ವಿಮೋಚನಕಾಂಡ 12 : 1 (ERVKN)
ಪಸ್ಕ ಹಬ್ಬ ಮೋಶೆ ಆರೋನರು ಇನ್ನೂ ಈಜಿಪ್ಟಿನಲ್ಲಿದ್ದಾಗ ಯೆಹೋವನು ಅವರೊಡನೆ ಮಾತಾಡಿ,
ವಿಮೋಚನಕಾಂಡ 12 : 2 (ERVKN)
“ಈ ತಿಂಗಳು ನಿಮಗೆ ವರ್ಷದ ಮೊದಲನೆ ತಿಂಗಳಾಗಿರುವುದು.
ವಿಮೋಚನಕಾಂಡ 12 : 3 (ERVKN)
ಈ ಆಜ್ಞೆಯು ಇಡೀ ಇಸ್ರೇಲರ ಸಮೂಹಕ್ಕೆ ಅನ್ವಯಿಸುತ್ತದೆ. ಈ ತಿಂಗಳ ಹತ್ತನೆಯ ದಿನದಲ್ಲಿ ಪ್ರತಿಯೊಬ್ಬನು ತನ್ನ ಮನೆಯಲ್ಲಿರುವ ಜನರಿಗಾಗಿ ಒಂದು ಕುರಿಮರಿಯನ್ನು ಅಥವಾ ಒಂದು ಆಡುಮರಿಯನ್ನು ಕೊಯ್ಯಬೇಕು.
ವಿಮೋಚನಕಾಂಡ 12 : 4 (ERVKN)
ಅದನ್ನು ಸಂಪೂರ್ಣವಾಗಿ ತಿನ್ನಲು ಅವನ ಮನೆಯಲ್ಲಿ ಸಾಕಷ್ಟು ಜನರಿಲ್ಲದಿದ್ದರೆ ಅವನು ತನ್ನ ನೆರೆಯವರನ್ನು ಆಮಂತ್ರಿಸಿ ಅವರೊಂದಿಗೆ ಅದರ ಮಾಂಸವನ್ನು ಹಂಚಿಕೊಳ್ಳಬೇಕು. ಪ್ರತಿಯೊಬ್ಬನಿಗೂ ತಿನ್ನಲು ಸಾಕಷ್ಟು ಮಾಂಸವಿರಬೇಕು.
ವಿಮೋಚನಕಾಂಡ 12 : 5 (ERVKN)
ಅದು ಒಂದು ವರ್ಷದ ಗಂಡು ಕುರಿಯಾಗಿರಬೇಕು ಅಥವಾ ಆಡಾಗಿರಬೇಕು. ಅಲ್ಲದೆ ಕಳಂಕ ರಹಿತವಾಗಿರಬೇಕು.
ವಿಮೋಚನಕಾಂಡ 12 : 6 (ERVKN)
ಈ ತಿಂಗಳ ಹದಿನಾಲ್ಕನೆಯ ದಿನದವರೆಗೆ ನೀವು ಆ ಪಶುವನ್ನು ಸಾಕಬೇಕು. ಅಂದು ಸಂಜೆ ಇಸ್ರೇಲರೆಲ್ಲರೂ ಆ ಪಶುಗಳನ್ನು ಕೊಯ್ಯಬೇಕು.
ವಿಮೋಚನಕಾಂಡ 12 : 7 (ERVKN)
ಈ ಪಶುಗಳ ರಕ್ತವನ್ನು ತೆಗೆದಿಟ್ಟು ಜನರು ಭೋಜನಮಾಡುವ ಮನೆಗಳ ಬಾಗಿಲಿನ ಎರಡು ನಿಲುವು ಕಂಬಗಳಿಗೂ ಮೇಲಿನ ಪಟ್ಟಿಗಳಿಗೂ ಆ ರಕ್ತವನ್ನು ಹಚ್ಚಬೇಕು.
ವಿಮೋಚನಕಾಂಡ 12 : 8 (ERVKN)
“ಅಂದು ರಾತ್ರಿ ಆ ಪಶುವಿನ ಮಾಂಸವನ್ನು ಸುಟ್ಟು ಸಂಪೂರ್ಣವಾಗಿ ತಿನ್ನಬೇಕು. ಅದರೊಡನೆ ಕಹಿಯಾದ ಪಲ್ಯಗಳನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ತಿನ್ನಬೇಕು.
ವಿಮೋಚನಕಾಂಡ 12 : 9 (ERVKN)
ನೀವು ಆ ಪಶುವಿನ ಮಾಂಸವನ್ನು ಹಸಿಯಾಗಲಿ ನೀರಿನಲ್ಲಿ ಬೇಯಿಸಿಯಾಗಲಿ ತಿನ್ನಬಾರದು; ಅದರ ಮಾಂಸವನ್ನು ಬೆಂಕಿಯ ಮೇಲಿಟ್ಟು ಬೇಯಿಸಬೇಕು. ಅದರ ತಲೆ, ಕಾಲುಗಳನ್ನೂ ಒಳಗಿನ ಭಾಗಗಳನ್ನೂ ಬೆಂಕಿಯ ಮೇಲೆ ಬೇಯಿಸಬೇಕು.
ವಿಮೋಚನಕಾಂಡ 12 : 10 (ERVKN)
ಅದರ ಮಾಂಸವನ್ನೆಲ್ಲಾ ಆ ರಾತ್ರಿಯಲ್ಲಿಯೇ ತಿನ್ನಬೇಕು. ಬೆಳಗಾಗುವವರೆಗೆ ಮಾಂಸವೇನಾದರೂ ಉಳಿದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.
ವಿಮೋಚನಕಾಂಡ 12 : 11 (ERVKN)
“ನೀವು ಭೋಜನ ಮಾಡುವಾಗ ಪ್ರಯಾಣ ಮಾಡುತ್ತಿರುವಂತೆ ಬಟ್ಟೆ ಧರಿಸಿಕೊಂಡಿರಬೇಕು; ಕೆರಗಳನ್ನು ಹಾಕಿಕೊಂಡು ನಿಮ್ಮ ಊರುಗೋಲನ್ನು ಕೈಯಲ್ಲಿ ಹಿಡಿದಿರಬೇಕು. ನೀವು ಅವಸವಸರವಾಗಿ ತಿನ್ನಬೇಕು. ಯಾಕೆಂದರೆ ಇದು ಯೆಹೋವನ ಪಸ್ಕಹಬ್ಬ.
ವಿಮೋಚನಕಾಂಡ 12 : 12 (ERVKN)
“ಆ ರಾತ್ರಿ ನಾನು ಈಜಿಪ್ಟಿನ ಮೂಲಕ ಹಾದುಹೋಗಿ ಈಜಿಪ್ಟಿನ ಚೊಚ್ಚಲು ಪಶುಗಳನ್ನೂ ಚೊಚ್ಚಲು ಗಂಡುಮಕ್ಕಳನ್ನೂ ಕೊಲ್ಲುವೆನು; ಈಜಿಪ್ಟಿನ ಎಲ್ಲಾ ದೇವರುಗಳಿಗೆ ತೀರ್ಪು ಮಾಡುವೆನು. ನಾನೇ ಯೆಹೋವನೆಂದು ತೋರಿಸಿಕೊಡುವೆನು.
ವಿಮೋಚನಕಾಂಡ 12 : 13 (ERVKN)
ಆದರೆ ನಿಮ್ಮ ಮನೆಗಳಿಗೆ ಹಚ್ಚಿರುವ ರಕ್ತವು ಒಂದು ವಿಶೇಷ ಸೂಚನೆಯಾಗಿದೆ. ನಾನು ಆ ರಕ್ತವನ್ನು ನೋಡಿದಾಗ ನಿಮ್ಮ ಮನೆಯನ್ನು ದಾಟಿಹೋಗುವೆನು.* ದಾಟಿಹೋಗುವೆನು ಅಥವಾ “ಸಂರಕ್ಷಿಸುವೆನು.” ಈಜಿಪ್ಟಿನ ಜನರಿಗೆ ಕೇಡುಗಳಾಗುವಂತೆ ಮಾಡುವೆನು. ಆದರೆ ಆ ವ್ಯಾಧಿಗಳು ನಿಮಗೆ ಹಾನಿ ಮಾಡುವುದಿಲ್ಲ.
ವಿಮೋಚನಕಾಂಡ 12 : 14 (ERVKN)
“ಆದ್ದರಿಂದ ನೀವು ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವಿರಿ. ಅದು ನಿಮಗೆ ವಿಶೇಷವಾದ ಹಬ್ಬವಾಗಿರುವುದು. ನಿಮ್ಮ ಸಂತತಿಯವರು ಈ ಹಬ್ಬದಿಂದ ಯೆಹೋವನನ್ನು ಎಂದೆಂದಿಗೂ ಸನ್ಮಾನಿಸುವರು.
ವಿಮೋಚನಕಾಂಡ 12 : 15 (ERVKN)
ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.
ವಿಮೋಚನಕಾಂಡ 12 : 16 (ERVKN)
ಈ ಹಬ್ಬದ ಪ್ರಥಮ ಮತ್ತು ಕೊನೆಯ ದಿನಗಳಲ್ಲಿ ಪವಿತ್ರ ಸಭೆಯಾಗಿ ಕೂಡಿಬರಬೇಕು. ಈ ಹಬ್ಬದ ದಿನಗಳಲ್ಲಿ ನೀವು ಯಾವ ಕೆಲಸವನ್ನೂ ಮಾಡಬಾರದು. ಆದರೆ ನಿಮ್ಮ ಭೋಜನಕ್ಕಾಗಿ ಆಹಾರ ಸಿದ್ಧಪಡಿಸಬಹುದು.
ವಿಮೋಚನಕಾಂಡ 12 : 17 (ERVKN)
ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಲೇಬೇಕು. ಯಾಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಎಲ್ಲಾ ಜನರ ಗುಂಪುಗಳನ್ನು ಈಜಿಪ್ಟಿನಿಂದ ಬಿಡಿಸಿ ಕರೆದುಕೊಂಡು ಹೋದೆನು. ಆದ್ದರಿಂದ ನಿಮ್ಮ ಸಂತತಿಯವರೆಲ್ಲರೂ ಆ ದಿನವನ್ನು ಜ್ಞಾಪಕಮಾಡಿಕೊಳ್ಳಬೇಕು. ಇದು ಶಾಶ್ವತವಾದ ಕಟ್ಟಳೆಯಾಗಿದೆ.
ವಿಮೋಚನಕಾಂಡ 12 : 18 (ERVKN)
ಆದ್ದರಿಂದ ಪ್ರಥಮ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಲು ಆರಂಭಿಸಿ ಅದೇ ತಿಂಗಳ ಇಪ್ಪತ್ತೊಂದನೇ ದಿನದ ಸಾಯಂಕಾಲದವರೆಗೂ ತಿನ್ನುವಿರಿ.
ವಿಮೋಚನಕಾಂಡ 12 : 19 (ERVKN)
ಏಳು ದಿನಗಳವರೆಗೆ ನಿಮ್ಮ ಮನೆಗಳಲ್ಲಿ ಯಾವ ಹುಳಿಯೂ ಇರಬಾರದು. ಯಾವ ಇಸ್ರೇಲಿಯಾದರೂ ಯಾವ ವಿದೇಶಿಯನಾದರೂ ಈ ಹಬ್ಬದಲ್ಲಿ ಹುಳಿಯನ್ನು ತಿಂದರೆ, ಅವನನ್ನು ಇಸ್ರೇಲರ ಸಮುದಾಯದಿಂದ ಬಹಿಷ್ಕರಿಸಬೇಕು.
ವಿಮೋಚನಕಾಂಡ 12 : 20 (ERVKN)
ಈ ಹಬ್ಬದಲ್ಲಿ ನೀವು ಹುಳಿಯನ್ನು ತಿನ್ನಬಾರದು. ನೀವು ಎಲ್ಲೇ ವಾಸವಾಗಿದ್ದರೂ ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು” ಎಂದು ಹೇಳಿದನು.
ವಿಮೋಚನಕಾಂಡ 12 : 21 (ERVKN)
ಆದ್ದರಿಂದ ಮೋಶೆಯು ಹಿರಿಯರ ಸಭೆ ಸೇರಿಸಿ, “ನಿಮ್ಮ ಕುಟುಂಬಗಳಿಗೆ ಬೇಕಾದ ಪಶುಗಳನ್ನು ತೆಗೆದುಕೊಂಡು ಪಸ್ಕಕ್ಕಾಗಿ ಅವುಗಳನ್ನು ಕೊಯ್ಯಿರಿ.
ವಿಮೋಚನಕಾಂಡ 12 : 22 (ERVKN)
ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ರಕ್ತ ತುಂಬಿರುವ ಪಾತ್ರೆಯಲ್ಲಿ ಅದ್ದಿರಿ. ರಕ್ತವನ್ನು ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿರಿ. ಮುಂಜಾನೆಯಾಗುವವರೆಗೆ ಯಾರೂ ತಮ್ಮ ಮನೆಯನ್ನು ಬಿಟ್ಟು ಹೊರಗೆ ಹೋಗಬಾರದು.
ವಿಮೋಚನಕಾಂಡ 12 : 23 (ERVKN)
ಆ ಸಮಯದಲ್ಲಿ ಚೊಚ್ಚಲಾದವುಗಳನ್ನು ಸಂಹರಿಸಲು ಯೆಹೋವನು ಈಜಿಪ್ಟಿನ ಮೂಲಕ ಹಾದುಹೋಗುವನು. ಬಾಗಿಲಿನ ನಿಲುವು ಕಂಬಗಳಿಗೆ ಮತ್ತು ಮೇಲಿನ ಪಟ್ಟಿಗಳಿಗೆ ಹಚ್ಚಿದ ರಕ್ತವನ್ನು ಯೆಹೋವನು ನೋಡಿ ಆ ಮನೆಯನ್ನು ಸಂರಕ್ಷಿಸುವನು. ಸಂರಕ್ಷಿಸುವನು ಅಥವಾ “ದಾಟಿಹೋಗುವನು.” ಸಂಹಾರಕನು ನಿಮ್ಮ ಮನೆಯೊಳಗೆ ಬಂದು ಸಂಹರಿಸಲು ಯೆಹೋವನು ಬಿಡುವುದಿಲ್ಲ.
ವಿಮೋಚನಕಾಂಡ 12 : 24 (ERVKN)
ನೀವು ಈ ಆಜ್ಞೆಯನ್ನು ಜ್ಞಾಪಕದಲ್ಲಿಡಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮವಾಗಿದೆ.
ವಿಮೋಚನಕಾಂಡ 12 : 25 (ERVKN)
ಯೆಹೋವನು ನಿಮಗೆ ಕೊಡಲಿರುವ ದೇಶಕ್ಕೆ ನೀವು ಹೋದಾಗಲೂ ಈ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 12 : 26 (ERVKN)
‘ಈ ಹಬ್ಬವನ್ನು ಮಾಡುವುದೇಕೆ?’ ಎಂದು ನಿಮ್ಮ ಮಕ್ಕಳು ನಿಮ್ಮನ್ನು ಕೇಳುವಾಗ,
ವಿಮೋಚನಕಾಂಡ 12 : 27 (ERVKN)
‘ಇದು ಯೆಹೋವನನ್ನು ಸನ್ಮಾನಿಸಲು ಮಾಡುವ ಪಸ್ಕಹಬ್ಬವಾಗಿದೆ. ಯಾಕೆಂದರೆ ನಾವು ಈಜಿಪ್ಟಿನಲ್ಲಿದ್ದಾಗ ಯೆಹೋವನು ಇಸ್ರೇಲರ ಮನೆಗಳನ್ನು ಬಿಟ್ಟು ದಾಟಿಹೋದನು; ಈಜಿಪ್ಟಿನವರನ್ನು ಸಂಹರಿಸಿದನು; ಆದರೆ ಆತನು ನಮ್ಮ ಮನೆಗಳಲ್ಲಿದ್ದವರನ್ನು ರಕ್ಷಿಸಿದನು’ ಎಂದು ಹೇಳಬೇಕು. “ಆಗ ಮೋಶೆಯ ಮಾತನ್ನು ಕೇಳುತ್ತಿದ್ದ ಇಸ್ರೇಲರು ಅಡ್ಡಬಿದ್ದು ಯೆಹೋವನನ್ನು ಆರಾಧಿಸಿದರು.”
ವಿಮೋಚನಕಾಂಡ 12 : 28 (ERVKN)
ಯೆಹೋವನು ಮೋಶೆ ಮತ್ತು ಆರೋನರಿಗೆ ಆಜ್ಞಾಪಿಸಿದ್ದಂತೆಯೇ ಇಸ್ರೇಲರು ಮಾಡಿದರು.
ವಿಮೋಚನಕಾಂಡ 12 : 29 (ERVKN)
ಮಧ್ಯರಾತ್ರಿಯಲ್ಲಿ ಯೆಹೋವನು ಈಜಿಪ್ಟಿನಲ್ಲಿದ್ದ ಚೊಚ್ಚಲು ಗಂಡುಮಕ್ಕಳನ್ನೆಲ್ಲಾ ಸಂಹರಿಸಿದನು. ಫರೋಹನ ಚೊಚ್ಚಲು ಮಗನಿಂದಿಡಿದು ಸೆರೆಮನೆಯಲ್ಲಿದ್ದ ಕೈದಿಯ ಚೊಚ್ಚಲು ಮಗನವರೆಗೆ ಇರುವ ಎಲ್ಲಾ ಚೊಚ್ಚಲು ಮಕ್ಕಳನ್ನು ಆತನು ಸಂಹರಿಸಿದನು. ಚೊಚ್ಚಲು ಪಶುಗಳೂ ಸಂಹರಿಸಲ್ಪಟ್ಟವು.
ವಿಮೋಚನಕಾಂಡ 12 : 30 (ERVKN)
ಆ ರಾತ್ರಿಯಲ್ಲಿ ಫರೋಹನೂ ಅವನ ಅಧಿಕಾರಿಗಳೂ ಈಜಿಪ್ಟಿನ ಜನರೆಲ್ಲರೂ ಎದ್ದರು. ಈಜಿಪ್ಟಿನಲ್ಲಿ ಮಹಾ ಗೋಳಾಟ ಉಂಟಾಯಿತು. ಯಾಕೆಂದರೆ ಸಾವಿಲ್ಲದ ಮನೆಯೇ ಇರಲಿಲ್ಲ.
ವಿಮೋಚನಕಾಂಡ 12 : 31 (ERVKN)
ಇಸ್ರೇಲರಿಗೆ ಈಜಿಪ್ಟಿನಿಂದ ಬಿಡುಗಡೆ ಆದ್ದರಿಂದ ಆ ರಾತ್ರಿ, ಫರೋಹನು ಮೋಶೆ ಆರೋನರನ್ನು ಕರೆಸಿ, “ನನ್ನ ಜನರನ್ನು ಬಿಟ್ಟುಹೋಗಿರಿ. ನೀವು ಕೇಳಿಕೊಂಡಂತೆ ನೀವು ಮತ್ತು ನಿಮ್ಮ ಜನರು ಹೊರಟುಹೋಗಿ ಯೆಹೋವನನ್ನು ಆರಾಧಿಸಿರಿ.
ವಿಮೋಚನಕಾಂಡ 12 : 32 (ERVKN)
ನೀವು ಕೇಳಿಕೊಂಡಂತೆ ನಿಮ್ಮ ಕುರಿಗಳನ್ನೂ ದನಕರುಗಳನ್ನೂ ನಿಮ್ಮೊಂದಿಗೆ ತೆಗೆದುಕೊಂಡು ಹೋಗಿರಿ! ನನ್ನನ್ನು ಆಶೀರ್ವಾದಿಸಿರಿ!” ಎಂದು ಹೇಳಿದನು.
ವಿಮೋಚನಕಾಂಡ 12 : 33 (ERVKN)
ಈಜಿಪ್ಟಿನ ಜನರು ಸಹ ತಮ್ಮನ್ನು ಬೇಗನೆ ಬಿಟ್ಟು ಹೋಗಬೇಕೆಂದು ಇಸ್ರೇಲರನ್ನು ಬೇಡಿಕೊಂಡು, “ನೀವು ಬಿಟ್ಟು ಹೋಗದಿದ್ದರೆ, ನಾವೆಲ್ಲಾ ಸಾಯುವೆವು” ಎಂದು ಹೇಳಿದರು.
ವಿಮೋಚನಕಾಂಡ 12 : 34 (ERVKN)
ತಮ್ಮ ರೊಟ್ಟಿಗೆ ಹುಳಿಹಾಕಲು ಇಸ್ರೇಲರಿಗೆ ಸಮಯವಿರಲಿಲ್ಲ. ಅವರು ಹಿಟ್ಟಿನ ಮುದ್ದೆಯನ್ನು ಬಟ್ಟೆಯಲ್ಲಿ ಸುತ್ತಿ ಹೆಗಲಿನ ಮೇಲೆ ಹೊತ್ತುಕೊಂಡು ಹೋದರು.
ವಿಮೋಚನಕಾಂಡ 12 : 35 (ERVKN)
ಅಲ್ಲದೆ ಮೋಶೆಯು ಹೇಳಿದಂತೆಯೇ ಇಸ್ರೇಲರು ತಮ್ಮ ನೆರೆಮನೆಯವರ ಬಳಿಗೆ ಹೋಗಿ ಬಟ್ಟೆಗಳನ್ನೂ ಬೆಳ್ಳಿಬಂಗಾರಗಳ ವಸ್ತುಗಳನ್ನೂ ಕೇಳಿಕೊಂಡರು.
ವಿಮೋಚನಕಾಂಡ 12 : 36 (ERVKN)
ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.
ವಿಮೋಚನಕಾಂಡ 12 : 37 (ERVKN)
ಇಸ್ರೇಲರು ರಮ್ಸೇಸ್‌ನಿಂದ ಸುಕ್ಕೋತಿಗೆ ಪ್ರಯಾಣ ಮಾಡಿದರು. ಅವರಲ್ಲಿ ಸುಮಾರು ಆರು ಲಕ್ಷಮಂದಿ ಆರು ಲಕ್ಷ ಮಂದಿ ಅಥವಾ ಆರು ನೂರು ಕುಟುಂಬ ಗುಂಪುಗಳು. ಇಬ್ರಿಯ ಪದ ‘ಸಾವಿರ’ ಎಂಬುದು, ಕುಟುಂಬ ಗುಂಪುಗಳು ಎಂಬ ಅರ್ಥವನ್ನು ಕೊಡುವ ಇಬ್ರಿಯ ಪದಗಳಂತಿದೆ. ಗಂಡಸರಿದ್ದರು. (ಈ ಸಂಖ್ಯೆಯಲ್ಲಿ ಮಕ್ಕಳು ಮತ್ತು ಹೆಂಗಸರು ಸೇರಿಲ್ಲ.)
ವಿಮೋಚನಕಾಂಡ 12 : 38 (ERVKN)
ಲೆಕ್ಕವಿಲ್ಲದಷ್ಟು ಕುರಿಗಳೂ ದನಕರುಗಳೂ ಇವರೊಂದಿಗಿದ್ದವು. ಇಸ್ರೇಲರಲ್ಲದ ಬೇರೆ ಜನರು ಸಹ ಇಸ್ರೇಲರೊಂದಿಗೆ ಈಜಿಪ್ಟಿನಿಂದ ಹೊರಟರು.
ವಿಮೋಚನಕಾಂಡ 12 : 39 (ERVKN)
ರೊಟ್ಟಿಗೆ ಹುಳಿಹಾಕುವಷ್ಟು ಸಮಯವೂ ಜನರಿಗೆ ಇರಲಿಲ್ಲ; ಅವರು ತಮ್ಮ ಪ್ರಯಾಣಕ್ಕಾಗಿ ವಿಶೇಷ ಆಹಾರವನ್ನು ತಯಾರಿಸುವುದಕ್ಕೂ ಆಗಲಿಲ್ಲ. ಆದ್ದರಿಂದ ಅವರು ಹುಳಿಯಿಲ್ಲದ ರೊಟ್ಟಿ ಮಾಡಿ ತಮ್ಮೊಡನೆ ತೆಗೆದುಕೊಂಡು ಹೋದರು.
ವಿಮೋಚನಕಾಂಡ 12 : 40 (ERVKN)
ಇಸ್ರೇಲರು ಈಜಿಪ್ಟಿನಲ್ಲಿ ನಾನೂರಮೂವತ್ತು ವರ್ಷ ವಾಸಿಸಿದರು.
ವಿಮೋಚನಕಾಂಡ 12 : 41 (ERVKN)
ನಾನೂರಮೂವತ್ತು ವರ್ಷಗಳಾದ ನಂತರ, ಅದೇ ದಿನದಂದು ಯೆಹೋವನ ಸೈನ್ಯಗಳೆಲ್ಲಾ§ ಯೆಹೋವನ ಸೈನ್ಯಗಳು ಇಸ್ರೇಲ್ ಜನರು. ಈಜಿಪ್ಟನ್ನು ** ಈಜಿಪ್ಟ್ ಪರಾತನ ಗ್ರೀಕ್ ಮತ್ತು ಸಮಾರ್ಯದ ಅನುವಾದಗಳಲ್ಲಿ “ಈಜಿಪ್ಟ್ ಮತ್ತು ಕಾನಾನ್” ಎಂದಿದೆ. ಅವರು ಅಬ್ರಹಾಮನ ಕಾಲದಿಂದ ವರ್ಷಗಳನ್ನು ಎಣಿಸಿದ್ದಾರೆಂದೂ ಅವರು ಯೋಸೇಫನ ಕಾಲದಿಂದ ಎಣಿಸಿಲ್ಲವೆಂದೂ ಇದು ಅರ್ಥ ಕೊಡುತ್ತಿದೆ. ಆದಿಕಾಂಡ 15:12-16 ಮತ್ತು ಗಲಾತ್ಯ. 3:17 ರಲ್ಲಿ ನೋಡಿ. ಬಿಟ್ಟು ಹೊರಟವು.
ವಿಮೋಚನಕಾಂಡ 12 : 42 (ERVKN)
ಆದ್ದರಿಂದ ಯೆಹೋವನು ಅವರನ್ನು ಸಂರಕ್ಷಿಸಿ ಈಜಿಪ್ಟಿನಿಂದ ಹೊರತಂದದ್ದನ್ನು ಜ್ಞಾಪಕಮಾಡುವ ಆ ರಾತ್ರಿ ಬಹು ವಿಶೇಷವಾದ ರಾತ್ರಿಯಾಗಿದೆ. ಇಸ್ರೇಲರೆಲ್ಲರೂ ಆ ರಾತ್ರಿಯನ್ನು ಯಾವಾಗಲೂ ಜ್ಞಾಪಿಸಿಕೊಳ್ಳುವರು.
ವಿಮೋಚನಕಾಂಡ 12 : 43 (ERVKN)
ಯೆಹೋವನು ಮೋಶೆ ಆರೋನರಿಗೆ, “ಪಸ್ಕಹಬ್ಬದ ನಿಯಮಗಳು ಇಂತಿವೆ: ಯಾವ ಪರದೇಶಿಯೂ ಪಸ್ಕಹಬ್ಬದ ಊಟವನ್ನು ಮಾಡಬಾರದು.
ವಿಮೋಚನಕಾಂಡ 12 : 44 (ERVKN)
ಆದರೆ ಸುನ್ನತಿ ಮಾಡಿಸಿಕೊಂಡಿರುವ ಗುಲಾಮನು ಪಸ್ಕಹಬ್ಬದ ಊಟವನ್ನು ಮಾಡಬಹುದು.
ವಿಮೋಚನಕಾಂಡ 12 : 45 (ERVKN)
ಆದರೆ ನಿಮ್ಮ ದೇಶದಲ್ಲಿ ಕೇವಲ ವಾಸವಾಗಿರುವವರಾಗಲಿ ಕೂಲಿಯಾಳಾಗಲಿ ಪಸ್ಕಹಬ್ಬದ ಊಟ ಮಾಡಬಾರದು.
ವಿಮೋಚನಕಾಂಡ 12 : 46 (ERVKN)
“ಪಸ್ಕಹಬ್ಬದ ಊಟವನ್ನು ಮನೆಯೊಳಗೆ ತಿನ್ನಬೇಕು. ಪಸ್ಕದ ಮಾಂಸವನ್ನು ಮನೆಯಿಂದ ಹೊರಗೆ ತೆಗೆದುಕೊಂಡು ಹೋಗಕೂಡದು. ಕುರಿಮರಿಯ ಎಲುಬುಗಳಲ್ಲಿ ಯಾವುದನ್ನೂ ಮುರಿಯಬಾರದು.
ವಿಮೋಚನಕಾಂಡ 12 : 47 (ERVKN)
ಇಸ್ರೇಲರ ಇಡೀ ಸಮೂಹವು ಈ ಹಬ್ಬವನ್ನು ಆಚರಿಸಬೇಕು.
ವಿಮೋಚನಕಾಂಡ 12 : 48 (ERVKN)
ನಿಮ್ಮ ಮಧ್ಯದಲ್ಲಿ ವಾಸವಾಗಿರುವ ಪರದೇಶದವನು ಯೆಹೋವನ ಪಸ್ಕ ಭೋಜನದಲ್ಲಿ ಪಾಲುಗಾರನಾಗಬೇಕೆಂದು ಬಯಸಿದರೆ ಅವನು ಸುನ್ನತಿ ಮಾಡಿಸಿಕೊಳ್ಳಬೇಕು. ಆಗ ಅವನು ಇಸ್ರೇಲಿನವನಾಗುವುದರಿಂದ ಭೋಜನದಲ್ಲಿ ಪಾಲುಗಾರನಾಗಬಹುದು. ಆದರೆ ಸುನ್ನತಿಯಾಗಿಲ್ಲದವನು ಪಸ್ಕದ ಊಟ ಮಾಡಕೂಡದು.
ವಿಮೋಚನಕಾಂಡ 12 : 49 (ERVKN)
ಪ್ರತಿಯೊಬ್ಬರಿಗೂ ಇದೇ ನಿಯಮ ಅನ್ವಯಿಸುತ್ತದೆ. ಸ್ವದೇಶದವನಿಗೂ ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಅಂದನು.
ವಿಮೋಚನಕಾಂಡ 12 : 50 (ERVKN)
ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದಂತೆಯೇ ಇಸ್ರೇಲರೆಲ್ಲರೂ ಮಾಡಿದರು.
ವಿಮೋಚನಕಾಂಡ 12 : 51 (ERVKN)
ಆದ್ದರಿಂದ ಅದೇ ದಿನದಲ್ಲಿ ಯೆಹೋವನು ಇಸ್ರೇಲರನ್ನು ಈಜಿಪ್ಟ್ ದೇಶದಿಂದ ಜನರನ್ನು ಗುಂಪುಗುಂಪುಗಳಾಗಿ ಹೊರತಂದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48 49 50 51