ವಿಮೋಚನಕಾಂಡ 6 : 1 (ERVKN)
ಆಗ ಯೆಹೋವನು ಮೋಶೆಗೆ, “ನಾನು ಫರೋಹನಿಗೆ ಮಾಡುವುದನ್ನು ಈಗ ನೀನು ನೋಡುವೆ. ನಾನು ನನ್ನ ಮಹಾಶಕ್ತಿಯನ್ನು ಅವನಿಗೆ ವಿರುದ್ಧವಾಗಿ ಉಪಯೋಗಿಸುವುದರಿಂದ ಅವನು ನನ್ನ ಜನರನ್ನು ಹೋಗಗೊಡಿಸುವನು; ಬಲವಂತದಿಂದ ಅವರನ್ನು ಹೊರಡಿಸುವನು” ಎಂದು ಹೇಳಿದನು.
ವಿಮೋಚನಕಾಂಡ 6 : 3 (ERVKN)
“ನಾನು ಯೆಹೋವನೇ. ನಾನು ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಕಾಣಿಸಿಕೊಂಡೆನು. ಅವರು ನನ್ನನ್ನು ‘ಎಲ್ ಶದ್ದಾಯ್’ (ಸರ್ವಶಕ್ತನಾದ ದೇವರು) ಎಂದು ಕರೆದರು. ಆದರೆ ನಾನು ನನ್ನನ್ನು ಯೆಹೋವ ಎಂಬ ನನ್ನ ಹೆಸರಿನಲ್ಲಿ ಅವರಿಗೆ ಗೊತ್ತುಪಡಿಸಿಕೊಳ್ಳಲಿಲ್ಲ.
ವಿಮೋಚನಕಾಂಡ 6 : 4 (ERVKN)
ನಾನು ಅವರೊಂದಿಗೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡೆನು. ಕಾನಾನ್ ದೇಶವನ್ನು ಅವರಿಗೆ ಕೊಡುವುದಾಗಿ ನಾನು ವಾಗ್ದಾನ ಮಾಡಿದೆನು. ಅವರು ಆ ದೇಶದಲ್ಲಿ ಜೀವಿಸಿದರೂ ಅದು ಅವರ ಸ್ವಂತ ದೇಶವಾಗಿರಲಿಲ್ಲ.
ವಿಮೋಚನಕಾಂಡ 6 : 5 (ERVKN)
ಈಗ ಇಸ್ರೇಲರ ಕಷ್ಟಗಳನ್ನೂ ಬಲ್ಲೆನು; ಅವರು ಈಜಿಪ್ಟಿನವರ ಗುಲಾಮರೆಂದೂ ಬಲ್ಲೆನು; ನಾನು ನನ್ನ ಒಡಂಬಡಿಕೆಯನ್ನು ಜ್ಞಾಪಿಸಿಕೊಂಡಿದ್ದೇನೆ.
ವಿಮೋಚನಕಾಂಡ 6 : 6 (ERVKN)
ಆದ್ದರಿಂದ ನನ್ನ ಈ ಮಾತುಗಳನ್ನು ಇಸ್ರೇಲರಿಗೆ ತಿಳಿಸು: ‘ನಾನೇ ಯೆಹೋವನು. ಈಜಿಪ್ಟಿನವರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸದಿಂದ ತಪ್ಪಿಸಿ ಈಜಿಪ್ಟಿನವರ ಗುಲಾಮಗಿರಿಯಿಂದ ಬಿಡಿಸುವೆನು. ನನ್ನ ಮಹಾಶಕ್ತಿಯಿಂದ ಈಜಿಪ್ಟಿನವರನ್ನು ಭಯಂಕರವಾಗಿ ದಂಡಿಸುವೆನು; ಬಳಿಕ ನಿಮ್ಮನ್ನು ರಕ್ಷಿಸುವೆನು.
ವಿಮೋಚನಕಾಂಡ 6 : 7 (ERVKN)
ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ನಿಮ್ಮ ದೇವರಾಗಿರುವ ಯೆಹೋವನಾದ ನಾನೇ ನಿಮ್ಮನ್ನು ಈಜಿಪ್ಟಿನವರ ಬಿಟ್ಟೀಕೆಲಸದಿಂದ ಬಿಡುಗಡೆಗೊಳಿಸಿದೆನೆಂದು ಆಗ ನೀವು ತಿಳಿದುಕೊಳ್ಳುವಿರಿ.
ವಿಮೋಚನಕಾಂಡ 6 : 8 (ERVKN)
ಇದಲ್ಲದೆ ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ನಾನು ವಾಗ್ದಾನ ಮಾಡಿದ ದೇಶಕ್ಕೆ ನಿಮ್ಮನ್ನು ನಡಿಸುವೆನು. ನಾನು ಆ ದೇಶವನ್ನು ನಿಮಗೆ ಕೊಡುವೆನು. ಅದು ನಿಮ್ಮದಾಗಿರುವುದು. ನಾನೇ ಯೆಹೋವನು’ ” ಎಂದು ಹೇಳಿದನು.
ವಿಮೋಚನಕಾಂಡ 6 : 9 (ERVKN)
ಅಂತೆಯೇ ಮೋಶೆಯು ಇಸ್ರೇಲರಿಗೆ ತಿಳಿಸಿದನು. ಆದರೆ ಜನರು ಬಹು ಪ್ರಯಾಸಪಟ್ಟು ದುಡಿಯುತ್ತಿದ್ದುದರಿಂದ ಮೋಶೆಯ ಮಾತಿಗೆ ಕಿವಿಗೊಡುವಷ್ಟು ತಾಳ್ಮೆ ಅವರಿಗಿರಲಿಲ್ಲ.
ವಿಮೋಚನಕಾಂಡ 6 : 10 (ERVKN)
ವಿಮೋಚನಕಾಂಡ 6 : 11 (ERVKN)
“ಹೋಗು, ಇಸ್ರೇಲರನ್ನು ಈಜಿಪ್ಟಿನಿಂದ ಕಳುಹಿಸಬೇಕೆಂದು ಫರೋಹನಿಗೆ ಹೇಳು” ಅಂದನು.
ವಿಮೋಚನಕಾಂಡ 6 : 12 (ERVKN)
ಅದಕ್ಕೆ ಮೋಶೆ, “ಇಸ್ರೇಲರು ನನ್ನ ಮಾತನ್ನು ಕೇಳುವುದಿಲ್ಲ! ಆದ್ದರಿಂದ ಫರೋಹನು ನನ್ನ ಮಾತನ್ನು ಖಂಡಿತವಾಗಿ ಕೇಳುವುದಿಲ್ಲ. ನಾನು ಮಾತಾಡುವುದರಲ್ಲಿ ಜಾಣನಲ್ಲ”* ಮಾತಾಡುವುದರಲ್ಲಿ ಜಾಣನಲ್ಲ ಅಥವಾ “ನಾನು ವಿದೇಶಿಯವನಂತೆ ಮಾತಾಡುತ್ತೇನೆ” ಅಕ್ಷರಶಃ, “ನನ್ನ ತುಟಿಗಳಿಗೆ ಸುನ್ನತಿಯಾಗಿಲ್ಲ.” ಎಂದು ಹೇಳಿದನು.
ವಿಮೋಚನಕಾಂಡ 6 : 13 (ERVKN)
ಆದರೆ, ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತಾಡಿ ಇಸ್ರೇಲರೊಡನೆಯೂ ಫರೋಹನೊಡನೆಯೂ ಮಾತಾಡಬೇಕೆಂದು ಆಜ್ಞಾಪಿಸಿದನು. ಅಲ್ಲದೆ ಈಜಿಪ್ಟಿನಿಂದ ಇಸ್ರೇಲರನ್ನು ಬಿಡಿಸಿಕೊಂಡು ಹೋಗಬೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
ವಿಮೋಚನಕಾಂಡ 6 : 14 (ERVKN)
ಇಸ್ರೇಲರ ಕೆಲವು ಕುಟುಂಬಗಳು ಇಸ್ರೇಲರ ಕುಟುಂಬಗಳ ನಾಯಕರುಗಳ ಹೆಸರುಗಳು ಇಲ್ಲಿವೆ: ಇಸ್ರೇಲನ ಮೊದಲನೆಯ ಮಗನಾದ ರೂಬೇನನಿಗೆ ನಾಲ್ಕು ಗಂಡುಮಕ್ಕಳಿದ್ದರು. ಅವರು ಯಾರೆಂದರೆ: ಹನೋಕ್, ಫಲ್ಲು, ಹೆಚ್ರೋನ್ ಮತ್ತು ಕರ್ಮೀ.
ವಿಮೋಚನಕಾಂಡ 6 : 15 (ERVKN)
ಸಿಮೆಯೋನನ ಗಂಡುಮಕ್ಕಳು ಯಾರೆಂದರೆ: ಯೆಮೂಯೇಲ್, ಯಾಮೀನ್, ಓಹದ್, ಯಾಕೀನ್, ಚೋಹರ್ ಮತ್ತು ಸೌಲ. (ಸೌಲನು ಕಾನಾನ್ಯ ಸ್ತ್ರೀಯ ಮಗನು.)
ವಿಮೋಚನಕಾಂಡ 6 : 16 (ERVKN)
ಲೇವಿಯು ನೂರಮೂವತ್ತೇಳು ವರ್ಷ ಜೀವಿಸಿದನು. ಲೇವಿಯ ಗಂಡುಮಕ್ಕಳ ವಂಶಾವಳಿ: ಗೇರ್ಷೋನ್, ಕೆಹಾತ್ ಮತ್ತು ಮೆರಾರೀ.
ವಿಮೋಚನಕಾಂಡ 6 : 17 (ERVKN)
ಗೇರ್ಷೋನನಿಗೆ ಲಿಬ್ನೀ ಮತ್ತು ಶಿಮ್ಮೀ ಎಂಬ ಇಬ್ಬರು ಗಂಡುಮಕ್ಕಳಿದ್ದರು.
ವಿಮೋಚನಕಾಂಡ 6 : 18 (ERVKN)
ಕೆಹಾತನು ನೂರಮೂವತ್ತು ಮೂರು ವರ್ಷ ಜೀವಿಸಿದನು. ಕೆಹಾತನ ಗಂಡುಮಕ್ಕಳು: ಅಮ್ರಾಮ್, ಇಚ್ಹಾರ್, ಹೆಬ್ರೋನ್ ಮತ್ತು ಉಜ್ಜೀಯೇಲ್.
ವಿಮೋಚನಕಾಂಡ 6 : 19 (ERVKN)
ಮೆರಾರೀಯ ಗಂಡುಮಕ್ಕಳು: ಮಹ್ಲೀ ಮತ್ತು ಮೂಷೀ. ಇಸ್ರೇಲನ ಮಗನಾದ ಲೇವಿಯಿಂದುಂಟಾದ ಗೋತ್ರಗಳು ಇವೇ.
ವಿಮೋಚನಕಾಂಡ 6 : 20 (ERVKN)
ಅಮ್ರಾಮನು ನೂರಮೂವತ್ತೇಳು ವರ್ಷ ಜೀವಿಸಿದನು. ಅಮ್ರಾಮನು ತನ್ನ ತಂದೆಯ ಸಹೋದರಿಯಾದ ಯೋಕೆಬೆದಳನ್ನು ಮದುವೆಯಾದನು. ಅಮ್ರಾಮ್ ಮತ್ತು ಯೋಕೆಬೆದಳು ಆರೋನ ಮತ್ತು ಮೋಶೆಗೆ ಜನ್ಮವಿತ್ತರು.
ವಿಮೋಚನಕಾಂಡ 6 : 21 (ERVKN)
ಇಚ್ಹಾರನ ಗಂಡುಮಕ್ಕಳು: ಕೋರಹ, ನೆಫೆಗ್ ಮತ್ತು ಜಿಕ್ರಿ.
ವಿಮೋಚನಕಾಂಡ 6 : 22 (ERVKN)
ಉಜ್ಜೀಯೇಲನ ಗಂಡುಮಕ್ಕಳು: ಮೀಷಾಯೇಲ್, ಎಲ್ಚಾಫಾನ್ ಮತ್ತು ಸಿತ್ರೀ.
ವಿಮೋಚನಕಾಂಡ 6 : 23 (ERVKN)
ಆರೋನನು ಎಲೀಶೇಬಳನ್ನು ಮದುವೆಯಾದನು. (ಎಲೀಶೇಬಳು ಅಮ್ಮೀನಾದ್ವಾನ ಮಗಳು ಮತ್ತು ನಹಶೋನನ ತಂಗಿ.) ಆರೋನನಿಗೆ ಎಲೀಶೇಬಳಲ್ಲಿ ನಾದ್ವಾ್, ಅಬೀಹೂ, ಎಲ್ಲಾಜಾರ್ ಮತ್ತು ಈತಾಮಾರ್ ಎಂಬ ಗಂಡುಮಕ್ಕಳು ಹುಟ್ಟಿದರು.
ವಿಮೋಚನಕಾಂಡ 6 : 24 (ERVKN)
ಕೋರಹನ ಗಂಡುಮಕ್ಕಳು: ಅಸ್ಸೀರ್, ಎಲ್ಕಾನಾ ಮತ್ತು ಅಬೀಯಾಸಾಫ್. ಇವರೇ ಕೋರಹನ ಕುಲಗಳು.
ವಿಮೋಚನಕಾಂಡ 6 : 25 (ERVKN)
ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಗಳನ್ನು ಮದುವೆಯಾದನು; ಆಕೆ ಫೀನೆಹಾಸನಿಗೆ ಜನ್ಮವಿತ್ತಳು. ಇವರೆಲ್ಲರೂ ಇಸ್ರೇಲನ ಮಗನಾದ ಲೇವಿಯ ಗೋತ್ರದವರು.
ವಿಮೋಚನಕಾಂಡ 6 : 26 (ERVKN)
ಮೋಶೆ ಆರೋನರು ಸಹ ಲೇವಿ ಕುಲದವರು. “ನನ್ನ ಜನರನ್ನು ಗುಂಪುಗುಂಪಾಗಿ† ಗುಂಪುಗುಂಪಾಗಿ ಇದು ಸೇನೆಯಲ್ಲಿ ಉಪಯೋಗಿಸುವ ಪದ ಪ್ರಯೋಗ, ಇಸ್ರೇಲರು ವ್ಯವಸ್ಥಿತವಾದ ಸೈನ್ಯವಾಗಿದ್ದರು ಎಂದು ಇದು ತೋರಿಸುತ್ತದೆ. ಈಜಿಪ್ಟಿನಿಂದ ನಡೆಸಿಕೊಂಡು ಹೋಗಿ” ಎಂದು ದೇವರು ಹೇಳಿದ್ದು ಇವರಿಗೇ.
ವಿಮೋಚನಕಾಂಡ 6 : 27 (ERVKN)
ಇಸ್ರೇಲರು ಈಜಿಪ್ಟಿನಿಂದ ಹೊರಟುಹೋಗಲು ಅನುಮತಿ ನೀಡಬೇಕೆಂದು ಈಜಿಪ್ಟಿನ ರಾಜನಾದ ಫರೋಹನೊಂದಿಗೆ ಮಾತಾಡಿದವರು ಮೋಶೆ ಮತ್ತು ಆರೋನರೇ.
ವಿಮೋಚನಕಾಂಡ 6 : 28 (ERVKN)
ಯೆಹೋವನು ಮೋಶೆಯನ್ನು ತಿರುಗಿ ಕರೆದದ್ದು ಬಳಿಕ ಯೆಹೋವನು ಮೋಶೆಯ ಸಂಗಡ ಈಜಿಪ್ಟಿನಲ್ಲಿ ಮಾತಾಡಿ,
ವಿಮೋಚನಕಾಂಡ 6 : 29 (ERVKN)
“ನಾನು ಯೆಹೋವನು. ನಾನು ನಿನಗೆ ತಿಳಿಸುವ ಪ್ರತಿಯೊಂದನ್ನು ಈಜಿಪ್ಟಿನ ರಾಜನಿಗೆ ಹೇಳು” ಅಂದನು.
ವಿಮೋಚನಕಾಂಡ 6 : 30 (ERVKN)
ಆದರೆ ಮೋಶೆ ಯೆಹೋವನಿಗೆ, “ನಾನು ಒಳ್ಳೆಯ ಮಾತುಗಾರನಲ್ಲ. ರಾಜನು ನನ್ನ ಮಾತನ್ನು ಕೇಳುವನೇ?” ಎಂದು ಉತ್ತರಿಸಿದನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30