ಎಫೆಸದವರಿಗೆ 3 : 1 (ERVKN)
ಅನ್ಯಜನರಿಗಾಗಿ ಪೌಲನ ಸೇವೆ ನಾನು ಕ್ರಿಸ್ತಯೇಸುವಿನ ಸೆರೆಯಾಳು. ಯೆಹೂದ್ಯರಲ್ಲದ ನಿಮಗೋಸ್ಕರ ನಾನು ಸೆರೆಯಾಳಾಗಿದ್ದೇನೆ.
ಎಫೆಸದವರಿಗೆ 3 : 2 (ERVKN)
ದೇವರು ತನ್ನ ಕೃಪೆಯ ಮೂಲಕ ನನಗೆ ಈ ಕೆಲಸವನ್ನು ಕೊಟ್ಟನೆಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನಿಮಗೆ ಸಹಾಯ ಮಾಡುವುದಕ್ಕಾಗಿ ದೇವರು ಈ ಕೆಲಸವನ್ನು ನನಗೆ ಕೊಟ್ಟನು.
ಎಫೆಸದವರಿಗೆ 3 : 3 (ERVKN)
ದೇವರು ತನ್ನ ರಹಸ್ಯವಾದ ಯೋಜನೆಯನ್ನು ನನಗೆ ತಿಳಿಸಿದನು ಮತ್ತು ತೋರಿಸಿದನು. ಇದರ ಬಗ್ಗೆ ನಾನು ಆಗಲೇ ನಿಮಗೆ ಸ್ವಲ್ಪ ಬರೆದಿದ್ದೇನೆ.
ಎಫೆಸದವರಿಗೆ 3 : 4 (ERVKN)
ನಾನು ಬರೆದಿರುವ ಈ ಸಂಗತಿಗಳನ್ನು ನೀವು ಓದಿದರೆ ಕ್ರಿಸ್ತನ ರಹಸ್ಯವಾದ ಸತ್ಯವನ್ನು ನಾನು ನಿಜವಾಗಿಯೂ ಅರ್ಥಮಾಡಿಕೊಂಡಿದ್ದೇನೆ ಎಂಬುದು ನಿಮಗೇ ತಿಳಿಯುತ್ತದೆ.
ಎಫೆಸದವರಿಗೆ 3 : 5 (ERVKN)
ಹಿಂದಿನ ಕಾಲಗಳಲ್ಲಿದ್ದ ಜನರಿಗೆ ಆ ರಹಸ್ಯಸತ್ಯವನ್ನು ಆತನು ತಿಳಿಸಲಿಲ್ಲ. ಈಗಲಾದರೊ ದೇವರು ತನ್ನ ಆತ್ಮನ ಮೂಲಕವಾಗಿ ಆ ರಹಸ್ಯಸತ್ಯವನ್ನು ತನ್ನ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ತೋರಿಸಿದ್ದಾನೆ.
ಎಫೆಸದವರಿಗೆ 3 : 6 (ERVKN)
ಇದು ಆ ರಹಸ್ಯಸತ್ಯ: ಯೆಹೂದ್ಯರಲ್ಲದವರು ಸುವಾರ್ತೆಯ ಮೂಲಕ ಕ್ರಿಸ್ತಯೇಸುವಿನಲ್ಲಿ ಇರುವವರಾಗಿ ಯೆಹೂದ್ಯರೊಂದಿಗೆ ಬಾಧ್ಯರೂ ಒಂದೇ ದೇಹಕ್ಕೆ ಸೇರಿದವರೂ ಅಬ್ರಹಾಮನಿಗುಂಟಾದ ವಾಗ್ದಾನದಲ್ಲಿ ಪಾಲುಗಾರರೂ ಆಗಿದ್ದಾರೆ.
ಎಫೆಸದವರಿಗೆ 3 : 7 (ERVKN)
ದೇವರು ನೀಡಿದ ವಿಶೇಷವಾದ ಕೃಪಾವರದಿಂದ ನಾನು ಸುವಾರ್ತೆಯನ್ನು ತಿಳಿಸಲು ಸೇವಕನಾದೆನು. ದೇವರು ತನ್ನ ಶಕ್ತಿಯನ್ನು ಪ್ರಯೋಗಿಸಿ ನನಗೆ ಆ ಕೃಪಾವರವನ್ನು ಕೊಟ್ಟನು.
ಎಫೆಸದವರಿಗೆ 3 : 8 (ERVKN)
ದೇವಜನರಲ್ಲಿ ನಾನೇ ಅತ್ಯಲ್ಪನು. ಕ್ರಿಸ್ತನ ಐಶ್ವರ್ಯವನ್ನು ಕುರಿತಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂದು ದೇವರು ನನಗೆ ಈ ಕೃಪಾವರವನ್ನು ಕೊಟ್ಟನು. ಆ ಐಶ್ವರ್ಯವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ.
ಎಫೆಸದವರಿಗೆ 3 : 9 (ERVKN)
ರಹಸ್ಯವಾಗಿದ್ದ ತನ್ನ ಯೋಜನೆಯನ್ನು ಜನರೆಲ್ಲರಿಗೆ ತಿಳಿಸಬೇಕೆಂಬ ಕೆಲಸವನ್ನು ದೇವರು ನನಗೆ ಕೊಟ್ಟನು. ಆದಿಯಿಂದಲೂ ಅದು ದೇವರಲ್ಲಿ ಮರೆಯಾಗಿತ್ತು. ಪ್ರತಿಯೊಂದನ್ನೂ ಸೃಷ್ಟಿಸಿದಾತನು ದೇವರೇ.
ಎಫೆಸದವರಿಗೆ 3 : 10 (ERVKN)
ತನ್ನ ನಾನಾ ವಿಧವಾದ ಜ್ಞಾನವು ಆಕಾಶಮಂಡಲದಲ್ಲಿರುವ ಎಲ್ಲಾ ಅಧಿಪತಿಗಳಿಗೂ ಅಧಿಕಾರಿಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂಬುದೇ ದೇವರ ಉದ್ದೇಶವಾಗಿತ್ತು.
ಎಫೆಸದವರಿಗೆ 3 : 11 (ERVKN)
ಅನಾದಿಕಾಲದಿಂದಲೂ ಇದೇ ದೇವರ ಯೋಜನೆಯಾಗಿತ್ತು. ದೇವರು ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ತನ್ನ ಯೋಜನೆಗನುಸಾರವಾಗಿ ಮಾಡಿದನು.
ಎಫೆಸದವರಿಗೆ 3 : 12 (ERVKN)
ನಾವು ಕ್ರಿಸ್ತನಲ್ಲಿರುವ ನಂಬಿಕೆಯ ಮೂಲಕ ದೇವರ ಬಳಿಗೆ ಸ್ವತಂತ್ರದಿಂದ ಮತ್ತು ನಿರ್ಭಯದಿಂದ ಹೋಗಲು ಸಾಧ್ಯವಾಯಿತು.
ಎಫೆಸದವರಿಗೆ 3 : 13 (ERVKN)
ಹೀಗಿರಲಾಗಿ ನಾನು ನಿಮಗೋಸ್ಕರ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿ ನಿರಾಶರಾಗಿ ಧೈರ್ಯಗೆಡಬೇಡಿ. ನನ್ನ ಕಷ್ಟಗಳು ನಿಮಗೆ ಘನತೆಯನ್ನು ಉಂಟುಮಾಡುತ್ತವೆ.
ಎಫೆಸದವರಿಗೆ 3 : 14 (ERVKN)
ಕ್ರಿಸ್ತನ ಪ್ರೀತಿ ಆದ್ದರಿಂದ ತಂದೆಯ ಮುಂದೆ ಮೊಣಕಾಲೂರಿ ಪ್ರಾರ್ಥಿಸುತ್ತೇನೆ.
ಎಫೆಸದವರಿಗೆ 3 : 15 (ERVKN)
ಭೂಪರಲೋಕಗಳಲ್ಲಿರುವ ಪ್ರತಿಯೊಂದು ಕುಟುಂಬವು ಆತನಿಂದ ತನ್ನ ನಿಜ ಹೆಸರನ್ನು ಪಡೆದುಕೊಳ್ಳುತ್ತದೆ.
ಎಫೆಸದವರಿಗೆ 3 : 16 (ERVKN)
ನೀವು ನಿಮ್ಮ ಆತ್ಮಗಳಲ್ಲಿ ಬಲವಾಗಿರಲು ಅಗತ್ಯವಾದ ಶಕ್ತಿಯನ್ನು ತನ್ನ ಮಹಿಮಾತಿಶಯದ ಪ್ರಕಾರ ಕೊಡಬೇಕೆಂದು ತಂದೆಯನ್ನು ಕೇಳಿಕೊಳ್ಳುತ್ತೇನೆ. ಆತನು ತನ್ನ ಆತ್ಮನ ಮೂಲಕವಾಗಿ ನಿಮಗೆ ಆ ಶಕ್ತಿಯನ್ನು ಕೊಡುತ್ತಾನೆ.
ಎಫೆಸದವರಿಗೆ 3 : 17 (ERVKN)
ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.
ಎಫೆಸದವರಿಗೆ 3 : 18 (ERVKN)
ನೀವು ಮತ್ತು ದೇವರ ಪರಿಶುದ್ಧ ಜನರೆಲ್ಲರೂ ಕ್ರಿಸ್ತನ ಪ್ರೀತಿಯ ಮಹತ್ವವನ್ನು ಅರ್ಥಮಾಡಿಕೊಳ್ಳಲು ಬೇಕಾದ ಶಕ್ತಿಯನ್ನು ಹೊಂದಿದವರಾಗಿರಬೇಕೆಂದು ಪ್ರಾರ್ಥಿಸುತ್ತೇನೆ. ಕ್ರಿಸ್ತನ ಪ್ರೀತಿಯ ಉದ್ದಗಲಗಳನ್ನು ಮತ್ತು ಆಳ ಎತ್ತರಗಳನ್ನು ನೀವು ಅರ್ಥಮಾಡಿಕೊಳ್ಳಲೆಂದು ಪ್ರಾರ್ಥಿಸುತ್ತೇನೆ.
ಎಫೆಸದವರಿಗೆ 3 : 19 (ERVKN)
ಕ್ರಿಸ್ತನ ಪ್ರೀತಿಯನ್ನು ಮನುಷ್ಯನು ಗ್ರಹಿಸಿಕೊಳ್ಳಲು ಸಾಧ್ಯವಿಲ್ಲ. ಆದರೆ ಆ ಪ್ರೀತಿಯನ್ನು ನೀವು ತಿಳಿದುಕೊಳ್ಳಶಕ್ತರಾಗಲೆಂದು ಪ್ರಾರ್ಥಿಸುತ್ತೇನೆ. ಆಗ ನೀವು ದೇವರ ಸಂಪೂರ್ಣತೆಯಿಂದ ತುಂಬಿದವರಾಗಲು ಸಾಧ್ಯವಾಗುತ್ತದೆ.
ಎಫೆಸದವರಿಗೆ 3 : 20 (ERVKN)
ನಮ್ಮಲ್ಲಿ ಕಾರ್ಯಮಾಡುತ್ತಿರುವ ತನ್ನ ಶಕ್ತಿಯಿಂದ ನಾವು ಕೇಳುವುದಕ್ಕಿಂತಲೂ ಯೋಚಿಸುವುದಕ್ಕಿಂತಲೂ ಎಷ್ಟೋ ಹೆಚ್ಚೆಚ್ಚಾಗಿ ದೇವರು ಮಾಡಬಲ್ಲನು.
ಎಫೆಸದವರಿಗೆ 3 : 21 (ERVKN)
ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.
❮
❯
1
2
3
4
5
6
7
8
9
10
11
12
13
14
15
16
17
18
19
20
21