ಧರ್ಮೋಪದೇಶಕಾಂಡ 25 : 1 (ERVKN)
“ನಿಮ್ಮಲ್ಲಿ ಯಾರಿಗಾದರೂ ಇಬ್ಬರಿಗೆ ವಾಗ್ವಾದವಿದ್ದಲ್ಲಿ ಅವರು ಅದನ್ನು ನ್ಯಾಯಸ್ಥಾನಕ್ಕೆ ತೆಗೆದುಕೊಂಡು ಹೋಗಲಿ. ಅಲ್ಲಿ ನ್ಯಾಯಾಧೀಶರು ಯಾರು ಸರಿ ಯಾರು ತಪ್ಪು ಎಂದು ತೀರ್ಮಾನಿಸುವರು.
ಧರ್ಮೋಪದೇಶಕಾಂಡ 25 : 2 (ERVKN)
ನ್ಯಾಯಾಧೀಶರು ಒಬ್ಬನಿಗೆ ಕೊರಡೆ ಏಟು ಕೊಡಬೇಕೆಂದು ತೀರ್ಮಾನಿಸಿದರೆ ಅವನು ಆ ಶಿಕ್ಷೆ ಹೊಂದುವವನನ್ನು ಬೋರಲು ಮಲಗಿಸಿ ನ್ಯಾಯಾಧೀಶನ ಕಣ್ಣು ಮುಂದೆ ಅವನಿಗೆ ಕೊರಡೆ ಏಟು ಹೊಡಿಸಬೇಕು. ಅವನ ಅಪರಾಧಕ್ಕನುಸಾರವಾಗಿ ಕೊರಡೆ ಏಟುಗಳ ಸಂಖ್ಯೆಯು ಏರುವದು.
ಧರ್ಮೋಪದೇಶಕಾಂಡ 25 : 3 (ERVKN)
ಒಬ್ಬನಿಗೆ ನಲವತ್ತು ಕೊರಡೆ ಏಟುಗಳಿಗಿಂತ ಹೆಚ್ಚಾಗಿ ಹೊಡೆಯಬಾರದು. ಅದಕ್ಕಿಂತ ಹೆಚ್ಚು ಹೊಡೆದರೆ ಅವನ ಪ್ರಾಣವು ನಿಮ್ಮ ದೃಷ್ಟಿಗೆ ಅಮೂಲ್ಯವಾಗಿಲ್ಲವೆಂದು ತಿಳಿದುಬರುತ್ತದೆ.
ಧರ್ಮೋಪದೇಶಕಾಂಡ 25 : 4 (ERVKN)
“ಕಣವನ್ನು ತುಳಿಯಲು ಎತ್ತುಗಳನ್ನು ಉಪಯೋಗಿಸುವಾಗ ಅವುಗಳು ಧಾನ್ಯ ತಿನ್ನುತ್ತವೆ ಎಂದು ಅವುಗಳ ಬಾಯಿಗಳನ್ನು ಕಟ್ಟಬಾರದು.
ಧರ್ಮೋಪದೇಶಕಾಂಡ 25 : 5 (ERVKN)
“ಇಬ್ಬರು ಅಣ್ಣತಮ್ಮಂದಿರು ಜೀವಿಸುತ್ತಿರುವಾಗ ಒಬ್ಬನು ಮಕ್ಕಳಿಲ್ಲದೆ ಸತ್ತುಹೋದರೆ ಅವನ ಹೆಂಡತಿಯು ಕುಟುಂಬದಿಂದ ಹೊರಗೆ ಮದುವೆಯಾಗಬಾರದು. ಅವಳ ಮೈದುನ ಆಕೆಯನ್ನು ಮದುವೆಯಾಗಿ, ತನ್ನ ಮೈದುನ ಧರ್ಮವನ್ನು ನೆರವೇರಿಸಬೇಕು.
ಧರ್ಮೋಪದೇಶಕಾಂಡ 25 : 6 (ERVKN)
ಅವಳಿಗೆ ಅವನಿಂದ ಹುಟ್ಟುವ ಮೊದಲನೆಯ ಮಗು ಅವಳ ಮೊದಲನೆಯ ಗಂಡನಿಗೆ ಸೇರಿದ್ದೆಂದು ಪರಿಗಣಿಸಲ್ಪಡಬೇಕು. ಹೀಗೆ ಸತ್ತುಹೋದ ಅಣ್ಣನ ವಂಶವು ಮುಂದುವರಿಯುವುದು.
ಧರ್ಮೋಪದೇಶಕಾಂಡ 25 : 7 (ERVKN)
ಆದರೆ ಮೈದುನನು, ಸತ್ತುಹೋದ ತನ್ನ ಅಣ್ಣನ ಸ್ಥಾನವನ್ನು ತೆಗೆದುಕೊಳ್ಳಲು ಇಷ್ಟಪಡದೆಹೋದಲ್ಲಿ, ಆಕೆಯು ಊರಿನ ಹಿರಿಯರ ಬಳಿಗೆ ಹೋಗಿ ಹಿರಿಯರಿಗೆ ಹೀಗೆ ಹೇಳಬೇಕು: ‘ನನ್ನ ಮೈದುನನು ತನ್ನ ಅಣ್ಣನ ಹೆಸರನ್ನು ಇಸ್ರೇಲಿನಲ್ಲಿ ಉಳಿಸಲು ಇಷ್ಟಪಡುವುದಿಲ್ಲ.’
ಧರ್ಮೋಪದೇಶಕಾಂಡ 25 : 8 (ERVKN)
ಆಗ ಊರಿನ ಹಿರಿಯರು ಆ ಮೈದುನನನ್ನು ಕರಿಸಿ ಅವನೊಂದಿಗೆ ಮಾತನಾಡಬೇಕು. ಅವನು ತನ್ನ ನಿರ್ಧಾರವನ್ನು ಬದಲಾಯಿಸದೆ, ‘ನನಗೆ ಅವಳನ್ನು ಹೆಂಡತಿಯಾಗಿ ತೆಗೆದುಕೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರೆ,
ಧರ್ಮೋಪದೇಶಕಾಂಡ 25 : 9 (ERVKN)
ಅವನ ಅಣ್ಣನ ಹೆಂಡತಿಯು ಮುಂದೆ ಬಂದು ಹಿರಿಯರ ಸಮ್ಮುಖದಲ್ಲಿ ಅವನ ಕಾಲಿನಿಂದ ಚಪ್ಪಲಿಗಳನ್ನು ತೆಗೆದು ಅವನ ಮುಖಕ್ಕೆ ಉಗಿಯಬೇಕು. ‘ತನ್ನ ಮೈದುನ ಧರ್ಮವನ್ನು ನೆರವೇರಿಸದೆ ತನ್ನ ಅಣ್ಣನಿಗೆ ವಂಶವನ್ನು ಕೊಡದವನಿಗೆ ಇದೇ ಗತಿ’ ಎಂದು ಹೇಳಬೇಕು.
ಧರ್ಮೋಪದೇಶಕಾಂಡ 25 : 10 (ERVKN)
ಆಗ ಅವನ ಸಂತಾನವು, ‘ಚಪ್ಪಲಿ ತೆಗೆಯಲ್ಪಟ್ಟ ಸಂತಾನ’ ಎಂದು ಕರೆಯಲ್ಪಡುವುದು.
ಧರ್ಮೋಪದೇಶಕಾಂಡ 25 : 11 (ERVKN)
“ಇಬ್ಬರು ಗಂಡಸರು ಜಗಳವಾಡುತ್ತಿರುವಾಗ ಒಬ್ಬನ ಹೆಂಡತಿಯು ಗಂಡನಿಗೆ ಸಹಾಯಮಾಡಲಿಕ್ಕೆ ಬಂದು ಜಗಳವಾಡುವ ಇನ್ನೊಬ್ಬ ಗಂಡಸಿನ ಗುಪ್ತಾಂಗವನ್ನು ಹಿಡಿಯಬಾರದು.
ಧರ್ಮೋಪದೇಶಕಾಂಡ 25 : 12 (ERVKN)
ಅಂಥವಳ ಕೈಯನ್ನು ಕಡಿದುಹಾಕಿರಿ; ದಯೆ ತೋರಿಸಬೇಡಿ.
ಧರ್ಮೋಪದೇಶಕಾಂಡ 25 : 13 (ERVKN)
“ಮೋಸದ ತೂಕದ ಕಲ್ಲುಗಳನ್ನು ಉಪಯೋಗಿಸಬೇಡಿ.
ಧರ್ಮೋಪದೇಶಕಾಂಡ 25 : 14 (ERVKN)
ನಿಮ್ಮ ಮನೆಯೊಳಗೆ ಮೋಸದ ತೂಕದ ಕಲ್ಲುಗಳನ್ನಿಡಬೇಡಿ.
ಧರ್ಮೋಪದೇಶಕಾಂಡ 25 : 15 (ERVKN)
ನೀವು ಸರಿಯಾದ ತೂಕದ ಕಲ್ಲುಗಳನ್ನು ಉಪಯೋಗಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಬಹುಕಾಲ ಬಾಳುವಿರಿ.
ಧರ್ಮೋಪದೇಶಕಾಂಡ 25 : 16 (ERVKN)
ಮೋಸವುಳ್ಳ ತೂಕದ ಕಲ್ಲುಗಳನ್ನು ಉಪಯೋಗಿಸುವವರನ್ನು ದೇವರಾದ ಯೆಹೋವನು ದ್ವೇಷಿಸುತ್ತಾನೆ. ಹೌದು, ಆತನು ಮೋಸ ಮಾಡುವವರನ್ನು ದ್ವೇಷಿಸುತ್ತಾನೆ.
ಧರ್ಮೋಪದೇಶಕಾಂಡ 25 : 17 (ERVKN)
ಅಮಾಲೇಕ್ಯರನ್ನು ನಾಶಮಾಡಬೇಕು “ನೀವು ಈಜಿಪ್ಟಿನಿಂದ ಹೊರಬರುವಾಗ ಅಮಾಲೇಕ್ಯರು ನಿಮಗೆ ಏನು ಮಾಡಿದರೆಂಬುದನ್ನು ನೆನಪಿನಲ್ಲಿಡಿರಿ.
ಧರ್ಮೋಪದೇಶಕಾಂಡ 25 : 18 (ERVKN)
ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.
ಧರ್ಮೋಪದೇಶಕಾಂಡ 25 : 19 (ERVKN)
ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.
❮
❯
1
2
3
4
5
6
7
8
9
10
11
12
13
14
15
16
17
18
19