ಯೆಹೆಜ್ಕೇಲನು 27 : 1 (ERVKN)
ತೂರ್ ಒಂದು ದೊಡ್ಡ ವಾಣಿಜ್ಯ ಕೇಂದ್ರ ಯೆಹೋವನ ವಾಕ್ಯವು ನನಗೆ ತಿರುಗಿ ಬಂತು. ಆತನು ಹೇಳಿದ್ದೇನೆಂದರೆ,
ಯೆಹೆಜ್ಕೇಲನು 27 : 2 (ERVKN)
“ನರಪುತ್ರನೇ, ತೂರಿನ ವಿಷಯವಾದ ಶೋಕಗೀತೆಯನ್ನು ಹಾಡು.
ಯೆಹೆಜ್ಕೇಲನು 27 : 3 (ERVKN)
ಅದರ ಬಗ್ಗೆ ಈ ರೀತಿಯಾಗಿ ಹೇಳು: “ ‘ತೂರೇ, ನೀನು ಸಮುದ್ರಕ್ಕೆ ಬಾಗಿಲು. ಅನೇಕ ದೇಶಗಳಿಗೆ ನೀನು ವ್ಯಾಪಾರಿ. ಕರಾವಳಿಯ ಅನೇಕ ದೇಶಗಳಿಗೆ ನೀನು ಪ್ರಯಾಣಿಸುವೆ.’
ನನ್ನ ಒಡೆಯನಾದ ಯೆಹೋವನು ಇದನ್ನು ಹೇಳಿದ್ದಾನೆ.
ತೂರೇ, ನೀನು ಅತಿ ಸುಂದರಳೆಂದು ಭಾವಿಸಿರುವೆ. ನೀನು ಪರಿಪೂರ್ಣ ಸುಂದರಳೆಂದು ತಿಳಿದಿರುವೆ.
ಯೆಹೆಜ್ಕೇಲನು 27 : 4 (ERVKN)
ಭೂಮಧ್ಯ ಸಮುದ್ರವು ನಿನ್ನ ಸುತ್ತಲೂ ಮೇರೆಯಂತಿದೆ.
ನಿನ್ನನ್ನು ಕಟ್ಟಿದವರು ಅಂದವಾಗಿಯೇ ಕಟ್ಟಿದರು. ನಿನ್ನಿದ ಹೊರಡುವ ಹಡಗುಗಳಂತೆ ನೀನು ಸುಂದರವಾಗಿರುವೆ.
ಯೆಹೆಜ್ಕೇಲನು 27 : 5 (ERVKN)
ನಿನ್ನನ್ನು ಕಟ್ಟಿದವರು ಸೆನೀರ್ ಬೆಟ್ಟದ ತುರಾಯಿ ಮರಗಳನ್ನು ಹಲಗೆಗಳಿಗಾಗಿ ಉಪಯೋಗಿಸಿದರು.
ಲೆಬನೋನಿನ ದೇವದಾರು ಮರವನ್ನು ಹಾಯಿ ಮರವನ್ನಾಗಿ ಉಪಯೋಗಿಸಿದರು.
ಯೆಹೆಜ್ಕೇಲನು 27 : 6 (ERVKN)
ಬಾಷಾನಿನ ಅಲ್ಲೋನ್ ಮರಗಳಿಂದ ಹುಟ್ಟುಗಳನ್ನು ತಯಾರಿಸಿದರು.
ನಿನ್ನ ಮೇಲ್ಮಾಳಿಗೆಯನ್ನು ಕಿತ್ತೀಮ್ ದಿಬಪದ ತಿಲಕದ ಮರಗಳಿಂದ ಮಾಡಿದರು. ಅದನ್ನು ದಂತಗಳಿಂದ ಶೃಂಗರಿಸಿದರು.
ಯೆಹೆಜ್ಕೇಲನು 27 : 7 (ERVKN)
ಈಜಿಪ್ಟಿನಲ್ಲಿ ತಯಾರಿಸಿದ ಬಣ್ಣದ ನಾರುಮಡಿಯನ್ನು ನಿನ್ನ ಹಾಯಿಗಳಿಗಾಗಿ ಉಪಯೋಗಿಸಿದರು. ಆ ಹಾಯಿಯು ನಿನ್ನ ಧ್ವಜವಾಯಿತು.
ನಿನ್ನ ಮೇಲ್ಮಾಳಿಗೆಯ ಹೊದಿಕೆಯು ನೀಲ ಮತ್ತು ಧೂಮ್ರ ವರ್ಣದವುಗಳಾಗಿದ್ದವು. ಅವು ಸೈಪ್ರಸ್ ದಿಬಪದಿಂದ ಬಂದವುಗಳಾಗಿದ್ದವು.
ಯೆಹೆಜ್ಕೇಲನು 27 : 8 (ERVKN)
ಚೀದೋನ್ ಮತ್ತು ಅರ್ವಾದಿನ ಜನರು ನಿನ್ನ ಹಡಗುಗಳಿಗೆ ಹುಟ್ಟುಹಾಕುವವರಾಗಿದ್ದರು. ತೂರೇ, ನಿನ್ನ ಜ್ಞಾನಿಗಳು ಹಡಗುಗಳನ್ನು ನಡಿಸುವವರಾಗಿದ್ದರು.
ಯೆಹೆಜ್ಕೇಲನು 27 : 9 (ERVKN)
ಗೆಬಲಿನ ಹಿರಿಯರೂ ಜ್ಞಾನಿಗಳೂ ನಿನ್ನ ಹಡಗುಗಳ ಬಿರುಕುಗಳನ್ನು ಸರಿಪಡಿಸುವವರಾಗಿದ್ದರು.
ಸಾಗರದ ಹಡಗುಗಳೂ ಅದರ ನಾವಿಕರೂ ನಿನ್ನೊಂದಿಗೆ ವ್ಯಾಪಾರ ಮಾಡಲು ಬಂದರು.
ಯೆಹೆಜ್ಕೇಲನು 27 : 10 (ERVKN)
“ ‘ಪರ್ಶಿಯ, ಲೂದ್ ಮತ್ತು ಪೂಟ್‌ನ ಜನರು ನಿನ್ನ ಸೈನ್ಯದಲ್ಲಿರುವರು. ಅವರು ಯುದ್ಧವೀರರು. ಅವರು ನಿನ್ನ ಗೋಡೆಗಳಲ್ಲಿ ತಮ್ಮ ಗುರಾಣಿ ಮತ್ತು ಶಿರಸ್ತ್ರಾಣಗಳನ್ನು ತೂಗು ಹಾಕಿದರು. ನಿನ್ನ ನಗರಕ್ಕೆ ಬನತೆಯನ್ನು ಅವರು ತಂದರು.
ಯೆಹೆಜ್ಕೇಲನು 27 : 11 (ERVKN)
ಅರ್ವಾದ್ ಮತ್ತು ಸಿಲಿಸಿಯಾದ ಜನರು ನಿನ್ನ ಕೋಟೆಗೋಡೆಗಳಲ್ಲಿ ಕಾವಲಿಗಿರುವರು. ಗಮ್ಮಾದಿನಿಂದ ಬಂದ ಜನರು ನಿನ್ನ ಬುರುಜುಗಳಲ್ಲಿರುವರು. ನಿನ್ನ ಸೌಂದರ್ಯವನ್ನು ಅವರು ಪರಿಪೂರ್ಣ ಮಾಡಿದರು.
ಯೆಹೆಜ್ಕೇಲನು 27 : 12 (ERVKN)
“ ‘ತಾರ್ಷೀಷ್ ನಿನ್ನ ಉತ್ತಮ ವ್ಯಾಪಾರ ಕೇಂದ್ರವಾಗಿತ್ತು. ಅವರು ತಮ್ಮ ಬೆಳ್ಳಿ, ಕಬ್ಬಿಣ, ತವರ ಮತ್ತು ಸೀಸ ಲೋಹಗಳನ್ನು ಕೊಟ್ಟು ನಿನ್ನಿದ ವಸ್ತುಗಳನ್ನು ಕೊಂಡುಕೊಂಡರು.
ಯೆಹೆಜ್ಕೇಲನು 27 : 13 (ERVKN)
ಗ್ರೀಸ್, ತುರ್ಕಿ ಮತ್ತು ಕಪ್ಪು ಸಮುದ್ರದ ಸುತ್ತಲಿರುವ ದೇಶಗಳವರು ನಿನ್ನಲ್ಲಿಗೆ ವ್ಯಾಪಾರಕ್ಕಾಗಿ ಬಂದರು. ಅವರು ನಿನ್ನ ವಸ್ತುಗಳಿಗೆ ಬದಲಾಗಿ ಗುಲಾಮರನ್ನೂ ತಾಮ್ರವನ್ನೂ ಕೊಟ್ಟರು.
ಯೆಹೆಜ್ಕೇಲನು 27 : 14 (ERVKN)
ತೋಗರ್ಮ ದೇಶದ ಜನರು ನೀನು ಮಾರುವ ವಸ್ತುಗಳಿಗೆ ಕುದುರೆ, ಯುದ್ಧದ ಕುದುರೆಗಳು, ಹೇಸರಕತ್ತೆಗಳನ್ನು ಬದಲಿಕೊಟ್ಟರು.
ಯೆಹೆಜ್ಕೇಲನು 27 : 15 (ERVKN)
ರೋಧೆ ದಿಬಪದ ಜನರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ನೀನು ಅನೇಕ ಕಡೆಗಳಲ್ಲಿ ವ್ಯಾಪಾರ ಮಾಡಿದಿ. ಜನರು ದಂತವನ್ನೂ ಬೀಟೆ ಮರಗಳನ್ನೂ ತಂದು ನಿನ್ನೊಂದಿಗೆ ವ್ಯಾಪಾರ ಮಾಡಿದರು.
ಯೆಹೆಜ್ಕೇಲನು 27 : 16 (ERVKN)
ನಿನ್ನಲ್ಲಿ ಅನೇಕ ಬೆಲೆಬಾಳುವ ವಸ್ತುಗಳಿದ್ದುದರಿಂದ ಅರಾಮ್ ನಿನ್ನೊಂದಿಗೆ ವ್ಯಾಪಾರ ಮಾಡಿತು. ಅವರು ಇಂದ್ರನೀಲ, ಧೂಮ್ರ ಬಣ್ಣದ ಬಟ್ಟೆ, ಕಸೂತಿ ಕೆಲಸ, ನಯವಾದ ಬಟ್ಟೆ, ಹವಳ, ಕೆಂಪು ಹರಳು ಇತ್ಯಾದಿಗಳನ್ನು ಕೊಟ್ಟು ವಸ್ತುಗಳನ್ನು ನಿನ್ನಿದ ಕೊಂಡುಕೊಂಡರು.
ಯೆಹೆಜ್ಕೇಲನು 27 : 17 (ERVKN)
“ ‘ಇಸ್ರೇಲ್ ಮತ್ತು ಯೆಹೂದ ದೇಶದವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನ್ನ ವಸ್ತುಗಳಿಗೆ ಗೋಧಿ, ಆಲೀವ್, ಅಂಜೂರ, ಜೇನು, ಎಣ್ಣೆ ಮತ್ತು ಮುಲಾಮುಗಳನ್ನು ಕೊಟ್ಟರು.
ಯೆಹೆಜ್ಕೇಲನು 27 : 18 (ERVKN)
ದಮಸ್ಕವೂ ನಿನ್ನ ಒಳ್ಳೆಯ ಗಿರಾಕಿಯಾಗಿತ್ತು. ನೀನು ಸಂಪಾದಿಸಿಕೊಂಡಿದ್ದ ಅನೇಕ ಒಳ್ಳೆಯ ವಸ್ತುಗಳಿಗಾಗಿ ಅವರು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ಹೆಲ್ಬೋನಿನ ದ್ರಾಕ್ಷಾರಸವನ್ನು ಮತ್ತು ಉಣ್ಣೆಯನ್ನು ಆ ವಸ್ತುಗಳಿಗಾಗಿ ಮಾರಿದರು.
ಯೆಹೆಜ್ಕೇಲನು 27 : 19 (ERVKN)
ಅಲ್ಲದೆ ಧಿಜಾಲಿನ ದ್ರಾಕ್ಷಾರಸವನ್ನು, ಉಕ್ಕನ್ನು, ದಾಲ್ಚಿನ್ನಿ ಮತ್ತು ಕಬ್ಬನ್ನು ಆ ವಸ್ತುಗಳಿಗಾಗಿ ವ್ಯಾಪಾರ ಮಾಡಿದರು.
ಯೆಹೆಜ್ಕೇಲನು 27 : 20 (ERVKN)
ದೆದಾನಿನ ನಿನ್ನ ಜನರು ಒಳ್ಳೆಯ ವ್ಯಾಪಾರಸ್ಥರು. ಅವರು ಸವಾರಿ ಕುದುರೆಗಳನ್ನೂ ಜೇನನ್ನೂ ಬಟ್ಟೆಗಳನ್ನೂ ಕೊಟ್ಟು ಕೊಂಡುಕೊಂಡರು.
ಯೆಹೆಜ್ಕೇಲನು 27 : 21 (ERVKN)
ಅರಾಬ್ಯರು ಮತ್ತು ಕೇದಾರಿನವರು ಕುರಿಮರಿಗಳನ್ನು, ಟಗರು ಮತ್ತು ಆಡುಗಳನ್ನು ಕೊಟ್ಟು ವ್ಯಾಪಾರ ಮಾಡಿದರು.
ಯೆಹೆಜ್ಕೇಲನು 27 : 22 (ERVKN)
ಶೆಬ ಮತ್ತು ರಗ್ಮದ ವ್ಯಾಪಾರಿಗಳು ನಿನ್ನೊಂದಿಗೆ ವ್ಯಾಪಾರ ಮಾಡಿದರು. ಅವರು ನಿನಗೆ ಸಂಬಾರ ಜೀನಸು, ರತ್ನಗಳು ಮತ್ತು ಚಿನ್ನವನ್ನು ಬದಲಿಕೊಟ್ಟರು.
ಯೆಹೆಜ್ಕೇಲನು 27 : 23 (ERVKN)
ಮತ್ತು ಹಾರಾನ್‌ಕನ್ನೆ, ಎದೆನ್, ಶೆಬದ ವ್ಯಾಪಾರಿಗಳು, ಅಶ್ಶೂರ್ ಮತ್ತು ಕಿಲ್ಮದ್ ಧಿರಿನವರು ನಿನ್ನೊಂದಿಗೆ ವ್ಯಾಪಾರ ಮಾಡಿದರು.
ಯೆಹೆಜ್ಕೇಲನು 27 : 24 (ERVKN)
ಅವರು ನಿನ್ನೊಂದಿಗೆ ಉತ್ತಮ ಬಟ್ಟೆಗಳು, ಕಸೂತಿ ಕೆಲಸಗಳು, ಬಣ್ಣಬಣ್ಣದ ಜಮಖಾನೆಗಳು, ಹುರಿದ ಹಗ್ಗಗಳು, ದೇವದಾರು ಮರಗಳಿಂದ ಮಾಡಿದ ವಸ್ತುಗಳು ಇವುಗಳೊಂದಿಗೆ ವ್ಯಾಪಾರ ನಡಿಸಿದರು.
ಯೆಹೆಜ್ಕೇಲನು 27 : 25 (ERVKN)
ತಾರ್ಷೀಷಿನ ಹಡಗುಗಳು ನೀನು ಮಾರಿದ ವಸ್ತುಗಳನ್ನು ಕೊಂಡೊಯ್ದವು. “ ‘ತೂರೇ, ನೀನು ಆ ಸರಕು ಸಾಗಾಣಿಕೆಯ ಹಡಗುಗಳಂತಿರುವೆ.
ಸಮುದ್ರಮಧ್ಯದಲ್ಲಿ ಅನೇಕ ಐಶಬರ್ಯಗಳಿಂದ ತುಂಬಿದವಳಾಗಿದ್ದೀ.
ಯೆಹೆಜ್ಕೇಲನು 27 : 26 (ERVKN)
ನಿನ್ನನ್ನು ಹುಟ್ಟುಹಾಕುವವರು ಸಮುದ್ರದ ಬಹುದೂರ ನಿನ್ನನ್ನು ನಡಿಸಿದರು. ಆದರೆ ಪೂರ್ವದಿಂದ ಬಂದ ಬಲವುಳ್ಳ ಗಾಳಿಯು ನಿನ್ನನ್ನು ಮುರಿಯುವದು.
ಯೆಹೆಜ್ಕೇಲನು 27 : 27 (ERVKN)
ನಿನ್ನ ಎಲ್ಲಾ ಐಶಬರ್ಯವು, ನಿನ್ನ ದಿನಸುಗಳು, ನಿನ್ನ ಸರಕುಗಳು, ನಿನ್ನ ನಾವಿಕರು, ನಿನ್ನ ಅಂಬಿಗರು, ನಿನ್ನ ಕಿಂಡಿಗಳನ್ನು ಭದ್ರಪಡಿಸುವವರು,
ನಿನ್ನ ವ್ಯಾಪಾರಿಗಳು, ನಿನ್ನ ಎಲ್ಲಾ ಸೈನಿಕರು, ನಿನ್ನ ಎಲ್ಲಾ ಸಿಬ್ಬಂದಿ ವರ್ಗದವರು ನಾಶನದ ದಿನದಲ್ಲಿ ಸಮುದ್ರದೊಳಗೆ ಮುಳುಗಿಹೋಗುವರು.
ಯೆಹೆಜ್ಕೇಲನು 27 : 28 (ERVKN)
“ ‘ನಿನ್ನ ವ್ಯಾಪಾರಿಗಳನ್ನು ನೀನು ಬಹುದೂರ ಕಳುಹಿಸುವಿ. ಆ ಸ್ಥಳಗಳು ನಿನ್ನ ಹಡಗಿನ ನಾವಿಕನ ಕೂಗಾಟವನ್ನು ಕೇಳಿ ಭಯದಿಂದ ತತ್ತರಿಸುವವು.
ಯೆಹೆಜ್ಕೇಲನು 27 : 29 (ERVKN)
ಹಡಗಿನ ಎಲ್ಲಾ ನಾವಿಕರು ನೀರಿಗೆ ಧುಮುಕಿ ಈಜುತ್ತಾ ದಡ ಸೇರುವರು.
ಯೆಹೆಜ್ಕೇಲನು 27 : 30 (ERVKN)
ನಿನಗೋಸ್ಕರ ಅವರು ದುಃಖಿಸುತ್ತಾ ಅಳುವರು; ತಲೆಯ ಮೇಲೆ ಧೂಳನ್ನು ತೂರಿಕೊಂಡು ಬೂದಿರಾಶಿಯ ಮೇಲೆ ಹೊರಳಾಡುವರು.
ಯೆಹೆಜ್ಕೇಲನು 27 : 31 (ERVKN)
ನಿನಗಾಗಿ ಶೋಕದಿಂದ ತಮ್ಮ ತಲೆಗಳನ್ನು ಬೋಳಿಸುವರು. ಶೋಕದ ಬಟ್ಟೆಗಳನ್ನು ಧರಿಸುವರು.
ತಮ್ಮ ಪ್ರಿಯರು ಸತ್ತಾಗ ಅಳುವಂತೆ ನಿನಗಾಗಿ ಅಳುವರು.
ಯೆಹೆಜ್ಕೇಲನು 27 : 32 (ERVKN)
“ ‘ಅಳುತ್ತಾ ನಿನಗೆ ಈ ಶೋಕಗೀತೆಯನ್ನು ಹಾಡುವರು: “ ‘ತೂರಿನಂತೆ ಯಾರಿಲ್ಲ. ಆದರೆ ತೂರ್ ಹಾಳಾಗಿಹೋಯಿತು, ಸಮುದ್ರ ಮಧ್ಯದಲ್ಲಿ ನಾಶವಾಯಿತು.
ಯೆಹೆಜ್ಕೇಲನು 27 : 33 (ERVKN)
ನಿನ್ನ ವ್ಯಾಪಾರಿಗಳು ಸಮುದ್ರದಾಚೆ ಹೋದರು;
ನೀನು ಅನೇಕರನ್ನು ತೃಪ್ತಿಗೊಳಿಸಿದಿ. ನಿನ್ನ ಐಶಬರ್ಯದಿಂದಲೂ ನೀನು ಮಾರಿದ ಸರಕುಗಳಿಂದಲೂ ನೀನು ಲೋಕದ ರಾಜರನ್ನು ಐಶಬರ್ಯವಂತರನ್ನಾಗಿ ಮಾಡಿದಿ.
ಯೆಹೆಜ್ಕೇಲನು 27 : 34 (ERVKN)
ನೀನು ಈಗ ಸಮುದ್ರದ ನೀರಿನಿಂದ ಮುರಿದುಬಿದ್ದಿರುವೆ. ಆಳವಾದ ನೀರಿನಲ್ಲಿ ಮುಳುಗಿಸಲ್ಪಟ್ಟಿರುವೆ.
ನೀನು ಮಾರುವ ಸರಕುಗಳೂ ನಿನ್ನ ಜನರೂ ಬಿದ್ದುಹೋದರು.
ಯೆಹೆಜ್ಕೇಲನು 27 : 35 (ERVKN)
ಕರಾವಳಿಯಲ್ಲಿ ವಾಸಿಸುವ ಜನರೆಲ್ಲರೂ ನಿನ್ನ ವಾರ್ತೆಯನ್ನು ಕೇಳಿ ಚಕಿತರಾದರು.
ಅವರ ರಾಜರು ದಂಗುಬಡಿದವರಾಗಿ ಭಯಭೀತರಾಗುವರು.
ಯೆಹೆಜ್ಕೇಲನು 27 : 36 (ERVKN)
ಬೇರೆ ದೇಶಗಳಲ್ಲಿರುವ ವ್ಯಾಪಾರಿಗಳು ಆಶ್ಚರ್ಯದಿಂದ ಸಿಳ್ಳು ಹಾಕಿದರು.
ನಿನಗೆ ಸಂಭವಿಸಿದ ವಿಷಯಗಳು ಜನರಿಗೆ ಭೀತಿಯನ್ನುಂಟುಮಾಡಿತು. ಯಾಕೆಂದರೆ ನಿನ್ನ ಕಥೆ ಮುಗಿಯಿತು. ನಿನಗೆ ಅಂತ್ಯವಾಯಿತು. ಇನ್ನು ನೀನು ಕಾಣುವದಿಲ್ಲ.’ ”
❮
❯