ಧರ್ಮೋಪದೇಶಕಾಂಡ 7 : 1 (ERVKN)
“ನಿಮಗೆ ಸ್ವಾಸ್ತ್ಯವಾಗಿ ಕೊಡುವ ದೇಶಕ್ಕೆ ಯೆಹೋವನು ನಿಮ್ಮನ್ನು ನಡೆಸುವನು. ನಿಮಗಿಂತ ಬಲಿಷ್ಠವಾಗಿದ್ದು ಅಲ್ಲಿ ವಾಸಿಸುತ್ತಿರುವ ಹಿತ್ತಿಯರು, ಗಿರ್ಗಾಷಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು ಮತ್ತು ಯೆಬೂಸಿಯರು ಎಂಬ ಏಳು ಜನಾಂಗಗಳನ್ನು ಆ ದೇಶದಿಂದ ನಿಮಗಾಗಿ ಹೊರಗಟ್ಟುವನು.
ಧರ್ಮೋಪದೇಶಕಾಂಡ 7 : 2 (ERVKN)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮಗೆ ಅಧೀನಪಡಿಸುವನು. ನೀವು ಅವರನ್ನು ಸೋಲಿಸಿಬಿಡುವಿರಿ. ನೀವು ಅವರನ್ನು ಸಂಪೂರ್ಣವಾಗಿ ನಾಶಮಾಡಬೇಕು. ಅವರೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳಬೇಡಿ ಮತ್ತು ಅವರಿಗೆ ಕರುಣೆಯನ್ನು ತೋರಬೇಡಿ.
ಧರ್ಮೋಪದೇಶಕಾಂಡ 7 : 3 (ERVKN)
ಅವರೊಳಗಿಂದ ಹೆಣ್ಣನ್ನು ತರಬೇಡಿ. ನಿಮ್ಮ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಅವರನ್ನು ಮದುವೆಯಾಗಬಾರದು.
ಧರ್ಮೋಪದೇಶಕಾಂಡ 7 : 4 (ERVKN)
ಯಾಕೆಂದರೆ, ನನ್ನನ್ನು ಹಿಂಬಾಲಿಸದಂತೆ ಅವರು ನಿಮ್ಮ ಮಕ್ಕಳನ್ನು ಮಾರ್ಪಡಿಸುವರು. ಆಗ ನಿಮ್ಮ ಮಕ್ಕಳು ಅನ್ಯದೇವರುಗಳ ಸೇವೆಮಾಡುವರು. ಆಗ ಯೆಹೋವನು ನಿಮ್ಮ ಮೇಲೆ ಬಹಳ ಕೋಪಗೊಂಡು ನಿಮ್ಮನ್ನು ಬೇಗನೆ ನಾಶಮಾಡುವನು. [PS]
ಧರ್ಮೋಪದೇಶಕಾಂಡ 7 : 5 (ERVKN)
{ಸುಳ್ಳುದೇವರುಗಳನ್ನು ನಾಶಮಾಡಿರಿ} [PS] “ಆ ಜನಾಂಗಗಳ ಯಜ್ಞವೇದಿಕೆಗಳನ್ನೆಲ್ಲಾ ನೀವು ಕೆಡವಿಹಾಕಿ ನೆಲಸಮಮಾಡಬೇಕು. ಅವರ ಸ್ಮಾರಕ ಕಲ್ಲುಗಳನ್ನು ಒಡೆದು ಚೂರುಚೂರು ಮಾಡಬೇಕು. ಅವರ ಅಶೇರಸ್ತಂಭಗಳನ್ನು ಕತ್ತರಿಸಿಹಾಕಬೇಕು; ಅವುಗಳ ಪ್ರತಿಮೆಗಳನ್ನು ಸುಟ್ಟುಹಾಕಬೇಕು.
ಧರ್ಮೋಪದೇಶಕಾಂಡ 7 : 6 (ERVKN)
ಯಾಕೆಂದರೆ ನೀವು ಯೆಹೋವನ ಪ್ರಜೆಗಳಾಗಿದ್ದೀರಿ. ಭೂಲೋಕದಲ್ಲಿರುವ ಎಲ್ಲಾ ಜನಾಂಗಗಳಿಂದ ಆತನು ನಿಮ್ಮನ್ನು ಆರಿಸಿಕೊಂಡಿದ್ದಾನೆ. ನೀವು ಆತನ ಸ್ವಕೀಯ ಪ್ರಜೆಯಾಗಿದ್ದೀರಿ.
ಧರ್ಮೋಪದೇಶಕಾಂಡ 7 : 7 (ERVKN)
ದೇವರು ನಿಮ್ಮನ್ನೇ ಯಾಕೆ ಪ್ರೀತಿಸಿ ಆರಿಸಿಕೊಂಡನು? ನೀವು ದೊಡ್ಡ ಜನಾಂಗವಾಗಿರುವ ಕಾರಣದಿಂದಲ್ಲ, ನಿಜವಾಗಿಯೂ ನೀವು ಚಿಕ್ಕ ಜನಾಂಗವೇ.
ಧರ್ಮೋಪದೇಶಕಾಂಡ 7 : 8 (ERVKN)
ಆದರೆ ಯೆಹೋವನು ತನ್ನ ಪರಾಕ್ರಮವನ್ನು ತೋರಿಸಿ ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬಂದನು. ನಿಮ್ಮನ್ನು ದಾಸತ್ವದಿಂದ ಬಿಡುಗಡೆ ಮಾಡಿದನು; ಫರೋಹನ ಹಿಡಿತದಿಂದ ನಿಮ್ಮನ್ನು ಬಿಡಿಸಿದನು; ಯಾಕೆಂದರೆ ಆತನು ನಿಮ್ಮನ್ನು ಪ್ರೀತಿಸುತ್ತಾನೆ; ನಿಮ್ಮ ಪೂರ್ವಿಕರಿಗೆ ತಾನು ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದಾನೆ. [PE][PS]
ಧರ್ಮೋಪದೇಶಕಾಂಡ 7 : 9 (ERVKN)
“ಆದ್ದರಿಂದ ನಿಮ್ಮ ದೇವರಾದ ಯೆಹೋವನೊಬ್ಬನೇ ನಿಜವಾದ ದೇವರೆಂಬುದು ನಿಮಗೆ ತಿಳಿದಿರಲಿ. ನೀವು ಆತನ ಮೇಲೆ ಭರವಸವಿಡಬಹುದು. ಆತನು ತಾನು ಮಾಡಿದ ಒಡಂಬಡಿಕೆಯನ್ನು ನೆರವೇರಿಸುವಾತನಾಗಿದ್ದಾನೆ. ಆತನನ್ನು ಪ್ರೀತಿಸಿ ಆತನ ಕಟ್ಟಳೆಗಳಿಗೆ ವಿಧೇಯರಾಗುವವರನ್ನೆಲ್ಲಾ ಆತನು ಪ್ರೀತಿಸುತ್ತಾನೆ; ಅವರಿಗೆ ಕರುಣೆ ತೋರುತ್ತಾನೆ. ಈ ಪ್ರೀತಿ, ಕರುಣೆಗಳು ಸಾವಿರಾರು ತಲೆಮಾರುಗಳವರೆಗೂ ಮುಂದುವರಿಯುವವು.
ಧರ್ಮೋಪದೇಶಕಾಂಡ 7 : 10 (ERVKN)
ಆದರೆ ಆತನು ತನ್ನನ್ನು ದ್ವೇಷಿಸುವವರನ್ನು ಶಿಕ್ಷಿಸುತ್ತಾನೆ. ತನ್ನನ್ನು ದ್ವೇಷಿಸುವ ಜನರನ್ನು ಶಿಕ್ಷಿಸಲು ಆತನು ನಿಧಾನ ಮಾಡುವುದಿಲ್ಲ.
ಧರ್ಮೋಪದೇಶಕಾಂಡ 7 : 11 (ERVKN)
ಆದ್ದರಿಂದ ನಾನು ಈ ದಿನ ನಿಮಗೆ ಕೊಡುವ ಆಜ್ಞಾವಿಧಿನಿಯಮಗಳನ್ನು ನೀವು ಚೆನ್ನಾಗಿ ಮನದಟ್ಟು ಮಾಡಿಕೊಳ್ಳಬೇಕು. [PE][PS]
ಧರ್ಮೋಪದೇಶಕಾಂಡ 7 : 12 (ERVKN)
“ನೀವು ಈ ಕಟ್ಟಳೆಗಳಿಗೆ ಕಿವಿಗೊಡುವುದಾದರೆ ಮತ್ತು ಅವುಗಳಿಗೆ ಎಚ್ಚರಿಕೆಯಿಂದ ವಿಧೇಯರಾದರೆ, ನಿಮ್ಮ ದೇವರಾದ ಯೆಹೋವನು ನಿಮ್ಮ ಪೂರ್ವಿಕರೊಡನೆ ಮಾಡಿಕೊಂಡ ಪ್ರೀತಿಯ ಒಡಂಬಡಿಕೆಯನ್ನು ನೆರವೇರಿಸುವನು;
ಧರ್ಮೋಪದೇಶಕಾಂಡ 7 : 13 (ERVKN)
ಮತ್ತು ಆತನು ಆಶೀರ್ವದಿಸುವನು. ನಿಮ್ಮ ಜನಾಂಗವು ವೃದ್ಧಿಯಾಗುವಂತೆ ಮಾಡುವನು. ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಆಶೀರ್ವದಿಸುವನು. ನಿಮ್ಮ ಹೊಲಗಳಲ್ಲಿ ಸಮೃದ್ಧಿಯಾದ ಬೆಳೆಯು ಉಂಟಾಗುವಂತೆ ಆಶೀರ್ವದಿಸುವನು. ಆತನು ನಿಮಗೆ ಧಾನ್ಯ, ಹೊಸ ದ್ರಾಕ್ಷಾರಸ ಮತ್ತು ಎಣ್ಣೆಗಳನ್ನು ಕೊಡುವನು. ನಿಮ್ಮ ದನಕುರಿಗಳು ಮರಿಗಳನ್ನು ಈಯುವಂತೆ ಆಶೀರ್ವದಿಸುವನು. ನಿಮ್ಮ ಪೂರ್ವಿಕರಿಗೆ ವಾಗ್ದಾನ ಮಾಡಿದ ದೇಶದಲ್ಲಿ ನೀವು ನೆಲೆಸಿರುವಾಗ ನಿಮಗೆ ಈ ಆಶೀರ್ವಾದಗಳೆಲ್ಲಾ ಪ್ರಾಪ್ತವಾಗುವವು. [PE][PS]
ಧರ್ಮೋಪದೇಶಕಾಂಡ 7 : 14 (ERVKN)
“ಎಲ್ಲಾ ಜನರಿಗಿಂತ ನೀವು ಹೆಚ್ಚಾಗಿ ಆಶೀರ್ವದಿಸಲ್ಪಡುವಿರಿ. ಪ್ರತಿಯೊಂದು ಕುಟುಂಬದಲ್ಲಿ ಹೆಚ್ಚು ಮಕ್ಕಳಿರುವರು. ನಿಮ್ಮ ಹಸುಗಳು ಮರಿಗಳನ್ನು ಈಯುವವು.
ಧರ್ಮೋಪದೇಶಕಾಂಡ 7 : 15 (ERVKN)
ನಿಮ್ಮಿಂದ ಎಲ್ಲಾ ತರದ ಕಾಯಿಲೆಗಳನ್ನು ಯೆಹೋವನು ತೆಗೆದುಹಾಕುವನು. ಈಜಿಪ್ಟಿನಲ್ಲಿ ನಿಮ್ಮನ್ನು ಬಾಧಿಸುತ್ತಿದ್ದ ಭಯಂಕರ ಕಾಯಿಲೆಗಳು ನಿಮ್ಮನ್ನು ಬಾಧಿಸುವುದಿಲ್ಲ. ಆ ಕಾಯಿಲೆಗಳು ನಿಮ್ಮ ವೈರಿಗಳಿಗೆ ಉಂಟಾಗುವವು.
ಧರ್ಮೋಪದೇಶಕಾಂಡ 7 : 16 (ERVKN)
ಆ ದೇಶದಲ್ಲಿ ನೀವು ಯೆಹೋವನ ಸಹಾಯದಿಂದ ಸೋಲಿಸುವ ಜನರನ್ನೆಲ್ಲಾ ಕೊಂದುಬಿಡಬೇಕು. ಅವರಿಗೆ ಕನಿಕರ ತೋರಬಾರದು. ಅವರ ದೇವರುಗಳನ್ನು ಪೂಜಿಸಕೂಡದು! ಯಾಕೆಂದರೆ ಅವು ನಿಮಗೆ ಉರುಲಾಗಿ ನಿಮ್ಮ ಜೀವಿತವನ್ನು ಹಾಳುಮಾಡುತ್ತವೆ. [PS]
ಧರ್ಮೋಪದೇಶಕಾಂಡ 7 : 17 (ERVKN)
{ತನ್ನ ಜನರಿಗೆ ಸಹಾಯ ಮಾಡುವುದಾಗಿ ಯೆಹೋವನ ವಾಗ್ದಾನ} [PS] “ನಿಮ್ಮ ಮನಸ್ಸಿನಲ್ಲಿ, ‘ಈ ಜನಾಂಗಗಳು ನಮ್ಮ ಜನಾಂಗಗಳಿಗಿಂತ ದೊಡ್ಡದಾಗಿವೆ. ಇವರನ್ನು ಹೀಗೆ ಹೊರಡಿಸಲು ಸಾಧ್ಯವೇ ಎಂದು ಯಾಕೆ ಅಂದುಕೊಳ್ಳುತ್ತೀರಿ.’
ಧರ್ಮೋಪದೇಶಕಾಂಡ 7 : 18 (ERVKN)
ನೀವು ಅವರಿಗೆ ಭಯಪಡಬಾರದು. ನಿಮ್ಮ ದೇವರಾದ ಯೆಹೋವನು ಫರೋಹನಿಗೂ ಈಜಿಪ್ಟಿನ ಎಲ್ಲಾ ಜನರಿಗೂ ಮಾಡಿದ್ದನ್ನು ನೆನಪು ಮಾಡಿಕೊಳ್ಳಿರಿ.
ಧರ್ಮೋಪದೇಶಕಾಂಡ 7 : 19 (ERVKN)
ಆತನು ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ನಡೆಸಿದ್ದನ್ನು ನೀವು ನೋಡಿದಿರಿ. ಆತನು ನಿಮ್ಮನ್ನು ಈಜಿಪ್ಟಿನಿಂದ ಕರೆದುಕೊಂಡು ಬರಲು ತನ್ನ ಮಹಾಶಕ್ತಿಯನ್ನೂ ಬಲವನ್ನೂ ಬಳಸಿದ್ದನ್ನು ನೀವು ನೋಡಿದಿರಿ. ನೀವು ಭಯಪಡುವ ಎಲ್ಲಾ ಜನರ ಮೇಲೆ ದೇವರಾದ ಯೆಹೋವನು ಅದೇ ಶಕ್ತಿಯನ್ನು ಬಳಸುವನು. [PE][PS]
ಧರ್ಮೋಪದೇಶಕಾಂಡ 7 : 20 (ERVKN)
“ನಿಮ್ಮಿಂದ ತಪ್ಪಿಸಿಕೊಂಡು ಅಡಗಿಕೊಳ್ಳುವ ಜನರನ್ನು ಶಿಕ್ಷಿಸಲು ದೇವರು ಕಡಜದ ಹುಳಗಳನ್ನು ಅವರ ಮಧ್ಯಕ್ಕೆ ಕಳುಹಿಸುವನು ಮತ್ತು ಅವರನ್ನೆಲ್ಲಾ ನಾಶಮಾಡುವನು.
ಧರ್ಮೋಪದೇಶಕಾಂಡ 7 : 21 (ERVKN)
ಅವರಿಗೆ ನೀವು ಭಯಪಡಬೇಡಿರಿ; ಯಾಕೆಂದರೆ ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿದ್ದಾನೆ. ಆತನು ಭಯಂಕರನೂ ಮಹಾ ದೇವರೂ ಆಗಿದ್ದಾನೆ.
ಧರ್ಮೋಪದೇಶಕಾಂಡ 7 : 22 (ERVKN)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸ್ವಲ್ಪ ಸ್ವಲ್ಪವಾಗಿಯೇ ಅಲ್ಲಿಂದ ತೆಗೆದುಬಿಡುವನು. ನೀವು ಒಂದೇ ಸಮಯಕ್ಕೆ ಎಲ್ಲರನ್ನು ನಾಶಮಾಡಬಾರದು. ಹಾಗೆ ಮಾಡಿದ್ದಲ್ಲಿ ದೇಶದಲ್ಲೆಲ್ಲಾ ಕಾಡುಪ್ರಾಣಿಗಳು ತುಂಬಿಹೋಗುತ್ತವೆ.
ಧರ್ಮೋಪದೇಶಕಾಂಡ 7 : 23 (ERVKN)
ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳವರನ್ನು ಸೋಲಿಸಲು ನಿಮಗೆ ಅವಕಾಶ ಮಾಡಿಕೊಡುವನು. ಯುದ್ಧಮಾಡುವಾಗ ಅವರ ಮಧ್ಯದಲ್ಲಿ ಗಲಿಬಿಲಿ ಹುಟ್ಟಿಸಿ ಅವರು ನಾಶವಾಗುವಂತೆ ಮಾಡುವನು.
ಧರ್ಮೋಪದೇಶಕಾಂಡ 7 : 24 (ERVKN)
ಅವರ ರಾಜರನ್ನು ನೀವು ಸೋಲಿಸುವಂತೆ ಮಾಡುವನು. ನೀವು ಅವರನ್ನು ಕೊಂದು ಅವರ ಹೆಸರು ಉಳಿಯದಂತೆ ಮಾಡುವಿರಿ. ನಿಮ್ಮನ್ನು ಯಾರೂ ತಡೆಯಲಾರರು. ನೀವು ಪ್ರತಿಯೊಬ್ಬರನ್ನು ನಾಶಮಾಡಿಬಿಡುವಿರಿ. [PE][PS]
ಧರ್ಮೋಪದೇಶಕಾಂಡ 7 : 25 (ERVKN)
“ಅವರ ದೇವರುಗಳ ಪ್ರತಿಮೆಗಳನ್ನು ಬೆಂಕಿಯಲ್ಲಿ ಸುಟ್ಟುಬಿಡಬೇಕು. ಅವರ ವಿಗ್ರಹಗಳಲ್ಲಿರುವ ಬೆಳ್ಳಿಬಂಗಾರಗಳನ್ನು ನೀವು ತೆಗೆದುಕೊಳ್ಳಬೇಡಿ. ನೀವು ತೆಗೆದುಕೊಂಡರೆ ಅವು ನಿಮಗೆ ಉರುಲಾಗಿ ನಿಮ್ಮನ್ನೇ ನಾಶಮಾಡುತ್ತವೆ. ಯಾಕೆಂದರೆ ನಿಮ್ಮ ದೇವರಾದ ಯೆಹೋವನು ವಿಗ್ರಹಗಳನ್ನು ದ್ವೇಷಿಸುತ್ತಾನೆ.
ಧರ್ಮೋಪದೇಶಕಾಂಡ 7 : 26 (ERVKN)
ಅಂಥ ಅಸಹ್ಯ ವಿಗ್ರಹಗಳನ್ನು ನಿಮ್ಮ ಮನೆಯೊಳಗೆ ತರಲೂಬಾರದು, ಅವುಗಳನ್ನು ಬಯಸಲೂಬಾರದು; ನೀವು ಅವುಗಳನ್ನು ದ್ವೇಷಿಸಬೇಕು ಮತ್ತು ನಾಶಮಾಡಬೇಕು. ಇಲ್ಲವಾದರೆ ನೀವೂ ಅವುಗಳಂತೆಯೇ ನಾಶನಕ್ಕೆ ಗುರಿಯಾಗುವಿರಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26

BG:

Opacity:

Color:


Size:


Font: