ವಿಮೋಚನಕಾಂಡ 1 : 1 (ERVKN)
ಈಜಿಪ್ಟಿನಲ್ಲಿ ಯಾಕೋಬನ ಕುಟುಂಬ ಯಾಕೋಬನು (ಇಸ್ರೇಲನು) ತನ್ನ ಗಂಡುಮಕ್ಕಳೊಂದಿಗೆ ಈಜಿಪ್ಟಿಗೆ ಪ್ರಯಾಣ ಮಾಡಿದನು; ತಮ್ಮ ಕುಟುಂಬಗಳೊಡನೆ ಹೋದ ಅವನ ಗಂಡುಮಕ್ಕಳು ಯಾರೆಂದರೆ:
ವಿಮೋಚನಕಾಂಡ 1 : 2 (ERVKN)
ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
ವಿಮೋಚನಕಾಂಡ 1 : 3 (ERVKN)
ಇಸ್ಸಾಕಾರ್, ಜೆಬುಲೂನ್, ಬೆನ್ಯಾಮೀನ್,
ವಿಮೋಚನಕಾಂಡ 1 : 4 (ERVKN)
ದಾನ್, ನಫ್ತಾಲಿ, ಗಾದ್ ಮತ್ತು ಆಶೇರ್.
ವಿಮೋಚನಕಾಂಡ 1 : 5 (ERVKN)
ಯಾಕೋಬನ ಸಂತತಿಯವರಲ್ಲಿ ಒಟ್ಟು ಎಪ್ಪತ್ತು ಮಂದಿ ಇದ್ದರು. (ಯಾಕೋಬನ ಹನ್ನೆರಡು ಮಂದಿ ಗಂಡುಮಕ್ಕಳಲ್ಲಿ ಒಬ್ಬನಾದ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.)
ವಿಮೋಚನಕಾಂಡ 1 : 6 (ERVKN)
ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.
ವಿಮೋಚನಕಾಂಡ 1 : 7 (ERVKN)
ಆದರೆ ಇಸ್ರೇಲರಿಗೆ ಅನೇಕ ಮಕ್ಕಳಿದ್ದರು; ಅವರ ಸಂಖ್ಯೆಯು ಹೆಚ್ಚಾಗತೊಡಗಿತು. ಇಸ್ರೇಲರು ಬಲಗೊಂಡರು; ಈಜಿಪ್ಟಿನಲ್ಲೆಲ್ಲಾ ತುಂಬಿಕೊಂಡರು.
ವಿಮೋಚನಕಾಂಡ 1 : 8 (ERVKN)
ಇಸ್ರೇಲರಿಗೆ ಹಿಂಸೆ ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.
ವಿಮೋಚನಕಾಂಡ 1 : 9 (ERVKN)
ಈ ರಾಜನು ತನ್ನ ಜನರಿಗೆ, “ಇಸ್ರೇಲರ ಸಂಖ್ಯೆಯು ಹೆಚ್ಚಾಯಿತು; ಅವರು ನಮಗಿಂತಲೂ ಬಲಿಷ್ಠರಾದರು.
ವಿಮೋಚನಕಾಂಡ 1 : 10 (ERVKN)
ಯುದ್ಧವೇನಾದರೂ ಸಂಭವಿಸಿದರೆ, ಇಸ್ರೇಲರು ನಮ್ಮ ವೈರಿಗಳೊಡನೆ ಸೇರಿಕೊಂಡು ನಮ್ಮನ್ನು ಸೋಲಿಸಿ ನಮ್ಮಿಂದ ತಪ್ಪಿಸಿಕೊಳ್ಳಬಹುದು. ಆದ್ದರಿಂದ ಅವರು ಅಭಿವೃದ್ಧಿಯಾಗದಂತೆ ನಾವು ಉಪಾಯವನ್ನು ಮಾಡೋಣ” ಎಂದು ಹೇಳಿದನು.
ವಿಮೋಚನಕಾಂಡ 1 : 11 (ERVKN)
ಆದ್ದರಿಂದ ಅವರು ಇಸ್ರೇಲರನ್ನು ಹಿಂಸಿಸಲು ತೀರ್ಮಾನಿಸಿದರು. ಇಸ್ರೇಲರಿಂದ ಬಿಟ್ಟೀಕೆಲಸ ಮಾಡಿಸುವುದಕ್ಕಾಗಿ ಅಧಿಕಾರಿಗಳನ್ನು ನೇಮಿಸಿದರು. ಈ ಅಧಿಕಾರಿಗಳು ರಾಜನಿಗಾಗಿ ಪಿತೋಮ್ ಮತ್ತು ರಾಮ್ಸೇಸ್ ಪಟ್ಟಣಗಳನ್ನು ಇಸ್ರೇಲರಿಂದ ಬಲವಂತವಾಗಿ ಕಟ್ಟಿಸಿದರು; ಧಾನ್ಯಗಳನ್ನು ಮತ್ತು ಇನ್ನಿತರ ವಸ್ತುಗಳನ್ನು ಶೇಖರಿಸುವುದಕ್ಕೆ ರಾಜನು ಈ ಪಟ್ಟಣಗಳನ್ನು ಉಪಯೋಗಿಸಿದನು.
ವಿಮೋಚನಕಾಂಡ 1 : 12 (ERVKN)
ಈಜಿಪ್ಟಿನವರು ಇಸ್ರೇಲರಿಂದ ಪ್ರಯಾಸಕರವಾದ ಕೆಲಸಗಳನ್ನು ಬಲವಂತವಾಗಿ ಮಾಡಿಸಿದಷ್ಟೂ ಇಸ್ರೇಲರು ಹೆಚ್ಚು ಹರಡಿಕೊಂಡದ್ದರಿಂದ ಈಜಿಪ್ಟಿನ ಜನರು ಇಸ್ರೇಲರಿಗೆ ಹೆಚ್ಚೆಚ್ಚಾಗಿ ಭಯಪಟ್ಚರು.
ವಿಮೋಚನಕಾಂಡ 1 : 13 (ERVKN)
ಅಲ್ಲದೆ ಇನ್ನೂ ಪ್ರಯಾಸಕರವಾದ ಕೆಲಸವನ್ನು ಬಲವಂತದಿಂದ ಮಾಡಿಸಿಕೊಂಡರು.
ವಿಮೋಚನಕಾಂಡ 1 : 14 (ERVKN)
ಈಜಿಪ್ಟಿನವರು ಇಸ್ರೇಲರ ಜೀವಿತವನ್ನು ಕಷ್ಟಕರವನ್ನಾಗಿ ಮಾಡಿದರು. ಇಸ್ರೇಲರಿಂದ ಇಟ್ಟಿಗೆಗಳನ್ನೂ ಗಾರೆಗಳನ್ನೂ ಬೇಸಾಯವನ್ನೂ ಪ್ರತಿಯೊಂದು ಕೆಲಸವನ್ನು ಬಲವಂತವಾಗಿ ಮಾಡಿಸಿಕೊಂಡರು.
ವಿಮೋಚನಕಾಂಡ 1 : 15 (ERVKN)
ದೇವರನ್ನು ಹಿಂಬಾಲಿಸಿದ ದಾದಿಯರು ಇಸ್ರೇಲಿನ ಸ್ತ್ರೀಯರಿಗೆ ಹೆರಿಗೆ ಮಾಡಿಸಲು ಇಬ್ರಿಯರಾದ ಇಬ್ಬರು ದಾದಿಯರಿದ್ದರು. ಇವರ ಹೆಸರು: ಶಿಫ್ರಾ ಮತ್ತು ಪೂಗಾ. ಈಜಿಪ್ಟಿನ ರಾಜನು ಈ ದಾದಿಯರೊಡನೆ ಮಾತಾಡಿ ಅವರಿಗೆ,
ವಿಮೋಚನಕಾಂಡ 1 : 16 (ERVKN)
“ಇಬ್ರಿಯ ಸ್ತ್ರೀಯರಿಗೆ ನೀವು ಹೆರಿಗೆ ಮಾಡುವಾಗ ಹೆಣ್ಣುಮಗು ಹುಟ್ಟಿದರೆ, ಅದನ್ನು ಉಳಿಸಿರಿ; ಗಂಡುಮಗು ಹುಟ್ಟಿದರೆ ಸಾಯಿಸಿರಿ!” ಎಂದು ಹೇಳಿದನು.
ವಿಮೋಚನಕಾಂಡ 1 : 17 (ERVKN)
ಆದರೆ ಆ ದಾದಿಯರಿಗೆ ದೇವರಲ್ಲಿ ಭಯಭಕ್ತಿ ಇದ್ದಕಾರಣ ಅವರು ರಾಜನ ಆಜ್ಞೆಗೆ ವಿಧೇಯರಾಗದೆ ಗಂಡುಮಕ್ಕಳನ್ನೂ ಉಳಿಸಿದರು.
ವಿಮೋಚನಕಾಂಡ 1 : 18 (ERVKN)
ಈಜಿಪ್ಟಿನ ರಾಜನು ದಾದಿಯರನ್ನು ಕರೆದು, “ನೀವು ಹೀಗೇಕೆ ಮಾಡುತ್ತಿದ್ದೀರಿ? ಗಂಡುಮಕ್ಕಳನ್ನು ನೀವು ಉಳಿಸುತ್ತಿರುವುದೇಕೆ?” ಎಂದು ಕೇಳಿದನು.
ವಿಮೋಚನಕಾಂಡ 1 : 19 (ERVKN)
ದಾದಿಯರು, “ಇಬ್ರಿಯ ಸ್ತ್ರೀಯರು ಈಜಿಪ್ಟಿನ ಸ್ತ್ರೀಯರಿಗಿಂತ ಚುರುಕಾಗಿದ್ದಾರೆ. ನಾವು ಅವರಿಗೆ ಸಹಾಯ ಮಾಡುವುದಕ್ಕಿಂತ ಮೊದಲೇ ಅವರು ಹೆರುತ್ತಾರೆ” ಎಂದು ಹೇಳಿದರು.
ವಿಮೋಚನಕಾಂಡ 1 : 20 (ERVKN)
(20-21)ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.
ವಿಮೋಚನಕಾಂಡ 1 : 21 (ERVKN)
ವಿಮೋಚನಕಾಂಡ 1 : 22 (ERVKN)
ಆದ್ದರಿಂದ ಫರೋಹನು ತನ್ನ ಜನರಿಗೆಲ್ಲಾ, “ಇಬ್ರಿಯರಿಗೆ ಹುಟ್ಟುವ ಗಂಡುಕೂಸುಗಳನ್ನೆಲ್ಲಾ ನೈಲ್ ನದಿಗೆ ಎಸೆದುಬಿಡಬೇಕು. ಆದರೆ ಎಲ್ಲಾ ಹೆಣ್ಣುಮಕ್ಕಳು ಬದುಕಲಿ” ಎಂದು ಆಜ್ಞಾಪಿಸಿದನು.

1 2 3 4 5 6 7 8 9 10 11 12 13 14 15 16 17 18 19 20 21 22