ಅಪೊಸ್ತಲರ ಕೃತ್ಯಗ 8 : 1 (ERVKN)
(1-3) ಸ್ತೆಫನನ ಕೊಲೆಗೆ ಸೌಲನ ಸಮ್ಮತಿಯಿತ್ತು. ಕೆಲವು ಭಕ್ತರು ಸ್ತೆಫನನನ್ನು ಸಮಾಧಿ ಮಾಡಿದರು. ಅವರು ಅವನಿಗೋಸ್ಕರ ಬಹಳವಾಗಿ ಗೋಳಾಡಿದರು. [PS] ಜೆರುಸಲೇಮಿನಲ್ಲಿದ್ದ ವಿಶ್ವಾಸಿಗಳ ಸಮುದಾಯವನ್ನು ಹಿಂಸಿಸಲು ಯೆಹೂದ್ಯರು ಅಂದೇ ಆರಂಭಿಸಿ ಅವರನ್ನು ಬಹಳವಾಗಿ ಸಂಕಟಪಡಿಸಿದರು. ಆ ಸಭೆಯನ್ನು ನಾಶಮಾಡಲು ಸೌಲನು ಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದೊಯ್ದು ಸೆರೆಮನೆಗೆ ಹಾಕಿದನು. ವಿಶ್ವಾಸಿಗಳೆಲ್ಲಾ ಜೆರುಸಲೇಮನ್ನು ಬಿಟ್ಟುಹೋದರು. ಅಪೊಸ್ತಲರು ಮಾತ್ರ ಅಲ್ಲೇ ಇದ್ದರು. ವಿಶ್ವಾಸಿಗಳು ಜುದೇಯ ಮತ್ತು ಸಮಾರ್ಯದ ಬೇರೆಬೇರೆ ಸ್ಥಳಗಳಿಗೆ ಹೊರಟುಹೋದರು.
ಅಪೊಸ್ತಲರ ಕೃತ್ಯಗ 8 : 2 (ERVKN)
ಅಪೊಸ್ತಲರ ಕೃತ್ಯಗ 8 : 3 (ERVKN)
ಅಪೊಸ್ತಲರ ಕೃತ್ಯಗ 8 : 4 (ERVKN)
{ವಿಶ್ವಾಸಿಗಳಿಗೆ ಹಿಂಸೆ} [PS] ವಿಶ್ವಾಸಿಗಳು ಎಲ್ಲೆಲ್ಲಿಯೂ ಚದರಿಹೋದರು. ವಿಶ್ವಾಸಿಗಳು ತಾವು ಹೋದ ಪ್ರತಿಯೊಂದು ಸ್ಥಳದಲ್ಲಿಯೂ ಜನರಿಗೆ ಸುವಾರ್ತೆಯನ್ನು ತಿಳಿಸಿದರು. [PS]
ಅಪೊಸ್ತಲರ ಕೃತ್ಯಗ 8 : 5 (ERVKN)
{ಸಮಾರ್ಯದಲ್ಲಿ ಫಿಲಿಪ್ಪನ ಉಪದೇಶ} [PS] ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು.
ಅಪೊಸ್ತಲರ ಕೃತ್ಯಗ 8 : 6 (ERVKN)
ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.
ಅಪೊಸ್ತಲರ ಕೃತ್ಯಗ 8 : 7 (ERVKN)
ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.
ಅಪೊಸ್ತಲರ ಕೃತ್ಯಗ 8 : 8 (ERVKN)
ಇದರಿಂದಾಗಿ ಆ ಪಟ್ಟಣದಲ್ಲಿದ್ದ ಜನರು ಬಹು ಸಂತೋಷಗೊಂಡರು. [PE][PS]
ಅಪೊಸ್ತಲರ ಕೃತ್ಯಗ 8 : 9 (ERVKN)
ಆದರೆ ಆ ಪಟ್ಟಣದಲ್ಲಿ ಸಿಮೋನ ಎಂಬ ಒಬ್ಬನಿದ್ದನು. ಫಿಲಿಪ್ಪನು ಅಲ್ಲಿಗೆ ಬರುವುದಕ್ಕಿಂತ ಮೊದಲಿನಿಂದಲೂ ಸಿಮೋನನು ಮಂತ್ರತಂತ್ರಗಳನ್ನು ಮಾಡುತ್ತಿದ್ದನು. ಅವನು ತನ್ನ ತಂತ್ರಗಳಿಂದ ಸಮಾರ್ಯದ ಜನರೆಲ್ಲರನ್ನು ವಿಸ್ಮಯಗೊಳಿಸಿದ್ದನು. ಸಿಮೋನನು ತನ್ನನ್ನು ಮಹಾವ್ಯಕ್ತಿಯೆಂದು ಹೇಳಿಕೊಂಡು ಜಂಭಪಡುತ್ತಿದ್ದನು.
ಅಪೊಸ್ತಲರ ಕೃತ್ಯಗ 8 : 10 (ERVKN)
ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು.
ಅಪೊಸ್ತಲರ ಕೃತ್ಯಗ 8 : 11 (ERVKN)
ಸಿಮೋನನು ತನ್ನ ಮಂತ್ರತಂತ್ರಗಳಿಂದ ಜನರನ್ನು ಬಹುಕಾಲದಿಂದಲೂ ವಿಸ್ಮಯಗೊಳಿಸಿದ್ದರಿಂದ ಜನರು ಅವನ ಹಿಂಬಾಲಕರಾಗಿದ್ದರು.
ಅಪೊಸ್ತಲರ ಕೃತ್ಯಗ 8 : 12 (ERVKN)
ಆದರೆ ಫಿಲಿಪ್ಪನು ದೇವರ ರಾಜ್ಯದ ಬಗ್ಗೆ ಮತ್ತು ಯೇಸುಕ್ರಿಸ್ತನ ಶಕ್ತಿಯ ಬಗ್ಗೆ ಜನರಿಗೆ ಸುವಾರ್ತೆಯನ್ನು ಹೇಳಿದನು. ಗಂಡಸರು ಮತ್ತು ಹೆಂಗಸರು ಫಿಲಿಪ್ಪನು ಹೇಳಿದ್ದನ್ನು ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.
ಅಪೊಸ್ತಲರ ಕೃತ್ಯಗ 8 : 13 (ERVKN)
ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು. [PE][PS]
ಅಪೊಸ್ತಲರ ಕೃತ್ಯಗ 8 : 14 (ERVKN)
ಅಪೊಸ್ತಲರು ಇನ್ನೂ ಜೆರುಸಲೇಮಿನಲ್ಲಿದ್ದರು. ಸಮಾರ್ಯದ ಜನರು ದೇವರ ವಾಕ್ಯವನ್ನು ಸ್ವೀಕರಿಸಿಕೊಂಡರೆಂಬುದು ಅವರಿಗೆ ತಿಳಿಯಿತು. ಆದ್ದರಿಂದ ಅಪೊಸ್ತಲರು ಪೇತ್ರ ಮತ್ತು ಯೋಹಾನರನ್ನು ಸಮಾರ್ಯದ ಜನರ ಬಳಿಗೆ ಕಳುಹಿಸಿದರು.
ಅಪೊಸ್ತಲರ ಕೃತ್ಯಗ 8 : 15 (ERVKN)
ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು.
ಅಪೊಸ್ತಲರ ಕೃತ್ಯಗ 8 : 16 (ERVKN)
ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು.
ಅಪೊಸ್ತಲರ ಕೃತ್ಯಗ 8 : 17 (ERVKN)
ಈ ಇಬ್ಬರು ಅಪೊಸ್ತಲರು ಅವರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಅವರು ಪವಿತ್ರಾತ್ಮನನ್ನು ಹೊಂದಿಕೊಂಡರು. [PE][PS]
ಅಪೊಸ್ತಲರ ಕೃತ್ಯಗ 8 : 18 (ERVKN)
ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ,
ಅಪೊಸ್ತಲರ ಕೃತ್ಯಗ 8 : 19 (ERVKN)
“ನಾನು ಯಾರ ಮೇಲೆ ಕೈಯಿಟ್ಟರೂ ಅವರಿಗೆ ಪವಿತ್ರಾತ್ಮನು ದೊರೆಯುವಂಥ ಶಕ್ತಿಯನ್ನು ನನಗೆ ಕೊಡಿರಿ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 8 : 20 (ERVKN)
ಪೇತ್ರನು ಸಿಮೋನನಿಗೆ, “ನೀನೂ ನಾಶವಾಗು! ನಿನ್ನ ಹಣವೂ ನಾಶವಾಗಲಿ! ದೇವರ ವರವನ್ನು ಹಣದಿಂದ ಕೊಂಡುಕೊಳ್ಳಬಹುದೆಂದು ನೀನು ಭಾವಿಸಿದೆ.
ಅಪೊಸ್ತಲರ ಕೃತ್ಯಗ 8 : 21 (ERVKN)
ಈ ಕಾರ್ಯದಲ್ಲಿ ನೀನು ನಮ್ಮೊಂದಿಗೆ ಭಾಗಿಯಾಗಲು ಸಾಧ್ಯವಿಲ್ಲ. ನಿನ್ನ ಹೃದಯವು ದೇವರ ಮುಂದೆ ಸರಿಯಾಗಿಲ್ಲ.
ಅಪೊಸ್ತಲರ ಕೃತ್ಯಗ 8 : 22 (ERVKN)
ನಿನ್ನ ಹೃದಯವನ್ನು ಮಾರ್ಪಡಿಸಿಕೊ! ನೀನು ಮಾಡಿದ ಕೆಟ್ಟಕಾರ್ಯದಿಂದ ತಿರುಗಿಕೊ. ಪ್ರಭುವಿನಲ್ಲಿ ಪ್ರಾರ್ಥಿಸು. ನೀನು ಹೀಗೆ ಆಲೋಚಿಸಿದ್ದನ್ನು ಆತನು ಕ್ಷಮಿಸಬಹುದು.
ಅಪೊಸ್ತಲರ ಕೃತ್ಯಗ 8 : 23 (ERVKN)
ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 8 : 24 (ERVKN)
ಸಿಮೋನನು, “ನೀವಿಬ್ಬರೂ ನನಗೋಸ್ಕರ ಪ್ರಭುವಿನಲ್ಲಿ ಪ್ರಾರ್ಥಿಸಿ. ನೀವು ಹೇಳಿದ ಸಂಗತಿಗಳು ನನಗಾಗದಂತೆ ಪ್ರಾರ್ಥಿಸಿ!” ಎಂದು ಕೇಳಿಕೊಂಡನು. [PE][PS]
ಅಪೊಸ್ತಲರ ಕೃತ್ಯಗ 8 : 25 (ERVKN)
ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು. [PS]
ಅಪೊಸ್ತಲರ ಕೃತ್ಯಗ 8 : 26 (ERVKN)
{ಫಿಲಿಪ್ಪನು ಇಥಿಯೋಪಿಯದವನಿಗೆ ನೀಡಿದ ಉಪದೇಶ} [PS] ಪ್ರಭುವಿನ ದೂತನೊಬ್ಬನು ಫಿಲಿಪ್ಪನಿಗೆ, “ನೀನು ಸಿದ್ಧನಾಗಿ ದಕ್ಷಿಣದ ಕಡೆಗೆ ಅಂದರೆ ಜೆರುಸಲೇಮಿನಿಂದ ಗಾಜಾಕ್ಕೆ ಹೋಗುವ ಮರಳುಗಾಡಿನ ಮಾರ್ಗಕ್ಕೆ ಹೋಗು” ಎಂದು ಹೇಳಿದನು. [PE][PS]
ಅಪೊಸ್ತಲರ ಕೃತ್ಯಗ 8 : 27 (ERVKN)
ಆದ್ದರಿಂದ ಫಿಲಿಪ್ಪನು ಸಿದ್ಧನಾಗಿ ಹೊರಟನು. ಇಥಿಯೋಪಿಯಾದ ಒಬ್ಬನನ್ನು ಅವನು ದಾರಿಯಲ್ಲಿ ಕಂಡನು. ಈ ಮನುಷ್ಯನು ನಪುಂಸಕನಾಗಿದ್ದನು. ಇಥಿಯೋಪಿಯದ ರಾಣಿಯಾದ ಕಂದಾಕೆಯ ಆಸ್ಥಾನದಲ್ಲಿ ಇವನು ಮುಖ್ಯಾಧಿಕಾರಿಯಾಗಿದ್ದನು. ಹಣವನ್ನೆಲ್ಲ ನೋಡಿಕೊಳ್ಳುವ ಜವಾಬ್ದಾರಿ ಇವನದೇ ಆಗಿತ್ತು. ಈ ಮನುಷ್ಯನು ಆರಾಧನೆಗಾಗಿ ಜೆರುಸಲೇಮಿಗೆ ಹೋಗಿದ್ದನು.
ಅಪೊಸ್ತಲರ ಕೃತ್ಯಗ 8 : 28 (ERVKN)
ಈಗ ಅವನು ತನ್ನ ಮನೆಗೆ ಮರಳಿ ಹೋಗುತ್ತಿದ್ದನು. ಅವನು ತನ್ನ ರಥದಲ್ಲಿ ಕುಳಿತುಕೊಂಡು ಯೆಶಾಯನ ಗ್ರಂಥವನ್ನು ಓದುತ್ತಿದ್ದನು. [PE][PS]
ಅಪೊಸ್ತಲರ ಕೃತ್ಯಗ 8 : 29 (ERVKN)
ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು.
ಅಪೊಸ್ತಲರ ಕೃತ್ಯಗ 8 : 30 (ERVKN)
ಅಂತೆಯೇ ಫಿಲಿಪ್ಪನು ರಥದ ಬಳಿಗೆ ಹೋದನು. ಆ ಮನುಷ್ಯನು ಓದುತ್ತಿರುವುದು ಅವನಿಗೆ ಕೇಳಿಸಿತು. ಅವನು ಯೆಶಾಯನ ಪ್ರವಾದನಾ ಗ್ರಂಥವನ್ನು ಓದುತ್ತಿದ್ದನು. ಫಿಲಿಪ್ಪನು ಅವನಿಗೆ, “ನೀನು ಓದುತ್ತಿರುವುದು ನಿನಗೆ ಅರ್ಥವಾಗುತ್ತಿದೆಯೋ?” ಎಂದು ಕೇಳಿದನು. [PE][PS]
ಅಪೊಸ್ತಲರ ಕೃತ್ಯಗ 8 : 31 (ERVKN)
ಆ ಅಧಿಕಾರಿಯು “ನಾನು ಹೇಗೆ ಅರ್ಥಮಾಡಿಕೊಳ್ಳಲಿ? ಬೇರೆ ಯಾರಾದರೂ ನನಗೆ ಅದನ್ನು ವಿವರಿಸಬೇಕು!” ಎಂದು ಉತ್ತರಕೊಟ್ಟನು. ಬಳಿಕ, ರಥವನ್ನು ಹತ್ತಿ ತನ್ನೊಂದಿಗೆ ಕುಳಿತುಕೊಳ್ಳುವಂತೆ ಅವನು ಫಿಲಿಪ್ಪನನ್ನು ಆಹ್ವಾನಿಸಿದನು.
ಅಪೊಸ್ತಲರ ಕೃತ್ಯಗ 8 : 32 (ERVKN)
ಅವನು ಓದುತ್ತಿದ್ದ ಪವಿತ್ರ ಗ್ರಂಥದ ಭಾಗವು ಇಂತಿದೆ: “ವಧ್ಯಸ್ಥಾನಕ್ಕೆ ಒಯ್ದ ಕುರಿಯಂತೆ ಆತನಿದ್ದನು. [QBR] ಉಣ್ಣೆ ಕತ್ತರಿಸುವವನ ಮುಂದೆ ಮೌನವಾಗಿರುವ ಕುರಿಯಂತೆ ಆತನಿದ್ದನು. [QBR2] ಆತನು ಬಾಯಿ ತೆರೆಯಲಿಲ್ಲ. [QBR]
ಅಪೊಸ್ತಲರ ಕೃತ್ಯಗ 8 : 33 (ERVKN)
ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. [QBR] ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! [QBR2] ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?” ಯೆಶಾಯ 53:7-8] [PS]
ಅಪೊಸ್ತಲರ ಕೃತ್ಯಗ 8 : 34 (ERVKN)
ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.
ಅಪೊಸ್ತಲರ ಕೃತ್ಯಗ 8 : 35 (ERVKN)
ಫಿಲಿಪ್ಪನು ಪವಿತ್ರ ಗ್ರಂಥದ ಈ ಭಾಗದಿಂದಲೇ ಆರಂಭಿಸಿ ಯೇಸುವಿನ ವಿಷಯವಾದ ಸುವಾರ್ತೆಯನ್ನು ಅವನಿಗೆ ತಿಳಿಸಿದನು. [PE][PS]
ಅಪೊಸ್ತಲರ ಕೃತ್ಯಗ 8 : 36 (ERVKN)
ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು.
ಅಪೊಸ್ತಲರ ಕೃತ್ಯಗ 8 : 37 (ERVKN)
[*ಅಪೊಸ್ತಲರ ಕಾರ್ಯಗಳ ಕೆಲವು ಪ್ರತಿಗಳಲ್ಲಿ 37 ನೇ ವಚನವನ್ನು ಸೇರಿಸಲಾಗಿದೆ: “ಫಿಲಿಪ್ಪನು, ‘ನೀನು ಪೂರ್ಣಹೃದಯದಿಂದ ನಂಬುವುದಾದರೆ ಅಡ್ಡಿಯಿಲ್ಲ’ ಎಂದು ಉತ್ತರಿಸಿದನು. ಅದಕ್ಕೆ ಅಧಿಕಾರಿಯು, “ಯೇಸುಕ್ರಿಸ್ತನೇ ದೇವರ ಮಗನೆಂದು ನಾನು ನಂಬುತ್ತೇನೆ” ಎಂದನು.]
ಅಪೊಸ್ತಲರ ಕೃತ್ಯಗ 8 : 38 (ERVKN)
ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು.
ಅಪೊಸ್ತಲರ ಕೃತ್ಯಗ 8 : 39 (ERVKN)
ಅವರು ನೀರಿನಿಂದ ಮೇಲಕ್ಕೆ ಬಂದಾಗ ಪ್ರಭುವಿನ ಆತ್ಮನಿಂದ ಫಿಲಿಪ್ಪನು ಎತ್ತಲ್ಪಟ್ಟನು. ಅವನು ಫಿಲಿಪ್ಪನನ್ನು ಮತ್ತೆಂದೂ ನೋಡಲಿಲ್ಲ. ಅವನು ಬಹಳ ಸಂತೋಷದಿಂದ ತನ್ನ ಪ್ರಯಾಣವನ್ನು ಮುಂದುವರಿಸಿದನು.
ಅಪೊಸ್ತಲರ ಕೃತ್ಯಗ 8 : 40 (ERVKN)
ಆದರೆ ಫಿಲಿಪ್ಪನು ಅಜೋತ್ ಎಂಬ ಪಟ್ಟಣದಲ್ಲಿ ಕಾಣಿಸಿಕೊಂಡು ಸೆಜರೇಯ ಎಂಬ ಪಟ್ಟಣಕ್ಕೆ ಹೋದನು. ಅಲ್ಲಿಗೆ ಹೋಗುವಾಗ ದಾರಿಯಲ್ಲಿ ಸಿಕ್ಕಿದ ಎಲ್ಲಾ ಊರುಗಳಲ್ಲಿಯೂ ಸುವಾರ್ತೆಯನ್ನು ಸಾರಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40

BG:

Opacity:

Color:


Size:


Font: