ಯೆಹೆಜ್ಕೇಲನು 14 : 1 (ERVKN)
{ವಿಗ್ರಹಾರಾಧಕರ ವಿರುದ್ಧ ಎಚ್ಚರಿಕೆ} [PS] ಇಸ್ರೇಲರ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನೊಂದಿಗೆ ಮಾತಾಡಲು ಕುಳಿತುಕೊಂಡರು.
ಯೆಹೆಜ್ಕೇಲನು 14 : 2 (ERVKN)
ಆಗ ಯೆಹೋವನ ವಾಕ್ಯವು ನನಗೆ ಬಂತು. ಆತನು ನನಗೆ ಹೇಳಿದ್ದೇನೆಂದರೆ,
ಯೆಹೆಜ್ಕೇಲನು 14 : 3 (ERVKN)
“ನರಪುತ್ರನೇ, ಈ ಜನರು ತಮ್ಮ ವಿಗ್ರಹಗಳಿಗೆ ಪ್ರತಿಷ್ಠಿತರಾಗಿದ್ದಾರೆ ಮತ್ತು ಪಾಪಕ್ಕೆ ಬೀಳಲು ತಮಗೆ ತಾವೇ ಅವಕಾಶಮಾಡಿಕೊಡುತ್ತಾರೆ. ಸಹಾಯಕ್ಕಾಗಿ ನನ್ನನ್ನು ಕೇಳಿಕೊಳ್ಳಲು ಅವರಿಗೆ ಅವಕಾಶ ಕೊಡಬೇಕೇ? ಇಲ್ಲ.
ಯೆಹೆಜ್ಕೇಲನು 14 : 4 (ERVKN)
ಆದರೆ ನಾನು ಅವರಿಗೆ ಉತ್ತರಕೊಡುವೆನು. ಅವರಿಗೆ ನೀನು ಹೀಗೆ ಹೇಳಬೇಕು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ: ಇಸ್ರೇಲರಲ್ಲಿ ಯಾರಾದರೂ ಪ್ರವಾದಿಯ ಬಳಿಗೆ ಬಂದು ನನ್ನ ಸಲಹೆಯನ್ನು ಕೇಳಿದರೆ, ನಾನೇ ಆ ಮನುಷ್ಯನಿಗೆ ಉತ್ತರ ಕೊಡುವೆನು. ಅವನ ಬಳಿಯಲ್ಲಿ ಹೊಲಸು ವಿಗ್ರಹಗಳಿದ್ದರೂ, ಅವನನ್ನು ಪಾಪದಲ್ಲಿ ಬೀಳುವಂತೆ ಮಾಡಿದ ವಸ್ತುಗಳನ್ನು ಅವನು ಇಟ್ಟುಕೊಂಡಿದ್ದರೂ, ಅವನು ಆ ವಿಗ್ರಹಗಳನ್ನು ಇನ್ನೂ ಪೂಜೆ ಮಾಡುತ್ತಿದ್ದರೂ ನಾನು ಅವನೊಂದಿಗೆ ಮಾತನಾಡುವೆನು. ಅವನ ವಿಗ್ರಹಾರಾಧನೆಗೆ ತಕ್ಕ ಉತ್ತರವನ್ನೆ ಕೊಡುವೆನು.
ಯೆಹೆಜ್ಕೇಲನು 14 : 5 (ERVKN)
ಯಾಕೆಂದರೆ ನಾನು ಅವರ ಹೃದಯಗಳನ್ನು ಪರಿವರ್ತಿಸಬೇಕು. ಅವರು ನನ್ನನ್ನು ತೊರೆದು ಹೊಲಸು ವಿಗ್ರಹಗಳನ್ನು ಪೂಜಿಸಿದರೂ ನಾನು ಅವರನ್ನು ಪ್ರೀತಿಸುತ್ತೇನೆ ಎಂಬುದನ್ನು ಅವರು ತಿಳಿದುಕೊಳ್ಳಬೇಕು. ಇದೇ ನನ್ನ ಉದ್ದೇಶ’ [PE][PS]
ಯೆಹೆಜ್ಕೇಲನು 14 : 6 (ERVKN)
“ಆದ್ದರಿಂದ ಇಸ್ರೇಲ್ ಜನರಿಗೆ ಈ ವಿಷಯವನ್ನು ತಿಳಿಸು. ಅವರಿಗೆ ಹೀಗೆ ಹೇಳು: ‘ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, ನಿಮ್ಮ ಹೊಲಸು ವಿಗ್ರಹಗಳನ್ನು ತೊರೆದುಬಿಟ್ಟು ನನ್ನ ಬಳಿಗೆ ಹಿಂತಿರುಗಿರಿ. ಆ ಭಯಂಕರ ಸುಳ್ಳು ದೇವರಿಂದ ತೊಲಗಿರಿ.
ಯೆಹೆಜ್ಕೇಲನು 14 : 7 (ERVKN)
ಯೆಹೋವನಾದ ನಾನೇ ಸಬತಃ ಪ್ರತಿಯೊಬ್ಬನಿಗೂ ಉತ್ತರಿಸುವೆನು ಅಂದರೆ ಅವನು ತನ್ನನ್ನು ಪಾಪಕ್ಕೆ ಬೀಳಿಸುವ ವಿಗ್ರಹಗಳನ್ನು ಹೊಂದಿದ್ದರೂ ಆ ವಿಗ್ರಹಗಳನ್ನು ಪೂಜಿಸುತ್ತಿದ್ದರೂ ಮತ್ತು ನನ್ನಿದ ತನ್ನನ್ನು ಬೇರ್ಪಡಿಸಿಕೊಳ್ಳುತ್ತಿದ್ದರೂ ನನ್ನ ಉಪದೇಶಕ್ಕಾಗಿ ನನ್ನ ಬಳಿಗೆ ಬಂದರೆ ಅವನು ಇಸ್ರೇಲನಾಗಿದ್ದರೂ ಇಸ್ರೇಲಿನಲ್ಲಿ ವಾಸವಾಗಿರುವ ಪರದೇಶಿಯಾಗಿದ್ದರೂ ನಾನು ಶಾಪವೆಂಬ ಉತ್ತರ ಕೊಡುವೆನು.
ಯೆಹೆಜ್ಕೇಲನು 14 : 8 (ERVKN)
ನಾನು ಅವನ ವಿರುದ್ಧವಾಗಿ ತಿರುಗಿ ಅವನನ್ನು ನಾಶಮಾಡುವೆನು. ಅವನು ಇಸ್ರೇಲರಿಗೆ ನಿದರ್ಶನವಾಗಿರಬೇಕು, ಜನರು ಅವನನ್ನು ನೋಡಿ ನಗಾಡುವರು. ನಾನು ಅವನನ್ನು ನನ್ನ ಜನರ ಮಧ್ಯದಿಂದ ತೆಗೆದು ಬಿಡುವೆನು. ಆಗ ನೀವು ನಾನೇ ಯೆಹೋವನೆಂದು ತಿಳಿಯುವಿರಿ.
ಯೆಹೆಜ್ಕೇಲನು 14 : 9 (ERVKN)
ಆದರೆ ಒಬ್ಬ ಪ್ರವಾದಿಯು ಅವನಿಗೆ ತನ್ನದೇ ಆದ ಉತ್ತರವನ್ನು ಕೊಡುವಷ್ಟು ಮೂರ್ಖನಾಗಿದ್ದರೆ, ಆಗ ನಾನು, ಅವನು ಎಂಥಾ ಮೂರ್ಖನಾಗಿದ್ದಾನೆಂದು ತೋರಿಸುವೆನು. ಅವನ ಮೇಲೆ ನನ್ನ ಸಾಮರ್ಥ್ಯವನ್ನು ಪ್ರಯೋಗಿಸುವೆನು. ಅವನನ್ನು ನಾಶಮಾಡಿ ನನ್ನ ಜನರ ಮಧ್ಯದಿಂದ ಅವನನ್ನು ತೆಗೆದುಬಿಡುವೆನು.
ಯೆಹೆಜ್ಕೇಲನು 14 : 10 (ERVKN)
ಹೀಗೆ, ಸಲಹೆ ಕೇಳಲು ಬಂದ ಮನುಷ್ಯನೂ ಅವನಿಗೆ ಉತ್ತರಕೊಟ್ಟ ಪ್ರವಾದಿಯೂ ಒಂದೇ ಶಿಕ್ಷೆಯನ್ನು ಹೊಂದುವರು.
