVKN)
ಈ ಶಬ್ದವನ್ನು ಕೇಳಿ ಈ ಜನರ ಒಂದು ದೊಡ್ಡ ಸಮೂಹವೇ ಅಲ್ಲಿಗೆ ಬಂದಿತು. ಅಪೊಸ್ತಲರು ಮಾತಾಡುತ್ತಿರುವುದು ಪ್ರತಿಯೊಬ್ಬರಿಗೂ ಅವರವರ ಸ್ವಂತ ಭಾಷೆಗಳಲ್ಲಿ ಕೇಳಿಸುತ್ತಿರುವುದನ್ನು ಕಂಡು ಅವರಿಗೆ ಆಶ್ಚರ್ಯವಾಯಿತು.
ಅಪೊಸ್ತಲರ ಕೃತ್ಯಗ 2 : 7 (ERVKN)
ಇದನ್ನು ನೋಡಿದ ಯೆಹೂದ್ಯರೆಲ್ಲರೂ ವಿಸ್ಮಯಗೊಂಡರು. ಹೀಗೆ ಮಾಡಲು ಅಪೊಸ್ತಲರಿಗೆ ಹೇಗೆ ಸಾಧ್ಯವಾಯಿತೆಂದು ಅವರಿಗೆ ಅರ್ಥವಾಗಲಿಲ್ಲ. ಅವರು, “ಮಾತಾಡುತ್ತಿರುವ ಈ ಜನರು (ಅಪೊಸ್ತಲರು) ಗಲಿಲಾಯದವರು! †ಗಲಿಲಾಯದವರು ಇವರು ತಮ್ಮ ಸ್ವಂತ ಭಾಷೆಯಲ್ಲಿ ಮಾತ್ರ ಮಾತಾಡಬಲ್ಲರೆಂಬುದು ಜನರ ಭಾವನೆಯಾಗಿತ್ತು.
ಅಪೊಸ್ತಲರ ಕೃತ್ಯಗ 2 : 8 (ERVKN)
ಆದರೆ ಇವರು ನಮ್ಮ ಸ್ವಂತ ಭಾಷೆಗಳಲ್ಲಿ ಮಾತಾಡುತ್ತಿರುವಂತೆ ಕೇಳಿಸುತ್ತಿದೆ. ಇದು ಹೇಗೆ ಸಾಧ್ಯ? ನಾವು ಬೇರೆಬೇರೆ ಸ್ಥಳಗಳವರು.
ಅಪೊಸ್ತಲರ ಕೃತ್ಯಗ 2 : 9 (ERVKN)
ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು, ‡ಏಷ್ಯಾ ಇದು ಏಷ್ಯಾ ಮೈನರಿನ ಪಶ್ಚಿಮ ಭಾಗ.
ಅಪೊಸ್ತಲರ ಕೃತ್ಯಗ 2 : 10 (ERVKN)
ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,
ಅಪೊಸ್ತಲರ ಕೃತ್ಯಗ 2 : 11 (ERVKN)
ಕ್ರೇಟ್‌ನವರು ಮತ್ತು ಅರೇಬಿಯವರು ಇದ್ದಾರೆ. ನಮ್ಮಲ್ಲಿರುವ ಕೆಲವು ಜನರು ಹುಟ್ಟು ಯೆಹೂದ್ಯರು. ಉಳಿದವರು ಮತಾಂತರ ಹೊಂದಿದವರು. ನಾವು ಬೇರೆಬೇರೆ ದೇಶಗಳವರು. ಆದರೆ ಈ ಜನರು ಮಾತಾಡುತ್ತಿರುವುದು ನಮ್ಮ ಸ್ವಂತ ಭಾಷೆಗಳಲ್ಲಿ ನಮಗೆ ಕೇಳಿಸುತ್ತಿದೆ! ಅವರು ದೇವರ ಬಗ್ಗೆ ಹೇಳುತ್ತಿರುವ ಮಹಾಸಂಗತಿಗಳು ನಮಗೆಲ್ಲರಿಗೂ ಅರ್ಥವಾಗುತ್ತಿವೆ” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 2 : 12 (ERVKN)
ಜನರೆಲ್ಲರೂ ವಿಸ್ಮಯಗೊಂಡರು ಮತ್ತು ಗಲಿಬಿಲಿಯಾದರು. ಅವರು, “ಏನು ನಡೆಯುತ್ತಿದೆ?” ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
ಅಪೊಸ್ತಲರ ಕೃತ್ಯಗ 2 : 13 (ERVKN)
ಕೆಲವರು ಅಪೊಸ್ತಲರನ್ನು ನೋಡಿ ನಗುತ್ತಾ, “ಇವರು ಅತಿಯಾಗಿ ದ್ರಾಕ್ಷಾರಸ ಕುಡಿದು ಮತ್ತರಾಗಿದ್ದಾರೆ” ಎಂದು ಹಾಸ್ಯಮಾಡಿದರು.
