ಪ್ರಸಂಗಿ 8 : 1 (ERVKN)
ಜ್ಞಾನ ಮತ್ತು ಶಕ್ತಿ ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.
ಪ್ರಸಂಗಿ 8 : 2 (ERVKN)
ನೀವು ದೇವರ ಮೇಲೆ ಆಣೆಯಿಟ್ಟಿರುವುದರಿಂದ ರಾಜನ ಆಜ್ಞೆಗೆ ವಿಧೇಯರಾಗಿರಬೇಕು.
ಪ್ರಸಂಗಿ 8 : 3 (ERVKN)
ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ.
ಪ್ರಸಂಗಿ 8 : 4 (ERVKN)
ಆಜ್ಞೆಗಳನ್ನು ಕೊಡಲು ರಾಜನಿಗೆ ಅಧಿಕಾರವಿದೆ. ಅವನನ್ನು ಬಲವಂತ ಮಾಡಲು ಯಾರಿಗೂ ಸಾಧ್ಯವಿಲ್ಲ.
ಪ್ರಸಂಗಿ 8 : 5 (ERVKN)
ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ.
ಪ್ರಸಂಗಿ 8 : 6 (ERVKN)
ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವೂ ಸೂಕ್ತ ಮಾರ್ಗವೂ ಮನುಷ್ಯನಿಗೆ ಇವೆ. ಮನುಷ್ಯನು ತನ್ನ ಅನೇಕ ತೊಂದರೆಗಳಲ್ಲಿಯೂ ಅವುಗಳಿಗೆ ತಕ್ಕಂತೆ ನಿರ್ಧಾರವನ್ನು ಕೈಕೊಳ್ಳಬೇಕು.
ಪ್ರಸಂಗಿ 8 : 7 (ERVKN)
ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.
ಪ್ರಸಂಗಿ 8 : 8 (ERVKN)
ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟು ಹೋಗುವುದಿಲ್ಲ.
ಪ್ರಸಂಗಿ 8 : 9 (ERVKN)
ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ.
ಪ್ರಸಂಗಿ 8 : 10 (ERVKN)
ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ. ನ್ಯಾಯ, ಪ್ರತಿಫಲ ಮತ್ತು ದಂಡನೆ
ಪ್ರಸಂಗಿ 8 : 11 (ERVKN)
ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.
ಪ್ರಸಂಗಿ 8 : 12 (ERVKN)
ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.
ಪ್ರಸಂಗಿ 8 : 13 (ERVKN)
ದುಷ್ಟರಿಗೆ ದೇವರಲ್ಲಿ ಭಯಭಕ್ತಿಯಿಲ್ಲದಿರುವುದರಿಂದ ಅವರಿಗೆ ಒಳ್ಳೆಯದಾಗುವುದಿಲ್ಲ; ಅವರ ಜೀವಿತವು ಸಾಯಂಕಾಲದ ನೆರಳಿನಂತೆ ಇಲ್ಲವಾಗುವುದು.
ಪ್ರಸಂಗಿ 8 : 14 (ERVKN)
ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.
ಪ್ರಸಂಗಿ 8 : 15 (ERVKN)
ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.
ಪ್ರಸಂಗಿ 8 : 16 (ERVKN)
ದೇವರ ಕಾರ್ಯ ಗ್ರಹಿಕೆಗೆ ಮೀರಿದೆ ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.
ಪ್ರಸಂಗಿ 8 : 17 (ERVKN)
ಇದಲ್ಲದೆ ದೇವರ ಅನೇಕ ಕಾರ್ಯಗಳನ್ನು ಸಹ ನಾನು ನೋಡಿದ್ದೇನೆ. ಭೂಮಿಯ ಮೇಲೆ ದೇವರು ಮಾಡುವ ಕಾರ್ಯಗಳನ್ನೆಲ್ಲಾ ಜನರು ಅರ್ಥಮಾಡಿಕೊಳ್ಳಲಾರರು. ಒಬ್ಬನು ಅರ್ಥಮಾಡಿಕೊಳ್ಳಲು ಎಷ್ಟೇ ಪ್ರಯತ್ನಿಸಿದರೂ ಅವನು ಅರ್ಥಮಾಡಿಕೊಳ್ಳಲಾರನು. ದೇವರ ಕಾರ್ಯವನ್ನು ಅರ್ಥಮಾಡಿಕೊಳ್ಳಬಲ್ಲೆನೆಂದು ಜ್ಞಾನಿಯು ಹೇಳಿಕೊಂಡರೂ ಅದು ಸತ್ಯವಲ್ಲ. ಅವುಗಳನ್ನೆಲ್ಲ ಯಾರೂ ಅರ್ಥಮಾಡಿಕೊಳ್ಳಲಾರರು.
❮
❯
1
2
3
4
5
6
7
8
9
10
11
12
13
14
15
16
17