ಧರ್ಮೋಪದೇಶಕಾಂಡ 33 : 1 (ERVKN)
ಮೋಶೆ ಇಸ್ರೇಲರನ್ನು ಆಶೀರ್ವದಿಸಿದ್ದು ದೇವರ ಮನುಷ್ಯನಾದ ಮೋಶೆಯು ತಾನು ಸಾಯುವ ಮೊದಲು ಇಸ್ರೇಲರನ್ನು ಆಶೀರ್ವದಿಸಿದನು.
ಧರ್ಮೋಪದೇಶಕಾಂಡ 33 : 2 (ERVKN)
ಮೋಶೆಯು ಹೇಳಿದ್ದೇನೆಂದರೆ: “ಸೇಯೀರ್‌ನಲ್ಲಿ ಮುಂಜಾನೆಯ ಬೆಳಕು ಪ್ರಕಾಶಿಸುವಂತೆ ಪಾರಾನ್ ಬೆಟ್ಟಗಳ ಮೇಲಿನಿಂದ ಬೆಳಕು ಪ್ರಕಾಶಿಸುವಂತೆ ಯೆಹೋವನು ಸೀನಾಯಿ ಬೆಟ್ಟದಿಂದ ಬಂದನು.
ಆತನು ಹತ್ತು ಸಾವಿರ ಪರಿಶುದ್ಧರೊಂದಿಗೆ ಬಂದನು. ಆತನ ಬಲಶಾಲಿಗಳಾದ ಸೈನಿಕರು ಆತನೊಂದಿಗಿದ್ದರು.
ಧರ್ಮೋಪದೇಶಕಾಂಡ 33 : 3 (ERVKN)
ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು.
ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.
ಧರ್ಮೋಪದೇಶಕಾಂಡ 33 : 4 (ERVKN)
ಮೋಶೆಯು ಧರ್ಮಶಾಸ್ತ್ರವನ್ನು ಯಾಕೋಬನ ವಂಶದವರಿಗೆ ಕೊಟ್ಟನು.
ಧರ್ಮೋಪದೇಶಕಾಂಡ 33 : 5 (ERVKN)
ಆಗ ಇಸ್ರೇಲಿನ ಜನರು ತಮ್ಮ ನಾಯಕರೊಂದಿಗೆ ಒಟ್ಟಾಗಿ ಸೇರಿದರು. ಯೆಹೋವನು ತಾನೇ ಯೆಶುರೂನಿನಲ್ಲಿ *ಯೆಶುರೂನ ಇಸ್ರೇಲಿನ ಮತ್ತೊಂದು ಹೆಸರು. ಇದರರ್ಥ: “ಒಳ್ಳೆಯ” ಅಥವಾ “ಯಥಾರ್ಥ.” ಅರಸನಾದನು.
ಧರ್ಮೋಪದೇಶಕಾಂಡ 33 : 6 (ERVKN)
ರೂಬೇನನಿಗೆ ಆಶೀರ್ವಾದ “ರೂಬೇನನು ನಾಶವಾಗದೆ ಉಳಿಯಲಿ, ಆದರೆ ಅವನ ಕುಲದವರಲ್ಲಿ ಕೆಲವೇ ಮಂದಿ ಇರುವರು.”
ಧರ್ಮೋಪದೇಶಕಾಂಡ 33 : 7 (ERVKN)
ಯೆಹೂದನಿಗೆ ಆಶೀರ್ವಾದ ಯೆಹೂದನ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಯೆಹೋವನೇ, ಯೆಹೂದದ ನಾಯಕನು ಸಹಾಯಕ್ಕಾಗಿ ಮೊರೆಯಿಡುವಾಗ ಅದನ್ನು ಆಲಿಸಿ ಅವನ ಜನರ ಬಳಿಗೆ ಕರೆದುಕೊಂಡು ಬಂದು ಅವರೊಂದಿಗೆ ಸೇರಿಸು.
ಅವನನ್ನು ಬಲಗೊಳಿಸಿ ಶತ್ರುಗಳೊಂದಿಗೆ ಯುದ್ಧಮಾಡಲು ಸಹಾಯಿಸು.”
ಧರ್ಮೋಪದೇಶಕಾಂಡ 33 : 8 (ERVKN)
ಲೇವಿಯರಿಗೆ ಆಶೀರ್ವಾದ ಲೇವಿಯ ವಿಷಯವಾಗಿ ಮೋಶೆ ಹೇಳಿದ ಮಾತುಗಳು: “ಲೇವಿಯು ನಿನ್ನ ನಿಜವಾದ ಹಿಂಬಾಲಕ. ಅವನು ಊರೀಮ್‌ತುಮ್ಮೀಮ್ ಇಟ್ಟುಕೊಂಡಿರುವನು.
ಮಸ್ಸಾದಲ್ಲಿ ಲೇವಿಯರನ್ನು ನೀನು ಪರೀಕ್ಷಿಸಿದೆ. ಮೆರೀಬ ಬುಗ್ಗೆಯ ಬಳಿ ಅವರು ನಿನ್ನವರೆಂದು ನಿನಗೆ ಖಚಿತವಾಯಿತು.
ಧರ್ಮೋಪದೇಶಕಾಂಡ 33 : 9 (ERVKN)
ಯೆಹೋವನೇ, ಅವರು ನಿನಗಾಗಿ ಚಿಂತಿಸಿದರು; ಸ್ವಂತ ಸಂಸಾರಕ್ಕಿಂತಲೂ ಹೆಚ್ಚಾಗಿ ನಿನ್ನನ್ನು ಪ್ರೀತಿಸಿದರು; ಅವರು ನಿನಗಾಗಿ ತಮ್ಮ ತಂದೆತಾಯಿಗಳನ್ನು ನಿರ್ಲಕ್ಷಿಸಿದರು;
ಒಡಹುಟ್ಟಿದವರನ್ನೂ ಗುರುತಿಸಲಿಲ್ಲ. ಅವರು ತಮ್ಮ ಮಕ್ಕಳಿಗೆ ಪ್ರಾಮುಖ್ಯತೆಯನ್ನು ಕೊಡಲಿಲ್ಲ;
ಅವರು ನಿನ್ನ ಕಟ್ಟಳೆಗಳನ್ನು ಅನುಸರಿಸಿ ಒಡಂಬಡಿಕೆಯನ್ನು ಕಾಪಾಡಿದರು.
ಧರ್ಮೋಪದೇಶಕಾಂಡ 33 : 10 (ERVKN)
ಅವರು ಯಾಕೋಬ ವಂಶದವರಿಗೆ ನಿನ್ನ ವಿಧಿನಿಯಮಗಳನ್ನು ಕಲಿಸುವರು; ನಿನ್ನ ಕಟ್ಟಳೆಗಳನ್ನು ಇಸ್ರೇಲರಿಗೆ ಬೋಧಿಸುವರು.
ಅವರು ನಿನ್ನ ಸನ್ನಿಧಾನದಲ್ಲಿ ಧೂಪಹಾಕುವರು. ಬಲಿಪೀಠದಲ್ಲಿ ನಿನಗೆ ಯಜ್ಞಾರ್ಪಣೆ ಮಾಡುವರು.
ಧರ್ಮೋಪದೇಶಕಾಂಡ 33 : 11 (ERVKN)
“ಯೆಹೋವನೇ, ಲೇವಿಯರಿಗೆ ಇರುವಂಥದನ್ನು ಆಶೀರ್ವದಿಸು; ಅವರು ಮಾಡಿದ್ದೆಲ್ಲಾ ನಿನಗೆ ಮೆಚ್ಚಿಕೆಯಾಗಲಿ.
ಅವರ ಮೇಲೆ ಬೀಳುವವರನ್ನು ನಾಶಮಾಡು, ಅವರ ವೈರಿಗಳನ್ನು ಸೋಲಿಸು; ಅವರು ಮತ್ತೆ ಲೇವಿಯರ ಮೇಲೆ ಬೀಳದಂತೆ ಮಾಡು.”
ಧರ್ಮೋಪದೇಶಕಾಂಡ 33 : 12 (ERVKN)
ಬೆನ್ಯಾಮೀನನಿಗೆ ಆಶೀರ್ವಾದ ಬೆನ್ಯಾಮೀನನ ವಿಷಯವಾಗಿ ಮೋಶೆಯು ಹೇಳಿದ್ದೇನೆಂದರೆ: “ಯೆಹೋವನು ಬೆನ್ಯಾಮೀನನನ್ನು ಪ್ರೀತಿಸುತ್ತಾನೆ. ಬೆನ್ಯಾಮೀನನು ಆತನ ಬಳಿಯಲ್ಲಿ ಸುರಕ್ಷಿತವಾಗಿ ವಾಸಮಾಡುತ್ತಾನೆ.
ಯೆಹೋವನು ಅವನನ್ನು ಯಾವಾಗಲೂ ಸಂರಕ್ಷಿಸುತ್ತಾನೆ. ಅವನ ಪ್ರಾಂತ್ಯದಲ್ಲಿ ಯೆಹೋವನು ವಾಸಿಸುವನು.”
ಧರ್ಮೋಪದೇಶಕಾಂಡ 33 : 13 (ERVKN)
ಯೋಸೇಫನಿಗೆ ಆಶೀರ್ವಾದ ಯೋಸೇಫನ ಪ್ರಾಂತ್ಯವನ್ನು ಯೆಹೋವನು ಆಶೀರ್ವದಿಸಲಿ: “ಯೆಹೋವನೇ, ಅವರಿಗೆ ಆಕಾಶದಿಂದ ಮಳೆ ಸುರಿಸು, ನೆಲದಿಂದ ಬುಗ್ಗೆಯು ಹೊರಬರಲಿ;
ಧರ್ಮೋಪದೇಶಕಾಂಡ 33 : 14 (ERVKN)
ಸೂರ್ಯನು ಅವರಿಗೆ ಒಳ್ಳೆಯ ಫಲಗಳನ್ನು ಕೊಡಲಿ; ಪ್ರತಿ ತಿಂಗಳು ಒಳ್ಳೆಯ ಫಲಗಳನ್ನು ಕೊಡಲಿ.
ಧರ್ಮೋಪದೇಶಕಾಂಡ 33 : 15 (ERVKN)
ಬೆಟ್ಟಗುಡ್ಡಗಳು ಉತ್ತಮವಾದ ಫಲಗಳನ್ನು ಫಲಿಸಲಿ.
ಧರ್ಮೋಪದೇಶಕಾಂಡ 33 : 16 (ERVKN)
ಭೂಮಿಯು ಒಳ್ಳೆಯದನ್ನು ಯೋಸೇಫನಿಗೆ ಕೊಡಲಿ. ಯೋಸೇಫನು ತನ್ನ ಸಹೋದರರಿಂದ ಬೇರ್ಪಡಿಸಿಕೊಂಡಿರುವನು. ಆದ್ದರಿಂದ ಉರಿಯುವ ಪೊದೆಯಲ್ಲಿರುವ ಯೆಹೋವನು ಉತ್ತಮವಾದವುಗಳನ್ನು ಯೋಸೇಫನಿಗೆ ಕೊಡಲಿ.
ಧರ್ಮೋಪದೇಶಕಾಂಡ 33 : 17 (ERVKN)
ಯೋಸೇಫನು ಬಲಶಾಲಿಯಾದ ಗೂಳಿಯಂತಿದ್ದಾನೆ. ಅವನ ಇಬ್ಬರು ಮಕ್ಕಳು ಗೂಳಿಯ ಕೊಂಬುಗಳಂತೆ ಬೇರೆಯವರನ್ನು ದೂಡಿ ಲೋಕದ ಅಂಚಿಗೆ ತಳ್ಳಿಬಿಡುತ್ತಾರೆ.
ಮನಸ್ಸೆಯೊಂದಿಗೆ ಸಾವಿರಗಟ್ಟಲೆ ಜನರಿದ್ದಾರೆ. ಎಫ್ರಾಯೀಮನೊಂದಿಗೆ ಹತ್ತು ಸಾವಿರಗಟ್ಟಲೆ ಜನರಿದ್ದಾರೆ.”
ಧರ್ಮೋಪದೇಶಕಾಂಡ 33 : 18 (ERVKN)
ಜೆಬುಲೂನನಿಗೆ ಮತ್ತು ಇಸ್ಸಾಕಾರನಿಗೆ ಆಶೀರ್ವಾದಗಳು ಮೋಶೆಯು ಜೆಬುಲೂನ್ ವಿಷಯವಾಗಿ ಹೇಳಿದ್ದೇನೆಂದರೆ: “ಜೆಬುಲೂನನೇ, ನೀನು ಹೊರಗೆ ಹೋಗುವಾಗ ಸಂತೋಷವಾಗಿರು. ಇಸ್ಸಾಕಾರನೇ, ನೀನು ನಿನ್ನ ಗುಡಾರದೊಳಗಿರುವಾಗ ಸಂತೋಷದಿಂದಿರು.
ಧರ್ಮೋಪದೇಶಕಾಂಡ 33 : 19 (ERVKN)
ಅವರು ತಮ್ಮ ಪರ್ವತಗಳಿಗೆ ಜನರನ್ನು ಕರೆಯುವರು. ಅಲ್ಲಿ ಅವರು ಉತ್ತಮ ಯಜ್ಞವನ್ನು ಅರ್ಪಿಸುವರು.
ಸಮುದ್ರದಿಂದ ಐಶ್ವರ್ಯವನ್ನು ತೆಗೆಯುವರು. ಸಮುದ್ರ ದಡದಿಂದ ನಿಕ್ಷೇಪವನ್ನೆತ್ತುವರು.”
ಧರ್ಮೋಪದೇಶಕಾಂಡ 33 : 20 (ERVKN)
ಗಾದನಿಗೆ ಆಶೀರ್ವಾದಗಳು ಗಾದನಿಗೆ ಮೋಶೆಯು ಹೇಳಿದ್ದೇನೆಂದರೆ: “ಗಾದನಿಗೆ ವಿಸ್ತಾರವಾದ ಪ್ರಾಂತ್ಯವನ್ನು ಕೊಟ್ಟ ದೇವರಿಗೆ ಸ್ತೋತ್ರ. ಗಾದನು ಸಿಂಹದಂತಿರುವನು; ಹೊಂಚುಹಾಕುತ್ತಾ ಕಾಯುತ್ತಾ ಇರುವನು. ಫಕ್ಕನೆ ಪ್ರಾಣಿಯ ಮೇಲೆ ಹಾರಿ ಅದನ್ನು ಸೀಳಿಬಿಡುವನು.
ಧರ್ಮೋಪದೇಶಕಾಂಡ 33 : 21 (ERVKN)
ಅದರ ಒಳ್ಳೆಯ ಭಾಗವನ್ನು ತನಗೆ ಆರಿಸಿಕೊಳ್ಳುವನು. ರಾಜನ ಭಾಗವನ್ನು ತಾನಿಟ್ಟುಕೊಳ್ಳುವನು.
ಜನರ ನಾಯಕರು ಆತನ ಬಳಿಗೆ ಬರುವರು. ಯೆಹೋವನು ಒಳ್ಳೆಯದೆಂದು ಹೇಳುವ ಕಾರ್ಯಗಳನ್ನು ಮಾಡುವನು. ಇಸ್ರೇಲ್ ಜನರಿಗೆ ಸರಿಯಾದ ಕಾರ್ಯವನ್ನೇ ಮಾಡುವನು.”
ಧರ್ಮೋಪದೇಶಕಾಂಡ 33 : 22 (ERVKN)
ದಾನನಿಗೆ ಆಶೀರ್ವಾದಗಳು ಮೋಶೆಯು ದಾನನ ವಿಷಯವಾಗಿ ಹೀಗೆ ಹೇಳಿದನು: “ದಾನನು ಪ್ರಾಯದಸಿಂಹದ ಮರಿ; ಅವನು ಬಾಷಾನಿನಿಂದ ನೆಗೆಯುವನು.”
ಧರ್ಮೋಪದೇಶಕಾಂಡ 33 : 23 (ERVKN)
ನಫ್ತಾಲಿಗೆ ಆಶೀರ್ವಾದಗಳು ಮೋಶೆಯು ನಫ್ತಾಲಿಯ ವಿಷಯವಾಗಿ ಹೇಳಿದ ಮಾತುಗಳು: “ನಫ್ತಾಲಿಯೇ, ನಿನಗೆ ಉತ್ತಮವಾದ ವಸ್ತುಗಳು ಅಧಿಕವಾಗಿ ದೊರೆಯುತ್ತವೆ. ಯೆಹೋವನು ನಿನ್ನನ್ನು ನಿಜವಾಗಿಯೂ ಆಶೀರ್ವದಿಸುವನು. ಗಲಿಲಾಯದ ಬಳಿಯಲ್ಲಿರುವ ಪ್ರಾಂತ್ಯವು ನಿನಗೆ ದೊರಕುವದು.”
ಧರ್ಮೋಪದೇಶಕಾಂಡ 33 : 24 (ERVKN)
ಆಶೇರನಿಗೆ ಆಶೀರ್ವಾದ ಆಶೇರನ ವಿಷಯವಾಗಿ ಮೋಶೆಯ ಮಾತುಗಳು: “ಮಕ್ಕಳಲ್ಲಿ, ಆಶೇರನೇ ಹೆಚ್ಚಾಗಿ ಆಶೀರ್ವದಿಸಲ್ಪಟ್ಟವನು. ಅವನ ಅಣ್ಣತಮ್ಮಂದಿರೊಳಗೆ ಅವನೇ ಅಚ್ಚುಮೆಚ್ಚಿನವನಾಗಲಿ. ಎಣ್ಣೆಯಲ್ಲಿ ಅವನು ತನ್ನ ಕಾಲುಗಳನ್ನು ತೊಳೆಯಲಿ.
ಧರ್ಮೋಪದೇಶಕಾಂಡ 33 : 25 (ERVKN)
ನಿನ್ನ ಬಾಗಿಲುಗಳಲ್ಲಿ ಬೀಗವಿರುವುದು. ಅವು ಕಬ್ಬಿಣದಿಂದಲೂ ಹಿತ್ತಾಳೆಯಿಂದಲೂ ಮಾಡಲ್ಪಟ್ಟಿವೆ. ನಿನ್ನ ಜೀವಮಾನ ಕಾಲವೆಲ್ಲಾ ನೀನು ಬಲಶಾಲಿಯಾಗಿರುವೆ.”
ಧರ್ಮೋಪದೇಶಕಾಂಡ 33 : 26 (ERVKN)
ಮೋಶೆಯು ದೇವರನ್ನು ಸ್ತುತಿಸುವುದು “ಯೆಶುರೂನೇ, ನಮ್ಮ ದೇವರ ಹಾಗೆ ಬೇರೆ ದೇವರುಗಳಿಲ್ಲ. ಆತನು ಮೋಡಗಳ ಮೇಲೆ ಮಹಿಮಾರೂಢನಾಗಿ ಸವಾರಿ ಮಾಡುತ್ತಾ ಆಕಾಶದಿಂದ ನಿನಗೆ ಸಹಾಯಕ್ಕೆ ಬರುವನು.
ಧರ್ಮೋಪದೇಶಕಾಂಡ 33 : 27 (ERVKN)
ಆತನು ನಿರಂತರಕ್ಕೂ ಜೀವಿಸುವವನಾಗಿದ್ದಾನೆ. ಆತನೇ ನಿಮ್ಮ ಆಶ್ರಯಸ್ಥಾನ.
ಆತನ ಸಾಮರ್ಥ್ಯ ಸದಾಕಾಲವಿರುವುದು. ಆತನು ನಿಮ್ಮನ್ನು ಸಂರಕ್ಷಿಸಿ ಕಾಪಾಡುವನು;
ನಿಮ್ಮ ದೇಶವನ್ನು ಬಿಟ್ಟುಹೋಗಲು ಜನರನ್ನು ದೂಡುವನು; ‘ವೈರಿಗಳನ್ನು ನಾಶಮಾಡಿರಿ’ ಎಂದು ಹೇಳುವನು.
ಧರ್ಮೋಪದೇಶಕಾಂಡ 33 : 28 (ERVKN)
ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ.
ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.
ಧರ್ಮೋಪದೇಶಕಾಂಡ 33 : 29 (ERVKN)
ಇಸ್ರೇಲೇ, ನೀವು ಆಶೀರ್ವದಿಸಲ್ಪಟ್ಟವರು. ನಿಮ್ಮ ದೇಶದ ಹಾಗೆ ಯಾವ ದೇಶವೂ ಇರದು.
ಯೆಹೋವನು ನಿಮ್ಮನ್ನು ರಕ್ಷಿಸಿದನು. ಆತನು ನಿಮ್ಮನ್ನು ಕಾಪಾಡುವ ಬಲವಾದ ಗುರಾಣಿ. ಆತನು ನಿಮಗೆ ಶಕ್ತಿಯುತವಾದ ಖಡ್ಗ.
ವೈರಿಗಳು ನಿಮಗೆ ಭಯಪಡುವರು. ನೀವು ಅವರ ಪವಿತ್ರ ಸ್ಥಳವನ್ನು ತುಳಿದುಬಿಡುವಿರಿ!”
❮
❯