ಅಪೊಸ್ತಲರ ಕೃತ್ಯಗ 2 : 14 (ERVKN)
ಪೇತ್ರನ ಪ್ರಸಂಗ ಬಳಿಕ ಪೇತ್ರನು ಉಳಿದ ಹನ್ನೊಂದು ಮಂದಿ ಅಪೊಸ್ತಲರೊಂದಿಗೆ ಎದ್ದುನಿಂತುಕೊಂಡನು. ಎಲ್ಲಾ ಜನರಿಗೆ ಕೇಳುವಂತೆ ಅವನು ಗಟ್ಟಿಯಾಗಿ ಹೀಗೆಂದನು: “ಯೆಹೂದ್ಯರೇ, ಜೆರುಸಲೇಮಿನಲ್ಲಿ ವಾಸವಾಗಿರುವ ಜನರೇ, ನನಗೆ ಕಿವಿಗೊಡಿರಿ. ನೀವು ತಿಳಿದುಕೊಳ್ಳಬೇಕಾದ ಸಂಗತಿಯನ್ನು ನಾನು ನಿಮಗೆ ಹೇಳುತ್ತೇನೆ.
ಅಪೊಸ್ತಲರ ಕೃತ್ಯಗ 2 : 15 (ERVKN)
ನೀವು ಯೋಚಿಸಿಕೊಂಡಿರುವಂತೆ ಈ ಜನರು ಕುಡಿದು ಮತ್ತರಾದವರಲ್ಲ. ಈಗ ಮುಂಜಾನೆ ಒಂಭತ್ತು ಗಂಟೆಯಷ್ಟೆ!
ಅಪೊಸ್ತಲರ ಕೃತ್ಯಗ 2 : 16 (ERVKN)
ಆದರೆ ಈ ಹೊತ್ತು ಇಲ್ಲಿ ನಡೆಯುತ್ತಿರುವ ಸಂಗತಿಗಳ ಬಗ್ಗೆ ಪ್ರವಾದಿಯಾದ ಯೋವೇಲನು ಹೀಗೆ ಬರೆದಿದ್ದಾನೆ:
ಅಪೊಸ್ತಲರ ಕೃತ್ಯಗ 2 : 17 (ERVKN)
‘ದೇವರು ಹೀಗೆನ್ನುತ್ತಾನೆ:
ಕೊನೆಯ ದಿನಗಳಲ್ಲಿ, ನಾನು ನನ್ನ ಆತ್ಮವನ್ನು ಎಲ್ಲಾ ಜನರ ಮೇಲೆ ಸುರಿಸುವೆನು. ನಿಮ್ಮ ಗಂಡುಮಕ್ಕಳು, ಹೆಣ್ಣುಮಕ್ಕಳು ಪ್ರವಾದಿಸುವರು. ನಿಮ್ಮ ಯುವಜನರು ದರ್ಶನಗಳನ್ನು ಕಾಣುವರು. ನಿಮ್ಮ ವಯೋವೃದ್ಧರು ವಿಶೇಷ ಕನಸುಗಳನ್ನು ಕಾಣುವರು.
ಅಪೊಸ್ತಲರ ಕೃತ್ಯಗ 2 : 18 (ERVKN)
ಆ ಸಮಯದಲ್ಲಿ ನಾನು ನನ್ನ ಆತ್ಮವನ್ನು ನನ್ನ ದಾಸದಾಸಿಯರ ಮೇಲೆ ಸುರಿಸುವೆನು. ಆಗ ಅವರು ಪ್ರವಾದಿಸುವರು.
ಅಪೊಸ್ತಲರ ಕೃತ್ಯಗ 2 : 19 (ERVKN)
ನಾನು ಆಕಾಶದಲ್ಲಿ ಅದ್ಭುತಕಾರ್ಯಗಳನ್ನು ತೋರಿಸುವೆನು. ಭೂಮಿಯ ಮೇಲೆ ಸೂಚಕಕಾರ್ಯಗಳನ್ನು ಮಾಡುವೆನು. ರಕ್ತ, ಬೆಂಕಿ ಮತ್ತು ಕಪ್ಪೊಗೆಗಳು ಅಲ್ಲಿರುವವು.
ಅಪೊಸ್ತಲರ ಕೃತ್ಯಗ 2 : 20 (ERVKN)
ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತದಂತೆ ಕೆಂಪಾಗುವನು,
ಆಗ ಪ್ರಭುವಿನ ಗಂಭೀರವಾದ ಮಹಾದಿನವು ಬರುವುದು;
ಅಪೊಸ್ತಲರ ಕೃತ್ಯಗ 2 : 21 (ERVKN)
ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’ ಯೋವೇಲ 2:28-32]
ಅಪೊಸ್ತಲರ ಕೃತ್ಯಗ 2 : 22 (ERVKN)
“ಯೆಹೂದ್ಯರೇ, ಈ ಮಾತುಗಳನ್ನು ಕೇಳಿರಿ: ನಜರೇತಿನ ಯೇಸು ಬಹು ವಿಶೇಷವಾದ ವ್ಯಕ್ತಿ. ದೇವರು ತಾನು ಯೇಸುವಿನ ಮೂಲಕ ಮಾಡಿದ ಶಕ್ತಿಯುತವಾದ ಮತ್ತು ಅದ್ಭುತವಾದ ಕಾರ್ಯಗಳ ಮೂಲಕ ಇದನ್ನು ಸ್ಪಷ್ಟವಾಗಿ ನಿರೂಪಿಸಿದ್ದಾನೆ. ಈ ಸಂಗತಿಗಳನ್ನು ನೀವೆಲ್ಲರೂ ನೋಡಿದಿರಿ. ಆದ್ದರಿಂದ ಇದು ಸತ್ಯವೆಂದು ನಿಮಗೆ ಗೊತ್ತಿದೆ.
ಅಪೊಸ್ತಲರ ಕೃತ್ಯಗ 2 : 23 (ERVKN)
ಯೇಸುವನ್ನು ನಿಮಗೆ ಒಪ್ಪಿಸಲಾಯಿತು. ನೀವು ಕೆಟ್ಟಜನರ ಸಹಾಯದಿಂದ ಆತನನ್ನು ಶಿಲುಬೆಗೇರಿಸಿದಿರಿ. ಆದರೆ ಇವುಗಳೆಲ್ಲಾ ಸಂಭವಿಸುತ್ತವೆಯೆಂದು ದೇವರಿಗೆ ಗೊತ್ತಿತ್ತು. ಇದು ದೇವರ ಯೋಜನೆ. ದೇವರು ಬಹು ಕಾಲದ ಹಿಂದೆಯೇ ಈ ಯೋಜನೆಯನ್ನು ಮಾಡಿದನು.
ಅಪೊಸ್ತಲರ ಕೃತ್ಯಗ 2 : 24 (ERVKN)
ಯೇಸು ಮರಣವೇದನೆಯನ್ನು ಅನುಭವಿಸಿದನು. ಆದರೆ ದೇವರು ಆತನನ್ನು ಬಿಡಿಸಿದನು. ದೇವರು ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು. ಮರಣವು ಯೇಸುವನ್ನು ಹಿಡಿದುಕೊಳ್ಳಲಾಗಲಿಲ್ಲ.
ಅಪೊಸ್ತಲರ ಕೃತ್ಯಗ 2 : 25 (ERVKN)
ಯೇಸುವಿನ ಬಗ್ಗೆ ದಾವೀದನು ಹೀಗೆ ಹೇಳಿದ್ದಾನೆ: ‘ಪ್ರಭುವು ಯಾವಾಗಲೂ ನನ್ನ ಮುಂದೆ ಇರುವುದನ್ನು ನಾನು ನೋಡುತ್ತಿದ್ದೆನು; ನನ್ನನ್ನು ಸುರಕ್ಷಿತವಾಗಿಡಲು ಆತನು ನನ್ನ ಬಲಗಡೆಯಲ್ಲಿದ್ದಾನೆ.
ಅಪೊಸ್ತಲರ ಕೃತ್ಯಗ 2 : 26 (ERVKN)
ಆದ್ದರಿಂದ ನನ್ನ ಹೃದಯವು ಹರ್ಷಿಸುತ್ತದೆ. ನನ್ನ ಬಾಯಿ ಆನಂದದಿಂದ ಮಾತಾಡುತ್ತದೆ.
ಹೌದು, ನನ್ನ ದೇಹವು ಸಹ ನಿರೀಕ್ಷೆಯಿಂದ ಜೀವಿಸುವುದು;
ಅಪೊಸ್ತಲರ ಕೃತ್ಯಗ 2 : 27 (ERVKN)
ಯಾಕೆಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ತೊರೆದುಬಿಡುವುದಿಲ್ಲ. ನಿನ್ನ ಪರಿಶುದ್ಧನ ದೇಹವು ಸಮಾಧಿಯಲ್ಲಿ ಕೊಳೆಯಲು ನೀನು ಅವಕಾಶ ಕೊಡುವುದಿಲ್ಲ.
ಅಪೊಸ್ತಲರ ಕೃತ್ಯಗ 2 : 28 (ERVKN)
ಹೇಗೆ ಜೀವಿಸಬೇಕೆಂಬುದನ್ನು ನೀನು ನನಗೆ ಉಪದೇಶಿಸಿದೆ. ನಿನ್ನ ಪ್ರಸನ್ನತೆಯು ನನ್ನಲ್ಲಿ ಮಹಾ ಆನಂದವನ್ನು ಉಂಟುಮಾಡುವುದು.’ ಕೀರ್ತನೆ. 16:8-11]
ಅಪೊಸ್ತಲರ ಕೃತ್ಯಗ 2 : 29 (ERVKN)
“ನನ್ನ ಸಹೋದರರೇ, ನಮ್ಮ ಪಿತೃವಾದ ದಾವೀದನ ಬಗ್ಗೆ ನಾನು ನಿಮಗೆ ನಿಜವಾಗಿಯೂ ಹೇಳಬಲ್ಲೆನು. ಅವನು ಸತ್ತುಹೋದನು ಮತ್ತು ಅವನಿಗೆ ಸಮಾಧಿಯಾಯಿತು. ಅವನ ಸಮಾಧಿಯು ನಮ್ಮ ಮಧ್ಯದಲ್ಲಿ ಇಂದಿನವರೆಗೂ ಇದೆ.
ಅಪೊಸ್ತಲರ ಕೃತ್ಯಗ 2 : 30 (ERVKN)
ದಾವೀದನು ಒಬ್ಬ ಪ್ರವಾದಿಯಾಗಿದ್ದನು §ಪ್ರವಾದಿಯಾಗಿದ್ದನು ನೋಡಿರಿ: ಕೀರ್ತನೆ. 132:11. ಮತ್ತು ‘ನಿನ್ನ ಕುಟುಂಬದ ಒಬ್ಬನನ್ನು ನಿನ್ನಂತೆಯೇ ರಾಜನನ್ನಾಗಿ ಮಾಡುವೆನು’ ಎಂದು ದೇವರು ಅವನಿಗೆ ಆಣೆಯಿಟ್ಟು ವಾಗ್ದಾನ ಮಾಡಿದ್ದು ಅವನಿಗೆ ಗೊತ್ತಿತ್ತು.
ಅಪೊಸ್ತಲರ ಕೃತ್ಯಗ 2 : 31 (ERVKN)
ಅದು ನೆರವೇರುವುದಕ್ಕಿಂತ ಮೊದಲೇ ದಾವೀದನಿಗೆ ತಿಳಿದಿತ್ತು. ಆದಕಾರಣ ದಾವೀದನು ಪುನರುತ್ಥಾನ ಹೊಂದುವ ಕ್ರಿಸ್ತನ ಬಗ್ಗೆ, ‘ಆತನನ್ನು ಪಾತಾಳದಲ್ಲಿ ಬಿಡಲ್ಪಡಲಿಲ್ಲ.
ಆತನ ದೇಹವು ಸಮಾಧಿಯಲ್ಲಿ ಕೊಳೆಯಲಿಲ್ಲ’ ಎಂದಿದ್ದಾನೆ.
ಅಪೊಸ್ತಲರ ಕೃತ್ಯಗ 2 : 32 (ERVKN)
ಆದ್ದರಿಂದ ದೇವರು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದು ಯೇಸುವನ್ನೇ ಹೊರತು ದಾವೀದನನ್ನಲ್ಲ! ಇದಕ್ಕೆ ನಾವೆಲ್ಲರೂ ಸಾಕ್ಷಿಗಳಾಗಿದ್ದೇವೆ. ನಾವು ಆತನನ್ನು ಕಂಡೆವು!
ಅಪೊಸ್ತಲರ ಕೃತ್ಯಗ 2 : 33 (ERVKN)
ಯೇಸು ಪರಲೋಕಕ್ಕೆ ಎತ್ತಲ್ಪಟ್ಟನು. ಈಗ ಯೇಸು ದೇವರೊಂದಿಗಿದ್ದಾನೆ, ದೇವರ ಬಲಗಡೆಯಲ್ಲಿದ್ದಾನೆ. ಈಗ ತಂದೆಯು (ದೇವರು) ಪವಿತ್ರಾತ್ಮನನ್ನು ಯೇಸುವಿಗೆ ಕೊಟ್ಟಿದ್ದಾನೆ. ಪವಿತ್ರಾತ್ಮನನ್ನು ಕೊಡುವುದಾಗಿ ದೇವರು ವಾಗ್ದಾನ ಮಾಡಿದ್ದನು. ಆದ್ದರಿಂದ ಯೇಸು ಈಗ ಆ ಆತ್ಮನನ್ನು ಸುರಿಸಿದ್ದಾನೆ. ನೀವು ನೋಡುತ್ತಿರುವುದು ಮತ್ತು ಕೇಳುತ್ತಿರುವುದು ಇದನ್ನೇ.
ಅಪೊಸ್ತಲರ ಕೃತ್ಯಗ 2 : 34 (ERVKN)
(34-35) ಪರಲೋಕಕ್ಕೆ ಎತ್ತಲ್ಪಟ್ಟವನು ದಾವೀದನಲ್ಲ, ಯೇಸುವೇ. ದಾವೀದನೇ ಅದರ ಬಗ್ಗೆ ಹೇಳುತ್ತಾ, ‘ಪ್ರಭುವು (ದೇವರು) ನನ್ನ ಪ್ರಭುವಿಗೆ,
ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಗಳಿಗೆ ಪೀಠವಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ಕುಳಿತುಕೊ ಎಂದು ತಿಳಿಸಿದನು’ ಎಂದಿದ್ದಾನೆ. ಕೀರ್ತನೆ. 110:1]
ಅಪೊಸ್ತಲರ ಕೃತ್ಯಗ 2 : 35 (ERVKN)
ಅಪೊಸ್ತಲರ ಕೃತ್ಯಗ 2 : 36 (ERVKN)
“ಆದ್ದರಿಂದ ಯೆಹೂದ್ಯರೆಲ್ಲರೂ ಇದನ್ನು ನಿಜವಾಗಿಯೂ ತಿಳಿದುಕೊಳ್ಳಬೇಕು. ದೇವರು ಯೇಸುವನ್ನು ಪ್ರಭುವನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆ. ನೀವು ಶಿಲುಬೆಗೇರಿಸಿದ ವ್ಯಕ್ತಿಯೇ ಆತನು!”
ಅಪೊಸ್ತಲರ ಕೃತ್ಯಗ 2 : 37 (ERVKN)
ಇದನ್ನು ಕೇಳಿದಾಗ, ಅವರ ಹೃದಯದಲ್ಲಿ ಅಲಗು ನೆಟ್ಟಂತಾಯಿತು. ಅವರು ಪೇತ್ರನನ್ನು ಮತ್ತು ಉಳಿದ ಅಪೊಸ್ತಲರನ್ನು, “ಈಗ ನಾವೇನು ಮಾಡಬೇಕು?” ಎಂದು ಕೇಳಿದರು.
ಅಪೊಸ್ತಲರ ಕೃತ್ಯಗ 2 : 38 (ERVKN)
ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.
ಅಪೊಸ್ತಲರ ಕೃತ್ಯಗ 2 : 39 (ERVKN)
ಈ ವಾಗ್ದಾನವನ್ನು ನಿಮಗೂ ನಿಮ್ಮ ಮಕ್ಕಳಿಗೂ ಬಹು ದೂರದಲ್ಲಿರುವ ಜನರಿಗೂ ಕೊಡಲಾಗಿದೆ. ನಮ್ಮ ದೇವರಾದ ಪ್ರಭುವು ತನ್ನ ಬಳಿಗೆ ಕರೆಯುವ ಪ್ರತಿಯೊಬ್ಬರಿಗೂ ಈ ವಾಗ್ದಾನವನ್ನು ಕೊಟ್ಟಿದ್ದಾನೆ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 2 : 40 (ERVKN)
ಪೇತ್ರನು ಇನ್ನೂ ಅನೇಕ ಮಾತುಗಳಿಂದ ಅವರನ್ನು ಎಚ್ಚರಿಸಿ, “ಈ ದುಷ್ಟ ಸಂತತಿಯಿಂದ ತಪ್ಪಿಸಿಕೊಳ್ಳಿ” ಎಂದು ಬೇಡಿಕೊಂಡನು.
ಅಪೊಸ್ತಲರ ಕೃತ್ಯಗ 2 : 41 (ERVKN)
ಪೇತ್ರನು ಹೇಳಿದ್ದನ್ನು ಸ್ವೀಕರಿಸಿಕೊಂಡ ಜನರು ದೀಕ್ಷಾಸ್ನಾನ ಮಾಡಿಸಿಕೊಂಡರು. ಆ ದಿನ ಸುಮಾರು ಮೂರುಸಾವಿರ ಜನರು ವಿಶ್ವಾಸಿಗಳ ಗುಂಪಿಗೆ ಸೇರಿದರು.
ಅಪೊಸ್ತಲರ ಕೃತ್ಯಗ 2 : 42 (ERVKN)
ಅನ್ಯೋನ್ಯ ಜೀವನ ಇವರೆಲ್ಲರೂ ಅಪೊಸ್ತಲರ ಬೋಧನೆಯನ್ನು ಕೇಳುವುದರಲ್ಲಿಯೂ ಸಹೋದರರ ಅನ್ಯೋನ್ಯತೆಯಲ್ಲಿಯೂ ರೊಟ್ಟಿ ಮುರಿಯುವುದರಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.
ಅಪೊಸ್ತಲರ ಕೃತ್ಯಗ 2 : 43 (ERVKN)
ಅಪೊಸ್ತಲರು ಅನೇಕ ಶಕ್ತಿಯುತ ಮತ್ತು ಅದ್ಭುತಕಾರ್ಯಗಳನ್ನು ಮಾಡುತ್ತಿದ್ದರು; ಮತ್ತು ಪ್ರತಿಯೊಬ್ಬರಿಗೂ ದೇವರಲ್ಲಿ ಭಯಭಕ್ತಿ ಉಂಟಾಯಿತು.
ಅಪೊಸ್ತಲರ ಕೃತ್ಯಗ 2 : 44 (ERVKN)
ಎಲ್ಲಾ ವಿಶ್ವಾಸಿಗಳು ಒಟ್ಟಾಗಿ ವಾಸಿಸುತ್ತಿದ್ದರು. ಅವರು ಪ್ರತಿಯೊಂದನ್ನೂ ಹಂಚಿಕೊಳ್ಳುತ್ತಿದ್ದರು.
ಅಪೊಸ್ತಲರ ಕೃತ್ಯಗ 2 : 45 (ERVKN)
ತಮ್ಮ ಜಮೀನನ್ನು ಮತ್ತು ತಾವು ಹೊಂದಿದ್ದ ವಸ್ತುಗಳನ್ನು ಮಾರಿ, ಬಂದ ಹಣವನ್ನೆಲ್ಲಾ ಕೊರತೆಯಲ್ಲಿದ್ದವರಿಗೆ ಹಂಚಿಕೊಡುತ್ತಿದ್ದರು;
ಅಪೊಸ್ತಲರ ಕೃತ್ಯಗ 2 : 46 (ERVKN)
ಪ್ರತಿದಿನ ದೇವಾಲಯದಲ್ಲಿ ಸೇರಿಬರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು. ಅವರು ತಮ್ಮ ಮನೆಗಳಲ್ಲಿ ರೊಟ್ಟಿ ಮುರಿದು ಒಟ್ಟಾಗಿ ಊಟ ಮಾಡುತ್ತಿದ್ದರು. ಅವರ ಹೃದಯಗಳು ಆನಂದದಿಂದ ತುಂಬಿದ್ದವು.
ಅಪೊಸ್ತಲರ ಕೃತ್ಯಗ 2 : 47 (ERVKN)
ಅವರು ದೇವರನ್ನು ಕೊಂಡಾಡುತ್ತಿದ್ದರು ಮತ್ತು ಜನರೆಲ್ಲರೂ ಅವರನ್ನು ಇಷ್ಟಪಡುತ್ತಿದ್ದರು. ಪ್ರತಿದಿನವೂ ಹೆಚ್ಚುಹೆಚ್ಚು ಜನರು ರಕ್ಷಣೆ ಹೊಂದುತ್ತಿದ್ದರು; ಪ್ರಭುವು ಅವರನ್ನೆಲ್ಲಾ ವಿಶ್ವಾಸಿಗಳ ಸಭೆಗೆ ಸೇರಿಸುತ್ತಿದ್ದನು.
❮
❯