ಯೆಹೆಜ್ಕೇಲನು 14 : 11 (ERVKN)
ಆಗ ಇಸ್ರೇಲಿನ ಜನರು ಇನ್ನೆಂದಿಗೂ ನನ್ನ ನಾಯಕತಬವನ್ನು ತೊರೆದು ಅಲೆದಾಡುವದಿಲ್ಲ. ಹೀಗೆ, ಅವರು ತಮ್ಮ ದಂಗೆಕೋರತನದ ಮಾರ್ಗಗಳಿಂದ ಇನ್ನೆಂದಿಗೂ ತಮ್ಮನ್ನು ಅಪವಿತ್ರರನ್ನಾಗಿ ಮಾಡಿಕೊಳ್ಳುವುದಿಲ್ಲ. ಆಗ ಅವರು ನಿಜವಾಗಿಯೂ ನನ್ನ ಜನರಾಗಿರುವರು ಮತ್ತು ನಾನು ಅವರ ದೇವರಾಗಿರುವೆನು.’ ” ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ. [PS]
ಯೆಹೆಜ್ಕೇಲನು 14 : 12 (ERVKN)
{ಜೆರುಸಲೇಮ್ ದಂಡಿಸಲ್ಪಡುವುದು} [PS] ಆಗ ಯೆಹೋವನ ನುಡಿ ನನಗೆ ಬಂತು. ಆತನು ಹೀಗೆ ಹೇಳಿದನು,
ಯೆಹೆಜ್ಕೇಲನು 14 : 13 (ERVKN)
“ನರಪುತ್ರನೇ, ನನಗೆ ಅಪನಂಬಿಗಸ್ತರಾಗಿದ್ದು ನನ್ನ ವಿರುದ್ಧ ಪಾಪಮಾಡುವ ಯಾವ ದೇಶವನ್ನಾದರೂ ನಾನು ದಂಡಿಸುತ್ತೇನೆ. ನಾನು ಅವರ ಆಹಾರ ಸರಬರಾಜನ್ನು ನಿಲ್ಲಿಸುತ್ತೇನೆ. ನಾನು ಕ್ಷಾಮವನ್ನು ಕಳುಹಿಸಿ ಅವರ ಜನರನ್ನೂ ಪ್ರಾಣಿಗಳನ್ನೂ ನಾಶಮಾಡುವೆ.
ಯೆಹೆಜ್ಕೇಲನು 14 : 14 (ERVKN)
ಆ ದೇಶದಲ್ಲಿ ನೋಹ, ದಾನಿಯೇಲ, ಯೋಬ ಜೀವಿಸಿದ್ದರೂ ಆ ಮೂವರು ತಮ್ಮ ಸತ್ಕಾರ್ಯಗಳಿಂದ ತಮ್ಮ ಪ್ರಾಣಗಳನ್ನು ಉಳಿಸಿಕೊಳ್ಳುತ್ತಿದ್ದರೇ ಹೊರತು ಇಡೀ ದೇಶವನ್ನು ರಕ್ಷಿಸಲಾಗುತ್ತಿರಲಿಲ್ಲ.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. [PE][PS]
ಯೆಹೆಜ್ಕೇಲನು 14 : 15 (ERVKN)
ದೇವರು ಹೇಳಿದ್ದೇನೆಂದರೆ: “ಒಂದುವೇಳೆ, ನಾನು ಕ್ರೂರಪ್ರಾಣಿಗಳನ್ನು ದೇಶದೊಳಗೆ ಕಳುಹಿಸಿ ಜನರನ್ನು ಕೊಂದರೆ, ಅವುಗಳ ದೆಸೆಯಿಂದ ಯಾವನೂ ದೇಶದಲ್ಲಿ ಪ್ರಯಾಣಮಾಡಲಾಗುತ್ತಿರಲಿಲ್ಲ.
ಯೆಹೆಜ್ಕೇಲನು 14 : 16 (ERVKN)
ನನ್ನ ಜೀವದಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ದೇಶವು ನಿರ್ಜನವಾಗುತ್ತಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. [PE][PS]
ಯೆಹೆಜ್ಕೇಲನು 14 : 17 (ERVKN)
ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ಅವರ ವಿರುದ್ಧ ಹೋರಾಡಲು ನಾನು ಶತ್ರುಸೈನ್ಯವೊಂದನ್ನು ಕಳುಹಿಸಿದರೆ, ಎಲ್ಲಾ ಜನರು ಮತ್ತು ಎಲ್ಲಾ ಪ್ರಾಣಿಗಳು ನಾಶವಾಗುತ್ತಿದ್ದವು.
ಯೆಹೆಜ್ಕೇಲನು 14 : 18 (ERVKN)
ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇವುಗಳನ್ನು ನನ್ನ ಒಡೆಯನಾದ ಯೆಹೋವನೇ ಹೇಳಿದ್ದಾನೆ. [PE][PS]
ಯೆಹೆಜ್ಕೇಲನು 14 : 19 (ERVKN)
ದೇವರು ಹೇಳಿದ್ದೇನೆಂದರೆ, “ಒಂದುವೇಳೆ, ನಾನು ದೇಶದ ಮೇಲೆ ರೋಗಗಳನ್ನು ಬರಮಾಡಿದರೆ, ಅಥವಾ ನನ್ನ ಕೋಪವನ್ನು ಸುರಿದು ಜನರನ್ನು ಕೊಂದುಹಾಕಿದರೆ ಮತ್ತು ಪ್ರಾಣಿಗಳನ್ನು ನಾಶಮಾಡಿದರೆ,
ಯೆಹೆಜ್ಕೇಲನು 14 : 20 (ERVKN)
ದೇವರಾದ ಯೆಹೋವನಾಣೆ, ನೋಹನಾಗಲಿ ದಾನಿಯೇಲನಾಗಲಿ ಯೋಬನಾಗಲಿ ತಮ್ಮ ಪುತ್ರಪುತ್ರಿಯರನ್ನು ರಕ್ಷಿಸಿಕೊಳ್ಳಲಾಗುತ್ತಿರಲಿಲ್ಲ. ಅವರು ತಮ್ಮನ್ನು ಮಾತ್ರ ರಕ್ಷಿಸಿಕೊಳ್ಳಬಹುದಾಗಿತ್ತು.” ಇದು ನನ್ನ ಒಡೆಯನಾದ ಯೆಹೋವನ ನುಡಿ. [PE][PS]
ಯೆಹೆಜ್ಕೇಲನು 14 : 21 (ERVKN)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಭಯಂಕರವಾದ ನಾಲ್ಕು ದಂಡನೆಗಳನ್ನು ನಾನು ಜೆರುಸಲೇಮ್ ಪಟ್ಟಣದ ಮೇಲೆ ಕಳುಹಿಸುವೆನು. ಆದ್ದರಿಂದ ಜೆರುಸಲೇಮಿಗೆ ಇನ್ನೂ ಎಷ್ಟು ಹೆಚ್ಚಾಗಿ ಕಷ್ಟಕರವಾಗಬಹುದೆಂದು ಯೋಚಿಸಿರಿ. ನಾನು ಆ ನಗರದ ವಿರುದ್ಧವಾಗಿ ಶತ್ರು ಸೈನಿಕರನ್ನು, ಹಸಿವೆ, ರೋಗ ಮತ್ತು ಕ್ರೂರಜಂತುಗಳನ್ನು ಕಳುಹಿಸುತ್ತೇನೆ. ದೇಶದಲ್ಲಿರುವ ಎಲ್ಲಾ ಜನರನ್ನೂ ಪಶುಗಳನ್ನೂ ನಿರ್ಮೂಲ ಮಾಡುವೆನು.
ಯೆಹೆಜ್ಕೇಲನು 14 : 22 (ERVKN)
ಆದರೆ ಆಶ್ಚರ್ಯಕರವಾಗಿ, ಕೆಲವರು ಅದರಲ್ಲಿ ಉಳಿದುಕೊಳ್ಳುವರು, ಪುತ್ರಪುತ್ರಿಯರನ್ನು ನಿಮ್ಮ ಬಳಿಗೆ ಜೀವಂತವಾಗಿ ತರಲಾಗುವುದು. ಆ ಜನರು ಎಷ್ಟು ದುಷ್ಟರೆಂಬುದನ್ನು ಸಬತಃ ನೀವೇ ಅರ್ಥಮಾಡಿಕೊಳ್ಳುವಿರಿ. ನಾನು ಜೆರುಸಲೇಮಿನ ಮೇಲೆ ಬರಮಾಡಿದ ಇಡೀ ಆಪತ್ತಿನ ಬಗ್ಗೆ ನೀವು ಬಹಳವಾಗಿ ನೊಂದುಕೊಳ್ಳುವಿರಿ.
ಯೆಹೆಜ್ಕೇಲನು 14 : 23 (ERVKN)
ಅವರು ಜೀವಿಸುವ ರೀತಿ, ದುಷ್ಟತನವನ್ನು ನಡಿಸುವ ರೀತಿಯನ್ನು ನೀವು ನೋಡುವಿರಿ. ಆಗ ನಾನು ಯಾಕೆ ಅವರನ್ನು ಶಿಕ್ಷಿಸುತ್ತೇನೆಂದು ನಿಮಗೆ ಗೊತ್ತಾಗುವದು.” ಇದು ನನ್ನ ಒಡೆಯನಾದ ಯೆಹೋವನ ನುಡಿ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23

BG:

Opacity:

Color:


Size:


Font: