ವಿಮೋಚನಕಾಂಡ 12 : 1 (ERVKN)
ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,
ವಿಮೋಚನಕಾಂಡ 12 : 2 (ERVKN)
“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.
ವಿಮೋಚನಕಾಂಡ 12 : 3 (ERVKN)
ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.
ವಿಮೋಚನಕಾಂಡ 12 : 4 (ERVKN)
ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.
ವಿಮೋಚನಕಾಂಡ 12 : 5 (ERVKN)
ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.
ವಿಮೋಚನಕಾಂಡ 12 : 6 (ERVKN)
ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.
ವಿಮೋಚನಕಾಂಡ 12 : 7 (ERVKN)
ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.
ವಿಮೋಚನಕಾಂಡ 12 : 8 (ERVKN)
“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.
ವಿಮೋಚನಕಾಂಡ 12 : 9 (ERVKN)
ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.
ವಿಮೋಚನಕಾಂಡ 12 : 10 (ERVKN)
ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ವಿಮೋಚನಕಾಂಡ 12 : 11 (ERVKN)
ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.
ವಿಮೋಚನಕಾಂಡ 12 : 12 (ERVKN)
“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
ವಿಮೋಚನಕಾಂಡ 12 : 13 (ERVKN)
ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು. ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.
ವಿಮೋಚನಕಾಂಡ 12 : 14 (ERVKN)
“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.
ವಿಮೋಚನಕಾಂಡ 12 : 15 (ERVKN)
ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.
ವಿಮೋಚನಕಾಂಡ 12 : 16 (ERVKN)
ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
ವಿಮೋಚನಕಾಂಡ 12 : 17 (ERVKN)
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.
ವಿಮೋಚನಕಾಂಡ 12 : 18 (ERVKN)
ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.
ವಿಮೋಚನಕಾಂಡ 12 : 19 (ERVKN)
ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.
ವಿಮೋಚನಕಾಂಡ 12 : 20 (ERVKN)
ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.
ವಿಮೋಚನಕಾಂಡ 12 : 21 (ERVKN)
ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.
ವಿಮೋಚನಕಾಂಡ 12 : 22 (ERVKN)
ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.
ವಿಮೋಚನಕಾಂಡ 12 : 23 (ERVKN)
ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.
ವಿಮೋಚನಕಾಂಡ 12 : 24 (ERVKN)
ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
ವಿಮೋಚನಕಾಂಡ 12 : 25 (ERVKN)
ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 12 : 26 (ERVKN)
‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ,
ವಿಮೋಚನಕಾಂಡ 12 : 27 (ERVKN)
‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.”
ವಿಮೋಚನಕಾಂಡ 12 : 28 (ERVKN)
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.
ವಿಮೋಚನಕಾಂಡ 12 : 29 (ERVKN)
ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
ವಿಮೋಚನಕಾಂಡ 12 : 30 (ERVKN)
ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ. ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ
ವಿಮೋಚನಕಾಂಡ 12 : 31 (ERVKN)
ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
ವಿಮೋಚನಕಾಂಡ 12 : 32 (ERVKN)
ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ! ನನ್ನನ್ನು ಆಶೀರ್ವಾದಿಸಿರಿ!” ಎಂದು ಹೇಳಿದನು.
ವಿಮೋಚನಕಾಂಡ 12 : 33 (ERVKN)
ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
ವಿಮೋಚನಕಾಂಡ 12 : 34 (ERVKN)
ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
ವಿಮೋಚನಕಾಂಡ 12 : 35 (ERVKN)
ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು.
ವಿಮೋಚನಕಾಂಡ 12 : 36 (ERVKN)
ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.
ವಿಮೋಚನಕಾಂಡ 12 : 37 (ERVKN)
ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)
ವಿಮೋಚನಕಾಂಡ 12 : 38 (ERVKN)
ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.
ವಿಮೋಚನಕಾಂಡ 12 : 39 (ERVKN)
ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.
ವಿಮೋಚನಕಾಂಡ 12 : 40 (ERVKN)
ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.
ವಿಮೋಚನಕಾಂಡ 12 : 41 (ERVKN)
ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ ಈಜಿಪ್ಟನ್ನು ಬಿಟ್ಟು ಹೊರಟವು.
ವಿಮೋಚನಕಾಂಡ 12 : 42 (ERVKN)
ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.
ವಿಮೋಚನಕಾಂಡ 12 : 43 (ERVKN)
ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.
ವಿಮೋಚನಕಾಂಡ 12 : 44 (ERVKN)
ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.
ವಿಮೋಚನಕಾಂಡ 12 : 45 (ERVKN)
ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.
ವಿಮೋಚನಕಾಂಡ 12 : 46 (ERVKN)
“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.
ವಿಮೋಚನಕಾಂಡ 12 : 47 (ERVKN)
ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 12 : 48 (ERVKN)
ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.
ವಿಮೋಚನಕಾಂಡ 12 : 49 (ERVKN)
ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.
ವಿಮೋಚನಕಾಂಡ 12 : 50 (ERVKN)
ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.
ವಿಮೋಚನಕಾಂಡ 12 : 51 (ERVKN)
ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51

BG:

Opacity:

Color:


Size:


Font: