ಪ್ರಸಂಗಿ 10 : 1 (ERVKN)
ಸತ್ತ ನೊಣಗಳಿಂದ ಉತ್ತಮವಾದ ಪರಿಮಳತೈಲವು ದುರ್ವಾಸನೆ ಬೀರುವುದು. ಅದೇರೀತಿಯಲ್ಲಿ ಚಿಕ್ಕ ಮೂಢತನವು ಬಹುಜ್ಞಾನವನ್ನೂ ಸನ್ಮಾನವನ್ನೂ ಹಾಳುಮಾಡಬಲ್ಲದು.
ಪ್ರಸಂಗಿ 10 : 2 (ERVKN)
ಜ್ಞಾನಿಯ ಆಲೋಚನೆಗಳು ಅವನನ್ನು ಸರಿಯಾದ ದಾರಿಯಲ್ಲಿ ನಡೆಸುತ್ತವೆ. ಆದರೆ ಮೂಢನ ಆಲೋಚನೆಗಳು ಅವನನ್ನು ತಪ್ಪಾದ ದಾರಿಯಲ್ಲಿ ನಡೆಸುತ್ತವೆ.
ಪ್ರಸಂಗಿ 10 : 3 (ERVKN)
ಮೂಢನು ತನ್ನ ಮೂಢತನವನ್ನು ದಾರಿಯಲ್ಲಿ ನಡೆದುಹೋಗುತ್ತಿರುವಾಗಲೂ ತೋರಿಸುವನು. ಅವನು ತನ್ನ ವಿವೇಕಶೂನ್ಯವನ್ನು ಎಲ್ಲರಿಗೂ ಪ್ರಕಟಪಡಿಸುವನು.
ಪ್ರಸಂಗಿ 10 : 4 (ERVKN)
ನಿನ್ನ ಯಜಮಾನನು ನಿನ್ನ ಮೇಲೆ ಕೋಪಗೊಂಡ ಮಾತ್ರಕ್ಕೆ ನಿನ್ನ ಉದ್ಯೋಗವನ್ನು ಬಿಡಬೇಡ. ನೀನು ತಾಳ್ಮೆಯಿಂದ ಸಹಾಯಕನಾಗಿದ್ದರೆ ದೊಡ್ಡ ತಪ್ಪುಗಳನ್ನು ಸಹ ನೀನು ಸರಿಪಡಿಸಲು ಸಾಧ್ಯ.
ಪ್ರಸಂಗಿ 10 : 5 (ERVKN)
ಲೋಕದಲ್ಲಿ ನಾನು ಮತ್ತೊಂದು ಅನ್ಯಾಯವನ್ನು ನೋಡಿದ್ದೇನೆ. ಅದು ಅಧಿಪತಿಗಳು ಮಾಡುವ ತಪ್ಪಿನಂತೆ ಇದೆ.
ಪ್ರಸಂಗಿ 10 : 6 (ERVKN)
ಐಶ್ವರ್ಯವಂತರಿಗೆ ಹೀನವಾದ ಸ್ಥಾನ ದೊರೆಯುವುದು; ಮೂಢರಿಗೆ ಮುಖ್ಯವಾದ ಪದವಿಗಳು ದೊರೆಯುವವು.
ಪ್ರಸಂಗಿ 10 : 7 (ERVKN)
ಸೇವಕರಾಗಿರಬೇಕಿದ್ದವರು ಕುದುರೆಸವಾರಿ ಮಾಡುವುದನ್ನೂ ಅಧಿಪತಿಗಳಾಗಬೇಕಿದ್ದವರು ಸೇವಕರಂತೆ ನಡೆದುಹೋಗುವುದನ್ನೂ ನಾನು ನೋಡಿದ್ದೇನೆ.
ಪ್ರಸಂಗಿ 10 : 8 (ERVKN)
ಪ್ರತಿಯೊಂದು ಉದ್ಯೋಗವೂ ಅಪಾಯಕರ ಗುಂಡಿತೋಡುವವನು ತಾನೇ ಅದರಲ್ಲಿ ಬೀಳಬಹುದು. ಗೋಡೆಯನ್ನು ಹೊಡೆದು ಉರುಳಿಸುವವನನ್ನು ಹಾವು ಕಚ್ಚುವುದು.
ಪ್ರಸಂಗಿ 10 : 9 (ERVKN)
ಬಂಡೆಗಳನ್ನು ಉರುಳಿಸುವವನಿಗೆ ನೋವಾಗುವುದು; ಮರಗಳನ್ನು ಕಡಿಯುವವನಿಗೆ ಕೇಡಾಗುವುದು.
ಪ್ರಸಂಗಿ 10 : 10 (ERVKN)
ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.
ಪ್ರಸಂಗಿ 10 : 11 (ERVKN)
ಹಾವುಗಳನ್ನು ಹಿಡಿಯಬಲ್ಲವನು ಇಲ್ಲದಿರುವಾಗ ಹಾವು ಬೇರೊಬ್ಬನನ್ನು ಕಚ್ಚಿದರೆ ಹಾವು ಹಿಡಿಯುವವನಿಂದ ಪ್ರಯೋಜನವೇನು? ಜ್ಞಾನವು ಸಹ ಹಾಗೆಯೇ.
ಪ್ರಸಂಗಿ 10 : 12 (ERVKN)
ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.
ಪ್ರಸಂಗಿ 10 : 13 (ERVKN)
ಮೂಢನ ಮಾತು ಮೂರ್ಖತನದೊಡನೆ ಆರಂಭಗೊಂಡು ದುಷ್ಟಕರವಾದ ಹುಚ್ಚುತನದೊಡನೆ ಕೊನೆಗೊಳ್ಳುವುದು.
ಪ್ರಸಂಗಿ 10 : 14 (ERVKN)
ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೊ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.
ಪ್ರಸಂಗಿ 10 : 15 (ERVKN)
ಮೂಢನು ತನ್ನ ಮನೆದಾರಿಯನ್ನು ತಿಳಿದುಕೊಳ್ಳುವಷ್ಟು ಜಾಣನಲ್ಲ, ಆದ್ದರಿಂದ ಅವನು ತನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಕೆಲಸ ಮಾಡಬೇಕು.
ಪ್ರಸಂಗಿ 10 : 16 (ERVKN)
ದುಡಿಮೆಯ ಮೌಲ್ಯ ರಾಜನು ಮಗುವಿನಂತೆ ಇದ್ದರೆ ದೇಶವು ಹಾಳಾಗುವುದು. ಅಧಿಪತಿಗಳು ಮುಂಜಾನೆಯಲ್ಲಿಯೇ ಔತಣ ಮಾಡಿದರೆ ದೇಶವು ಹಾಳಾಗುವುದು.
ಪ್ರಸಂಗಿ 10 : 17 (ERVKN)
ಆದರೆ ರಾಜನು ಒಳ್ಳೆಯ ಕುಟುಂಬದಿಂದ ಬಂದವನಾಗಿದ್ದರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು; ಅಧಿಪತಿಗಳು ತಿನ್ನುವುದನ್ನೂ ಕುಡಿಯುವುದನ್ನೂ ಹತೋಟಿಯಲ್ಲಿಟ್ಟುಕೊಂಡರೆ ದೇಶಕ್ಕೆ ತುಂಬ ಒಳ್ಳೆಯದಾಗುವುದು. ಅಧಿಪತಿಗಳು ತಿನ್ನುವುದೂ ಕುಡಿಯುವುದೂ ಬಲಹೊಂದುವುದಕ್ಕಾಗಿಯೇ ಹೊರತು ಮತ್ತರಾಗುವುದಕ್ಕಾಗಿಯಲ್ಲ.
ಪ್ರಸಂಗಿ 10 : 18 (ERVKN)
ಒಬ್ಬನು ಕೆಲಸಮಾಡಲಾರದಷ್ಟು ತುಂಬ ಸೋಮಾರಿಯಾಗಿದ್ದರೆ, ಅವನ ಮನೆಯು ಸೋರಲಾರಂಭಿಸುವುದು; ಅದರ ಮೇಲ್ಛಾವಣಿಗೆಯು ಬೀಳತೊಡಗುವುದು.
ಪ್ರಸಂಗಿ 10 : 19 (ERVKN)
ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.
ಪ್ರಸಂಗಿ 10 : 20 (ERVKN)
ಹರಟೆ ಮಾತು ರಾಜನನ್ನು ಮನಸ್ಸಿನಲ್ಲಿಯೂ ದೂಷಿಸಬೇಡ; ನಿನ್ನ ಮನೆಯಲ್ಲಿ ಒಬ್ಬಂಟಿಗನಾಗಿರುವಾಗಲೂ ಐಶ್ವರ್ಯವಂತರನ್ನು ದೂಷಿಸಬೇಡ. ಯಾಕೆಂದರೆ ಚಿಕ್ಕ ಪಕ್ಷಿಯೊಂದು ಹಾರಿಹೋಗಿ, ನೀನು ಹೇಳಿದ ಪ್ರತಿಯೊಂದನ್ನು ಅವರಿಗೆ ಹೇಳಬಹುದು.
❮
❯
1
2
3
4
5
6
7
8
9
10
11
12
13
14
15
16
17
18
19
20