ಧರ್ಮೋಪದೇಶಕಾಂಡ 6 : 1 (ERVKN)
{ಯಾವಾಗಲೂ ದೇವರನ್ನು ಪ್ರೀತಿಸಿ ಆತನಿಗೆ ವಿಧೇಯರಾಗಿರಿ} [PS] “ನಿಮ್ಮದೇವರಾದ ಯೆಹೋವನು ನಿಮಗೆ ಉಪದೇಶಿಸಲೆಂದು ನನಗೆ ಕೊಟ್ಟ ಆಜ್ಞೆಗಳು, ಕಟ್ಟಳೆಗಳು ಮತ್ತು ನಿಯಮಗಳು ಇವೇ. ನೀವು ವಾಸಮಾಡಲು ಪ್ರವೇಶಿಸಲಿರುವ ದೇಶದಲ್ಲಿ ಅವುಗಳನ್ನು ಪಾಲಿಸಿರಿ.
ಧರ್ಮೋಪದೇಶಕಾಂಡ 6 : 2 (ERVKN)
ನೀವೂ ಮತ್ತು ನಿಮ್ಮ ಸಂತತಿಯವರೂ ಜೀವಿಸುವ ದಿನಗಳಲ್ಲೆಲ್ಲಾ ದೇವರಾದ ಯೆಹೋವನನ್ನು ಗೌರವಿಸಬೇಕು. ನಾನೀಗ ಕೊಡುವ ಎಲ್ಲಾ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಅನುಸರಿಸಬೇಕು. ಹಾಗೆ ಮಾಡಿದ್ದಲ್ಲಿ ನೀವು ನೆಲೆಸುವ ಜಾಗದಲ್ಲಿ ನೀವು ಬಹುಕಾಲ ಜೀವಿಸುವಿರಿ.
ಧರ್ಮೋಪದೇಶಕಾಂಡ 6 : 3 (ERVKN)
ಇಸ್ರೇಲಿನ ಜನರೇ, ಕಿವಿಗೊಟ್ಟು ಕೇಳಿರಿ. ದೇವರ ಆಜ್ಞೆಗಳಿಗೆ ವಿಧೇಯರಾಗಿರಿ. ಆಗ ನಿಮಗೆ ಎಲ್ಲಾದರಲ್ಲಿ ಶುಭವಾಗುವುದು. ನಿಮಗೆ ಹೆಚ್ಚು ಮಕ್ಕಳಾಗುವವು. ನೀವು ನೆಲೆಸುವ ದೇಶವು ನಿಮ್ಮ ಪೂರ್ವಿಕರಿಗೆ ದೇವರು ವಾಗ್ದಾನ ಮಾಡಿದ ಪ್ರಕಾರ ಫಲಭರಿತವಾಗುವುದು. [PE][PS]
ಧರ್ಮೋಪದೇಶಕಾಂಡ 6 : 4 (ERVKN)
“ಇಸ್ರೇಲಿನ ಜನರೇ, ಕಿವಿಗೊಡಿರಿ. ಯೆಹೋವನೇ ನಮ್ಮ ದೇವರು. ದೇವರು ಒಬ್ಬನೇ!
ಧರ್ಮೋಪದೇಶಕಾಂಡ 6 : 5 (ERVKN)
ನಿಮ್ಮ ದೇವರಾದ ಯೆಹೋವನನ್ನು ನಿಮ್ಮ ಪೂರ್ಣಹೃದಯದಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.
ಧರ್ಮೋಪದೇಶಕಾಂಡ 6 : 6 (ERVKN)
ನಾನೀಗ ಕೊಡುವ ಆಜ್ಞೆಗಳನ್ನು ಯಾವಾಗಲೂ ನಿಮ್ಮ ಜ್ಞಾಪದಲ್ಲಿಟ್ಟುಕೊಂಡಿರಿ.
ಧರ್ಮೋಪದೇಶಕಾಂಡ 6 : 7 (ERVKN)
ನಿಮ್ಮ ಮಕ್ಕಳಿಗೆ ಇದನ್ನು ಕಲಿಸಲು ಮರೆಯಬೇಡಿರಿ. ನಿಮ್ಮ ಮನೆಗಳಲ್ಲಿ ಕುಳಿತಿರುವಾಗ, ರಸ್ತೆಗಳಲ್ಲಿ ನಡೆಯುತ್ತಿರುವಾಗ, ನೀವು ಮಲಗಿರುವಾಗ, ಎದ್ದಾಗ ಈ ಆಜ್ಞೆಗಳ ಕುರಿತಾಗಿ ಮಾತಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 6 : 8 (ERVKN)
ಈ ಆಜ್ಞೆಗಳನ್ನು ಬರೆದು ನಿಮ್ಮ ಕೈಗಳಿಗೆ ಕಟ್ಟಿರಿ, ನಿಮ್ಮ ಹಣೆಗಳ ಮೇಲೆ ಕಟ್ಟಿರಿ. ಇವು ನನ್ನ ಬೋಧನೆಯ ವಿಚಾರವಾಗಿ ನಿಮಗೆ ಜ್ಞಾಪಕ ಹುಟ್ಟಿಸಲು ಸಹಾಯವಾಗುವುದು.
ಧರ್ಮೋಪದೇಶಕಾಂಡ 6 : 9 (ERVKN)
ಅವುಗಳನ್ನು ನಿಮ್ಮ ಬಾಗಿಲಿನ ಮೇಲೆಯೂ ನಿಲುವುಪಟ್ಟಿಗಳ ಮೇಲೆಯೂ ಬರೆಯಿರಿ. [PE][PS]
ಧರ್ಮೋಪದೇಶಕಾಂಡ 6 : 10 (ERVKN)
“ದೇವರಾದ ಯೆಹೋವನು ನಮಗೆ ಈ ದೇಶವನ್ನು ಕೊಡುವುದಾಗಿ ನಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ ಮತ್ತು ಯಾಕೋಬನಿಗೆ ವಾಗ್ದಾನ ಮಾಡಿದ್ದನು. ಈಗ ಆ ದೇಶವನ್ನು ನಿಮಗೆ ಕೊಡುತ್ತಿದ್ದಾನೆ. ಅದರಲ್ಲಿರುವ ದೊಡ್ಡದೊಡ್ಡ ನಗರಗಳನ್ನು ನೀವು ಕೈಯಿಂದ ಕಟ್ಟಲಿಲ್ಲ.
ಧರ್ಮೋಪದೇಶಕಾಂಡ 6 : 11 (ERVKN)
ನೀವು ಕೂಡಿಸಿಡದ ಉತ್ತಮ ವಸ್ತುಗಳಿಂದ ತುಂಬಿರುವ ಮನೆಗಳನ್ನು ಯೆಹೋವನು ನಿಮಗೆ ಕೊಡುತ್ತಾನೆ. ನೀವು ತೋಡದಿರುವ ಬಾವಿಗಳನ್ನು ನಿಮಗೆ ಕೊಡುವನು. ನೀವು ನೆಡದಿರುವ ದ್ರಾಕ್ಷಾತೋಟಗಳನ್ನೂ ಎಣ್ಣೆಮರಗಳ ತೋಪುಗಳನ್ನೂ ನಿಮಗೆ ಕೊಡುವನು. ನಿಮಗೆ ತಿನ್ನಲು ಯಾವ ಕೊರತೆಯೂ ಇರುವುದಿಲ್ಲ. [PE][PS]
ಧರ್ಮೋಪದೇಶಕಾಂಡ 6 : 12 (ERVKN)
“ನಿಮ್ಮ ದೇವರಾದ ಯೆಹೋವನನ್ನು ಸನ್ಮಾನಿಸಿ ಆತನನ್ನೇ ಸೇವಿಸಿರಿ. ಆತನನ್ನು ಮರೆತುಬಿಡಬೇಡಿರಿ. ಈಜಿಪ್ಟ್ ದೇಶದಲ್ಲಿ ಗುಲಾಮರಾಗಿದ್ದಾಗ ಆತನೇ ನಿಮ್ಮನ್ನು ವಿಮೋಚಿಸಿದನಲ್ಲಾ?
ಧರ್ಮೋಪದೇಶಕಾಂಡ 6 : 13 (ERVKN)
ಆತನ ಹೆಸರಿನಲ್ಲಿಯೇ ವಾಗ್ದಾನಗಳನ್ನು ಮಾಡಿರಿ; ಅನ್ಯ ದೇವರ ಹೆಸರಿನಲ್ಲಿ ಮಾಡಕೂಡದು.
ಧರ್ಮೋಪದೇಶಕಾಂಡ 6 : 14 (ERVKN)
ಇತರ ದೇವರುಗಳನ್ನು ಅವಲಂಭಿಸಬಾರದು. ನಿಮ್ಮ ಸುತ್ತಲೂ ಇರುವವರ ದೇವರುಗಳನ್ನು ಪೂಜಿಸಬಾರದು.
ಧರ್ಮೋಪದೇಶಕಾಂಡ 6 : 15 (ERVKN)
ನಿಮ್ಮ ದೇವರಾದ ಯೆಹೋವನು ಯಾವಾಗಲೂ ನಿಮ್ಮ ಜೊತೆಯಲ್ಲಿರುವನು. ಸುಳ್ಳುದೇವರನ್ನು ಪೂಜಿಸುವವರನ್ನು ಯೆಹೋವನು ದ್ವೇಷಿಸುವುದರಿಂದ ಅವರನ್ನು ಈ ಲೋಕದಿಂದ ಅಳಿಸಿಬಿಡುವನು. [PE][PS]
ಧರ್ಮೋಪದೇಶಕಾಂಡ 6 : 16 (ERVKN)
“ಮಸ್ಸಾದಲ್ಲಿ ನೀವು ನಿಮ್ಮ ದೇವರನ್ನು ಪರೀಕ್ಷಿಸಿದಂತೆ ಆತನನ್ನು ಪರೀಕ್ಷಿಸಬಾರದು.
ಧರ್ಮೋಪದೇಶಕಾಂಡ 6 : 17 (ERVKN)
ಆತನ ಆಜ್ಞೆಗಳಿಗೆ ವಿಧೇಯರಾಗಿರಲು ಎಚ್ಚರದಿಂದಿರಬೇಕು. ಆತನು ನಿಮಗೆ ಕೊಟ್ಟ ವಿಧಿನಿಯಮಗಳನ್ನು ಪರಿಪಾಲಿಸಲು ತಯಾರಾಗಿರಬೇಕು.
ಧರ್ಮೋಪದೇಶಕಾಂಡ 6 : 18 (ERVKN)
ಯೋಗ್ಯವಾದವುಗಳನ್ನು, ಸರಿಯಾದವುಗಳನ್ನು ಮತ್ತು ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡಬೇಕು. ಆಗ ನಿಮ್ಮ ಕಾರ್ಯಗಳೆಲ್ಲವೂ ಸಫಲವಾಗುವುವು. ಅಲ್ಲದೆ ಯೆಹೋವನು ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದೊಳಗೆ ನೀವು ಹೋಗಿ ಅದನ್ನು ವಶಪಡಿಸಿಕೊಳ್ಳಬಹುದು.
