ವಿಮೋಚನಕಾಂಡ 15 : 1 (ERVKN)
{ಮೋಶೆಯ ಗೀತೆ} [PS] ಬಳಿಕ ಮೋಶೆ ಮತ್ತು ಇಸ್ರೇಲರು ಯೆಹೋವನಿಗೆ ಈ ಗೀತೆಯನ್ನು ಹಾಡತೊಡಗಿದರು: “ನಾನು ಯೆಹೋವನಿಗೆ ಹಾಡುವೆನು. [QBR2] ಆತನು ಮಹಾಕಾರ್ಯಗಳನ್ನು ಮಾಡಿದ್ದಾನೆ. [QBR] ಆತನು ಕುದುರೆಯನ್ನೂ ಸವಾರನನ್ನೂ [QBR2] ಸಮುದ್ರದೊಳಗೆ ಮುಳುಗಿಸಿದನು. [QBR]
ವಿಮೋಚನಕಾಂಡ 15 : 2 (ERVKN)
ಯೆಹೋವನೇ ನನ್ನ ಬಲ, [QBR2] ಆತನು ನನ್ನನ್ನು ರಕ್ಷಿಸುತ್ತಾನೆ. [QBR2] ನನ್ನ ಬಲವೂ ಕೀರ್ತನೆಯೂ ಯಾಹುವೇ; ಆತನಿಂದ ನಮಗೆ ರಕ್ಷಣೆ ಉಂಟಾಯಿತು. [QBR] ಯೆಹೋವನು ನನ್ನ ದೇವರು. [QBR2] ಮತ್ತು ನಾನು ಆತನನ್ನು ಸ್ತುತಿಸುತ್ತೇನೆ. [QBR] ಯೆಹೋವನೇ ನಮ್ಮ ಪೂರ್ವಿಕರ ದೇವರು. [QBR2] ನಾನು ಆತನನ್ನು ಸನ್ಮಾನಿಸುತ್ತೇನೆ. [QBR]
ವಿಮೋಚನಕಾಂಡ 15 : 3 (ERVKN)
ಯೆಹೋವನೇ ಯುದ್ಧವೀರನು. [QBR2] ಆತನ ನಾಮಧೇಯವು ಯೆಹೋವನೇ. [QBR]
ವಿಮೋಚನಕಾಂಡ 15 : 4 (ERVKN)
ಆತನು ಫರೋಹನ ರಥಗಳನ್ನೂ [QBR2] ಸೈನಿಕರನ್ನೂ ಸಮುದ್ರದೊಳಗೆ ಕೆಡವಿದನು; [QBR] ಫರೋಹನ ಮಹಾವೀರರನ್ನು [QBR2] ಕೆಂಪು ಸಮುದ್ರದಲ್ಲಿ ಮುಳುಗಿಸಿಬಿಟ್ಟನು. [QBR]
ವಿಮೋಚನಕಾಂಡ 15 : 5 (ERVKN)
ಸಾಗರವು ಅವರನ್ನು ಮುಚ್ಚಿಕೊಂಡಿತು; [QBR2] ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.
ವಿಮೋಚನಕಾಂಡ 15 : 6 (ERVKN)
“ನಿನ್ನ ಭುಜಬಲವು ಎಷ್ಟೋ ಶಕ್ತಿಯುಳ್ಳದ್ದಾಗಿದೆ. [QBR2] ಯೆಹೋವನೇ, ನಿನ್ನ ಭುಜಬಲವು ವೈರಿಯನ್ನು ನುಚ್ಚುನೂರು ಮಾಡಿತು. [QBR]
ವಿಮೋಚನಕಾಂಡ 15 : 7 (ERVKN)
ನೀನು ಅತ್ಯಧಿಕ ಮಹತ್ವವುಳ್ಳವನಾಗಿ, [QBR2] ನನಗೆದುರು ನಿಲ್ಲುವವರನ್ನು ನಾಶಗೊಳಿಸಿದೆ. [QBR] ಬೆಂಕಿಯು ಹುಲ್ಲನ್ನು ಸುಡುವಂತೆ [QBR2] ನಿನ್ನ ಕೋಪವು ಅವರನ್ನು ನಾಶಮಾಡಿತು. [QBR]
ವಿಮೋಚನಕಾಂಡ 15 : 8 (ERVKN)
ನೀನು ಊದಿದ ಮಹಾಗಾಳಿಯಿಂದ [QBR2] ನೀರು ಒತ್ತಟ್ಟಿಗೆ ಸೇರಿತು. [QBR] ವೇಗವಾಗಿ ಹರಿಯುವ ನೀರು ಗಟ್ಟಿಯಾದ ಗೋಡೆಯಾಯಿತು. [QBR2] ಸಾಗರಗರ್ಭದೊಳಗಿನ ಜಲವು ಗಟ್ಟಿಯಾಯಿತು.
ವಿಮೋಚನಕಾಂಡ 15 : 9 (ERVKN)
“ ‘ನಾವು ಅವರನ್ನು ಬೆನ್ನಟ್ಟಿ ಹಿಡಿಯುವೆವು; [QBR2] ನಾವು ಅವರ ಸಂಪತ್ತನ್ನೆಲ್ಲಾ ತೆಗೆದುಕೊಳ್ಳುವೆವು. [QBR] ನಾವು ಖಡ್ಗದಿಂದ ಅವರನ್ನು ಸಂಹರಿಸುವೆವು. [QBR2] ನಮ್ಮ ಭುಜಬಲದಿಂದ ಅವರ ಸ್ವತ್ತುಗಳನ್ನೆಲ್ಲಾ ವಶಪಡಿಸಿಕೊಳ್ಳುವೆವು’ [QBR2] ಎಂದುಕೊಂಡರು ವೈರಿಗಳು. [QBR]
ವಿಮೋಚನಕಾಂಡ 15 : 10 (ERVKN)
ಆದರೆ ನೀನು ಅವರ ಮೇಲೆ ಊದಿದ ಗಾಳಿಯಿಂದ [QBR2] ಸಮುದ್ರವು ಅವರನ್ನು ಮುಚ್ಚಿಕೊಂಡಿತು; [QBR] ಅವರು ಸೀಸದಂತೆ [QBR2] ಅಗಾಧವಾದ ಸಮುದ್ರದಲ್ಲಿ ಮುಳುಗಿದರು.
ವಿಮೋಚನಕಾಂಡ 15 : 11 (ERVKN)
“ಯೆಹೋವನೇ, ದೇವರುಗಳಲ್ಲಿ ನಿನಗೆ ಸಮಾನರು ಯಾರು? [QBR2] ಪರಿಶುದ್ಧತೆಯಲ್ಲಿ ನೀನೇ ಸರ್ವೋತ್ತಮನು. [QBR2] ಭಯಂಕರ ಕಾರ್ಯಗಳನ್ನು ಮಾಡಿ ಪ್ರಖ್ಯಾತಿಹೊಂದಿದವನೂ ನೀನೇ. [QBR2] ಅದ್ಭುತಕಾರ್ಯಗಳನ್ನು ಮಾಡುವಾತನೂ ನೀನೇ. [QBR]
ವಿಮೋಚನಕಾಂಡ 15 : 12 (ERVKN)
ನೀನು ನಿನ್ನ ಬಲಗೈಯನ್ನು ಚಾಚಿದಾಗ [QBR2] ಭೂಮಿಯು ಶತ್ರುಗಳನ್ನು ನುಂಗಿಬಿಟ್ಟಿತು! [QBR]
ವಿಮೋಚನಕಾಂಡ 15 : 13 (ERVKN)
ನೀನು ಬಿಡುಗಡೆ ಮಾಡಿದ ನಿನ್ನ ಜನರನ್ನು [QBR2] ಪ್ರೀತಿಯಿಂದ ನಡೆಸುವೆ. [QBR] ನಿನ್ನ ಬಲದಿಂದ ನೀನು ಈ ಜನರನ್ನು [QBR2] ನಿನ್ನ ಪವಿತ್ರವಾದ ದೇಶಕ್ಕೆ ನಡಿಸುವೆ.
ವಿಮೋಚನಕಾಂಡ 15 : 14 (ERVKN)
“ಬೇರೆ ಜನಾಂಗಗಳವರು ಇದನ್ನು ಕೇಳಿ ಭಯಭೀತರಾಗುವರು; [QBR2] ಫಿಲಿಷ್ಟಿಯರು ಭಯದಿಂದ ತಲ್ಲಣಿಸುವರು. [QBR]
ವಿಮೋಚನಕಾಂಡ 15 : 15 (ERVKN)
ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. [QBR2] ಮೋವಾಬಿನ ನಾಯಕರು ಭಯದಿಂದ ನಡುಗುವರು. [QBR2] ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು. [QBR]
ವಿಮೋಚನಕಾಂಡ 15 : 16 (ERVKN)
ನಿನ್ನ ಭುಜಬಲವನ್ನು ಅವರು ಕಂಡು [QBR2] ಭಯಭೀತರಾಗುವರು. [QBR] ಯೆಹೋವನ ಜನರು ದಾಟಿ ಹೋಗುವವರೆಗೆ, [QBR2] ನೀನು ರೂಪಿಸಿದ ಜನರು ದಾಟಿ ಹೋಗುವವರೆಗೆ, ಅವರು ಬಂಡೆಯಂತೆ ಮೌನವಾಗಿರುವರು. [QBR]
ವಿಮೋಚನಕಾಂಡ 15 : 17 (ERVKN)
ನೀನು ನಿನ್ನ ಜನರನ್ನು [QBR2] ನಿನ್ನ ಬೆಟ್ಟದ ಸೀಮೆಗೂ [QBR] ನಿನ್ನ ಸಿಂಹಾಸನಕ್ಕಾಗಿ ನೀನು ಸಿದ್ಧಮಾಡಿದ ಸ್ಥಳಕ್ಕೂ ನಡಿಸುವೆ. [QBR2] ಯೆಹೋವನೇ, ಒಡೆಯನೇ, ನಿನ್ನ ಕೈಗಳಿಂದ ನಿನ್ನ ಆಲಯವನ್ನು ಕಟ್ಟು.
ವಿಮೋಚನಕಾಂಡ 15 : 18 (ERVKN)
“ಯೆಹೋವನು ಎಂದೆಂದಿಗೂ ಆಳುವನು!” [PS]
ವಿಮೋಚನಕಾಂಡ 15 : 19 (ERVKN)
ಫರೋಹನ ಕುದುರೆಗಳು, ಸವಾರರು, ರಥಗಳು ಸಮುದ್ರದೊಳಕ್ಕೆ ಹೋದಾಗ ಸಮುದ್ರದ ನೀರು ಅವರನ್ನು ಆವರಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಇಸ್ರೇಲರಾದರೊ ಸಮುದ್ರದೊಳಗಿನ ಒಣನೆಲದಲ್ಲಿ ಸಮುದ್ರವನ್ನು ದಾಟಿಹೋದರು. [PE][PS]
ವಿಮೋಚನಕಾಂಡ 15 : 20 (ERVKN)
ಆರೋನನ ಅಕ್ಕ ಮಿರ್ಯಾಮಳು ಪ್ರವಾದಿನಿಯಾಗಿದ್ದು ದಮ್ಮಡಿಯನ್ನು ಕೈಯಲ್ಲಿ ತೆಗೆದುಕೊಂಡಳು. ಮಿರ್ಯಾಮಳು ಮತ್ತು ಸ್ತ್ರೀಯರು ಹಾಡುವುದಕ್ಕೂ ಕುಣಿಯುವುದಕ್ಕೂ ಪ್ರಾರಂಭಿಸಿದರು.
ವಿಮೋಚನಕಾಂಡ 15 : 21 (ERVKN)
ಮಿರ್ಯಾಮಳು ಅವರ ಹಾಡಿಗೆ ಹೀಗೆ ಪಲ್ಲವಿ ಹಾಡಿದಳು: “ಯೆಹೋವನಿಗೆ ಗಾನಮಾಡಿರಿ; [QBR2] ಆತನು ಮಹಾಜಯಶಾಲಿಯಾದನು. [QBR] ಕುದುರೆಗಳನ್ನೂ ರಾಹುತರನ್ನೂ [QBR2] ಸಮುದ್ರದೊಳಗೆ ಮುಳುಗಿಸಿ ನಾಶಮಾಡಿದನು…” [PS]
ವಿಮೋಚನಕಾಂಡ 15 : 22 (ERVKN)
{ಅರಣ್ಯದಲ್ಲಿ ಕಹಿನೀರು ಸಿಹಿಯಾದದ್ದು} [PS] ಮೋಶೆಯು ಇಸ್ರೇಲರನ್ನು ಕೆಂಪುಸಮುದ್ರದಿಂದ ಮುನ್ನಡೆಸಿದನು. ಅವರು ಶೂರಿನ ಅರಣ್ಯದೊಳಗೆ ಹೋದರು. ಅವರು ಅರಣ್ಯದಲ್ಲಿ ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಜನರಿಗೆ ಎಲ್ಲಿಯೂ ನೀರು ಸಿಕ್ಕಲಿಲ್ಲ.
ವಿಮೋಚನಕಾಂಡ 15 : 23 (ERVKN)
ಆ ಬಳಿಕ ಅವರು ಮಾರಾ ಎಂಬ ಸ್ಥಳವನ್ನು ತಲುಪಿದರು. ಅಲ್ಲಿ ನೀರಿತ್ತು. ಆದರೆ ಅವರು ಆ ನೀರನ್ನು ಕುಡಿಯಲಾಗಲಿಲ್ಲ. ಯಾಕೆಂದರೆ ಅದು ಬಹು ಕಹಿಯಾಗಿತ್ತು. (ಆದಕಾರಣವೇ ಆ ಸ್ಥಳಕ್ಕೆ “ಮಾರಾ” ಎಂಬುದಾಗಿ ಹೆಸರು ಕೊಡಲ್ಪಟ್ಟಿತ್ತು.) [PE][PS]
ವಿಮೋಚನಕಾಂಡ 15 : 24 (ERVKN)
ಅವರು ಮೋಶೆಗೆ ದೂರು ಹೇಳತೊಡಗಿದರು. “ಈಗ, ನಾವೇನು ಕುಡಿಯೋಣ?” ಎಂದು ಅವರು ಕೇಳಿದರು. [PE][PS]
ವಿಮೋಚನಕಾಂಡ 15 : 25 (ERVKN)
ಮೋಶೆಯು ಯೆಹೋವನಿಗೆ ಪ್ರಾರ್ಥಿಸಲು ಆತನು ಅವನಿಗೆ ಒಂದು ಗಿಡವನ್ನು ತೋರಿಸಿದನು. ಮೋಶೆಯು ಆ ಗಿಡವನ್ನು ನೀರಿನಲ್ಲಿ ಹಾಕಿದಾಗ ಕಹಿನೀರು ಸಿಹಿ ನೀರಾಯಿತು. [PE][PS] ಆ ಸ್ಥಳದಲ್ಲಿ ಯೆಹೋವನು ಅವರಿಗಾಗಿ ನಿಯಮವನ್ನು ಮಾಡಿದನು. ಯೆಹೋವನು ಅವರ ನಂಬಿಕೆಯನ್ನು ಸಹ ಪರೀಕ್ಷಿಸಿದನು.
ವಿಮೋಚನಕಾಂಡ 15 : 26 (ERVKN)
ಆತನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಯೋಗ್ಯವಾದವುಗಳನ್ನು ಮಾಡಬೇಕು; ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಬೇಕು. ಆಗ ನಾನು ಈಜಿಪ್ಟಿನವರಿಗೆ ಉಂಟುಮಾಡಿದ ಕಾಯಿಲೆಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನಾಗಿದ್ದೇನೆ” ಎಂದು ಹೇಳಿದನು. [PE][PS]
ವಿಮೋಚನಕಾಂಡ 15 : 27 (ERVKN)
ಬಳಿಕ ಜನರು ಏಲೀಮಿಗೆ ಪ್ರಯಾಣ ಮಾಡಿದರು. ಏಲೀಮಿನಲ್ಲಿ ನೀರಿನ ಹನ್ನೆರಡು ಬುಗ್ಗೆಗಳಿದ್ದವು; ಅಲ್ಲಿ ಎಪ್ಪತ್ತು ಖರ್ಜೂರದ ಮರಗಳಿದ್ದವು. ಆದ್ದರಿಂದ ಅವರು ನೀರಿನ ಹತ್ತಿರ ತಮ್ಮ ಪಾಳೆಯ ಹಾಕಿದರು. [PE]
❮
❯