ಯೆಹೆಜ್ಕೇಲನು 15 : 1 (ERVKN)
ಜೆರುಸಲೇಮಿನ ದ್ರಾಕ್ಷಾಲತೆಯು ಸುಡಲ್ಪಡುವುದು ಯೆಹೋವನ ನುಡಿಯು ನನಗೆ ಬಂತು. ಆತನು ಹೇಳಿದ್ದೇನೆಂದರೆ,
ಯೆಹೆಜ್ಕೇಲನು 15 : 2 (ERVKN)
“ನರಪುತ್ರನೇ, ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನು ಪ್ರಯೋಜನ? ಅದು ಕಾಡಿನಲ್ಲಿರುವ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ ಅದರ ಉಪಯುಕ್ತತೆಯಲ್ಲಿ ವ್ಯತ್ಯಾಸವಿದೆ.
ಯೆಹೆಜ್ಕೇಲನು 15 : 3 (ERVKN)
ದ್ರಾಕ್ಷಾಬಳ್ಳಿಯ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ? ಇಲ್ಲ. ಅದನ್ನು ಗೂಟವನ್ನಾಗಿ ಮಾಡಿ ಅದರಲ್ಲಿ ಪಾತ್ರೆಗಳನ್ನು ತೂಗುಹಾಕಬಹುದೋ? ಇಲ್ಲ.
ಯೆಹೆಜ್ಕೇಲನು 15 : 4 (ERVKN)
ಅದು ಕೇವಲ ಬೆಂಕಿಯಲ್ಲಿ ಸುಡಲಿಕ್ಕೆ ಯೋಗ್ಯವಾಗಿದೆ. ಕೆಲವು ಎರಡು ಕೊನೆಯಲ್ಲಿ ಉರಿಯುವವು; ಮಧ್ಯಭಾಗವು ಬೆಂಕಿಯಿಂದ ಕಪ್ಪಾಗಾಗುವುದು. ಕಟ್ಟಿಗೆಯು ಸಂಪೂರ್ಣವಾಗಿ ಸುಟ್ಟುಹೋಗುವುದಿಲ್ಲ. ಆ ಸುಟ್ಟ ಕಟ್ಟಿಗೆಯಿಂದ ಏನನ್ನಾದರೂ ತಯಾರಿಸಬಹುದೋ?
ಯೆಹೆಜ್ಕೇಲನು 15 : 5 (ERVKN)
ಅದು ಸುಡುವ ಮೊದಲು ಅದರಿಂದ ಏನನ್ನೂ ಮಾಡಲಿಕ್ಕೆ ಆಗದಿದ್ದರೆ, ಅದು ಸುಟ್ಟ ನಂತರ ಏನೂ ಮಾಡಲಿಕ್ಕಾಗುವುದಿಲ್ಲ.
ಯೆಹೆಜ್ಕೇಲನು 15 : 6 (ERVKN)
ದ್ರಾಕ್ಷಿಬಳ್ಳಿಯು ಕಾಡಿನ ಮರಗಳಲ್ಲಿ ಒಂದರಂತೆ ಪರಿಗಣಿಸಲ್ಪಟ್ಟರೂ, ಬೆಂಕಿಗೆ ಬೇಕಾದ ಇಂಧನಕ್ಕಾಗಿ ನಾನು ಅದರ ಕಟ್ಟಿಗೆಯನ್ನು ನೇಮಿಸಿದ್ದೇನೆ. ಇದೇ ಕೆಲಸವನ್ನು ಜೆರುಸಲೇಮಿನ ನಿವಾಸಿಗಳಿಗೂ ನಾನು ನೇಮಿಸಿದ್ದೇನೆ.” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದ್ದಾನೆ.
ಯೆಹೆಜ್ಕೇಲನು 15 : 7 (ERVKN)
“ನಾನು ಅವರನ್ನು ದಂಡಿಸುವೆನು. ಅವರು ಒಂದು ಬೆಂಕಿಯಿಂದ ತಪ್ಪಿಸಿಕೊಂಡರೂ ಮತ್ತೊಂದು ಬೆಂಕಿಯಿಂದ ಸುಟ್ಟುಹೋಗುವರು. ನಾನು ಅವರನ್ನು ದಂಡಿಸಿದಾಗ, ನಾನೇ ಯೆಹೋವನೆಂದು ನೀನು ತಿಳಿದುಕೊಳ್ಳುವೆ.
ಯೆಹೆಜ್ಕೇಲನು 15 : 8 (ERVKN)
ಜನರು ನನ್ನನ್ನು ತೊರೆದು ಅನ್ಯ ದೇವರುಗಳನ್ನು ಆರಾಧಿಸಿದ್ದಕ್ಕಾಗಿ ನಾನು ಆ ದೇಶವನ್ನು ನಾಶಮಾಡುವೆನು” ಇವುಗಳನ್ನು ನನ್ನ ಒಡೆಯನಾದ ಯೆಹೋವನು ಹೇಳಿದನು.
❮
❯