ಧರ್ಮೋಪದೇಶಕಾಂಡ 6 : 19 (ERVKN)
ಯೆಹೋವನು ಹೇಳಿದಂತೆಯೇ, ಅಲ್ಲಿ ವಾಸವಾಗಿರುವ ನಿಮ್ಮ ವೈರಿಗಳನ್ನೆಲ್ಲಾ ಹೊರಗಟ್ಟುವಿರಿ. [PS]
ಧರ್ಮೋಪದೇಶಕಾಂಡ 6 : 20 (ERVKN)
{ದೇವರ ಕಾರ್ಯಗಳನ್ನು ನಿಮ್ಮ ಮಕ್ಕಳಿಗೆ ತಿಳಿಸಬೇಕು} [PS] “ಮುಂದಿನ ದಿನಗಳಲ್ಲಿ ನಿಮ್ಮ ಮಕ್ಕಳು ನಿಮಗೆ ಈ ಪ್ರಶ್ನೆ ಕೇಳಬಹುದು: ‘ಯೆಹೋವದೇವರು ನಮಗೆ ನ್ಯಾಯವಿಧಿ, ನಿಯಮಗಳನ್ನು ಕೊಟ್ಟಿರುತ್ತಾನೆ. ಇವುಗಳ ಅರ್ಥವೇನು?’
ಧರ್ಮೋಪದೇಶಕಾಂಡ 6 : 21 (ERVKN)
ಆಗ ನೀವು ಹೀಗೆ ಉತ್ತರಿಸಬೇಕು: ‘ನಾವು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದೆವು. ಆದರೆ ನಮ್ಮ ದೇವರಾದ ಯೆಹೋವನು ತನ್ನ ಪರಾಕ್ರಮದಿಂದ ನಮ್ಮನ್ನು ಬಿಡುಗಡೆ ಮಾಡಿದನು.
ಧರ್ಮೋಪದೇಶಕಾಂಡ 6 : 22 (ERVKN)
ಯೆಹೋವನು ಈಜಿಪ್ಟಿನವರನ್ನೂ ಫರೋಹನನ್ನೂ ಅವನ ಪರಿವಾರದವರನ್ನೂ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಮಹತ್ಕಾರ್ಯಗಳಿಂದಲೂ ಭಯಂಕರ ಕಾರ್ಯಗಳಿಂದಲೂ ಬಾಧಿಸಿದನು.
ಧರ್ಮೋಪದೇಶಕಾಂಡ 6 : 23 (ERVKN)
ಯೆಹೋವನು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನದಂತೆ ನಮಗೆ ಆ ದೇಶವನ್ನು ಕೊಡುವುದಕ್ಕಾಗಿ ನಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು.
ಧರ್ಮೋಪದೇಶಕಾಂಡ 6 : 24 (ERVKN)
ಈ ಉಪದೇಶಗಳನ್ನೆಲ್ಲಾ ಅನುಸರಿಸಬೇಕೆಂದು ಯೆಹೋವನು ನಮಗೆ ಆಜ್ಞಾಪಿಸಿದ್ದಾನೆ. ನಮ್ಮ ದೇವರಾದ ಯೆಹೋವನನ್ನು ನಾವು ಗೌರವಿಸತಕ್ಕದ್ದು. ಆಗ ಇಂದಿನಂತೆ ಯೆಹೋವನು ನಮ್ಮನ್ನು ಜೀವಂತವಾಗಿರಿಸಿ ನಮಗೆ ಒಳ್ಳೆಯದನ್ನು ಮಾಡುತ್ತಾನೆ.
ಧರ್ಮೋಪದೇಶಕಾಂಡ 6 : 25 (ERVKN)
ನಮ್ಮ ದೇವರಾದ ಯೆಹೋವನು ಹೇಳಿದಂತೆಯೇ, ಇಡೀ ಧರ್ಮಶಾಸ್ತ್ರಕ್ಕೆ ನಾವು ಚಾಚೂತಪ್ಪದೆ ಎಚ್ಚರಿಕೆಯಿಂದ ವಿಧೇಯರಾದರೆ, ನಾವು ಒಳ್ಳೆಯದನ್ನು ಮಾಡಿದೆವೆಂದು ದೇವರು ಹೇಳುತ್ತಾನೆ.’ [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25

BG:

Opacity:

Color:


Size:


Font: