ಧರ್ಮೋಪದೇಶಕಾಂಡ 15 : 1 (ERVKN)
ಸಾಲಗಳನ್ನು ವಜಾಮಾಡುವ ವಿಶೇಷ ವರ್ಷ “ಪ್ರತೀ ಏಳು ವರ್ಷಗಳ ಅಂತ್ಯದಲ್ಲಿ ನೀವು ಕೊಟ್ಟ ಸಾಲಗಳನ್ನು ವಜಾಮಾಡಬೇಕು.
ಧರ್ಮೋಪದೇಶಕಾಂಡ 15 : 2 (ERVKN)
ಒಬ್ಬನು ಇನ್ನೊಬ್ಬ ಇಸ್ರೇಲನಿಗೆ ಸಾಲಕೊಟ್ಟರೆ ಆ ಸಾಲವನ್ನು ವಜಾಮಾಡಬೇಕು. ತನ್ನ ಸಹೋದರನಾದ ಇಸ್ರೇಲನಿಂದ ಸಾಲ ಹಿಂದೆ ಕೇಳಬಾರದು. ಆ ವರ್ಷದಲ್ಲಿ ಸಾಲವನ್ನೆಲ್ಲಾ ವಜಾ ಮಾಡಬೇಕೆಂಬುದಾಗಿ ದೇವರು ಆದೇಶವನ್ನು ನೀಡಿದ್ದಾನೆ.
ಧರ್ಮೋಪದೇಶಕಾಂಡ 15 : 3 (ERVKN)
ಸಾಲಗಾರನು ಪರದೇಶಿಯಾಗಿದ್ದರೆ ಅವನು ಸಾಲ ಹಿಂತಿರುಗಿಸಬೇಕು. ಆದರೆ ಇಸ್ರೇಲರಲ್ಲಿ ಯಾರಾದರೂ ನಿಮ್ಮಿಂದ ಸಾಲ ತೆಗೆದುಕೊಂಡಿದ್ದರೆ ಅದನ್ನು ವಜಾ ಮಾಡಬೇಕು.
ಧರ್ಮೋಪದೇಶಕಾಂಡ 15 : 4 (ERVKN)
ನಿಮ್ಮ ದೇಶದಲ್ಲಿ ಯಾರೂ ಬಡವರಾಗಿರಬಾರದು. ಯಾಕೆಂದರೆ ಯೆಹೋವನೇ ನಿಮಗೆ ಈ ದೇಶವನ್ನು ಕೊಡುತ್ತಿದ್ದಾನೆ; ಮತ್ತು ಯೆಹೋವನು ನಿಮ್ಮನ್ನು ಅಧಿಕವಾಗಿ ಆಶೀರ್ವದಿಸುತ್ತಾನೆ.
ಧರ್ಮೋಪದೇಶಕಾಂಡ 15 : 5 (ERVKN)
ನೀವು ಆತನ ಆಜ್ಞೆಗಳನ್ನು ಅನುಸರಿಸುವವರಾಗಿದ್ದಲ್ಲಿ, ಆತನ ವಿಧಿಕ್ರಮಗಳಿಗೆ ವಿಧೇಯರಾಗಿದ್ದಲ್ಲಿ ದೇವರು ನಿಮ್ಮನ್ನು ಆಶೀರ್ವದಿಸುವನು.
ಧರ್ಮೋಪದೇಶಕಾಂಡ 15 : 6 (ERVKN)
ಆತನು ಮಾಡಿದ ವಾಗ್ದಾನದ ಪ್ರಕಾರ ಆಶೀರ್ವದಿಸುವನು. ಆಗ ನಿಮ್ಮಲ್ಲಿ ಬೇರೆ ಜನಾಂಗಗಳಿಗೆ ಸಾಲ ಕೊಡಲು ಯಥೇಚ್ಛವಾಗಿ ಹಣವಿರುವುದು. ನಿಮಗೆ ಬೇರೆಯವರಿಂದ ಹಣ ಸಾಲ ತೆಗೆದುಕೊಳ್ಳುವ ಅವಶ್ಯಕತೆ ಇರುವುದಿಲ್ಲ. ನೀವು ಎಷ್ಟೋ ದೇಶಗಳನ್ನು ಆಳುವಿರಿ. ಆದರೆ ಆ ದೇಶಗಳು ನಿಮ್ಮನ್ನು ಆಳವು.
ಧರ್ಮೋಪದೇಶಕಾಂಡ 15 : 7 (ERVKN)
“ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ವಾಸಿಸುವಾಗ ಒಂದುವೇಳೆ ನಿಮ್ಮ ಮಧ್ಯದಲ್ಲಿ ಒಬ್ಬ ಬಡವನಿರಬಹುದು. ನೀವು ಸ್ವಾರ್ಥರಾಗಿ, ಅವನಿಗೆ ಸಹಾಯಮಾಡಲು ನಿರಾಕರಿಸಬಾರದು.
ಧರ್ಮೋಪದೇಶಕಾಂಡ 15 : 8 (ERVKN)
ನಿಮ್ಮಲ್ಲಿರುವುದನ್ನು ನೀವು ಅವನೊಂದಿಗೆ ಹಂಚಿಕೊಳ್ಳಿ. ಅವನ ಅಗತ್ಯತೆಗೆ ತಕ್ಕಂತೆ ಸಾಲಕೊಡಿರಿ.
ಧರ್ಮೋಪದೇಶಕಾಂಡ 15 : 9 (ERVKN)
“ಸಾಲ ವಜಾಮಾಡುವ ಏಳನೆಯ ವರ್ಷ ಸಮೀಪವಾಯಿತೆಂದು ನೀವು ಯಾರಿಗೂ ಸಾಲ ಕೊಡದೇ ಸಹಾಯ ಮಾಡದೇ ಇರಬಾರದು. ಅಂಥಾ ದುಷ್ಟ ಆಲೋಚನೆ ನಿಮ್ಮ ಮನಸ್ಸಿನೊಳಗೆ ಹುಟ್ಟದಿರಲಿ. ಸಹಾಯದ ಅಗತ್ಯವಿರುವ ವ್ಯಕ್ತಿಯ ಬಗ್ಗೆ ನಿಮ್ಮಲ್ಲಿ ಯಾವ ಕೆಟ್ಟ ಆಲೋಚನೆಯೂ ಇರಬಾರದು. ನೀವು ಆ ಬಡ ವ್ಯಕ್ತಿಗೆ ಸಹಾಯ ಮಾಡದಿದ್ದರೆ ನಿಮ್ಮ ವಿರುದ್ಧವಾಗಿ ಅವನು ಯೆಹೋವನಿಗೆ ದೂರು ಹೇಳುವನು. ಆಗ ನೀವು ಯೆಹೋವನ ಮುಂದೆ ದೋಷಿಗಳಾಗಿ ಕಂಡುಬರುವಿರಿ.
ಧರ್ಮೋಪದೇಶಕಾಂಡ 15 : 10 (ERVKN)
“ಆ ಬಡ ಮನುಷ್ಯನಿಗೆ ನಿಮ್ಮಿಂದ ಎಷ್ಟು ಸಹಾಯ ಮಾಡಲು ಸಾಧ್ಯವಿದೆಯೋ ಅಷ್ಟು ಸಹಾಯಮಾಡಿ; ಕೊಡುವುದಕ್ಕೆ ಬೇಸರಪಡಬೇಡಿ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮ ಒಳ್ಳೆಯ ಕಾರ್ಯಗಳಿಗಾಗಿ ನಿಮ್ಮನ್ನು ಆಶೀರ್ವದಿಸುವನು; ನಿಮ್ಮ ಕೆಲಸವನ್ನೆಲ್ಲಾ ಸಫಲಪಡಿಸುವನು.
ಧರ್ಮೋಪದೇಶಕಾಂಡ 15 : 11 (ERVKN)
ನಿಮ್ಮ ದೇಶದಲ್ಲಿ ಯಾವಾಗಲೂ ಬಡಜನರು ಇರುತ್ತಾರೆ. ಅದಕ್ಕಾಗಿಯೇ ನಿಮ್ಮ ಸಹೋದರರಿಗೆ ಸಹಾಯ ಮಾಡಬೇಕೆಂದು ನಿಮಗೆ ಆಜ್ಞಾಪಿಸುತ್ತೇನೆ.
ಧರ್ಮೋಪದೇಶಕಾಂಡ 15 : 12 (ERVKN)
ಗುಲಾಮರನ್ನು ಸ್ವತಂತ್ರರನ್ನಾಗಿ ಮಾಡುವುದು “ನೀವು ಹೀಬ್ರೂ ಮನುಷ್ಯನನ್ನೋ ಸ್ತ್ರೀಯನ್ನೋ ನಿಮ್ಮ ಗುಲಾಮರಾಗಿ ಕ್ರಯಕ್ಕೆ ತೆಗೆದುಕೊಳ್ಳಬಹುದು. ಅವರನ್ನು ನಿಮ್ಮ ಗುಲಾಮರಾಗಿ ಆರು ವರ್ಷಗಳ ಕಾಲ ಇಟ್ಟುಕೊಳ್ಳಬಹುದು. ಆದರೆ ಏಳನೆಯ ವರ್ಷದಲ್ಲಿ ನೀವು ಅವರನ್ನು ಸ್ವತಂತ್ರರಾಗಿ ಬಿಟ್ಟುಬಿಡಬೇಕು.
ಧರ್ಮೋಪದೇಶಕಾಂಡ 15 : 13 (ERVKN)
ಅವರನ್ನು ಹಿಂದಕ್ಕೆ ಕಳುಹಿಸುವಾಗ ಬರೀಗೈಯಲ್ಲಿ ಕಳುಹಿಸಬಾರದು.
ಧರ್ಮೋಪದೇಶಕಾಂಡ 15 : 14 (ERVKN)
ನೀವು ಅವರಿಗೆ ನಿಮ್ಮ ಪಶುಗಳಲ್ಲಿ ಕೆಲವನ್ನು, ಸ್ವಲ್ಪ ಧಾನ್ಯವನ್ನು ಮತ್ತು ಸ್ವಲ್ಪ ದ್ರಾಕ್ಷಾರಸವನ್ನು ಕೊಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ನಿಮಗೆ ಹೇರಳವಾಗಿ ಅನುಗ್ರಹಿಸಿದ್ದಾನೆ. ಆದ್ದರಿಂದ ನಿಮ್ಮ ಗುಲಾಮರಿಗೆ ಒಳ್ಳೆಯವುಗಳನ್ನು ಹೇರಳವಾಗಿ ಕೊಡಿರಿ.
ಧರ್ಮೋಪದೇಶಕಾಂಡ 15 : 15 (ERVKN)
ನೀವು ಈಜಿಪ್ಟಿನಲ್ಲಿ ದಾಸತ್ವದಲ್ಲಿದ್ದುದನ್ನು ನೆನಪುಮಾಡಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನು. ಆದ್ದರಿಂದಲೇ ನಾನು ಈ ಆಜ್ಞೆಯನ್ನು ನಿಮಗೆ ಕೊಡುತ್ತಿದ್ದೇನೆ.
ಧರ್ಮೋಪದೇಶಕಾಂಡ 15 : 16 (ERVKN)
“ಆದರೆ ನಿಮ್ಮ ಗುಲಾಮರಲ್ಲಿ ಒಬ್ಬನು, ‘ನಾನು ನಿಮ್ಮನ್ನು ಬಿಟ್ಟುಹೋಗುವುದಿಲ್ಲ’ ಎಂದು ಹೇಳಿದರೆ, ನಿಮ್ಮನ್ನು ಮತ್ತು ನಿಮ್ಮ ಕುಟುಂಬವನ್ನು ಅವನು ಪ್ರೀತಿಸುವುದರಿಂದ ಮತ್ತು ನಿಮ್ಮೊಂದಿಗೆ ಒಳ್ಳೆಯ ಜೀವಿತವನ್ನು ಅವನು ಅನುಭವಿಸಿದ್ದರಿಂದ ಅವನು ನಿಮ್ಮೊಂದಿಗೆ ಇರಲು ಇಷ್ಟಪಟ್ಟರೆ,
ಧರ್ಮೋಪದೇಶಕಾಂಡ 15 : 17 (ERVKN)
ಅವನನ್ನು ನಿಮ್ಮ ಬಾಗಿಲಿನ ನಿಲುವು ಕಂಬದ ಬಳಿಯಲ್ಲಿ ನಿಲ್ಲಿಸಿ ಅವನ ಕಿವಿಯನ್ನು ಒಂದು ಹರಿತವಾದ ಸಾಧನದಿಂದ ರಂಧ್ರ ಮಾಡಬೇಕು. ಇದು, ಅವನು ನಿಮ್ಮ ಶಾಶ್ವತ ಗುಲಾಮನು ಎಂದು ತೋರಿಸುವುದು. ಗುಲಾಮಳಿಗೂ ಇದು ಅನ್ವಯಿಸುತ್ತದೆ.
ಧರ್ಮೋಪದೇಶಕಾಂಡ 15 : 18 (ERVKN)
“ನಿಮ್ಮ ಗುಲಾಮರನ್ನು ಸ್ವತಂತ್ರರಾಗಿ ಬಿಡಬೇಕಲ್ಲಾ ಎಂದು ಬೇಸರಪಡಬೇಡಿ. ಅವರು ಅರ್ಧಕೂಲಿ ತೆಗೆದುಕೊಂಡು ಆರು ವರ್ಷ ನಿಮ್ಮ ಸೇವೆ ಮಾಡಿದ್ದಾರಲ್ಲಾ? ನಿಮ್ಮ ಕಾರ್ಯಗಳನ್ನೆಲ್ಲಾ ನಿಮ್ಮ ದೇವರಾದ ಯೆಹೋವನು ಸಫಲಪಡಿಸುವನು.
ಧರ್ಮೋಪದೇಶಕಾಂಡ 15 : 19 (ERVKN)
ಚೊಚ್ಚಲ ಪ್ರಾಣಿಗಳ ಬಗ್ಗೆ ನಿಯಮಗಳು “ನಿಮ್ಮ ಹಿಂಡಿನಲ್ಲಾಗಲಿ ಹಟ್ಟಿಯಲ್ಲಾಗಲಿ ಚೊಚ್ಚಲ ಮರಿಗಳು ನನಗೆ ವಿಶೇಷವಾದವುಗಳು. ನೀವು ಅವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಂಥಾ ಪ್ರಾಣಿಗಳನ್ನು ನಿಮ್ಮ ಕೆಲಸಕಾರ್ಯಗಳಿಗಾಗಿ ಉಪಯೋಗಿಸಕೂಡದು. ಮತ್ತು ಅಂಥಾ ಕುರಿಮರಿಗಳ ಉಣ್ಣೆಯನ್ನು ಕತ್ತರಿಸಬಾರದು.
ಧರ್ಮೋಪದೇಶಕಾಂಡ 15 : 20 (ERVKN)
ಪ್ರತಿ ವರ್ಷ, ಚೊಚ್ಚಲು ಪ್ರಾಣಿಗಳನ್ನು ನಿಮ್ಮ ದೇವರಾದ ಯೆಹೋವನು ಆರಿಸಿದ ಸ್ಥಳದಲ್ಲಿ ನೀವು ನಿಮ್ಮ ಹೆಂಡತಿ ಮಕ್ಕಳೊಂದಿಗೆ ತಿನ್ನಬೇಕು.
ಧರ್ಮೋಪದೇಶಕಾಂಡ 15 : 21 (ERVKN)
“ಆದರೆ ಆ ಚೊಚ್ಚಲು ಪ್ರಾಣಿಗಳು ಕುಂಟಾಗಿದ್ದರೆ, ಕುರುಡಾಗಿದ್ದರೆ ಅಥವಾ ಬೇರೆ ಯಾವ ಅಂಗವಿಕಲತೆಗೆ ಒಳಗಾಗಿದ್ದರೆ, ನಿಮ್ಮ ದೇವರಾದ ಯೆಹೋವನಿಗೆ ಅವುಗಳನ್ನು ಸಮರ್ಪಿಸಕೂಡದು.
ಧರ್ಮೋಪದೇಶಕಾಂಡ 15 : 22 (ERVKN)
ಅವುಗಳನ್ನು ನಿಮ್ಮ ಮನೆಗಳಲ್ಲಿಯೇ ಬೇಕಾದರೆ ತಿನ್ನಬಹುದು. ಅದನ್ನು ಯಾರು ಬೇಕಾದರೂ ಅಂದರೆ ಶುದ್ಧರೂ ಅಶುದ್ಧರೂ ತಿನ್ನಬಹುದು. ಜಿಂಕೆಯನ್ನು, ಟಗರನ್ನು ತಿನ್ನಲು ಯಾವ ನಿಯಮಗಳು ಇವೆಯೋ, ಅದೇ ನಿಯಮಗಳು ಇದಕ್ಕೂ ಅನ್ವಯಿಸುತ್ತವೆ.
ಧರ್ಮೋಪದೇಶಕಾಂಡ 15 : 23 (ERVKN)
ಅವುಗಳ ರಕ್ತವನ್ನು ತಿನ್ನಬಾರದು. ಅದನ್ನು ನೀರಿನಂತೆ ನೆಲದ ಮೇಲೆ ಚೆಲ್ಲಿಬಿಡಬೇಕು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23