ವಿಮೋಚನಕಾಂಡ 27 : 1 (ERVKN)
ಯಜ್ಞವೇದಿಕೆ ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.
ವಿಮೋಚನಕಾಂಡ 27 : 2 (ERVKN)
ಈ ಯಜ್ಞವೇದಿಕೆಯ ನಾಲ್ಕು ಮೂಲೆಗಳಿಗೆ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಪ್ರತಿಯೊಂದು ಕೊಂಬೂ ಯಜ್ಞವೇದಿಕೆಗೆ ಜೋಡಿಸಲ್ಪಟ್ಟಿರಬೇಕು. ಹೀಗೆ ಅವು ಯಜ್ಞವೇದಿಕೆಯ ಅವಿಭಾಜ್ಯ ಭಾಗವಾಗಿರಬೇಕು. ಬಳಿಕ ಯಜ್ಞವೇದಿಕೆಯನ್ನು ತಾಮ್ರದ ತಗಡಿನಿಂದ ಹೊದಿಸಬೇಕು.
ವಿಮೋಚನಕಾಂಡ 27 : 3 (ERVKN)
“ಯಜ್ಞವೇದಿಕೆಯ ಉಪಕರಣಗಳನ್ನೆಲ್ಲಾ ತಾಮ್ರದಿಂದ ಮಾಡಿಸಬೇಕು. ಬಟ್ಟಲುಗಳನ್ನು, ಸಲಿಕೆಗಳನ್ನು, ಬೋಗುಣಿಗಳನ್ನು, ಮುಳ್ಳುಗಳನ್ನು ಮತ್ತು ಅಗ್ಗಿಷ್ಟಿಕೆಗಳನ್ನು ಮಾಡಿಸಬೇಕು. ಇವುಗಳನ್ನು ಯಜ್ಞವೇದಿಕೆಯಿಂದ ಬೂದಿಯನ್ನು ತೆಗೆದು ಶುಚಿಗೊಳಿಸುವುದಕ್ಕೆ ಉಪಯೋಗಿಸಬೇಕು.
ವಿಮೋಚನಕಾಂಡ 27 : 4 (ERVKN)
ಯಜ್ಞವೇದಿಕೆಗೆ ಹೆಣಿಗೇ ಕೆಲಸದಿಂದ ತಾಮ್ರದ ಜಾಳಿಗೆ ಮಾಡಿಸಬೇಕು. ಈ ಜಾಳಿಗೆಯ ನಾಲ್ಕುಮೂಲೆಗಳಲ್ಲಿ ನಾಲ್ಕು ತಾಮ್ರದ ಬಳೆಗಳನ್ನು ಮಾಡಿಸಬೇಕು.
ವಿಮೋಚನಕಾಂಡ 27 : 5 (ERVKN)
ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.
ವಿಮೋಚನಕಾಂಡ 27 : 6 (ERVKN)
“ಯಜ್ಞವೇದಿಕೆಗೆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ತಾಮ್ರದ ತಗಡನ್ನು ಹೊದಿಸಬೇಕು.
ವಿಮೋಚನಕಾಂಡ 27 : 7 (ERVKN)
ಯಜ್ಞವೇದಿಕೆಯ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಕೋಲುಗಳನ್ನು ಸೇರಿಸಬೇಕು. ಈ ಕೋಲುಗಳಿಂದ ಯಜ್ಞವೇದಿಕೆಯನ್ನು ಹೊತ್ತುಕೊಂಡು ಹೋಗಬೇಕು.
ವಿಮೋಚನಕಾಂಡ 27 : 8 (ERVKN)
ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು.
ವಿಮೋಚನಕಾಂಡ 27 : 9 (ERVKN)
ಪವಿತ್ರಗುಡಾರದ ಅಂಗಳ “ಪವಿತ್ರಗುಡಾರಕ್ಕೆ ಅಂಗಳವನ್ನು ಮಾಡಿಸಬೇಕು. ದಕ್ಷಿಣ ದಿಕ್ಕಿನಲ್ಲಿ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಈ ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು.
ವಿಮೋಚನಕಾಂಡ 27 : 10 (ERVKN)
ಇಪ್ಪತ್ತು ಕಂಬಗಳನ್ನು ಮತ್ತು ಆ ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳನ್ನು ಮಾಡಿಸಬೇಕು. ಕಂಬಗಳಿಗೆ ಬೆಳ್ಳಿಯ ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳಿಗೆ ಬೆಳ್ಳಿಯ ಕಂಬಿಗಳನ್ನು ಮಾಡಿಸಬೇಕು.
ವಿಮೋಚನಕಾಂಡ 27 : 11 (ERVKN)
ಉತ್ತರ ದಿಕ್ಕಿನಲ್ಲಿ ಸಹ ನೂರು ಮೊಳ ಉದ್ದದ ಪರದೆಗಳ ಗೋಡೆಯಿರಬೇಕು. ಅದಕ್ಕೆ ಇಪ್ಪತ್ತು ಕಂಬಿಗಳು ಮತ್ತು ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇರಬೇಕು. ಕಂಬಗಳ ಕೊಂಡಿಗಳನ್ನು ಮತ್ತು ಪರದೆಯ ಕಟ್ಟುಗಳನ್ನು ಬೆಳ್ಳಿಯಿಂದ ಮಾಡಿಸಬೇಕು.
ವಿಮೋಚನಕಾಂಡ 27 : 12 (ERVKN)
“ಪಶ್ಚಿಮದಿಕ್ಕಿನಲ್ಲಿ ಅಂಗಳದ ಅಗಲಕ್ಕೆ ಐವತ್ತು ಮೊಳ ಉದ್ದದ ಪರದೆಗಳೂ ಹತ್ತು ಕಂಬಗಳೂ ಮತ್ತು ಹತ್ತು ಗದ್ದಿಗೇಕಲ್ಲುಗಳೂ ಇರಬೇಕು.
ವಿಮೋಚನಕಾಂಡ 27 : 13 (ERVKN)
ಅಂಗಳದ ಪೂರ್ವದಿಕ್ಕಿನಲ್ಲಿ ಐವತ್ತು ಮೊಳ ಉದ್ದ ಇರಬೇಕು.
ವಿಮೋಚನಕಾಂಡ 27 : 14 (ERVKN)
ಈ ಪೂರ್ವದಿಕ್ಕಿನಲ್ಲಿ ಅಂಗಳದ ಪ್ರವೇಶದ್ವಾರವಿರುತ್ತದೆ. ಪ್ರವೇಶದ್ವಾರದ ಒಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು ಮತ್ತು ಮೂರು ಗದ್ದಿಗೇಕಲ್ಲುಗಳು ಇರಬೇಕು.
ವಿಮೋಚನಕಾಂಡ 27 : 15 (ERVKN)
ಇನ್ನೊಂದು ಕಡೆಯಲ್ಲಿ ಹದಿನೈದು ಮೊಳ ಉದ್ದದ ಪರದೆಗಳು, ಮೂರು ಕಂಬಗಳು; ಮೂರು ಗದ್ದಿಗೇಕಲ್ಲುಗಳು ಇರಬೇಕು.
ವಿಮೋಚನಕಾಂಡ 27 : 16 (ERVKN)
“ಅಂಗಳದ ದ್ವಾರವನ್ನು ಮುಚ್ಚುವುದಕ್ಕೆ ಇಪ್ಪತ್ತು ಮೊಳ ಉದ್ದದ ಪರದೆಯನ್ನು ಮಾಡಿಸಬೇಕು. ಪರದೆಯನ್ನು ಉತ್ತಮ ನಾರಿನ ಬಟ್ಟೆಯಿಂದ ಮತ್ತು ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಮಾಡಿಸಬೇಕು. ಆ ಪರದೆಯಲ್ಲಿ ಅಲಂಕೃತವಾದ ಚಿತ್ರಗಳನ್ನು ಬುಟೇದಾರೀ ಕೆಲಸದವರಿಂದ ಮಾಡಿಸಬೇಕು. ಆ ಪರದೆಗೆ ನಾಲ್ಕು ಕಂಬಗಳು ಮತ್ತು ನಾಲ್ಕು ಗದ್ದಿಗೇಕಲ್ಲುಗಳು ಇರಬೇಕು.
ವಿಮೋಚನಕಾಂಡ 27 : 17 (ERVKN)
ಅಂಗಳದ ಸುತ್ತಲಿರುವ ಕಂಬಗಳನ್ನೆಲ್ಲ ಬೆಳ್ಳಿಯ ಪರದೆ ಕೋಲುಗಳೊಡನೆ ಜೋಡಿಸಬೇಕು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದಲೂ ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದಲೂ ಮಾಡಿಸಬೇಕು.
ವಿಮೋಚನಕಾಂಡ 27 : 18 (ERVKN)
ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು.
ವಿಮೋಚನಕಾಂಡ 27 : 19 (ERVKN)
ಪವಿತ್ರಗುಡಾರದ ಉಪಕರಣಗಳನ್ನೂ ಗುಡಾರದ ಗೂಟಗಳನ್ನೂ ಗುಡಾರದ ಸುತ್ತಲೂ ಇರುವ ಪರದೆಯ ಗೂಟಗಳನ್ನೂ ತಾಮ್ರದಿಂದ ಮಾಡಿಸಬೇಕು.
ವಿಮೋಚನಕಾಂಡ 27 : 20 (ERVKN)
ದೀಪದ ಎಣ್ಣೆ “ಉತ್ತಮವಾದ ಆಲಿವ್‌ಎಣ್ಣೆಯನ್ನು ತರಬೇಕೆಂದು ಇಸ್ರೇಲರಿಗೆ ಆಜ್ಞಾಪಿಸು. ಪ್ರತಿ ಸಾಯಂಕಾಲ ಉರಿಸುವ ದೀಪಕ್ಕೆ ಈ ಎಣ್ಣೆಯನ್ನು ಉಪಯೋಗಿಸು.
ವಿಮೋಚನಕಾಂಡ 27 : 21 (ERVKN)
ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21