ಧರ್ಮೋಪದೇಶಕಾಂಡ 21 : 1 (ERVKN)
ಕೊಲೆಯಾದ ವ್ಯಕ್ತಿಯ ದೇಹ ಪತ್ತೆಯಾದರೆ “ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ಒಬ್ಬ ವ್ಯಕ್ತಿ ಕೊಲೆಯಾಗಿ ಹೊಲದಲ್ಲಿ ಬಿದ್ದಿರುವುದನ್ನು ನೀವು ಕಂಡರೆ ಮತ್ತು ಅವನನ್ನು ಕೊಲೆ ಮಾಡಿದ್ದು ಯಾರು ಎಂದು ನಿಮಗೆ ಗೊತ್ತಿಲ್ಲದಿದ್ದರೆ,
ಧರ್ಮೋಪದೇಶಕಾಂಡ 21 : 2 (ERVKN)
ಆಗ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ಬಂದು ಪಟ್ಟಣಕ್ಕೂ ಆ ಶವದ ಸ್ಥಳಕ್ಕೂ ಎಷ್ಟು ದೂರವಿದೆ ಎಂದು ಅಳೆಯಬೇಕು.
ಧರ್ಮೋಪದೇಶಕಾಂಡ 21 : 3 (ERVKN)
ಯಾವ ಪಟ್ಟಣವು ಕೊಲೆಯಾದ ವ್ಯಕ್ತಿಯ ಶವಕ್ಕೆ ಹತ್ತಿರವಾಗಿದೆಯೋ ಆ ಪಟ್ಟಣದ ನಾಯಕರು ಮತ್ತು ನ್ಯಾಯಾಧೀಶರು ತಮ್ಮ ಹಟ್ಟಿಯಿಂದ ಎಂದೂ ಕರು ಈಯದ, ಕೆಲಸಕ್ಕೆ ಉಪಯೋಗಿಸದ ಒಂದು ಹಸುವನ್ನು ತೆಗೆದುಕೊಂಡು
ಧರ್ಮೋಪದೇಶಕಾಂಡ 21 : 4 (ERVKN)
ಹರಿಯುವ ನೀರಿರುವ ತಗ್ಗಿಗೆ ಅಟ್ಟಿಕೊಂಡು ಹೋಗಬೇಕು. ಆ ತಗ್ಗು ಉಳಿಮೆ ಮಾಡಿದ ಜಾಗವಾಗಿರಬಾರದು ಮತ್ತು ಆ ಸ್ಥಳದಲ್ಲಿ ಯಾವ ಸಸಿಯೂ ನೆಟ್ಟಿರಬಾರದು. ಅಲ್ಲಿ ಊರ ಹಿರಿಯರು ಆ ಹಸುವಿನ ಕುತ್ತಿಗೆ ಮುರಿಯಬೇಕು.
ಧರ್ಮೋಪದೇಶಕಾಂಡ 21 : 5 (ERVKN)
ಊರಿನಲ್ಲಿದ್ದ ಲೇವಿಯರೂ ಅಲ್ಲಿಗೆ ಹೋಗಬೇಕು. ಯೆಹೋವನು ಅವರ ಜನರನ್ನು ಆತನ ಹೆಸರಿನಲ್ಲಿ ಆಶೀರ್ವದಿಸುವುದಕ್ಕಾಗಿಯೂ ತನ್ನ ಸೇವೆ ಮಾಡುವುದಕ್ಕಾಗಿಯೂ ಆರಿಸಿದ್ದಾನೆ. ಎಲ್ಲಾ ವಾಗ್ವಾದಗಳನ್ನು ಯಾಜಕನೇ ಇತ್ಯರ್ಥಮಾಡುವನು.
ಧರ್ಮೋಪದೇಶಕಾಂಡ 21 : 6 (ERVKN)
ಕೊಲೆಯಾದವನ ದೇಹದ ಸಮೀಪವಿರುವ ಪಟ್ಟಣದ ಹಿರಿಯರು ಕುತ್ತಿಗೆ ಮುರಿಯಲ್ಪಟ್ಟ ಹಸುವಿನ ಮೇಲೆ ತಮ್ಮತಮ್ಮ ಕೈಗಳನ್ನು ತೊಳೆಯಬೇಕು.
ಧರ್ಮೋಪದೇಶಕಾಂಡ 21 : 7 (ERVKN)
ಆ ಹಿರಿಯರು ಹೀಗೆನ್ನಬೇಕು: ‘ನಾವು ಈ ವ್ಯಕ್ತಿಯನ್ನು ಹತ್ಯೆ ಮಾಡಲಿಲ್ಲ ಮತ್ತು ಅವನು ಕೊಲೆ ಮಾಡಲ್ಪಟ್ಟದ್ದನ್ನು ನಾವು ನೋಡಿಲ್ಲ.
ಧರ್ಮೋಪದೇಶಕಾಂಡ 21 : 8 (ERVKN)
ಯೆಹೋವನೇ, ನೀನು ಇಸ್ರೇಲನ್ನು ರಕ್ಷಿಸಿರುವೆ, ನಾವು ನಿನ್ನ ಜನಗಳಾಗಿದ್ದೇವೆ. ಈಗ ನೀನು ನಮ್ಮನ್ನು ಶುದ್ಧೀಕರಿಸು; ನಿರ್ದೋಷಿಯ ಕೊಲೆಗೆ ನಮ್ಮನ್ನು ಕಾರಣರನ್ನಾಗಿ ಮಾಡಬೇಡ!’
ಧರ್ಮೋಪದೇಶಕಾಂಡ 21 : 9 (ERVKN)
ಹೀಗೆ ನೀವು ಯೆಹೋವನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ನಿಮ್ಮ ಸಮೂಹದಿಂದ ದೋಷವನ್ನು ತೆಗೆದುಹಾಕುವಿರಿ.
ಧರ್ಮೋಪದೇಶಕಾಂಡ 21 : 10 (ERVKN)
ಯುದ್ಧದಲ್ಲಿ ಸೆರೆಹಿಡಿಯಲ್ಪಟ್ಟ ಸ್ತ್ರೀಯರು “ನೀವು ನಿಮ್ಮ ಶತ್ರುಗಳೊಂದಿಗೆ ಯುದ್ಧಮಾಡಿ ದೇವರ ಸಹಾಯದಿಂದ ಅವರನ್ನು ಸೋಲಿಸುವಿರಿ. ನೀವು ನಿಮ್ಮ ಶತ್ರುಗಳನ್ನು ಸೆರೆಹಿಡಿದು ಕೊಂಡೊಯ್ಯುವಿರಿ.
ಧರ್ಮೋಪದೇಶಕಾಂಡ 21 : 11 (ERVKN)
ಸೆರೆಹಿಡಿಯಲ್ಪಟ್ಟವರಲ್ಲಿ ಸುಂದರಿಯಾದ ಸ್ತ್ರೀಯನ್ನು ನೋಡಿ ಆಕೆಯನ್ನು ನಿನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳ ಬಯಸಿದರೆ
ಧರ್ಮೋಪದೇಶಕಾಂಡ 21 : 12 (ERVKN)
ಆಕೆಯನ್ನು ನಿನ್ನ ಮನೆಯೊಳಗೆ ಕರೆದುಕೊಂಡು ಬರಬೇಕು. ಆಕೆಯು ತಲೆಯನ್ನು ಬೋಳಿಸಿಕೊಂಡು ಉಗುರನ್ನು ಕತ್ತರಿಸಿಕೊಳ್ಳಬೇಕು.
ಧರ್ಮೋಪದೇಶಕಾಂಡ 21 : 13 (ERVKN)
ಆಕೆಯು ತನ್ನ ಸೆರೆವಾಸದ ಬಟ್ಟೆಯನ್ನು ತೆಗೆದಿಟ್ಟು ಒಂದು ತಿಂಗಳು ಪೂರ್ತಿ ತನ್ನ ತಂದೆತಾಯಿಗಳಿಗಾಗಿ ಶೋಕಿಸಬೇಕು. ಅನಂತರ ನೀನು ಆಕೆಯ ಬಳಿಗೆ ಹೋಗಿ ಆಕೆಯನ್ನು ವರಿಸಿ ಗಂಡನಾಗಬಹುದು. ಆಕೆಯು ನಿನ್ನ ಹೆಂಡತಿಯಾಗುವಳು.
ಧರ್ಮೋಪದೇಶಕಾಂಡ 21 : 14 (ERVKN)
ಆಕೆಯನ್ನು ನೀನು ಮೆಚ್ಚದಿದ್ದರೆ ವಿವಾಹವಿಚ್ಛೇದನೆ ಮಾಡಿ ಆಕೆಯನ್ನು ಸ್ವತಂತ್ರಳಾಗುವಂತೆ ಬಿಟ್ಟುಬಿಡಬಹುದು. ಆದರೆ ನೀನು ಆಕೆಯನ್ನು ಮಾರಬಾರದು. ಆಕೆಯನ್ನು ಗುಲಾಮಳಂತೆ ನೋಡಬಾರದು. ಯಾಕೆಂದರೆ ನೀನು ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದಿಯಲ್ಲಾ.
ಧರ್ಮೋಪದೇಶಕಾಂಡ 21 : 15 (ERVKN)
ಹಿರಿಯ ಮಗನು “ಒಬ್ಬ ಮನುಷ್ಯನಿಗೆ ಇಬ್ಬರು ಹೆಂಡತಿಯರಿದ್ದರೆ ಅವರಲ್ಲಿ ಒಬ್ಬಾಕೆಯನ್ನು ಅವನು ಹೆಚ್ಚಾಗಿ ಪ್ರೀತಿಸಿದರೂ ಪ್ರೀತಿಸಬಹುದು. ಆ ಇಬ್ಬರು ಅವನಿಗೆ ಮಕ್ಕಳನ್ನು ಹೆರುವರು. ಹಿರಿಮಗನು ತಾನು ಪ್ರೀತಿಸಿದ ಹೆಂಡತಿಯಲ್ಲಿ ಹುಟ್ಟಿದರೆ
ಧರ್ಮೋಪದೇಶಕಾಂಡ 21 : 16 (ERVKN)
ಆ ಮನುಷ್ಯನು ತನ್ನ ಆಸ್ತಿಯನ್ನು ತನ್ನ ಮಕ್ಕಳಿಗೆ ಪಾಲುಮಾಡಿ ಕೊಡುವಾಗ ಚೊಚ್ಚಲಮಗನಿಗೆ ಸಿಗಬೇಕಾದ ಆಸ್ತಿಯನ್ನು ತಾನು ಪ್ರೀತಿಸುವ ಹೆಂಡತಿಯ ಮಗನಿಗೆ ಕೊಡಬಾರದು.
ಧರ್ಮೋಪದೇಶಕಾಂಡ 21 : 17 (ERVKN)
ತಾನು ಪ್ರೀತಿಸದೆ ಇರುವ ಹೆಂಡತಿಯ ಚೊಚ್ಚಲಮಗನನ್ನು ಅವನು ಸ್ವೀಕರಿಸಬೇಕು. ಆ ಚೊಚ್ಚಲಮಗನಿಗೆ ಬೇರೆ ಮಕ್ಕಳಿಗಿಂತ ಎರಡು ಪಾಲು ಆಸ್ತಿಯನ್ನು ಕೊಡಬೇಕು. ಯಾಕೆಂದರೆ ಅವನು ನಿಮ್ಮ ಚೊಚ್ಚಲ ಮಗನು. ಚೊಚ್ಚಲ ಮಗನ ಹಕ್ಕು ಅವನಿಗೆ ಸೇರಿದ್ದು.
ಧರ್ಮೋಪದೇಶಕಾಂಡ 21 : 18 (ERVKN)
ವಿಧೇಯರಾಗದ ಮಕ್ಕಳ ಬಗ್ಗೆ “ಒಬ್ಬ ಮನುಷ್ಯನಿಗೆ ಹಠಮಾರಿಯಾದ ಅವಿಧೇಯ ಮಗನಿರಬಹುದು. ಈ ಮಗನು ತಂದೆಯ ಮಾತನ್ನಾಗಲಿ ತಾಯಿಯ ಮಾತನ್ನಾಗಲಿ ಕೇಳದವನಾಗಿದ್ದರೆ ಅವನಿಗೆ ಅವರು ಶಿಕ್ಷೆ ಕೊಟ್ಟರೂ ಅವನು ಅವರಿಗೆ ವಿಧೇಯನಾಗದಿದ್ದರೆ, ಅವರ ಮಾತುಗಳನ್ನು ಕೇಳದಿದ್ದರೆ,
ಧರ್ಮೋಪದೇಶಕಾಂಡ 21 : 19 (ERVKN)
ಆಗ ಅವನ ತಂದೆತಾಯಿಗಳು ಆ ಮಗನನ್ನು ಪಟ್ಟಣದ ಹಿರಿಯರು ಸೇರಿಬರುವ ಸ್ಥಳಕ್ಕೆ ಕರೆದುಕೊಂಡು ಹೋಗಿ
ಧರ್ಮೋಪದೇಶಕಾಂಡ 21 : 20 (ERVKN)
ಪಟ್ಟಣದ ಹಿರಿಯರಿಗೆ ಹೀಗೆ ಹೇಳಬೇಕು: ‘ನಮ್ಮ ಮಗನು ಹಠಮಾರಿಯೂ ಅವಿಧೇಯನೂ ಆಗಿರುತ್ತಾನೆ. ನಾವು ಹೇಳಿದ ಮಾತುಗಳೊಂದನ್ನೂ ಅವನು ಕೇಳುವುದಿಲ್ಲ. ಅವನು ಬಹಳವಾಗಿ ತಿಂದು ಕುಡಿಯುತ್ತಾನೆ.’
ಧರ್ಮೋಪದೇಶಕಾಂಡ 21 : 21 (ERVKN)
ಆಗ ಆ ಪಟ್ಟಣದ ಜನರು ಸೇರಿ ಆ ಮಗನನ್ನು ಕಲ್ಲೆಸೆದು ಕೊಲ್ಲಬೇಕು. ಹೀಗೆ ನಿಮ್ಮಲ್ಲಿರುವ ದುಷ್ಟತನವನ್ನು ತೆಗೆದುಹಾಕಬೇಕು. ಎಲ್ಲಾ ಇಸ್ರೇಲರು ಇದನ್ನು ಕೇಳಿ ಭಯಗ್ರಸ್ತರಾಗುವರು.
ಧರ್ಮೋಪದೇಶಕಾಂಡ 21 : 22 (ERVKN)
ಅಪರಾಧಿಗಳನ್ನು ಕೊಂದು ನೇತು ಹಾಕುವ ಬಗ್ಗೆ “ಒಬ್ಬ ಮನುಷ್ಯನು ಮರಣಶಿಕ್ಷೆಗೆ ಯೋಗ್ಯವಾದ ಅಪರಾಧವನ್ನು ಮಾಡಿದ್ದಿರಬಹುದು. ಅವನಿಗೆ ಮರಣಶಿಕ್ಷೆ ಕೊಟ್ಟ ನಂತರ ಅವನ ದೇಹವನ್ನು ಒಂದು ಮರಕ್ಕೆ ತೂಗುಹಾಕಿದರೆ
ಧರ್ಮೋಪದೇಶಕಾಂಡ 21 : 23 (ERVKN)
ಇಡೀ ರಾತ್ರಿ ಆ ಮರದಲ್ಲಿ ಅವನ ಶರೀರ ನೇತಾಡುವಂತೆ ಮಾಡಬಾರದು. ಅದೇ ದಿವಸದಲ್ಲಿ ಅವನ ಶವವು ಹೂಳಲ್ಪಡಬೇಕು. ಯಾಕೆಂದರೆ ಮರದಲ್ಲಿ ತೂಗುಹಾಕಲ್ಪಟ್ಟ ಮನುಷ್ಯನು ದೇವರಿಂದ ಶಪಿಸಲ್ಪಟ್ಟವನು. ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟ ದೇಶವನ್ನು ನೀವು ಹೊಲಸು ಮಾಡಬೇಡಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23