ಧರ್ಮೋಪದೇಶಕಾಂಡ 22 : 1 (ERVKN)
{ಇತರ ಕಟ್ಟಳೆಗಳು} [PS] “ನಿಮ್ಮ ನೆರೆಯವನ ಕಟ್ಟಿರುವ ದನವಾಗಲಿ ಕುರಿಯಾಗಲಿ ಹಗ್ಗ ಬಿಚ್ಚಿಕೊಂಡಿರುವುದನ್ನು ನೀವು ಕಂಡರೆ ಅದನ್ನು ನಿರ್ಲಕ್ಷಿಸದೆ, ಕೂಡಲೇ ಅದನ್ನು ಅದರ ಧಣಿಯ ಬಳಿಗೆ ಅಟ್ಟಿಕೊಂಡು ಹೋಗಬೇಕು.
ಧರ್ಮೋಪದೇಶಕಾಂಡ 22 : 2 (ERVKN)
ಆ ಪಶುವಿನ ಧಣಿ ಯಾರೆಂದು ನಿಮಗೆ ಗೊತ್ತಾಗದಿದ್ದರೆ ಅಥವಾ ಅವನು ನಿಮಗೆ ತುಂಬಾ ದೂರದಲ್ಲಿದ್ದರೆ ಅದರ ಧಣಿಯು ಅದನ್ನು ಹುಡುಕಿಕೊಂಡು ಬರುವ ತನಕ ನೀವು ಪಶುವನ್ನು ನಿಮ್ಮ ಮನೆಯಲ್ಲಿ ಇಟ್ಟುಕೊಳ್ಳಬೇಕು. ಅವನು ಬಂದಾಗ ಅದನ್ನು ಹಿಂದಿರುಗಿಸಬೇಕು.
ಧರ್ಮೋಪದೇಶಕಾಂಡ 22 : 3 (ERVKN)
ನಿಮ್ಮ ನೆರೆಯವನ ಕತ್ತೆಯ ವಿಷಯದಲ್ಲಿಯೂ ಬಟ್ಟೆಯ ವಿಷಯದಲ್ಲಿಯೂ ಇದೇ ನಿಯಮ ಅನ್ವಯಿಸುತ್ತದೆ. [PE][PS]
ಧರ್ಮೋಪದೇಶಕಾಂಡ 22 : 4 (ERVKN)
“ನಿಮ್ಮ ನೆರೆಯವನ ಕತ್ತೆಯಾಗಲಿ ಹಸುವಾಗಲಿ ದಾರಿಯಲ್ಲಿ ಬಿದ್ದಿರುವುದನ್ನು ನೋಡಿದರೂ ನೋಡದಂತೆ ಹೋಗದೆ ಅದಕ್ಕೆ ಏಳಲು ಸಹಾಯ ಮಾಡಬೇಕು. [PE][PS]
ಧರ್ಮೋಪದೇಶಕಾಂಡ 22 : 5 (ERVKN)
“ಹೆಂಗಸು ಗಂಡಸರ ಬಟ್ಟೆ ಧರಿಸಿಕೊಳ್ಳಬಾರದು, ಗಂಡಸು ಹೆಂಗಸರ ಬಟ್ಟೆ ಧರಿಸಬಾರದು. ಇದು ಯೆಹೋವನ ದೃಷ್ಟಿಯಲ್ಲಿ ಅಸಹ್ಯ. [PE][PS]
ಧರ್ಮೋಪದೇಶಕಾಂಡ 22 : 6 (ERVKN)
“ನೀವು ದಾರಿಯಲ್ಲಿ ಹೋಗುತ್ತಿರುವಾಗ ನೆಲದ ಮೇಲಾಗಲಿ ಮರದಲ್ಲಿಯಾಗಲಿ ಗೂಡು ಕಟ್ಟಿಕೊಂಡು ಅದರೊಳಗೆ ತಾಯಿ ಪಕ್ಷಿಯು ತನ್ನ ಮೊಟ್ಟೆಗಳೊಂದಿಗೆ ಇಲ್ಲವೆ ಮರಿಗಳೊಂದಿಗೆ ಇರುವುದನ್ನು ಕಂಡಾಗ ನೀವು ಮರಿಗಳೊಂದಿಗೆ ತಾಯಿಪಕ್ಷಿಯನ್ನು ಹಿಡಿದು ಕೊಂಡೊಯ್ಯಬಾರದು.
ಧರ್ಮೋಪದೇಶಕಾಂಡ 22 : 7 (ERVKN)
ನೀವು ತಾಯಿಪಕ್ಷಿಯನ್ನು ಬಿಟ್ಟು ಮರಿಪಕ್ಷಿಗಳನ್ನು ಕೊಂಡೊಯ್ಯಬಹುದು. ಈ ನಿಯಮಗಳನ್ನು ನೀವು ಪಾಲಿಸಿದರೆ ನೀವು ಬಹುಕಾಲ ಬದುಕುವಿರಿ ಮತ್ತು ನಿಮಗೆ ಶುಭವಾಗುವುದು. [PE][PS]
ಧರ್ಮೋಪದೇಶಕಾಂಡ 22 : 8 (ERVKN)
“ನೀವು ಮನೆ ಕಟ್ಟುವಾಗ ಅದರ ಮೇಲ್ಛಾವಣಿಯ ಸುತ್ತಲೂ ಅರ್ಧ ಗೋಡೆಯನ್ನು ಕಟ್ಟಬೇಕು. ಹೀಗೆ ಮಾಡದೆಹೋದರೆ ಯಾರಾದರೂ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಸತ್ತಲ್ಲಿ ಅವನ ಸಾವಿಗೆ ನೀವು ಕಾರಣರಾಗುವಿರಿ. Things That Must Not Be Put Together [PS]
ಧರ್ಮೋಪದೇಶಕಾಂಡ 22 : 9 (ERVKN)
“ನೀವು ಧಾನ್ಯವನ್ನು ಮತ್ತು ದ್ರಾಕ್ಷಾಲತೆಗಳನ್ನು ಒಂದೇ ಹೊಲದಲ್ಲಿ ಬೆಳೆಸಬಾರದು. ಯಾಕೆಂದರೆ ಅವೆರಡೂ ಚೆನ್ನಾಗಿ ಬೆಳೆಯದೆ ಫಲ ಕೊಡದೆ ಹೋಗುವುದು. [PE][PS]
ಧರ್ಮೋಪದೇಶಕಾಂಡ 22 : 10 (ERVKN)
“ಕತ್ತೆಯನ್ನೂ ಹಸುವನ್ನೂ ಒಟ್ಟಿಗೆ ನೊಗಕ್ಕೆ ಕಟ್ಟಿ ನೆಲವನ್ನು ಉಳಬಾರದು. [PE][PS]
ಧರ್ಮೋಪದೇಶಕಾಂಡ 22 : 11 (ERVKN)
“ನಾರುಮಡಿಯನ್ನೂ ಉಣ್ಣೆಯನ್ನೂ ಮಿಶ್ರವಾಗಿ ನೇಯ್ದ ಬಟ್ಟೆಯನ್ನು ತೊಡಬಾರದು. [PE][PS]
ಧರ್ಮೋಪದೇಶಕಾಂಡ 22 : 12 (ERVKN)
“ನೂಲಿನಿಂದ ಮಾಡಿದ ಗೊಂಡೆಗಳನ್ನು ನಿಮ್ಮ ನಿಲುವಂಗಿಗಳ ನಾಲ್ಕು ಮೂಲೆಗಳಿಗೆ ಕಟ್ಟಬೇಕು. [PS]
ಧರ್ಮೋಪದೇಶಕಾಂಡ 22 : 13 (ERVKN)
{ಮದುವೆಗೆ ಸಂಬಂಧಿಸಿದ ಕಟ್ಟಳೆಗಳು} [PS] “ಒಬ್ಬ ಪುರುಷನು ಒಬ್ಬ ಸ್ತ್ರೀಯನ್ನು ಮದುವೆಯಾಗಿ ಆಕೆಯೊಂದಿಗೆ ಲೈಂಗಿಕ ಸಂಬಂಧವನ್ನಿಟ್ಟುಕೊಂಡಿದ್ದು ಆಮೇಲೆ ಆಕೆಯನ್ನು ಇಷ್ಟಪಡದೆ,
ಧರ್ಮೋಪದೇಶಕಾಂಡ 22 : 14 (ERVKN)
‘ನಾನು ಈಕೆಯನ್ನು ಮದುವೆಯಾದಾಗ ಈಕೆಯು ಕನ್ಯೆಯಲ್ಲವೆಂದು ನನಗೆ ತಿಳಿದುಬಂತು’ ಎಂದು ಜನರಿಗೆ ಸುಳ್ಳು ಹೇಳಿ ಆಕೆಯ ಮೇಲೆ ಸುಳ್ಳು ಅಪರಾಧ ಹೊರಿಸಿದರೆ,
ಧರ್ಮೋಪದೇಶಕಾಂಡ 22 : 15 (ERVKN)
ಹುಡುಗಿಯ ತಂದೆತಾಯಿಗಳು ಊರಿನ ಹಿರಿಯರ ಮುಂದೆ ಆಕೆಯು ಕನ್ನಿಕೆಯಾಗಿದ್ದಳೆಂದು ರುಜುವಾತುಪಡಿಸಬೇಕು.
ಧರ್ಮೋಪದೇಶಕಾಂಡ 22 : 16 (ERVKN)
ಹುಡುಗಿಯ ತಂದೆಯು ಹಿರಿಯರಿಗೆ, ‘ನನ್ನ ಮಗಳನ್ನು ಇವನಿಗೆ ಹೆಂಡತಿಯನ್ನಾಗಿ ಕೊಟ್ಟೆನು. ಆದರೆ ಈಗ ಅವನು ಆಕೆಯನ್ನು ದ್ವೇಷಿಸಿ ಬೇಡವೆನ್ನುತ್ತಾನೆ.
ಧರ್ಮೋಪದೇಶಕಾಂಡ 22 : 17 (ERVKN)
ಅವನು ನನ್ನ ಮಗಳ ವಿಷಯದಲ್ಲಿ ಸುಳ್ಳು ಹೇಳುತ್ತಿದ್ದಾನೆ. “ಆಕೆಯಲ್ಲಿ ಕನ್ನಿಕೆಯ ಗುರುತು ಇರಲಿಲ್ಲ” ಎಂದು ಹೇಳುತ್ತಿದ್ದಾನೆ, ಆದರೆ ನನ್ನ ಮಗಳು ಮದುವೆಗಿಂತ ಮುಂಚೆ ಪುರುಷ ಸಂಪರ್ಕ ಮಾಡಲಿಲ್ಲವೆಂಬುದಕ್ಕೆ ಇದೇ ಗುರುತು’ ಎಂದು ಹೇಳಿ ರಕ್ತದ ಕಲೆಗಳಿರುವ ಬಟ್ಟೆಯನ್ನು ತೋರಿಸಬೇಕು.
ಧರ್ಮೋಪದೇಶಕಾಂಡ 22 : 18 (ERVKN)
ಆಗ ಊರಿನ ಹಿರಿಯರು ಆ ಮನುಷ್ಯನಿಗೆ ಶಿಕ್ಷೆ ವಿಧಿಸಬೇಕು.
ಧರ್ಮೋಪದೇಶಕಾಂಡ 22 : 19 (ERVKN)
ಹಿರಿಯರು ಅವನಿಂದ ನಲವತ್ತು ತೊಲೆ ಬೆಳ್ಳಿಯನ್ನು ಹುಡುಗಿಯ ತಂದೆಗೆ ಕೊಡಿಸಬೇಕು. ಯಾಕೆಂದರೆ ಒಬ್ಬ ಇಸ್ರೇಲಿನ ಹುಡುಗಿಗೆ ಅವನು ಅವಮಾನಪಡಿಸಿದ ಕಾರಣ ಆ ಹುಡುಗಿಯು ಅವನ ಹೆಂಡತಿಯಾಗಿಯೇ ಬಾಳಬೇಕು. ಅವನು ಆಕೆಯನ್ನು ಎಂದಿಗೂ ವಿವಾಹವಿಚ್ಛೇದನೆ ಮಾಡಬಾರದು. [PE][PS]
ಧರ್ಮೋಪದೇಶಕಾಂಡ 22 : 20 (ERVKN)
“ಆದರೆ ಹುಡುಗಿಯ ಗಂಡನು ಆಕೆಯ ಬಗ್ಗೆ ಹೇಳಿದ್ದು ಸತ್ಯವಾಗಿದ್ದರೆ, ಹುಡುಗಿಯ ತಂದೆತಾಯಂದಿರ ಬಳಿ ಆಕೆಯು ಪುರುಷ ಸಂಪರ್ಕವಿಲ್ಲದವಳಾಗಿದ್ದಳು ಎಂಬುದಕ್ಕೆ ಪುರಾವೆ ಇಲ್ಲದಿದ್ದಲ್ಲಿ
ಧರ್ಮೋಪದೇಶಕಾಂಡ 22 : 21 (ERVKN)
ಊರಹಿರಿಯರು ಆ ಹುಡುಗಿಯನ್ನು ಆಕೆಯ ತಂದೆಯ ಮನೆಬಾಗಿಲಿಗೆ ತರಬೇಕು. ಅಲ್ಲಿ ಊರಜನರು ಆಕೆಯನ್ನು ಕಲ್ಲೆಸೆದು ಸಾಯಿಸಬೇಕು. ಯಾಕೆಂದರೆ ಆಕೆಯು ಇಸ್ರೇಲಿನಲ್ಲಿ ನಾಚಿಕೆಕರವಾದ ಕೃತ್ಯವನ್ನು ನಡೆಸಿದ್ದಾಳೆ; ತನ್ನ ತಂದೆಯ ಮನೆಯಲ್ಲಿದ್ದುಕೊಂಡು ವೇಶ್ಯಾವೃತ್ತಿ ನಡಿಸಿದ್ದಾಳೆ. ಅಂಥಾ ಪಾಪವನ್ನು ನೀವು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು. [PS]
ಧರ್ಮೋಪದೇಶಕಾಂಡ 22 : 22 (ERVKN)
{ಲೈಂಗಿಕ ಪಾಪಕೃತ್ಯಗಳು} [PS] “ಒಬ್ಬ ಮನುಷ್ಯನು ಇನ್ನೊಬ್ಬ ಮನುಷ್ಯನ ಹೆಂಡತಿಯ ಜೊತೆಗೆ ಲೈಂಗಿಕ ಸಂಬಂಧವನ್ನಿಟ್ಟಿದ್ದರೆ ಅವರಿಬ್ಬರನ್ನೂ ಸಾಯಿಸಬೇಕು. ಆ ಕೆಡುಕನ್ನು ನೀವು ಇಸ್ರೇಲಿನಿಂದ ತೆಗೆದುಹಾಕಬೇಕು. [PE][PS]
ಧರ್ಮೋಪದೇಶಕಾಂಡ 22 : 23 (ERVKN)
“ಒಬ್ಬನು ಇನ್ನೊಬ್ಬನಿಗೆ ನಿಶ್ಚಿತಾರ್ಥವಾದ ಕನ್ನಿಕೆಯೊಬ್ಬಳನ್ನು ಸಂಧಿಸಿ ಅವಳನ್ನು ಕೂಡಿದರೆ,
ಧರ್ಮೋಪದೇಶಕಾಂಡ 22 : 24 (ERVKN)
ನಗರದ ಬಾಗಿಲಿನ ಬಳಿಯಿರುವ ಸಾರ್ವಜನಿಕ ಸ್ಥಳಕ್ಕೆ ನೀವು ಅವರಿಬ್ಬರನ್ನು ಕರೆದುಕೊಂಡು ಬಂದು ಅವರಿಬ್ಬರನ್ನೂ ಕಲ್ಲೆಸೆದು ಕೊಲ್ಲಬೇಕು. ನೀವು ಆ ಪುರುಷನನ್ನು ಕೊಲ್ಲಬೇಕು. ಏಕೆಂದರೆ ಅವನು ಮತ್ತೊಬ್ಬನ ಹೆಂಡತಿಯನ್ನು ಲೈಂಗಿಕವಾಗಿ ಹಿಂಸಿಸಿದನು. ನೀವು ಆ ಸ್ತ್ರೀಯನ್ನು ಕೊಲ್ಲಬೇಕು; ಯಾಕೆಂದರೆ ಆಕೆಯು ನಗರದಲ್ಲಿದ್ದರೂ ಸಹಾಯಕ್ಕಾಗಿ ಕೂಗಿಕೊಳ್ಳಲಿಲ್ಲ. ಆ ಕೆಡುಕನ್ನು ನೀವು ನಿಮ್ಮ ಜನರಿಂದ ತೆಗೆದುಹಾಕಬೇಕು. [PE][PS]
ಧರ್ಮೋಪದೇಶಕಾಂಡ 22 : 25 (ERVKN)
“ಆದರೆ ಒಬ್ಬನು ಮತ್ತೊಬ್ಬನಿಗೆ ನಿಶ್ಚಿತಾರ್ಥವಾಗಿರುವ ಕನ್ನಿಕೆಯೊಬ್ಬಳನ್ನು ಹೊಲದಲ್ಲಿ ಕಂಡು ಆಕೆಯನ್ನು ಬಲಾತ್ಕಾರವಾಗಿ ಕೂಡಿದರೆ, ಅವನನ್ನು ಮಾತ್ರ ಕೊಲ್ಲಬೇಕು.
ಧರ್ಮೋಪದೇಶಕಾಂಡ 22 : 26 (ERVKN)
ಆ ಹುಡುಗಿಗೆ ನೀವು ಏನನ್ನೂ ಮಾಡಬಾರದು. ಆಕೆ ಶಿಕ್ಷೆಗೆ ಅರ್ಹಳಾಗುವಂಥ ಕಾರ್ಯವೇನೂ ಮಾಡಲಿಲ್ಲ. ಒಬ್ಬನು ತನ್ನ ಸ್ನೇಹಿತನ ಮೇಲೆ ಆಕ್ರಮಣ ಮಾಡಿ ಕೊಂದಂತೆಯಷ್ಟೇ.
ಧರ್ಮೋಪದೇಶಕಾಂಡ 22 : 27 (ERVKN)
ಆ ಮನುಷ್ಯನು ನಿಶ್ಚಿತಾರ್ಥವಾದ ಹುಡುಗಿಯನ್ನು ಹೊಲದಲ್ಲಿ ಒಬ್ಬಳೇ ಇರುವುದನ್ನು ಕಂಡು ಆಕೆಯ ಮೇಲೆ ಬಿದ್ದನು. ಆಕೆಯು ಸಹಾಯಕ್ಕಾಗಿ ಕೂಗಿಕೊಂಡಾಗ ಸಹಾಯ ಮಾಡಲು ಹತ್ತಿರದಲ್ಲಿ ಯಾರೂ ಇರಲಿಲ್ಲ. ಆದ್ದರಿಂದ ಆಕೆಯು ಶಿಕ್ಷಿಸಲ್ಪಡಬಾರದು. [PE][PS]
ಧರ್ಮೋಪದೇಶಕಾಂಡ 22 : 28 (ERVKN)
“ಒಬ್ಬನು ನಿಶ್ಚಿತಾರ್ಥವಾಗಿಲ್ಲದ ಒಬ್ಬ ಕನ್ನಿಕೆಯನ್ನು ಕಂಡು ಆಕೆಯನ್ನು ಬಲಾತ್ಕಾರದಿಂದ ಕೂಡುವುದನ್ನು ಬೇರೆಯವರು ಕಂಡರೆ
ಧರ್ಮೋಪದೇಶಕಾಂಡ 22 : 29 (ERVKN)
ಅವನು ಹುಡುಗಿಯ ತಂದೆಗೆ ಇಪ್ಪತ್ತು ತೊಲ ಬೆಳ್ಳಿಯನ್ನು ಕೊಟ್ಟು ಆಕೆಯನ್ನು ತನ್ನ ಹೆಂಡತಿಯನ್ನಾಗಿ ತೆಗೆದುಕೊಳ್ಳಬೇಕು. ಅವನು ಆಕೆಯನ್ನು ಮದುವೆಗಿಂತ ಮುಂಚೆ ಕೂಡಿದ್ದರಿಂದ ಅವನು ಆಕೆಯನ್ನು ಎಂದಿಗೂ ಬಿಟ್ಟುಬಿಡಬಾರದು. [PE][PS]
ಧರ್ಮೋಪದೇಶಕಾಂಡ 22 : 30 (ERVKN)
“ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಕೂಡಿ ತಂದೆಗೆ ಅವಮಾನ ಮಾಡಬಾರದು.” [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30

BG:

Opacity:

Color:


Size:


Font: