ಧರ್ಮೋಪದೇಶಕಾಂಡ 34 : 1 (ERVKN)
ಮೋಶೆಯ ಮರಣ ಮೋಶೆಯು ನೆಬೋ ಬೆಟ್ಟವನ್ನು ಹತ್ತಿದನು. ಅವನು ಮೋವಾಬಿನ ಜೋರ್ಡನ್ ಕಣಿವೆಯಿಂದ ಪಿಸ್ಗಾ ಬೆಟ್ಟದ ಮೇಲಕ್ಕೆ ಬಂದನು. ಇದು ಜೋರ್ಡನ್ ನದಿಯ ಆಚೆಕಡೆಯಲ್ಲಿರುವ ಜೆರಿಕೊ ಊರಿನ ಎದುರಿನಲ್ಲಿದೆ. ಯೆಹೋವನು ಮೋಶೆಗೆ ಗಿಲ್ಯಾದಿನಿಂದ ದಾನ್‌ವರೆಗಿದ್ದ ಎಲ್ಲಾ ಪ್ರದೇಶವನ್ನು ತೋರಿಸಿದನು.
ಧರ್ಮೋಪದೇಶಕಾಂಡ 34 : 2 (ERVKN)
ಮೋಶೆಗೆ ಯೆಹೋವನು ನಫ್ತಾಲಿ, ಎಫ್ರಾಯೀಮ್, ಮನಸ್ಸೆ ಪ್ರಾಂತ್ಯಗಳನ್ನು ತೋರಿಸಿದನು. ಯೆಹೂದ ಪ್ರಾಂತ್ಯವನ್ನು ಮೆಡಿಟರೇನಿಯನ್ ಸಮುದ್ರದವರೆಗೂ ತೋರಿಸಿದನು.
ಧರ್ಮೋಪದೇಶಕಾಂಡ 34 : 3 (ERVKN)
ಯೆಹೋವನು ಮೋಶೆಗೆ ನೆಗೆವ್ ಮತ್ತು ಚೋಗರೂರಿನಿಂದ ಖರ್ಜೂರದ ಮರಗಳ ಪಟ್ಟಣವಾದ ಜೆರಿಕೊ ಪಟ್ಟಣದವರೆಗಿರುವ ಕಣಿವೆಯನ್ನು ತೋರಿಸಿದನು.
ಧರ್ಮೋಪದೇಶಕಾಂಡ 34 : 4 (ERVKN)
ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಈ ದೇಶವನ್ನು ನಾನು ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ವಾಗ್ದಾನ ಮಾಡಿದ್ದೇನೆ. ನಿಮ್ಮ ಸಂತತಿಯವರಿಗೆ ನಾನು ಈ ದೇಶವನ್ನು ಕೊಡುವೆನು ಎಂದು ಹೇಳಿದ್ದೆನು. ಆ ದೇಶವನ್ನು ನೀನು ನೋಡುವಂತೆ ಮಾಡಿದೆನು. ಆದರೆ ನೀನು ಅದರೊಳಗೆ ಪ್ರವೇಶಿಸುವುದಿಲ್ಲ.”
ಧರ್ಮೋಪದೇಶಕಾಂಡ 34 : 5 (ERVKN)
ಮೋವಾಬ್ ದೇಶದಲ್ಲಿ ಯೆಹೋವನ ಸೇವಕನಾದ ಮೋಶೆಯು ಸತ್ತುಹೋದನು. ಯೆಹೋವನು ಅವನಿಗೆ ಹಾಗೆ ಆಗುತ್ತದೆಂದು ಮುಂಚೆಯೇ ತಿಳಿಸಿದ್ದನು.
ಧರ್ಮೋಪದೇಶಕಾಂಡ 34 : 6 (ERVKN)
ಯೆಹೋವನು ಮೋಶೆಯನ್ನು ಮೋವಾಬ್‌ನಲ್ಲಿ ಹೂಳಿಟ್ಟನು. ಇದು ಬೇತ್ಪೆಗೋರ್ ತಗ್ಗಿಗೆ ಎದುರಾಗಿದೆ. ಆದರೆ ಮೋಶೆಯನ್ನು ಸಮಾಧಿಮಾಡಿದ ಸ್ಥಳವು ಇದುವರೆಗೆ ಯಾರಿಗೂ ಗೊತ್ತಾಗಲಿಲ್ಲ.
ಧರ್ಮೋಪದೇಶಕಾಂಡ 34 : 7 (ERVKN)
ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನು ಸಾಯುವ ತನಕ ಬಲಶಾಲಿಯಾಗಿಯೇ ಇದ್ದನು. ಅವನ ಕಣ್ಣು ಮೊಬ್ಬಾಗಿರಲಿಲ್ಲ.
ಧರ್ಮೋಪದೇಶಕಾಂಡ 34 : 8 (ERVKN)
ಇಸ್ರೇಲರು ಮೋಶೆಗಾಗಿ ಮೂವತ್ತು ದಿವಸಗಳ ತನಕ ಗೋಳಾಡಿದರು. ಶೋಕದ ದಿವಸಗಳು ಕಳೆಯುವ ತನಕ ಅವರು ಮೋವಾಬಿನಲ್ಲಿದ್ದ ಜೋರ್ಡನ್ ಕಣಿವೆಯಲ್ಲಿ ತಂಗಿದ್ದರು.
ಧರ್ಮೋಪದೇಶಕಾಂಡ 34 : 9 (ERVKN)
ಯೆಹೋಶುವನು ಇಸ್ರೇಲರ ಹೊಸ ನಾಯಕ ಮೋಶೆಯು ಯೆಹೋಶುವನ ಮೇಲೆ ತನ್ನ ಕೈಗಳನ್ನಿಟ್ಟು ಅವನನ್ನು ನಾಯಕನನ್ನಾಗಿ ನೇಮಿಸಿದನು. ಆಗ ನೂನನ ಮಗನಾದ ಯೆಹೋಶುವನು ಜ್ಞಾನದ ಆತ್ಮನಿಂದ ತುಂಬಲ್ಪಟ್ಟವನಾದನು. ಇಸ್ರೇಲಿನ ಜನರು ಯೆಹೋಶುವನಿಗೆ ವಿಧೇಯರಾದರು. ಯೆಹೋವನು ಮೋಶೆಗೆ ಆಜ್ಞಾಪಿಸಿದ್ದನ್ನೆಲ್ಲಾ ಇಸ್ರೇಲರು ಮಾಡಿದರು.
ಧರ್ಮೋಪದೇಶಕಾಂಡ 34 : 10 (ERVKN)
ಮೋಶೆಯಂತ ಪ್ರವಾದಿಯು ಇಸ್ರೇಲರಿಗೆ ದೊರೆಯಲೇ ಇಲ್ಲ. ಯೆಹೋವನು ಅವನೊಂದಿಗೆ ಮುಖಾಮುಖಿಯಾಗಿ ಮಾತನಾಡಿದನು.
ಧರ್ಮೋಪದೇಶಕಾಂಡ 34 : 11 (ERVKN)
ಈಜಿಪ್ಟ್ ದೇಶದಲ್ಲಿ ಅದ್ಭುತಕಾರ್ಯಗಳನ್ನು ಮಾಡುವುದಕ್ಕಾಗಿ ಯೆಹೋವನು ಮೋಶೆಯನ್ನು ಕಳುಹಿಸಿದನು. ಅದನ್ನು ಫರೋಹನೂ ಅವನ ಪರಿವಾರದವರೂ ಅಧಿಕಾರಿಗಳೆಲ್ಲರೂ ನೋಡಿದರು.
ಧರ್ಮೋಪದೇಶಕಾಂಡ 34 : 12 (ERVKN)
ಯಾವ ಪ್ರವಾದಿಯೂ ಮೋಶೆ ಮಾಡಿದ ಸೂಚಕಕಾರ್ಯಗಳನ್ನು ಮಾಡಲಿಲ್ಲ. ಇಸ್ರೇಲಿನ ಎಲ್ಲಾ ಜನರು ಮೋಶೆ ಮಾಡಿದ್ದನ್ನು ನೋಡಿದ್ದರು.

1 2 3 4 5 6 7 8 9 10 11 12