ಅಪೊಸ್ತಲರ ಕೃತ್ಯಗ 6 : 1 (ERVKN)
ವಿಶೇಷ ಕಾರ್ಯಕ್ಕೆ ಏಳು ಮಂದಿಯ ಆಯ್ಕೆ ಯೇಸುವಿನ ಶಿಷ್ಯರ ಸಂಖ್ಯೆಯು ಹೆಚ್ಚುಹೆಚ್ಚಾಗುತ್ತಿತ್ತು. ಆದರೆ ಈ ಸಮಯದಲ್ಲಿ ಗ್ರೀಕ್ ಮಾತಾಡುವ ಶಿಷ್ಯರು ಯೆಹೂದ್ಯ ಶಿಷ್ಯರಿಗೆ ದೂರು ಹೇಳಿದರು. ಪ್ರತಿದಿನ ಶಿಷ್ಯರಿಗೆ ಕೊಡುವಂಥವುಗಳಲ್ಲಿ ತಮ್ಮ ವಿಧವೆಯರಿಗೆ ಅವರ ಪಾಲು ದೊರೆಯುತ್ತಿಲ್ಲವೆಂದು ಅವರು ಆಪಾದಿಸಿದರು.
ಅಪೊಸ್ತಲರ ಕೃತ್ಯಗ 6 : 2 (ERVKN)
ಆಗ ಹನ್ನೆರಡು ಮಂದಿ ಅಪೊಸ್ತಲರು ಇಡೀ ಶಿಷ್ಯಸಮುದಾಯದ ಸಭೆಯನ್ನು ಕರೆದು ಅವರಿಗೆ, “ದೇವರ ವಾಕ್ಯವನ್ನು ಬೋಧಿಸುವುದು ನಮ್ಮ ಕೆಲಸ. ಆದರೆ ಅದು ನಿಂತುಹೋಗುವುದು ಸರಿಯಲ್ಲ! ನಾವು ಜನರಿಗೆ ಊಟವನ್ನು ಒದಗಿಸಲು ಸಹಾಯ ಮಾಡುವುದಕ್ಕಿಂತಲೂ ದೇವರ ವಾಕ್ಯೋಪದೇಶವನ್ನು ಮುಂದುವರಿಸುವುದು ಒಳ್ಳೆಯದು.
ಅಪೊಸ್ತಲರ ಕೃತ್ಯಗ 6 : 3 (ERVKN)
ಆದ್ದರಿಂದ, ಸಹೋದರರೇ, ನಿಮ್ಮ ಜನರಲ್ಲಿ ಏಳು ಮಂದಿಯನ್ನು ಆರಿಸಿಕೊಳ್ಳಿರಿ. ಅವರು ಜನರಿಂದ ಒಳ್ಳೆಯವರು ಎನಿಸಿಕೊಂಡವರಾಗಿರಬೇಕು; ಜ್ಞಾನಪೂರ್ಣರಾಗಿರಬೇಕು ಮತ್ತು ಪವಿತ್ರಾತ್ಮಭರಿತರಾಗಿರಬೇಕು. ನಾವು ಅವರಿಗೆ ಈ ಕೆಲಸವನ್ನು ಒಪ್ಪಿಸಿಕೊಡುತ್ತೇವೆ.
ಅಪೊಸ್ತಲರ ಕೃತ್ಯಗ 6 : 4 (ERVKN)
ಆಗ ನಾವು ನಮ್ಮ ಸಮಯವನ್ನೆಲ್ಲಾ ಪ್ರಾರ್ಥನೆಗೂ ದೇವರ ವಾಕ್ಯೋಪದೇಶಕ್ಕೂ ಕೊಡಲು ಸಾಧ್ಯವಾಗುತ್ತದೆ” ಎಂದು ಹೇಳಿದರು.
ಅಪೊಸ್ತಲರ ಕೃತ್ಯಗ 6 : 5 (ERVKN)
ಇಡೀ ಸಮುದಾಯವು ಈ ಆಲೋಚನೆಯನ್ನು ಇಷ್ಟಪಟ್ಟಿತು. ಆದ್ದರಿಂದ ಅವರು ಈ ಏಳು ಮಂದಿಯನ್ನು ಆರಿಸಿಕೊಂಡರು: ಸ್ತೆಫನ (ಮಹಾನಂಬಿಕೆಯುಳ್ಳ ಮತ್ತು ಪವಿತ್ರಾತ್ಮಭರಿತನಾಗಿದ್ದ ಮನುಷ್ಯ), ಫಿಲಿಪ್ಪ, *ಫಿಲಿಪ್ಪ ಇವನು ಯೇಸುವಿನ ಅಪೊಸ್ತಲನಲ್ಲ. ಪ್ರೊಖೋರ, ನಿಕನೋರ, ತಿಮೋನ, ಪರ್ಮೇನ ಮತ್ತು ನಿಕೊಲಾಯ (ಮತಾಂತರ ಹೊಂದಿ ಯೆಹೂದ್ಯನಾಗಿದ್ದ ಇವನು ಅಂತಿಯೋಕ್ಯಕ್ಕೆ ಸೇರಿದವನು.)
ಅಪೊಸ್ತಲರ ಕೃತ್ಯಗ 6 : 6 (ERVKN)
ಬಳಿಕ ಅವರು ಈ ಏಳು ಮಂದಿಯನ್ನು ಅಪೊಸ್ತಲರ ಮುಂದೆ ನಿಲ್ಲಿಸಿದರು. ಅಪೊಸ್ತಲರು ಪ್ರಾರ್ಥಿಸಿ, ಅವರ ತಲೆಗಳ ಮೇಲೆ ತಮ್ಮ ಕೈಗಳನ್ನಿಟ್ಟರು.
ಅಪೊಸ್ತಲರ ಕೃತ್ಯಗ 6 : 7 (ERVKN)
ದೇವರ ವಾಕ್ಯವು ಹೆಚ್ಚುಹೆಚ್ಚು ಜನರಿಗೆ ತಲುಪತೊಡಗಿತು. ಜೆರುಸಲೇಮಿನ ಶಿಷ್ಯಸಮುದಾಯವು ಹೆಚ್ಚುಹೆಚ್ಚು ದೊಡ್ಡದಾಗ ತೊಡಗಿತು. ಅನೇಕ ಯೆಹೂದ್ಯಯಾಜಕರು ನಂಬಿಕೊಂಡರು ಮತ್ತು ವಿಧೇಯರಾದರು.
ಅಪೊಸ್ತಲರ ಕೃತ್ಯಗ 6 : 8 (ERVKN)
ಯೆಹೂದ್ಯರು ಸ್ತೆಫನನಿಗೆ ವಿರುದ್ಧವಾದರು ಸ್ತೆಫನನು (ಏಳು ಮಂದಿಯಲ್ಲಿ ಒಬ್ಬನು) ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ಇದ್ದನು.
ಅಪೊಸ್ತಲರ ಕೃತ್ಯಗ 6 : 9 (ERVKN)
ಆದರೆ ಕೆಲವು ಯೆಹೂದ್ಯರು ಬಂದು ಅವನೊಂದಿಗೆ ವಾದಿಸಿದರು. ಈ ಯೆಹೂದ್ಯರು ಸಭಾಮಂದಿರಕ್ಕೆ ಸೇರಿದವರು. ಅದಕ್ಕೆ “ಬಿಡುಗಡೆ ಹೊಂದಿದವರ ಬಿಡುಗಡೆ ಹೊಂದಿದವರ ಒಮ್ಮೆ ಗುಲಾಮರಾಗಿದ್ದು ಬಿಡುಗಡೆ ಹೊಂದಿದ ಯೆಹೂದ್ಯರು. ಸಭಾಮಂದಿರ” ಎಂದು ಕರೆಯುತ್ತಿದ್ದರು. (ಸಿರೇನ್ ಮತ್ತು ಅಲೆಕ್ಸಾಂಡ್ರಿಯದಿಂದ ಬಂದ ಯೆಹೂದ್ಯರಿಗೋಸ್ಕರವಾಗಿಯೂ ಈ ಸಭಾಮಂದಿರವಿತ್ತು.) ಸಿಲಿಸಿಯ ಮತ್ತು ಏಷ್ಯಾದಿಂದ ಬಂದ ಯೆಹೂದ್ಯರೂ ಅವರೊಂದಿಗಿದ್ದರು. ಅವರೆಲ್ಲರೂ ಬಂದು ಅವನೊಂದಿಗೆ ವಾದಮಾಡಿದರು.
ಅಪೊಸ್ತಲರ ಕೃತ್ಯಗ 6 : 10 (ERVKN)
ಆದರೆ ವಿವೇಕದಿಂದ ಮಾತಾಡಲು ಪವಿತ್ರಾತ್ಮನು ಅವನಿಗೆ ಸಹಾಯಮಾಡಿದನು. ಸ್ತೆಫನನ ಮಾತುಗಳು ಬಹು ಶಕ್ತಿಯುತವಾಗಿದ್ದ ಕಾರಣ ಅವನೊಂದಿಗೆ ವಾದಿಸಲು ಅವರಿಗೆ ಸಾಧ್ಯವಾಗದೆ,
ಅಪೊಸ್ತಲರ ಕೃತ್ಯಗ 6 : 11 (ERVKN)
“ಸ್ತೆಫನನು ಮೋಶೆಗೂ ದೇವರಿಗೂ ವಿರುದ್ಧವಾಗಿ ಕೆಟ್ಟ ಸಂಗತಿಗಳನ್ನು ಹೇಳುತ್ತಾನೆ; ಅವನ್ನು ನಾವೇ ಕೇಳಿದ್ದೇವೆ!” ಎಂದು ತಿಳಿಸುವಂತೆ ಕೆಲವರಿಗೆ ಹಣಕೊಟ್ಟರು.
ಅಪೊಸ್ತಲರ ಕೃತ್ಯಗ 6 : 12 (ERVKN)
ಹೀಗೆ ಈ ಯೆಹೂದ್ಯರು ಜನರನ್ನೂ ಯೆಹೂದ್ಯರ ಹಿರಿಯನಾಯಕರನ್ನೂ ಧರ್ಮೋಪದೇಶಕರನ್ನೂ ಗಲಿಬಿಲಿಗೊಳಿಸಿದರು. ಅವರು ಬಹು ಸಿಟ್ಟಿನಿಂದ ಬಂದು ಸ್ತೆಫನನನ್ನು ಬಂಧಿಸಿ ಯೆಹೂದ್ಯನಾಯಕರ ಸಭೆಗೆ ಕೊಂಡೊಯ್ದರು.
ಅಪೊಸ್ತಲರ ಕೃತ್ಯಗ 6 : 13 (ERVKN)
ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ.
ಅಪೊಸ್ತಲರ ಕೃತ್ಯಗ 6 : 14 (ERVKN)
ನಜರೇತಿನ ಯೇಸು ಈ ದೇವಾಲಯವನ್ನು ಕೆಡವಿ ಮೋಶೆಯ ವಿಧಿಗಳನ್ನು ಬದಲಾಯಿಸುತ್ತಾನೆಂದು ಇವನು ಹೇಳುವುದನ್ನು ನಾವು ಕೇಳಿದ್ದೇವೆ” ಎಂದು ಹೇಳಿಸಿದರು.
ಅಪೊಸ್ತಲರ ಕೃತ್ಯಗ 6 : 15 (ERVKN)
ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.

1 2 3 4 5 6 7 8 9 10 11 12 13 14 15