ಧರ್ಮೋಪದೇಶಕಾಂಡ 23 : 1 (ERVKN)
{ಇಸ್ರೇಲರ ದೇವಾರಾಧನೆಗೆ ಯೋಗ್ಯರಾದವರು} [PS] “ಜನನಾಂಗದ ಬೀಜವನ್ನು ಹೊಡಿಸಿಕೊಂಡವನಾಗಲಿ ಜನನಾಂಗದ ಒಂದು ಭಾಗವನ್ನು ಕತ್ತರಿಸಿಕೊಂಡವನಾಗಲಿ ಇಸ್ರೇಲ್ ಜನರೊಂದಿಗೆ ದೇವಾರಾಧನೆ ಮಾಡಬಾರದು.
ಧರ್ಮೋಪದೇಶಕಾಂಡ 23 : 2 (ERVKN)
ಒಬ್ಬನ ತಂದೆತಾಯಿಗಳು ಕಾನೂನು ಬದ್ಧವಾಗಿ ಮದುವೆಯಾಗಿಲ್ಲದಿದ್ದರೆ, ಅವನು ದೇವಾರಾಧನೆಯಲ್ಲಿ ಇಸ್ರೇಲರೊಡನೆ ಸೇರಕೂಡದು. ಅವನ ಸಂತತಿಯವರು ಹತ್ತನೆಯ ತಲೆಮಾರಿನ ತನಕ ಇಸ್ರೇಲ್ ಸಮೂಹದೊಂದಿಗೆ ಆರಾಧನೆ ಮಾಡಬಾರದು. [PE][PS]
ಧರ್ಮೋಪದೇಶಕಾಂಡ 23 : 3 (ERVKN)
“ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ಇಸ್ರೇಲರೊಂದಿಗೆ ಸೇರಿ ದೇವಾರಾಧನೆ ಮಾಡಕೂಡದು. ಅವರ ಸಂತತಿಯ ಹತ್ತನೆಯ ತಲೆಮಾರಿನವರೆಗೂ ಆರಾಧನೆ ಮಾಡಬಾರದು.
ಧರ್ಮೋಪದೇಶಕಾಂಡ 23 : 4 (ERVKN)
ಯಾಕೆಂದರೆ ಇಸ್ರೇಲರು ಈಜಿಪ್ಟಿನಿಂದ ಹೊರಟುಬಂದು ಪ್ರಯಾಣದಲ್ಲಿದ್ದಾಗ ಅವರಿಗೆ ರೊಟ್ಟಿಯನ್ನಾಗಲಿ ನೀರನ್ನಾಗಲಿ ಕೊಡಲು ಅವರು ನಿರಾಕರಿಸಿದ್ದರು. ಅವರು ಮೆಸಪೊಟೋಮಿಯದಿಂದ ಬಿಳಾಮನನ್ನು ಕರೆಸಿ ಇಸ್ರೇಲರನ್ನು ಶಪಿಸುವಂತೆ ಬಲವಂತಪಡಿಸಿದರು.
ಧರ್ಮೋಪದೇಶಕಾಂಡ 23 : 5 (ERVKN)
ಆದರೆ ಯೆಹೋವನು ನಿಮ್ಮನ್ನು ಪ್ರೀತಿಸುತ್ತಿದ್ದುದರಿಂದ ಆ ಶಾಪವನ್ನು ನಿಮಗೆ ಆಶೀರ್ವಾದವಾಗಿ ಪರಿವರ್ತಿಸಿದನು.
ಧರ್ಮೋಪದೇಶಕಾಂಡ 23 : 6 (ERVKN)
ಅಮ್ಮೋನಿಯರೊಂದಿಗಾಗಲಿ ಮೋವಾಬ್ಯರೊಂದಿಗಾಗಲಿ ನೀವು ಸಂಧಾನ ಮಾಡಿಕೊಳ್ಳಲೇಬಾರದು; ನಿಮ್ಮ ಜೀವಮಾನವೆಲ್ಲಾ ಅವರೊಂದಿಗೆ ಸ್ನೇಹತ್ವದಲ್ಲಿರಬಾರದು. People the Israelites Must Accept [PS]
ಧರ್ಮೋಪದೇಶಕಾಂಡ 23 : 7 (ERVKN)
“ಎದೋಮ್ಯರನ್ನು ನೀವು ದ್ವೇಷಿಸಬಾರದು, ಅವರು ನಿಮ್ಮ ಸಂಬಂಧಿಕರಾಗಿದ್ದಾರೆ. ಈಜಿಪ್ಟಿನವರನ್ನು ನೀವು ದ್ವೇಷಿಸಬಾರದು, ಅವರ ದೇಶದಲ್ಲಿ ನೀವು ಪರದೇಶಿಗಳಾಗಿದ್ದಿರಲ್ಲಾ.
ಧರ್ಮೋಪದೇಶಕಾಂಡ 23 : 8 (ERVKN)
ಎದೋಮ್ಯರ ಮತ್ತು ಈಜಿಪ್ಟಿನವರ ಮೂರನೆ ತಲೆಮಾರಿನವರು ಇಸ್ರೇಲರೊಂದಿಗೆ ದೇವಾರಾಧನೆ ಮಾಡಬಹುದು. [PS]
ಧರ್ಮೋಪದೇಶಕಾಂಡ 23 : 9 (ERVKN)
{ಪಾಳೆಯವನ್ನು ಶುದ್ಧವಾಗಿಡಬೇಕು} [PS] “ನಿಮ್ಮ ಸೈನ್ಯವು ವೈರಿಗಳೊಂದಿಗೆ ಯುದ್ಧಮಾಡಲು ಹೋದಾಗ ನಿಮ್ಮನ್ನು ಅಶುದ್ಧಪಡಿಸುವ ಪ್ರತಿಯೊಂದರಿಂದಲೂ ನೀವು ದೂರವಾಗಿರಿ.
ಧರ್ಮೋಪದೇಶಕಾಂಡ 23 : 10 (ERVKN)
ಒಬ್ಬನಿಗೆ ರಾತ್ರಿ ಕಾಲದಲ್ಲಿ ವೀರ್ಯಸ್ಖಲನವಾದರೆ ಅವನು ಪಾಳೆಯದಿಂದ ಹೊರಗೆ ಹೋಗಿ ಪ್ರತ್ಯೇಕವಾಗಿರಬೇಕು.
ಧರ್ಮೋಪದೇಶಕಾಂಡ 23 : 11 (ERVKN)
ಸಾಯಂಕಾಲವಾದಾಗ ಅವನು ಸ್ನಾನಮಾಡಿ ಸೂರ್ಯ ಮುಳುಗಿದ ಬಳಿಕ ಪಾಳೆಯದೊಳಕ್ಕೆ ಬರಬಹುದು. [PE][PS]
ಧರ್ಮೋಪದೇಶಕಾಂಡ 23 : 12 (ERVKN)
“ಪಾಳೆಯದ ಹೊರಗೆ ಬಹಿರ್ದೇಶಕ್ಕೆ ಹೋಗಲು ಒಂದು ಸ್ಥಳವನ್ನು ನೇಮಿಸಬೇಕು.
ಧರ್ಮೋಪದೇಶಕಾಂಡ 23 : 13 (ERVKN)
ನಿಮ್ಮ ಆಯುಧಗಳೊಂದಿಗೆ ನೀವು ಒಂದು ಕೋಲನ್ನು ಇಟ್ಟುಕೊಳ್ಳಬೇಕು. ಈ ಕೋಲಿನಿಂದ ಮಣ್ಣು ಅಗೆದು ನೆಲದಲ್ಲಿ ಚಿಕ್ಕ ಗುಂಡಿ ತೋಡಲೂ ಮತ್ತು ಹೊಟ್ಟೆ ಖಾಲಿ ಮಾಡಿದ ಬಳಿಕ ಆ ಗುಂಡಿಯನ್ನು ಮಣ್ಣಿನಿಂದ ಮುಚ್ಚಲೂ ಸಹಾಯವಾಗುವುದು.
ಧರ್ಮೋಪದೇಶಕಾಂಡ 23 : 14 (ERVKN)
ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸಂರಕ್ಷಿಸಲೂ ವೈರಿಗಳನ್ನು ಸೋಲಿಸುವಂತೆ ಸಹಾಯ ಮಾಡಲೂ ನಿಮ್ಮೊಂದಿಗೆ ಪಾಳೆಯದಲ್ಲಿರುವುದರಿಂದ ನಿಮ್ಮ ಪಾಳೆಯವು ಪವಿತ್ರವಾಗಿರಬೇಕು. ಇಲ್ಲದಿದ್ದಲ್ಲಿ ನಿಮ್ಮ ಪಾಳೆಯದಲ್ಲಿರುವ ಹೊಲಸನ್ನು ನೋಡಿ ಆತನು ಹಿಂದಿರುಗಿ ಹೋಗುವನು. [PS]
ಧರ್ಮೋಪದೇಶಕಾಂಡ 23 : 15 (ERVKN)
{ಇತರ ವಿಧಿನಿಯಮಗಳು} [PS] “ಒಬ್ಬ ಗುಲಾಮನು ತನ್ನ ಧಣಿಯ ಬಳಿಯಿಂದ ನಿಮ್ಮ ಬಳಿಗೆ ಓಡಿ ಬಂದರೆ ನೀವು ಅವನ ಧಣಿಗೆ ಅವನನ್ನು ಒಪ್ಪಿಸಬಾರದು.
ಧರ್ಮೋಪದೇಶಕಾಂಡ 23 : 16 (ERVKN)
ಅವನು ನಿಮ್ಮ ಬಳಿಯಲ್ಲಿ ಇರಲು ಇಷ್ಟಪಟ್ಟರೆ ಅಥವಾ ಬೇರೆ ಊರಿಗೆ ಹೋಗಲು ಇಷ್ಟಪಟ್ಟರೆ ನೀವು ಅವನಿಗೆ ತೊಂದರೆಕೊಡಬಾರದು. [PE][PS]
ಧರ್ಮೋಪದೇಶಕಾಂಡ 23 : 17 (ERVKN)
“ಇಸ್ರೇಲರ ಗಂಡಸಾಗಲಿ ಹೆಂಗಸಾಗಲಿ ದೇವಸ್ಥಾನದ ವೇಶ್ಯೆಯಾಗಬಾರದು.
ಧರ್ಮೋಪದೇಶಕಾಂಡ 23 : 18 (ERVKN)
ಸೂಳೆತನದಿಂದ ಗಳಿಸಿದ ಹಣವನ್ನು ನಿಮ್ಮ ದೇವರಾದ ಯೆಹೋವನ ವಿಶೇಷ ವಾಸಸ್ಥಾನಕ್ಕೆ ತೆಗೆದುಕೊಂಡು ಬರಬಾರದು. ಒಬ್ಬನು ತಾನು ಹೊತ್ತುಕೊಂಡ ಹರಕೆಯನ್ನು ಆ ಹಣದಿಂದ ಪೂರೈಸಕೂಡದು. ಯಾಕೆಂದರೆ ಲೈಂಗಿಕ ಪಾಪದಲ್ಲಿ ತಮ್ಮ ದೇಹಗಳನ್ನು ಮಾರುವವರನ್ನು ನಿಮ್ಮ ದೇವರಾದ ಯೆಹೋವನು ದ್ವೇಷಿಸುತ್ತಾನೆ; ಲೈಂಗಿಕ ಪಾಪಗಳ ಆದಾಯದಿಂದ ಬಂದ ಹಣದಿಂದ ಖರೀದಿ ಮಾಡಿದ ಕಾಣಿಕೆಗಳನ್ನು ಆತನು ದ್ವೇಷಿಸುತ್ತಾನೆ. [PE][PS]
ಧರ್ಮೋಪದೇಶಕಾಂಡ 23 : 19 (ERVKN)
“ನೀವು ಇನ್ನೊಬ್ಬ ಇಸ್ರೇಲಿಗೆ ಸಾಲಕೊಟ್ಟರೆ ಅದಕ್ಕೆ ಬಡ್ಡಿ ವಸೂಲು ಮಾಡಬಾರದು.
ಧರ್ಮೋಪದೇಶಕಾಂಡ 23 : 20 (ERVKN)
ಪರದೇಶಸ್ಥರಿಗೆ ನೀವು ಬಡ್ಡಿಗೆ ಸಾಲ ಕೊಡಬಹುದು. ಆದರೆ ಸ್ವದೇಶದವನಾದ ಇಸ್ರೇಲಿನವನಿಗೆ ಬಡ್ಡಿಗೆ ಸಾಲ ಕೊಡಬಾರದು. ನೀವು ಹೀಗೆ ಮಾಡಿದ್ದಲ್ಲಿ, ನೀವು ಹೋಗಿ ನೆಲೆಸುವ ದೇಶದಲ್ಲಿ ನೀವು ಮಾಡುವ ಪ್ರತಿಯೊಂದರಲ್ಲೂ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸುವನು. [PE][PS]
ಧರ್ಮೋಪದೇಶಕಾಂಡ 23 : 21 (ERVKN)
“ನೀವು ನಿಮ್ಮ ದೇವರಾದ ಯೆಹೋವನಿಗೆ ಹರಕೆ ಹೊತ್ತರೆ ಅದನ್ನು ಸಲ್ಲಿಸಲು ನಿಧಾನ ಮಾಡಬೇಡಿ. ನಿಮ್ಮ ದೇವರಾದ ಯೆಹೋವನು ಅದನ್ನು ನಿಮ್ಮಿಂದ ಕೇಳುವವನಾಗಿದ್ದಾನೆ. ಹರಕೆ ಹೊತ್ತು ಸಲ್ಲಿಸದಿದ್ದರೆ ನೀವು ಪಾಪಮಾಡುವವರಾಗಿದ್ದೀರಿ.
ಧರ್ಮೋಪದೇಶಕಾಂಡ 23 : 22 (ERVKN)
ನೀವು ಹರಕೆ ಮಾಡಿಕೊಳ್ಳದಿದ್ದರೆ ಪಾಪಮಾಡುವುದಿಲ್ಲ.
ಧರ್ಮೋಪದೇಶಕಾಂಡ 23 : 23 (ERVKN)
ಆದರೆ ನೀವು ಮಾಡಿದ ಹರಕೆಯನ್ನು ಪೂರೈಸಬೇಕು. ನೀವು ಹರಕೆ ಮಾಡುವಂತೆ ದೇವರು ನಿಮ್ಮನ್ನು ಬಲವಂತ ಮಾಡಲಿಲ್ಲವಲ್ಲಾ. ಆದ್ದರಿಂದ ನೀವು ವಾಗ್ದಾನ ಮಾಡಿದ್ದನ್ನು ಪೂರೈಸಬೇಕು. [PE][PS]
ಧರ್ಮೋಪದೇಶಕಾಂಡ 23 : 24 (ERVKN)
“ಒಬ್ಬನ ತೋಟದೊಳಗಿಂದ ನೀವು ಹಾದುಹೋಗುತ್ತಿರುವಾಗ ನಿಮಗೆ ಬೇಕಾಗುವಷ್ಟು ಹಣ್ಣನ್ನು ಕಿತ್ತು ತಿನ್ನಿ. ಆದರೆ ನೀವು ಮಕ್ಕರಿಯಲ್ಲಿ ತುಂಬಿಸಿಕೊಂಡು ಹೋಗಬಾರದು.
ಧರ್ಮೋಪದೇಶಕಾಂಡ 23 : 25 (ERVKN)
ಒಬ್ಬನ ಧಾನ್ಯದ ಹೊಲದಲ್ಲಿ ನೀವು ಹಾದುಹೋಗುತ್ತಿರುವಾಗ ನಿಮ್ಮ ಕೈಯಿಂದ ಹೊಸೆದು ತಿನ್ನುವಷ್ಟು ಧಾನ್ಯವನ್ನು ನೀವು ತಿನ್ನಬಹುದು; ಆದರೆ ನೀವು ಕತ್ತಿಯಿಂದ ಧಾನ್ಯವನ್ನು ಕೊಯಿದು ನಿಮ್ಮೊಂದಿಗೆ ಒಯ್ಯಬೇಡಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: