ಅಪೊಸ್ತಲರ ಕೃತ್ಯಗ 5 : 1 (ERVKN)
{ಅನನೀಯ ಮತ್ತು ಸಫೈರ} [PS] ಅನನೀಯ ಎಂಬ ಒಬ್ಬನಿದ್ದನು. ಅವನ ಹೆಂಡತಿಯ ಹೆಸರು ಸಫೈರ. ಅನನೀಯ ತನ್ನಲ್ಲಿದ್ದ ಸ್ವಲ್ಪ ಜಮೀನನ್ನು ಮಾರಿದನು.
ಅಪೊಸ್ತಲರ ಕೃತ್ಯಗ 5 : 2 (ERVKN)
ಆದರೆ, ಬಂದ ಹಣದಲ್ಲಿ ಒಂದು ಭಾಗವನ್ನು ಮಾತ್ರ ಅವನು ಅಪೊಸ್ತಲರ ಪಾದಗಳ ಬಳಿ ಇಟ್ಟನು. ಅವನು ಸ್ವಲ್ಪ ಹಣವನ್ನು ತನಗೋಸ್ಕರ ರಹಸ್ಯವಾಗಿಟ್ಟುಕೊಂಡನು. ಅವನ ಹೆಂಡತಿಗೆ ಇದು ತಿಳಿದಿತ್ತು. ಆಕೆಯೂ ಅದಕ್ಕೆ ಒಪ್ಪಿಕೊಂಡಿದ್ದಳು. [PE][PS]
ಅಪೊಸ್ತಲರ ಕೃತ್ಯಗ 5 : 3 (ERVKN)
ಪೇತ್ರನು, “ಅನನೀಯನೇ, ನಿನ್ನ ಹೃದಯವನ್ನು ಆಳಲು ನೀನು ಸೈತಾನನಿಗೆ ಒಪ್ಪಿಸಿಕೊಟ್ಟದ್ದೇಕೆ? ನೀನು ಸುಳ್ಳು ಹೇಳಿ, ಪವಿತ್ರಾತ್ಮನನ್ನು ಮೋಸಪಡಿಸಲು ಪ್ರಯತ್ನಿಸಿದೆ. ನೀನು ನಿನ್ನ ಜಮೀನನ್ನು ಮಾರಿದೆ, ಆದರೆ ಬಂದ ಹಣದಲ್ಲಿ ಒಂದು ಭಾಗವನ್ನು ನೀನು ನಿನಗೋಸ್ಕರ ಇಟ್ಟುಕೊಂಡದ್ದೇಕೆ?
ಅಪೊಸ್ತಲರ ಕೃತ್ಯಗ 5 : 4 (ERVKN)
ನೀನು ಜಮೀನನ್ನು ಮಾರುವುದಕ್ಕಿಂತ ಮೊದಲು ಅದು ನಿನ್ನದೇ ಆಗಿತ್ತು. ನೀನು ಮಾರಿದ ಮೇಲೆಯೂ ಬಂದ ಹಣ ನಿನ್ನದೇ ಆಗಿತ್ತು. ಈ ಕೆಟ್ಟಕಾರ್ಯವನ್ನು ಮಾಡಲು ನೀನು ಯಾಕೆ ಯೋಚಿಸಿಕೊಂಡೆ? ನೀನು ಸುಳ್ಳು ಹೇಳಿದ್ದು ದೇವರಿಗೆ, ಮನುಷ್ಯರಿಗಲ್ಲ!” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 5 : 5 (ERVKN)
(5-6) ಅನನೀಯನು ಇದನ್ನು ಕೇಳಿದ ಕೂಡಲೇ ಕೆಳಗೆ ಬಿದ್ದು ಸತ್ತುಹೋದನು. ಕೆಲವು ಯೌವನಸ್ಥರು ಬಂದು ಅವನ ದೇಹವನ್ನು ಬಟ್ಟೆಯಲ್ಲಿ ಸುತ್ತಿದರು. ಅವರು ಅದನ್ನು ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು. ಇದರ ಬಗ್ಗೆ ಕೇಳಿದ ಪ್ರತಿಯೊಬ್ಬರೂ ಭಯಭ್ರಾಂತರಾದರು. [PE][PS]
ಅಪೊಸ್ತಲರ ಕೃತ್ಯಗ 5 : 6 (ERVKN)
ಅಪೊಸ್ತಲರ ಕೃತ್ಯಗ 5 : 7 (ERVKN)
ಸುಮಾರು ಮೂರು ಗಂಟೆಗಳಾದ ನಂತರ ಅವನ ಹೆಂಡತಿಯಾದ ಸಫೈರ ಒಳಗೆ ಬಂದಳು. ನಡೆದ ಸಂಗತಿಯ ಬಗ್ಗೆ ಸಫೈರಳಿಗೆ ಗೊತ್ತಿರಲಿಲ್ಲ.
ಅಪೊಸ್ತಲರ ಕೃತ್ಯಗ 5 : 8 (ERVKN)
ಪೇತ್ರನು ಆಕೆಗೆ, “ನಿಮ್ಮ ಜಮೀನಿನಿಂದ ನಿಮಗೆ ಎಷ್ಟು ಹಣ ಬಂತೆಂದು ನನಗೆ ಹೇಳು. ಇಷ್ಟೇ ಹಣವೋ?” ಎಂದು ಕೇಳಿದನು. [PE][PS] ಸಫೈರಳು, “ಹೌದು, ಅಷ್ಟೇ!” ಎಂದು ಹೇಳಿದಳು. [PE][PS]
ಅಪೊಸ್ತಲರ ಕೃತ್ಯಗ 5 : 9 (ERVKN)
ಪೇತ್ರನು ಆಕೆಗೆ, “ನೀನು ಮತ್ತು ನಿನ್ನ ಗಂಡನು ಪ್ರಭುವಿನ ಆತ್ಮನನ್ನು ಪರೀಕ್ಷಿಸಲು ಒಪ್ಪಿಕೊಂಡಿದ್ದೇಕೆ? ಅಗೋ, ನಿನ್ನ ಗಂಡನನ್ನು ಹೂಳಿಟ್ಟ ಜನರು ಬಾಗಿಲ ಬಳಿಗೆ ಬಂದಿದ್ದಾರೆ! ಅವರು ನಿನ್ನನ್ನೂ ಅದೇರೀತಿ ಹೊತ್ತುಕೊಂಡು ಹೋಗುವರು” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 10 (ERVKN)
ತಕ್ಷಣವೇ ಸಫೈರಳು ಅವನ ಪಾದಗಳ ಮುಂದೆ ಬಿದ್ದು ಸತ್ತುಹೋದಳು. ಆ ಯೌವನಸ್ಥರು ಒಳಗೆ ಬಂದು ನೋಡಿದಾಗ ಆಕೆ ಸತ್ತುಹೋಗಿದ್ದಳು. ಅವರು ಆಕೆಯನ್ನು ಹೊತ್ತುಕೊಂಡು ಹೋಗಿ, ಆಕೆಯ ಗಂಡನ ಪಕ್ಕದಲ್ಲಿ ಹೂಳಿಟ್ಟರು.
ಅಪೊಸ್ತಲರ ಕೃತ್ಯಗ 5 : 11 (ERVKN)
ಈ ಸಂಗತಿಗಳ ಬಗ್ಗೆ ಕೇಳಿದ ವಿಶ್ವಾಸಿಗಳೆಲ್ಲರೂ ಮತ್ತು ಜನರೆಲ್ಲರೂ ಭಯಗ್ರಸ್ತರಾದರು. [PS]
ಅಪೊಸ್ತಲರ ಕೃತ್ಯಗ 5 : 12 (ERVKN)
{ದೇವರ ಸೂಚಕಕಾರ್ಯಗಳು} [PS] ಅಪೊಸ್ತಲರು ಅನೇಕ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿದರು. ಜನರೆಲ್ಲರೂ ಆ ಕಾರ್ಯಗಳನ್ನು ನೋಡಿದರು. ಅಪೊಸ್ತಲರು ಒಟ್ಟಾಗಿ ಸೊಲೊಮೋನನ ಮಂಟಪದಲ್ಲಿರುತ್ತಿದ್ದರು. ಅವರೆಲ್ಲರ ಉದ್ದೇಶ ಒಂದೇ ಆಗಿತ್ತು.
ಅಪೊಸ್ತಲರ ಕೃತ್ಯಗ 5 : 13 (ERVKN)
ಅವರೊಂದಿಗೆ ನಿಂತುಕೊಳ್ಳಲು ತಮಗೂ ಯೋಗ್ಯತೆ ಇದೆಯೆಂದು ಬೇರೆ ಯಾರಿಗೂ ಅನ್ನಿಸಲಿಲ್ಲ. ಜನರೆಲ್ಲರೂ ಅಪೊಸ್ತಲರ ಬಗ್ಗೆ ಒಳ್ಳೆಯ ಸಂಗತಿಗಳನ್ನು ಹೇಳುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 14 (ERVKN)
ಮತ್ತು ಹೆಚ್ಚುಹೆಚ್ಚು ಜನರು ಪ್ರಭುವನ್ನು ನಂಬಿಕೊಂಡರು. ಅನೇಕ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳ ಸಮುದಾಯಕ್ಕೆ ಸೇರುತ್ತಿದ್ದರು.
ಅಪೊಸ್ತಲರ ಕೃತ್ಯಗ 5 : 15 (ERVKN)
ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.
ಅಪೊಸ್ತಲರ ಕೃತ್ಯಗ 5 : 16 (ERVKN)
ಜೆರುಸಲೇಮಿನ ಸುತ್ತಮುತ್ತಲಿನ ಊರುಗಳಿಂದೆಲ್ಲಾ ಜನರು ಬರುತ್ತಿದ್ದರು. ಅವರು ಕಾಯಿಲೆಯವರನ್ನೂ ದೆವ್ವಪೀಡಿತರಾಗಿದ್ದವರನ್ನೂ ಹೊತ್ತುಕೊಂಡು ಬರುತ್ತಿದ್ದರು. ಈ ಜನರೆಲ್ಲರಿಗೂ ಗುಣವಾಯಿತು. [PS]
ಅಪೊಸ್ತಲರ ಕೃತ್ಯಗ 5 : 17 (ERVKN)
{ಅಪೊಸ್ತಲರನ್ನು ತಡೆಯಲು ಯೆಹೂದ್ಯರ ಪ್ರಯತ್ನ} [PS] ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರೆಲ್ಲರೂ (ಸದ್ದುಕಾಯರು) ಬಹು ಅಸೂಯೆಗೊಂಡರು.
ಅಪೊಸ್ತಲರ ಕೃತ್ಯಗ 5 : 18 (ERVKN)
ಅವರು ಅಪೊಸ್ತಲರನ್ನು ಬಂಧಿಸಿ ರಾಜ್ಯಮಟ್ಟದ ಸೆರೆಮನೆಗೆ ಹಾಕಿದರು.
ಅಪೊಸ್ತಲರ ಕೃತ್ಯಗ 5 : 19 (ERVKN)
ಆದರೆ ರಾತ್ರಿಯಲ್ಲಿ ಪ್ರಭುವಿನ ದೂತನೊಬ್ಬನು ಸೆರೆಮನೆಯ ಬಾಗಿಲುಗಳನ್ನು ತೆರೆದನು. ದೇವದೂತನು ಅಪೊಸ್ತಲರನ್ನು ಕರೆದುಕೊಂಡು ಹೊರಗೆ ಬಂದು ಅವರಿಗೆ,
ಅಪೊಸ್ತಲರ ಕೃತ್ಯಗ 5 : 20 (ERVKN)
“ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು.
ಅಪೊಸ್ತಲರ ಕೃತ್ಯಗ 5 : 21 (ERVKN)
ಆದ್ದರಿಂದ ಅವರು ಮರುದಿನ ಮುಂಜಾನೆ ದೇವಾಲಯಕ್ಕೆ ಹೋಗಿ ಉಪದೇಶ ಮಾಡತೊಡಗಿದರು. [PE][PS] ಪ್ರಧಾನಯಾಜಕನು ಮತ್ತು ಅವನ ಸ್ನೇಹಿತರು ದೇವಾಲಯಕ್ಕೆ ಬಂದರು. ಅವರು ಯೆಹೂದ್ಯನಾಯಕರ ಮತ್ತು ಇಸ್ರೇಲರಲ್ಲಿ ಪ್ರಮುಖರಾಗಿದ್ದವರ ಸಭೆಯನ್ನು ಸೇರಿಸಿದರು. ಬಳಿಕ ಅಪೊಸ್ತಲರನ್ನು ತಮ್ಮ ಬಳಿಗೆ ಕರೆದುಕೊಂಡು ಬರಲು ಕೆಲವರನ್ನು ಸೆರೆಮನೆಗೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 5 : 22 (ERVKN)
ದೇವಾಲಯದ ಸಿಪಾಯಿಗಳು ಸೆರೆಮನೆಗೆ ಹೋದಾಗ ಅಲ್ಲಿ ಅಪೊಸ್ತಲರನ್ನು ಕಾಣಲಿಲ್ಲ. ಆದ್ದರಿಂದ ಅವರು ಹಿಂತಿರುಗಿ ಬಂದು ಯೆಹೂದ್ಯನಾಯಕರಿಗೆ,
ಅಪೊಸ್ತಲರ ಕೃತ್ಯಗ 5 : 23 (ERVKN)
“ಸೆರೆಮನೆ ಮುಚ್ಚಿತ್ತು ಮತ್ತು ಬೀಗವನ್ನು ಹಾಕಲಾಗಿತ್ತು. ಕಾವಲುಗಾರರು ಬಾಗಿಲ ಬಳಿ ನಿಂತುಕೊಂಡಿದ್ದರು. ಆದರೆ ನಾವು ಬಾಗಿಲುಗಳನ್ನು ತೆರೆದಾಗ ಸೆರೆಮನೆಯು ಬರಿದಾಗಿತ್ತು!” ಎಂದು ತಿಳಿಸಿದರು.
ಅಪೊಸ್ತಲರ ಕೃತ್ಯಗ 5 : 24 (ERVKN)
ದೇವಾಲಯದ ಕಾವಲುಗಾರರ ನಾಯಕನು ಮತ್ತು ಮಹಾಯಾಜಕರು ಇದನ್ನು ಕೇಳಿ ಗಲಿಬಿಲಿಗೊಂಡರು. ಇದರಿಂದ ಏನಾಗುವುದೋ ಎಂದು ಅವರು ಭಯಪಟ್ಟರು. [PE][PS]
ಅಪೊಸ್ತಲರ ಕೃತ್ಯಗ 5 : 25 (ERVKN)
ಬಳಿಕ ಬೇರೊಬ್ಬನು ಬಂದು ಅವರಿಗೆ, “ಕೇಳಿ! ನೀವು ಸೆರೆಮನೆಯಲ್ಲಿ ಹಾಕಿದ್ದ ಜನರು ದೇವಾಲಯದಲ್ಲಿ ನಿಂತಿದ್ದಾರೆ. ಅವರು ಜನರಿಗೆ ಉಪದೇಶ ಮಾಡುತ್ತಿದ್ದಾರೆ!” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 5 : 26 (ERVKN)
ಆಗ ದಳಪತಿ ಮತ್ತು ಅವನ ಜನರು ಹೋಗಿ ಅಪೊಸ್ತಲರನ್ನು ಮರಳಿ ಕರೆತಂದರು. ಆದರೆ ಸೈನಿಕರು ಒತ್ತಾಯ ಮಾಡಲಿಲ್ಲ. ಯಾಕೆಂದರೆ ಅವರು ಜನರಿಗೆ ಭಯಪಟ್ಟರು. ಜನರು ಕೋಪಗೊಂಡು ಕಲ್ಲೆಸೆದು ತಮ್ಮನ್ನು ಕೊಲ್ಲಬಹುದೆಂದು ಅವರು ಹೆದರಿದರು. [PE][PS]
ಅಪೊಸ್ತಲರ ಕೃತ್ಯಗ 5 : 27 (ERVKN)
ಸೈನಿಕರು ಅಪೊಸ್ತಲರನ್ನು ಸಭೆಗೆ ಕರೆದುಕೊಂಡು ಬಂದು ಯೆಹೂದ್ಯನಾಯಕರ ಮುಂದೆ ನಿಲ್ಲಿಸಿದರು. ಪ್ರಧಾನಯಾಜಕನು ಅಪೊಸ್ತಲರಿಗೆ,
ಅಪೊಸ್ತಲರ ಕೃತ್ಯಗ 5 : 28 (ERVKN)
“ಈ ಮನುಷ್ಯನ (ಯೇಸುವಿನ) ಬಗ್ಗೆ ನೀವು ಬೋಧಿಸಕೂಡದೆಂದು ನಾವು ನಿಮಗೆ ಆಜ್ಞಾಪಿಸಿದೆವು. ಆದರೆ ನೀವು ಮಾಡಿರುವುದೇನು? ನೀವು ಜೆರುಸಲೇಮನ್ನು ನಿಮ್ಮ ಉಪದೇಶದಿಂದ ತುಂಬಿಸಿಬಿಟ್ಟಿದ್ದೀರಿ. ಈ ಮನುಷ್ಯನ (ಯೇಸುವಿನ) ಸಾವಿಗೆ ನಮ್ಮನ್ನೇ ಜವಾಬ್ದಾರರನ್ನಾಗಿ ಮಾಡಲು ನೀವು ಪ್ರಯತ್ನಿಸುತ್ತಿದ್ದೀರಿ” ಎಂದರು. [PE][PS]
ಅಪೊಸ್ತಲರ ಕೃತ್ಯಗ 5 : 29 (ERVKN)
ಪೇತ್ರ ಮತ್ತು ಉಳಿದ ಅಪೊಸ್ತಲರು, “ನಾವು ವಿಧೇಯರಾಗಬೇಕಾದದ್ದು ದೇವರಿಗೇ ಹೊರತು ನಿಮಗಲ್ಲ!
ಅಪೊಸ್ತಲರ ಕೃತ್ಯಗ 5 : 30 (ERVKN)
ನೀವು ಯೇಸುವನ್ನು ಕೊಂದಿರಿ. ನೀವು ಆತನನ್ನು ಶಿಲುಬೆಯ ಮೇಲೆ ನೇತುಹಾಕಿದಿರಿ. ಆದರೆ ದೇವರು, ಅಂದರೆ ನಮ್ಮ ಪಿತೃಗಳ ದೇವರೇ ಯೇಸುವನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದನು!
ಅಪೊಸ್ತಲರ ಕೃತ್ಯಗ 5 : 31 (ERVKN)
ದೇವರಿಂದ ಆತನ ಬಲಗಡೆಗೆ ಏರಿಸಲ್ಪಟ್ಟಾತನೇ ಯೇಸು. ಎಲ್ಲಾ ಯೆಹೂದ್ಯರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದರ ಮೂಲಕ ಪಾಪಕ್ಷಮೆ ಹೊಂದಿಕೊಳ್ಳಲೆಂದು ದೇವರು ಯೇಸುವನ್ನು ನಮ್ಮ ನಾಯಕನನ್ನಾಗಿಯೂ ರಕ್ಷಕನನ್ನಾಗಿಯೂ ಮಾಡಿದ್ದಾನೆ.
ಅಪೊಸ್ತಲರ ಕೃತ್ಯಗ 5 : 32 (ERVKN)
ಈ ಘಟನೆಗಳಿಗೆ ನಾವೇ ಸಾಕ್ಷಿಗಳು. ನಾವು ಮಾತ್ರವಲ್ಲದೆ ವಿಧೇಯರಾಗುವ ಎಲ್ಲಾ ಜನರಿಗೆ ದೇವರು ದಯಪಾಲಿಸಿರುವ ಪವಿತ್ರಾತ್ಮನೂ ಸಾಕ್ಷಿಯಾಗಿದ್ದಾನೆ” ಎಂದನು. [PE][PS]
ಅಪೊಸ್ತಲರ ಕೃತ್ಯಗ 5 : 33 (ERVKN)
ಯೆಹೂದ್ಯನಾಯಕರು ಈ ಮಾತುಗಳನ್ನು ಕೇಳಿ ಬಹು ಕೋಪಗೊಂಡು, ಅಪೊಸ್ತಲರನ್ನು ಕೊಲ್ಲಬೇಕೆಂದಿದ್ದರು.
ಅಪೊಸ್ತಲರ ಕೃತ್ಯಗ 5 : 34 (ERVKN)
ಆಗ ಫರಿಸಾಯರಲ್ಲಿ ಒಬ್ಬನು ಸಭೆಯಲ್ಲಿ ಎದ್ದು ನಿಂತುಕೊಂಡನು. ಅವನ ಹೆಸರು ಗಮಲಿಯೇಲ. ಅವನು ಧರ್ಮೋಪದೇಶಕನಾಗಿದ್ದನು ಮತ್ತು ಜನರೆಲ್ಲಾ ಅವನನ್ನು ಗೌರವಿಸುತ್ತಿದ್ದರು. ಕೆಲವು ನಿಮಿಷಗಳವರೆಗೆ ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಬೇಕೆಂದು ಅವನು ಜನರಿಗೆ ಹೇಳಿದನು.
ಅಪೊಸ್ತಲರ ಕೃತ್ಯಗ 5 : 35 (ERVKN)
ಬಳಿಕ ಅವನು ಅವರಿಗೆ, “ಇಸ್ರೇಲ್ ಜನರೇ, ನೀವು ಇವರಿಗೆ ಮಾಡಬೇಕೆಂದಿರುವುದರ ಬಗ್ಗೆ ಎಚ್ಚರಿಕೆಯಾಗಿರಿ!
ಅಪೊಸ್ತಲರ ಕೃತ್ಯಗ 5 : 36 (ERVKN)
ಒಮ್ಮೆ, ತೈದ ಎಂಬುವನು ಬಂದದ್ದು ನಿಮ್ಮ ನೆನಪಿನಲ್ಲಿದೆಯೋ? ಅವನು ತನ್ನನ್ನು ಮಹಾಪುರುಷನೆಂದು ಹೇಳಿಕೊಂಡನು. ಸುಮಾರು ನಾನೂರು ಮಂದಿ ಅವನ ಜೊತೆ ಸೇರಿದರು. ಆದರೆ ಅವನು ಕೊಲ್ಲಲ್ಪಟ್ಟನು. ಅವನನ್ನು ಹಿಂಬಾಲಿಸುತ್ತಿದ್ದವರೆಲ್ಲ ಚದರಿ ಓಡಿಹೋದರು. ಅವರಿಂದ ಏನೂ ಮಾಡಲಾಗಲಿಲ್ಲ.
ಅಪೊಸ್ತಲರ ಕೃತ್ಯಗ 5 : 37 (ERVKN)
ಬಳಿಕ, ಯೂದ ಎಂಬುವನು ಗಲಿಲಾಯದಿಂದ ಬಂದನು. ಅದು ಜನಗಣತಿಯ ಕಾಲವಾಗಿತ್ತು. ಅವನು ಸಹ ಅನುಯಾಯಿಗಳ ಒಂದು ಗುಂಪನ್ನೇ ಕಟ್ಟಿದ. ಅವನು ಸಹ ಕೊಲ್ಲಲ್ಪಟ್ಟನು. ಅವನ ಅನುಯಾಯಿಗಳೆಲ್ಲಾ ಚದರಿ ಓಡಿಹೋದರು.
ಅಪೊಸ್ತಲರ ಕೃತ್ಯಗ 5 : 38 (ERVKN)
ಆದ್ದರಿಂದ ಈಗ ನಾನು ನಿಮಗೆ ಹೇಳುವುದೇನೆಂದರೆ, ಈ ಜನರಿಂದ ದೂರವಾಗಿರಿ. ಅವರನ್ನು ಅವರಷ್ಟಕ್ಕೇ ಬಿಟ್ಟುಬಿಡಿರಿ. ಅವರ ಯೋಜನೆಯು ಮನುಷ್ಯರಿಂದ ಬಂದದ್ದಾಗಿದ್ದರೆ, ಅದು ಉರುಳಿಹೋಗುವುದು.
ಅಪೊಸ್ತಲರ ಕೃತ್ಯಗ 5 : 39 (ERVKN)
ಆದರೆ ಅದು ದೇವರಿಂದ ಬಂದದ್ದಾಗಿದ್ದರೆ, ನೀವು ಅವರನ್ನು ತಡೆಯಲು ಸಾಧ್ಯವಾಗುವುದಿಲ್ಲ. ನೀವು ದೇವರಿಗೇ ವಿರುದ್ಧವಾಗಿ ಹೋರಾಡಿದಂತಾದೀತು!” ಎಂದು ಹೇಳಿದನು. [PE][PS] ಗಮಲಿಯೇಲನ ಸಲಹೆಗೆ ಯೆಹೂದ್ಯ ನಾಯಕರು ಒಪ್ಪಿಕೊಂಡರು.
ಅಪೊಸ್ತಲರ ಕೃತ್ಯಗ 5 : 40 (ERVKN)
ಅವರು ಅಪೊಸ್ತಲರನ್ನು ಒಳಗೆ ಕರೆಸಿ, ಹೊಡೆಸಿ, ಯೇಸುವಿನ ಬಗ್ಗೆ ಜನರಿಗೆ ಹೇಳಕೂಡದೆಂದು ಎಚ್ಚರಿಸಿ ಕಳುಹಿಸಿ ಬಿಟ್ಟರು.
ಅಪೊಸ್ತಲರ ಕೃತ್ಯಗ 5 : 41 (ERVKN)
ಅಪೊಸ್ತಲರು ಸಭೆಯಿಂದ ಹೊರಟುಹೋದರು. ಯೇಸುವಿನ ಹೆಸರಿಗಾಗಿ ಅಪಮಾನವನ್ನು ಅನುಭವಿಸುವ ಅರ್ಹತೆಯನ್ನು ಪಡೆದುಕೊಂಡೆವೆಂದು ಅವರು ಸಂತೋಷಪಟ್ಟರು.
ಅಪೊಸ್ತಲರ ಕೃತ್ಯಗ 5 : 42 (ERVKN)
ಅವರು ಜನರಿಗೆ ಉಪದೇಶಿಸುವುದನ್ನು ನಿಲ್ಲಿಸಲಿಲ್ಲ. ಯೇಸುವೇ ಕ್ರಿಸ್ತನೆಂಬ ಶುಭವಾರ್ತೆಯನ್ನು ಜನರಿಗೆ ಹೇಳುವುದನ್ನು ಮುಂದುವರಿಸಿದರು. ಅವರು ಪ್ರತಿದಿನ ದೇವಾಲಯದಲ್ಲಿಯೂ ಜನರ ಮನೆಗಳಲ್ಲಿಯೂ ಉಪದೇಶಿಸುತ್ತಿದ್ದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42

BG:

Opacity:

Color:


Size:


Font: