ಧರ್ಮೋಪದೇಶಕಾಂಡ 17 : 1 (ERVKN)
“ನಿಮ್ಮ ದೇವರಾದ ಯೆಹೋವನಿಗೆ ನೀವು ಪಶುಗಳನ್ನಾಗಲಿ ಆಡುಕುರಿಮರಿಗಳನ್ನಾಗಲಿ ಸಮರ್ಪಿಸುವಾಗ ಅವು ಕಳಂಕವಿಲ್ಲದೆ ಪೂರ್ಣಾಂಗವಾಗಿರಬೇಕು; ದೋಷಪೂರಿತ ಯಜ್ಞವನ್ನು ಆತನು ದ್ವೇಷಿಸುತ್ತಾನೆ.
ಧರ್ಮೋಪದೇಶಕಾಂಡ 17 : 2 (ERVKN)
ವಿಗ್ರಹಾರಾಧನೆ ಮಾಡಿದರೆ ದೊರಕುವ ಶಿಕ್ಷೆ “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಒಂದು ಪಟ್ಟಣದಲ್ಲಿ ನೀವು ಕೆಟ್ಟ ಸುದ್ದಿಯೊಂದನ್ನು ಅಂದರೆ ಒಬ್ಬ ಸ್ತ್ರೀಯಾಗಲಿ ಅಥವಾ ಪುರುಷನಾಗಲಿ ದೇವರೊಂದಿಗೆ ಮಾಡಿದ ಒಡಂಬಡಿಕೆಯನ್ನು ಮುರಿದು ಆತನಿಗೆ ವಿರುದ್ಧವಾಗಿ ಪಾಪಮಾಡಿ
ಧರ್ಮೋಪದೇಶಕಾಂಡ 17 : 3 (ERVKN)
ಅವರು ಬೇರೆ ದೇವರುಗಳನ್ನಾಗಲಿ ಸೂರ್ಯಚಂದ್ರ ನಕ್ಷತ್ರಗಳನ್ನಾಗಲಿ ಪೂಜಿಸುತ್ತಾರೆ ಎಂಬ ಸುದ್ದಿಯನ್ನು ನೀವು ಕೇಳಿದರೂ ಕೇಳಬಹುದು, ಅದು ದೇವರ ಕಟ್ಟಳೆಗೆ ವಿರುದ್ಧವಾದದ್ದು.
ಧರ್ಮೋಪದೇಶಕಾಂಡ 17 : 4 (ERVKN)
ಇಂಥಾ ಕೆಟ್ಟ ಸುದ್ದಿಯನ್ನು ನೀವು ಕೇಳಿದರೆ ಮೊಟ್ಟಮೊದಲಾಗಿ ಅದು ಸತ್ಯವೋ ಸುಳ್ಳೋ ಎಂಬುದನ್ನು ಸರಿಯಾಗಿ ಪರಿಶೀಲಿಸಬೇಕು. ಅಂಥ ಭಯಂಕರ ಸಂಗತಿಯು ಇಸ್ರೇಲಿನಲ್ಲಿ ಸಂಭವಿಸಿದ್ದು ನಿಜವಾಗಿದ್ದಲ್ಲಿ,
ಧರ್ಮೋಪದೇಶಕಾಂಡ 17 : 5 (ERVKN)
ಆ ಪಾಪಮಾಡಿದವನಿಗೆ ಶಿಕ್ಷೆಯನ್ನು ವಿಧಿಸಬೇಕು. ಪಟ್ಟಣದ ಹೆಬ್ಬಾಗಿಲ ಹೊರಗಿರುವ ಬಯಲಿಗೆ ಆ ತಪ್ಪು ಮಾಡಿದ ಸ್ತ್ರೀಯನ್ನೂ, ಪುರುಷನನ್ನೂ ತೆಗೆದುಕೊಂಡು ಹೋಗಿ ಅಲ್ಲಿ ಅವರನ್ನು ಕಲ್ಲೆಸೆದು ಸಾಯಿಸಬೇಕು.
ಧರ್ಮೋಪದೇಶಕಾಂಡ 17 : 6 (ERVKN)
ಅವರು ವಿಗ್ರಹಾರಾಧನೆ ಮಾಡಿದ್ದಕ್ಕೆ ಒಂದೇ ಸಾಕ್ಷಿ ಇರುವುದಾದರೆ ಅವರಿಗೆ ಮರಣಶಿಕ್ಷೆಯಾಗಬಾರದು. ಆದರೆ ಇಬ್ಬರು ಅಥವಾ ಮೂವರು ಸಾಕ್ಷಿಗಳು ಅವರು ವಿಗ್ರಹಾರಾಧನೆ ಮಾಡಿದ್ದು ಸತ್ಯವೆಂದು ಹೇಳಿದರೆ ಮಾತ್ರ ಅವರನ್ನು ಸಾಯಿಸಬೇಕು.
ಧರ್ಮೋಪದೇಶಕಾಂಡ 17 : 7 (ERVKN)
ಸತ್ಯವೆಂದು ಹೇಳಿದ ಸಾಕ್ಷಿಗಳು ಮೊದಲು ಅವರ ಮೇಲೆ ಕಲ್ಲೆಸೆಯಬೇಕು. ಅನಂತರ ಬೇರೆಯವರು ಕಲ್ಲೆಸೆದು ಅವರನ್ನು ಸಾಯಿಸಬೇಕು. ಈ ರೀತಿಯಾಗಿ ನಿಮ್ಮ ಮಧ್ಯೆ ಇದ್ದ ದುಷ್ಕೃತ್ಯವನ್ನು ತೆಗೆದುಹಾಕಬೇಕು.
ಧರ್ಮೋಪದೇಶಕಾಂಡ 17 : 8 (ERVKN)
ನ್ಯಾಯಸ್ಥಾನದಲ್ಲಿ ಬಗೆಹರಿಸಲಾಗದ ವಿಷಯಗಳು “ನಿಮ್ಮ ನ್ಯಾಯಸ್ಥಾನದಲ್ಲಿ ನ್ಯಾಯತೀರಿಸಲಾಗದ ಕಷ್ಟದ ಸಮಸ್ಯೆಗಳು ಬರುವವು. ಅವು ಕೊಲೆ ಅಥವಾ ಇಬ್ಬರ ಮಧ್ಯೆ ವಿವಾದವಿರಬಹುದು; ಅಥವಾ ಜಗಳಮಾಡಿ ಗಾಯಗೊಂಡಿರುವ ಪ್ರಕರಣವಾಗಿರಬಹುದು. ನಿಮ್ಮ ಪಟ್ಟಣಗಳ ನ್ಯಾಯಸ್ಥಾನದಲ್ಲಿ ಈ ಪ್ರಕರಣಗಳ ವಿಚಾರಣೆ ನಡಿಸುವಾಗ ಸರಿಯಾದ ಇತ್ಯರ್ಥಮಾಡಿ ತೀರ್ಪುಮಾಡಲು ಕಷ್ಟವಾದಲ್ಲಿ ನೀವು ದೇವರು ಆರಿಸುವ ಸ್ಥಳಕ್ಕೆ ಹೋಗಬೇಕು.
ಧರ್ಮೋಪದೇಶಕಾಂಡ 17 : 9 (ERVKN)
ಲೇವಿಕುಲದ ಯಾಜಕರ ಬಳಿಗೂ ಅಲ್ಲಿ ಆ ಸಮಯದಲ್ಲಿರುವ ನ್ಯಾಯಾಧೀಶನ ಬಳಿಗೂ ಹೋಗಿ ಅವರಿಗೆ ವಿಷಯವನ್ನು ತಿಳಿಸಬೇಕು. ಅವರು ನಿಮ್ಮ ಮುಂದಿರುವ ಬಗೆಹರಿಯಲಾಗದ ಪ್ರಕರಣವನ್ನು ಆಲೈಸಿ, ವಿಚಾರಿಸಿ,
ಧರ್ಮೋಪದೇಶಕಾಂಡ 17 : 10 (ERVKN)
ಯೆಹೋವನ ವಿಶೇಷವಾದ ಸ್ಥಳದಲ್ಲಿ ತಮ್ಮ ತೀರ್ಪನ್ನು ಕೊಡುವರು. ಅವರು ಏನು ಹೇಳುತ್ತಾರೋ ಅದಕ್ಕೆ ಸಂಪೂರ್ಣವಾಗಿ ಒಪ್ಪಿಗೆ ನೀಡಬೇಕು. ನೀವು ಏನು ಮಾಡಬೇಕೆಂದು ಅವರು ಹೇಳುತ್ತಾರೋ ಅದನ್ನು ನೀವು ಮಾಡಲೇಬೇಕು.
ಧರ್ಮೋಪದೇಶಕಾಂಡ 17 : 11 (ERVKN)
ಅವರು ಹೇಳಿದ ಹಾಗೆ ಎಲ್ಲವನ್ನು ಅಕ್ಷರಶಃ ಪರಿಪಾಲಿಸಬೇಕು. ಅವರ ತೀರ್ಪನ್ನು ಬದಲಾಯಿಸಬಾರದು.
ಧರ್ಮೋಪದೇಶಕಾಂಡ 17 : 12 (ERVKN)
“ನಿಮ್ಮ ದೇವರಾದ ಯೆಹೋವನ ಸೇವೆಮಾಡುತ್ತಿರುವ ಯಾಜಕನಾಗಲಿ ನ್ಯಾಯಾಧೀಶನಾಗಲಿ ಹೇಳಿದ ತೀರ್ಪನ್ನು ಉಲ್ಲಂಘಿಸಿದವನಿಗೆ ಮರಣದಂಡನೆ ಆಗಬೇಕು. ನೀವು ಆ ದುಷ್ಟನನ್ನು ಇಸ್ರೇಲಿನಿಂದ ನಿರ್ಮೂಲ ಮಾಡಬೇಕು.
ಧರ್ಮೋಪದೇಶಕಾಂಡ 17 : 13 (ERVKN)
ಈ ದಂಡನೆಯ ಬಗ್ಗೆ ಜನರು ಕೇಳಿ ಭಯಪಟ್ಟು ಅಂಥ ಕೆಟ್ಟ ಕೃತ್ಯಗಳನ್ನು ಮಾಡದಿರುವರು.
ಧರ್ಮೋಪದೇಶಕಾಂಡ 17 : 14 (ERVKN)
ಅರಸನನ್ನು ಆರಿಸುವ ರೀತಿ “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ನೀವು ಪ್ರವೇಶಿಸುವಿರಿ. ಆ ಸ್ಥಳಗಳನ್ನು ಸ್ವಾಧೀನಪಡಿಸಿಕೊಂಡು ಅಲ್ಲಿ ನೆಲೆಸುವಿರಿ. ಆಗ ನೀವು ‘ನಮ್ಮ ಸುತ್ತಲಿನ ದೇಶದಲ್ಲಿರುವಂತೆಯೇ ನಮಗೂ ಒಬ್ಬ ರಾಜನು ಬೇಕು’ ಎಂದು ಹೇಳುವಿರಿ.
ಧರ್ಮೋಪದೇಶಕಾಂಡ 17 : 15 (ERVKN)
ಅಂಥ ಸಮಯದಲ್ಲಿ ಯೆಹೋವನು ಆರಿಸಿಕೊಂಡವನನ್ನೇ ನೀವು ರಾಜನನ್ನಾಗಿ ಆರಿಸಿಕೊಳ್ಳಬೇಕು; ಅವನು ನಿಮ್ಮ ಸ್ವಂತ ಜನರಲ್ಲಿ ಒಬ್ಬನಾಗಿರಬೇಕು; ಪರದೇಶಸ್ಥನನ್ನು ನೀವು ನಿಮ್ಮ ರಾಜನನ್ನಾಗಿ ಆರಿಸಬಾರದು.
ಧರ್ಮೋಪದೇಶಕಾಂಡ 17 : 16 (ERVKN)
ಅರಸನು ತನ್ನ ಉಪಯೋಗಕ್ಕಾಗಿ ಹೆಚ್ಚೆಚ್ಚಾಗಿ ಕುದುರೆಗಳನ್ನು ಖರೀದಿಸಬಾರದು; ಜನರನ್ನು ಈಜಿಪ್ಟಿಗೆ ಕಳುಹಿಸಿ ಅಲ್ಲಿಂದ ಹೆಚ್ಚುಹೆಚ್ಚು ಕುದುರೆಗಳನ್ನು ತರಿಸಬಾರದು; ಯಾಕೆಂದರೆ, ‘ನೀವು ಆ ಮಾರ್ಗದಲ್ಲಿ ಹಿಂದಕ್ಕೆ ಹೋಗಲೇಬಾರದು’ ಎಂದು ಯೆಹೋವನು ಹೇಳಿದ್ದಾನೆ.
ಧರ್ಮೋಪದೇಶಕಾಂಡ 17 : 17 (ERVKN)
ಅರಸನಿಗೆ ಮಿತಿಮೀರಿ ಪತ್ನಿಯರು ಇರಬಾರದು. ಯಾಕೆಂದರೆ ಅವರು ಅರಸನನ್ನು ಯೆಹೋವನ ಮಾರ್ಗದಲ್ಲಿ ನಡೆಯದಂತೆ ಮಾಡಿ ಬೇರೆ ಕಡೆಗೆ ತಿರುಗಿಸುವರು. ರಾಜನು ಬೆಳ್ಳಿಬಂಗಾರಗಳನ್ನು ಶೇಖರಿಸಿ ತನ್ನನ್ನು ಐಶ್ವರ್ಯವಂತನನ್ನಾಗಿ ಮಾಡಿಕೊಳ್ಳಬಾರದು.
ಧರ್ಮೋಪದೇಶಕಾಂಡ 17 : 18 (ERVKN)
“ರಾಜನು ರಾಜ್ಯವಾಳಲು ಆರಂಭಿಸುವಾಗ, ಯಾಜಕರ ಮತ್ತು ಲೇವಿಯರ ಪುಸ್ತಕಗಳಿಂದ ಧರ್ಮಶಾಸ್ತ್ರವನ್ನು ತನಗಾಗಿ ಪುಸ್ತಕ ರೂಪದಲ್ಲಿ ಬರೆಸಿಟ್ಟುಕೊಳ್ಳಬೇಕು.
ಧರ್ಮೋಪದೇಶಕಾಂಡ 17 : 19 (ERVKN)
ಅವನು ಆ ಪುಸ್ತಕವನ್ನು ತನ್ನೊಂದಿಗಿಟ್ಟುಕೊಂಡು ಅದನ್ನು ತನ್ನ ಜೀವಮಾನ ಪೂರ್ತಿ ಪದೇಪದೇ ಓದುತ್ತಿರಬೇಕು. ಯಾಕೆಂದರೆ ಧರ್ಮಶಾಸ್ತ್ರವು ಆಜ್ಞಾಪಿಸುವ ಪ್ರತಿಯೊಂದಕ್ಕೂ ಸಂಪೂರ್ಣವಾಗಿ ವಿಧೇಯನಾಗಲು ಅವನು ಕಲಿತುಕೊಳ್ಳಬೇಕು.
ಧರ್ಮೋಪದೇಶಕಾಂಡ 17 : 20 (ERVKN)
ಆಗ ಅರಸನು ತನ್ನ ಪ್ರಜೆಗಳಿಗಿಂತ ತಾನು ಉತ್ತಮನಲ್ಲವೆಂದು ತಿಳಿದುಕೊಳ್ಳುವನು. ಆಗ ಅವನು ಧರ್ಮಶಾಸ್ತ್ರಕ್ಕೆ ವಿಮುಖನಾಗದೆ ಅದನ್ನು ಚಾಚೂತಪ್ಪದೆ ಅನುಸರಿಸುವನು. ಆಗ ರಾಜನೂ ಅವನ ಸಂತತಿಯವರೂ ಇಸ್ರೇಲ್ ರಾಜ್ಯವನ್ನು ಬಹುಕಾಲ ಆಳುವರು.
❮
❯
1
2
3
4
5
6
7
8
9
10
11
12
13
14
15
16
17
18
19
20