ಪ್ರಸಂಗಿ 1 : 1 (ERVKN)
ದಾವೀದನ ಮಗನೂ ಜೆರುಸಲೇಮಿನಲ್ಲಿ ಆಳುತ್ತಿದ್ದ ರಾಜನೂ ಆಗಿದ್ದ ಪ್ರಸಂಗಿಯ ಮಾತುಗಳು. ಪ್ರಸಂಗಿಯು ಹೇಳುವುದೇನೆಂದರೆ,
ಪ್ರಸಂಗಿ 1 : 2 (ERVKN)
ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!
ಪ್ರಸಂಗಿ 1 : 3 (ERVKN)
ಈ ಲೋಕದಲ್ಲಿ ಮನುಷ್ಯರು ಪಡುವ ಪ್ರಯಾಸದಿಂದ ಅವರಿಗೇನು ಲಾಭ?
ಪ್ರಸಂಗಿ 1 : 4 (ERVKN)
ಪ್ರಕೃತಿಯಲ್ಲಿ ಬದಲೇನೂ ಇಲ್ಲ ಒಂದು ತಲೆಮಾರು ಹೋಗಿ ಮತ್ತೊಂದು ತಲೆಮಾರು ಬರುವುದು. ಆದರೆ ಭೂಮಿ ಎಂದೆಂದಿಗೂ ಮುಂದುವರಿಯುವುದು.
ಪ್ರಸಂಗಿ 1 : 5 (ERVKN)
ಸೂರ್ಯನು ಏರುವನು ಮತ್ತು ಇಳಿಯುವನು; ಬಳಿಕ ಅದೇ ಸ್ಥಳದಲ್ಲಿ ಮತ್ತೆ ಏರಲು ಅವಸರಪಡುವನು.
ಪ್ರಸಂಗಿ 1 : 6 (ERVKN)
ಗಾಳಿಯು ದಕ್ಷಿಣಕ್ಕೆ ಬೀಸುವುದು; ನಂತರ ಉತ್ತರಕ್ಕೆ ತಿರುಗಿಕೊಳ್ಳುವುದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವುದು.
ಪ್ರಸಂಗಿ 1 : 7 (ERVKN)
ನದಿಗಳು ಎಲ್ಲಿಗೆ ಹರಿದುಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು. ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುತ್ತಲೇ ಇರುತ್ತವೆ; ಆದರೂ ಸಮುದ್ರವು ತುಂಬುವುದಿಲ್ಲ.
ಪ್ರಸಂಗಿ 1 : 8 (ERVKN)
ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.
ಪ್ರಸಂಗಿ 1 : 9 (ERVKN)
ಲೋಕದಲ್ಲಿ ಹೊಸದೇನೂ ಇಲ್ಲ ಇದ್ದದ್ದೇ ಇರುವುದು; ನಡೆದದ್ದೇ ನಡೆಯುವುದು. ಲೋಕದಲ್ಲಿ ಹೊಸದೇನೂ ಇಲ್ಲ.
ಪ್ರಸಂಗಿ 1 : 10 (ERVKN)
“ಇಗೋ, ಇದು ಹೊಸದು!” ಎಂದು ಒಬ್ಬನು ಹೇಳಬಹುದು. ಆದರೆ ಅದು ಸಹ ಮೊದಲಿಂದ ಇಲ್ಲಿ ಇದ್ದದ್ದೇ. ನಮಗಿಂತ ಮೊದಲೇ ಅದು ಇಲ್ಲಿತ್ತು.
ಪ್ರಸಂಗಿ 1 : 11 (ERVKN)
ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಜ್ಞಾನದಿಂದ ಸಂತೋಷವಾಗುವುದೇ?
ಪ್ರಸಂಗಿ 1 : 12 (ERVKN)
ಪ್ರಸಂಗಿಯಾದ ನಾನು ಜೆರುಸಲೇಮಿನಲ್ಲಿ ಇಸ್ರೇಲರಿಗೆ ರಾಜನಾಗಿದ್ದೆನು.
ಪ್ರಸಂಗಿ 1 : 13 (ERVKN)
ಈ ಜೀವಿತದ ಎಲ್ಲಾ ವಿಷಯಗಳನ್ನು ಜ್ಞಾನದಿಂದ ವಿಮರ್ಶಿಸಿ ಕಲಿತುಕೊಳ್ಳಲು ನಿರ್ಧರಿಸಿದೆನು. ದೇವರು ಮನುಷ್ಯರಿಗೆ ಕೊಟ್ಟಿರುವ ಕೆಲಸವೆಲ್ಲ ಬಹು ಪ್ರಯಾಸವೇ.
ಪ್ರಸಂಗಿ 1 : 14 (ERVKN)
ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ.
ಪ್ರಸಂಗಿ 1 : 15 (ERVKN)
ವಕ್ರವಾದದ್ದನ್ನು ನೆಟ್ಟಗೆ ಮಾಡಲು ಸಾಧ್ಯವಿಲ್ಲ. ಇಲ್ಲದ್ದನ್ನು ಲೆಕ್ಕಿಸುವುದಕ್ಕೂ ಸಾಧ್ಯವಿಲ್ಲ.
ಪ್ರಸಂಗಿ 1 : 16 (ERVKN)
ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಏಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.
ಪ್ರಸಂಗಿ 1 : 17 (ERVKN)
ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.
ಪ್ರಸಂಗಿ 1 : 18 (ERVKN)
ಬಹು ಜ್ಞಾನದಿಂದ ಬಹು ಸಂಕಟ; ಹೆಚ್ಚು ತಿಳುವಳಿಕೆಯಿಂದ ಹೆಚ್ಚು ದುಃಖ.

1 2 3 4 5 6 7 8 9 10 11 12 13 14 15 16 17 18