ವಿಮೋಚನಕಾಂಡ 25 : 1 (ERVKN)
ಪವಿತ್ರ ವಸ್ತುಗಳಿಗಾಗಿ ಕಾಣಿಕೆಗಳು ಯೆಹೋವನು ಮೋಶೆಗೆ,
ವಿಮೋಚನಕಾಂಡ 25 : 2 (ERVKN)
“ಇಸ್ರೇಲರು ನನಗೆ ಕಾಣಿಕೆಗಳನ್ನು ತರಬೇಕೆಂದು ಅವರಿಗೆ ಹೇಳು. ಪ್ರತಿಯೊಬ್ಬನು ನನಗೆ ಕೊಡುವುದರ ಬಗ್ಗೆ ತನ್ನ ಹೃದಯದಲ್ಲಿ ತೀರ್ಮಾನಿಸಿಕೊಳ್ಳಬೇಕು. ಈ ಕಾಣಿಕೆಗಳನ್ನು ನನಗಾಗಿ ಸ್ವೀಕರಿಸು.
ವಿಮೋಚನಕಾಂಡ 25 : 3 (ERVKN)
ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ,
ವಿಮೋಚನಕಾಂಡ 25 : 4 (ERVKN)
ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ,
ವಿಮೋಚನಕಾಂಡ 25 : 5 (ERVKN)
ಕೆಂಪುಬಣ್ಣದ ಕುರಿದೊಗಲು, ಉತ್ತಮ ತೊಗಲುಗಳು,* ಉತ್ತಮ ತೊಗಲು ಕಡಲು ಹಂದಿಯ ಅಥವಾ ಕಡಲು ದನದ ತೊಗಲು. ಜಾಲೀಮರ,
ವಿಮೋಚನಕಾಂಡ 25 : 6 (ERVKN)
ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
ವಿಮೋಚನಕಾಂಡ 25 : 7 (ERVKN)
ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕ ರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು.
ವಿಮೋಚನಕಾಂಡ 25 : 8 (ERVKN)
ಪವಿತ್ರ ಗುಡಾರ ಇದಲ್ಲದೆ ದೇವರು ಮೋಶೆಗೆ, “ಜನರು ನನಗೋಸ್ಕರವಾಗಿ ಒಂದು ಪವಿತ್ರ ಗುಡಾರವನ್ನು ಕಟ್ಟಬೇಕು. ಆಗ ನಾನು ಅವರ ನಡುವೆ ಅದರಲ್ಲಿ ವಾಸಿಸುವೆನು.
ವಿಮೋಚನಕಾಂಡ 25 : 9 (ERVKN)
ಪವಿತ್ರ ಗುಡಾರ ಮತ್ತು ಅದರಲ್ಲಿರುವ ಪ್ರತಿಯೊಂದು ವಸ್ತುವೂ ಹೇಗಿರಬೇಕೆಂದು ನಾನು ನಿನಗೆ ತೋರಿಸುವೆನು. ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಪ್ರತಿಯೊಂದನ್ನು ಮಾಡು.
ವಿಮೋಚನಕಾಂಡ 25 : 10 (ERVKN)
ಒಡಂಬಡಿಕೆಯ ಪೆಟ್ಟಿಗೆ “ಜಾಲೀಮರದಿಂದ ಒಂದು ವಿಶೇಷ ಪೆಟ್ಟಿಗೆಯನ್ನು ಮಾಡಿಸು. ಈ ಪವಿತ್ರ ಪೆಟ್ಟಿಗೆಯು ಎರಡೂವರೆ ಮೊಳ ಉದ್ದ, ಒಂದೂವರೆ ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
ವಿಮೋಚನಕಾಂಡ 25 : 11 (ERVKN)
ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
ವಿಮೋಚನಕಾಂಡ 25 : 12 (ERVKN)
ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯ್ಯಬೇಕು. ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
ವಿಮೋಚನಕಾಂಡ 25 : 13 (ERVKN)
ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.
ವಿಮೋಚನಕಾಂಡ 25 : 14 (ERVKN)
ಕಂಬಗಳನ್ನು ಪೆಟ್ಟಿಗೆ ಕೊನೆಗಳಲ್ಲಿರುವ ಬಳೆಗಳಲ್ಲಿ ಸೇರಿಸಿ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಬೇಕು.
ವಿಮೋಚನಕಾಂಡ 25 : 15 (ERVKN)
ಕಂಬಗಳು ಯಾವಾಗಲೂ ಪೆಟ್ಟಿಗೆಯ ಬಳೆಗಳಲ್ಲಿ ಇರಬೇಕು. ಕಂಬಗಳನ್ನು ಅವುಗಳಿಂದ ಹೊರಗೆ ತೆಗೆಯಬಾರದು.
ವಿಮೋಚನಕಾಂಡ 25 : 16 (ERVKN)
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಅದರೊಳಗೆ ಇಡು” ಎಂದು ಹೇಳಿದನು.
ವಿಮೋಚನಕಾಂಡ 25 : 17 (ERVKN)
ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.
ವಿಮೋಚನಕಾಂಡ 25 : 18 (ERVKN)
ಬಳಿಕ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ಮಾಡಿಸಿ ಕೃಪಾಸನದ ಎರಡು ಕೊನೆಗಳಲ್ಲಿ ಇಡಬೇಕು.
ವಿಮೋಚನಕಾಂಡ 25 : 19 (ERVKN)
ಕೃಪಾಸನದ ಒಂದು ಕೊನೆಯಲ್ಲಿ ಒಂದು ಕೆರೂಬಿಯನ್ನೂ ಇನ್ನೊಂದು ಕೊನೆಯಲ್ಲಿ ಇನ್ನೊಂದು ಕೆರೂಬಿಯನ್ನೂ ಜೋಡಿಸಬೇಕು.
ವಿಮೋಚನಕಾಂಡ 25 : 20 (ERVKN)
ಅವುಗಳ ರೆಕ್ಕೆಗಳು ಆಕಾಶದ ಕಡೆಗೆ ಚಾಚಿರಬೇಕು; ಪೆಟ್ಟಿಗೆಯನ್ನು ಮುಚ್ಚಿಕೊಂಡಿರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
ವಿಮೋಚನಕಾಂಡ 25 : 21 (ERVKN)
“ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಪೆಟ್ಟಿಗೆಯಲ್ಲಿಡಬೇಕು; ಕೃಪಾಸನವನ್ನು ಆ ಪೆಟ್ಟಿಗೆಯ ಮೇಲಿಡಬೇಕು.
ವಿಮೋಚನಕಾಂಡ 25 : 22 (ERVKN)
ನಾನು ನಿನಗೆ ದರ್ಶನ ಕೊಡುವಾಗ ಒಡಂಬಡಿಕೆ ಪೆಟ್ಟಿಗೆಯ ಮೇಲಿರುವ ಕೆರೂಬಿಗಳ ಮಧ್ಯದಿಂದ ನಿನ್ನ ಸಂಗಡ ಮಾತಾಡುವೆನು; ಇಸ್ರೇಲರಿಗೆ ಆಜ್ಞಾಪಿಸಬೇಕಾದವುಗಳನ್ನು ನಿನಗೆ ತಿಳಿಸುವೆನು.
ವಿಮೋಚನಕಾಂಡ 25 : 23 (ERVKN)
ಮೇಜು “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.
ವಿಮೋಚನಕಾಂಡ 25 : 24 (ERVKN)
ಶುದ್ಧಬಂಗಾರದ ತಗಡುಗಳನ್ನು ಮೇಜಿಗೆ ಹೊದಿಸಿ ಅದರ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
ವಿಮೋಚನಕಾಂಡ 25 : 25 (ERVKN)
ಬಳಿಕ ಮೇಜಿನ ಸುತ್ತಲೂ ಮೂರು ಇಂಚು ಮೂರು ಇಂಚು ಅಕ್ಷರಶಃ, “ಒಂದು ತೋಷಹ.” ಅಗಲದ ಚೌಕಟ್ಟನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.
ವಿಮೋಚನಕಾಂಡ 25 : 26 (ERVKN)
ಬಳಿಕ ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿಗೆ ಜೋಡಿಸಬೇಕು.
ವಿಮೋಚನಕಾಂಡ 25 : 27 (ERVKN)
ಆ ಬಳೆಗಳು ಅಡ್ಡಪಟ್ಟಿಗೆ ಜೋಡಿಸಿಕೊಂಡಿರಬೇಕು. ಮೇಜನ್ನು ಹೊತ್ತುಕೊಂಡು ಹೋಗುವುದಕ್ಕೆ ಉಪಯೋಗಿಸುವ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
ವಿಮೋಚನಕಾಂಡ 25 : 28 (ERVKN)
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು.
ವಿಮೋಚನಕಾಂಡ 25 : 29 (ERVKN)
ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು.
ವಿಮೋಚನಕಾಂಡ 25 : 30 (ERVKN)
ನೈವೇದ್ಯದ ರೊಟ್ಟಿಗಳನ್ನು ಮೇಜಿನ ಮೇಲೆ ನನ್ನ ಮುಂದೆ ಇಡು. ಅವು ಅಲ್ಲಿ ನನ್ನ ಮುಂದೆ ಯಾವಾಗಲೂ ಇರಬೇಕು.
ವಿಮೋಚನಕಾಂಡ 25 : 31 (ERVKN)
ದೀಪಸ್ತಂಭ “ಬಳಿಕ ಒಂದು ದೀಪಸ್ತಂಭವನ್ನು ಶುದ್ಧಬಂಗಾರದಿಂದ ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ಕಸೂತಿ ಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿದ್ದು ಪುಷ್ಪಪಾತ್ರೆಗಳಂತೆಯೂ ಅಲಂಕಾರವಾಗಿ ಕೆತ್ತಲ್ಪಡಬೇಕು.
ವಿಮೋಚನಕಾಂಡ 25 : 32 (ERVKN)
“ದೀಪಸ್ತಂಭಕ್ಕೆ ಒಂದೊಂದು ಪಾರ್ಶ್ವದಲ್ಲಿ ಮೂರುಮೂರು ಕೊಂಬೆಗಳಂತೆ ಆರು ಕೊಂಬೆಗಳಿರಬೇಕು.
ವಿಮೋಚನಕಾಂಡ 25 : 33 (ERVKN)
ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರುಮೂರು ಪುಷ್ಪಾಲಂಕಾರಗಳಿರಬೇಕು. ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು. ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
ವಿಮೋಚನಕಾಂಡ 25 : 34 (ERVKN)
ದೀಪದ ಸ್ತಂಭದಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
ವಿಮೋಚನಕಾಂಡ 25 : 35 (ERVKN)
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಥಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
ವಿಮೋಚನಕಾಂಡ 25 : 36 (ERVKN)
ಪುಷ್ಪಪಾತ್ರೆಗಳನ್ನೂ ಕೊಂಬೆಗಳನ್ನೂ ಒಳಗೊಂಡಿರುವ ದೀಪಸ್ತಂಭವು ಅಖಂಡವಾಗಿದ್ದು ಅಪ್ಪಟ ಬಂಗಾರದಿಂದಲೂ ನಕಾಸಿ ಕೆಲಸದಿಂದಲೂ ಮಾಡಿದ್ದಾಗಿರಬೇಕು.
ವಿಮೋಚನಕಾಂಡ 25 : 37 (ERVKN)
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು.
ವಿಮೋಚನಕಾಂಡ 25 : 38 (ERVKN)
ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.
ವಿಮೋಚನಕಾಂಡ 25 : 39 (ERVKN)
ದೀಪಸ್ತಂಭವನ್ನು ಮತ್ತು ಅದರ ಎಲ್ಲಾ ಉಪಕರಣಗಳನ್ನು ಎಪ್ಪತ್ತೈದು ಪೌಂಡು ಎಪ್ಪತ್ತೈದು ಪೌಂಡು ಅಕ್ಷರಶಃ, “ಒಂದು ಪಿಕಾರ್, ಅಥವಾ ಮೂರು ಸಾವಿರ ತೊಲೆ.”
ವಿಮೋಚನಕಾಂಡ 25 : 40 (ERVKN)
ನಾನು ನಿನಗೆ ಬೆಟ್ಟದ ಮೇಲೆ ತೋರಿಸಿದ ಮಾದರಿಯಂತೆಯೇ ಪ್ರತಿಯೊಂದನ್ನು ಮಾಡಬೇಕು” ಎಂದು ಹೇಳಿದನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40