ಯೆಹೆಜ್ಕೇಲನು 35 : 1 (ERVKN)
ಎದೋಮ್ ವಿರುದ್ಧ ಸಂದೇಶ ಯೆಹೋವನ ಸಂದೇಶ ನನಗೆ ಬಂತು. ಆತನು ಹೇಳಿದ್ದೇನೆಂದರೆ,
ಯೆಹೆಜ್ಕೇಲನು 35 : 2 (ERVKN)
“ನರಪುತ್ರನೇ, ಸೇಯೀರ್ ಪರ್ವತದ ಕಡೆಗೆ ನೋಡು. ನನ್ನ ಪರವಾಗಿ ಅದಕ್ಕೆ ವಿರುದ್ಧವಾಗಿ ಮಾತನಾಡು.
ಯೆಹೆಜ್ಕೇಲನು 35 : 3 (ERVKN)
‘ನನ್ನ ಒಡೆಯನಾದ ಯೆಹೋವನು ಹೀಗೆ ಹೇಳುತ್ತಾನೆಂದು ಅದಕ್ಕೆ ಹೇಳು: “ ‘ಸೇಯೀರ್ ಪರ್ವತವೇ, ನಾನು ನಿನಗೆ ವಿರುದ್ಧವಾಗಿದ್ದೇನೆ. ನಿನ್ನನ್ನು ಶಿಕ್ಷಿಸುತ್ತೇನೆ. ನಾನು ನಿನ್ನನ್ನು ಬಂಜರು ಭೂಮಿಯನ್ನಾಗಿ ಮಾಡುವೆನು.
ಯೆಹೆಜ್ಕೇಲನು 35 : 4 (ERVKN)
ನಾನು ನಿನ್ನ ಪಟ್ಟಣಗಳನ್ನೆಲ್ಲಾ ನಾಶಮಾಡುವೆನು; ನೀನು ಬರಿದಾಗುವೆ.
ನಾನು ಒಡೆಯನಾದ ಯೆಹೋವನೆಂದು ಆಗ ನೀನು ತಿಳಿಯುವೆ.
ಯೆಹೆಜ್ಕೇಲನು 35 : 5 (ERVKN)
ಯಾಕೆಂದರೆ ನೀನು ಯಾವಾಗಲೂ ನನ್ನ ಜನಕ್ಕೆ ವಿರೋಧವಾಗಿರುವೆ.
ನೀನು ಇಸ್ರೇಲರ ವಿರುದ್ಧವಾಗಿ ಕತ್ತಿಯನ್ನೆತ್ತಿರುವೆ. ಅವರು ಆಗ ಸಂಕಟದಲ್ಲಿದ್ದರು ಮತ್ತು ತಮ್ಮ ಶಿಕ್ಷೆಯ ಕಡೆಗಾಲದಲ್ಲಿದ್ದರು.’ ”
ಯೆಹೆಜ್ಕೇಲನು 35 : 6 (ERVKN)
ಆದ್ದರಿಂದ ನನ್ನ ಒಡೆಯನಾದ ಯೆಹೋವನು ಹೇಳುವುದೇನೆಂದರೆ, “ನನ್ನ ಜೀವದಾಣೆ, ನಿಮ್ಮನ್ನು ಮರಣವು ನುಂಗಿಬಿಡುವಂತೆ ಮಾಡುವೆನು. ಮರಣವು ನಿಮ್ಮನ್ನು ಹಿಂಬಾಲಿಸುವುದು. ನೀನು ಜನರನ್ನು ಕೊಲ್ಲಲು ಹಿಂಜರಿಯಲಿಲ್ಲ. ಆದ್ದರಿಂದ ಮರಣವು ನಿನ್ನನ್ನು ಓಡಿಸುವುದು.
ಯೆಹೆಜ್ಕೇಲನು 35 : 7 (ERVKN)
ನಾನು ಸೇಯೀರ್ ಬೆಟ್ಟವನ್ನು ಹಾಳುಮಾಡುವೆನು. ಆ ನಗರದಿಂದ ಬರುವ ಪ್ರತಿಯೊಬ್ಬನನ್ನು ಸಾಯಿಸುವೆನು.
ಯೆಹೆಜ್ಕೇಲನು 35 : 8 (ERVKN)
ಅದರ ಬೆಟ್ಟಪ್ರಾಂತ್ಯಗಳನ್ನು ಸತ್ತ ಹೆಣಗಳಿಂದ ಮುಚ್ಚುವೆನು. ಹೆಣಗಳು ಎಲ್ಲಾ ಕಡೆಗಳಲ್ಲಿಯೂ ಬೆಟ್ಟಗುಡ್ಡಗಳಲ್ಲಿಯೂ ತಗ್ಗುಗಳಲ್ಲಿಯೂ ಇರುವವು.
ಯೆಹೆಜ್ಕೇಲನು 35 : 9 (ERVKN)
ನೀನು ನಿತ್ಯಕಾಲಕ್ಕೂ ಬರಿದಾಗಿರು. ಯಾರೂ ನಿನ್ನ ಪಟ್ಟಣಗಳಲ್ಲಿ ವಾಸಿಸರು. ಆಗ ನೀನು, ದೇವರಾದ ಯೆಹೋವನು ನಾನೇ ಎಂದು ತಿಳಿಯುವಿ.”
ಯೆಹೆಜ್ಕೇಲನು 35 : 10 (ERVKN)
“ಈ ಎರಡು ದೇಶಗಳು (ಇಸ್ರೇಲ್ ಮತ್ತು ಯೆಹೂದ) ನನ್ನವು. ಅವುಗಳನ್ನು ಸ್ವಂತಕ್ಕಾಗಿ ತೆಗೆದುಕೊಳ್ಳೋಣ” ಎಂದು ಹೇಳಿರುತ್ತೀ. ಆದಾಗ್ಯೂ ಯೆಹೋವನು ಅಲ್ಲಿದ್ದನು.
ಯೆಹೆಜ್ಕೇಲನು 35 : 11 (ERVKN)
ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ನನ್ನ ಜನರ ಮೇಲೆ ನೀನು ಅಸೂಯೆಪಟ್ಟೆ ಮತ್ತು ನೀನು ಅವರ ಮೇಲೆ ಸಿಟ್ಟುಗೊಂಡಿದ್ದೆ. ನಿಜವಾಗಿ ಹೇಳಬೇಕಾದರೆ, ನೀನು ಅವರನ್ನು ದೆಬಷೀಸಿದೆ. ಆದ್ದರಿಂದ, ನನ್ನ ಜೀವದಾಣೆ, ನೀನು ಹೇಗೆ ಅವರನ್ನು ನೋಯಿಸಿದೆಯೋ ಹಾಗೆಯೇ ನಾನು ನಿನ್ನನ್ನು ಶಿಕ್ಷಿಸುವೆನು. ಈ ರೀತಿಯಲ್ಲಿ, ನನ್ನ ಜನರೊಂದಿಗೆ ನಾನಿದ್ದೇನೆಂದು ಅವರಿಗೆ ತಿಳಿಯಪಡಿಸುವೆ.
ಯೆಹೆಜ್ಕೇಲನು 35 : 12 (ERVKN)
ಆಗ ನಿನ್ನ ಎಲ್ಲಾ ತುಚ್ಛಮಾತುಗಳನ್ನು ನಾನು ಕೇಳಿರುತ್ತೇನೆ ಎಂದು ನೀನು ತಿಳಿದುಕೊಳ್ಳುವಿ. “ಇಸ್ರೇಲ್ ಪರ್ವತದ ವಿರುದ್ಧವಾಗಿ ನೀನು ಆಡಿದ ಉದ್ರೇಕಕಾರಿಯಾದ ಸಂಗತಿಗಳನ್ನೆಲ್ಲ ನಾನು ಕೇಳಿದ್ದೇನೆ. ‘ಇಸ್ರೇಲ್ ನಾಶವಾಯಿತು. ಈಗ ಅದನ್ನು ಲೂಟಿ ಮಾಡೋಣ’ ಎಂದು ನೀನು ಹೇಳಿದಿ.
ಯೆಹೆಜ್ಕೇಲನು 35 : 13 (ERVKN)
ನಿನ್ನ ಹೆಮ್ಮೆಯಿಂದ ನನ್ನ ವಿರುದ್ಧವಾಗಿ ಮಾತನಾಡಿದ್ದೀ, ನೀನು ಅನೇಕ ಬಾರಿ ಹೇಳಿರುತ್ತೀ. ನಾನೆಲ್ಲವನ್ನು ಕೇಳಿದ್ದೇನೆ.”
ಯೆಹೆಜ್ಕೇಲನು 35 : 14 (ERVKN)
ನನ್ನ ಒಡೆಯನಾದ ಯೆಹೋವನ ನುಡಿ ಇದು: “ಪ್ರಪಂಚದ ಎಲ್ಲಾ ದೇಶಗಳು ನಾನು ನಿನ್ನನ್ನು ನಾಶಮಾಡುವಾಗ ಸಂತೋಷಿಸುವವು.
ಯೆಹೆಜ್ಕೇಲನು 35 : 15 (ERVKN)
ಇಸ್ರೇಲ್ ರಾಜ್ಯವು ನಾಶವಾದಾಗ ನೀನು ಸಂತೋಷಪಟ್ಟಿರುವಿ. ನಾನು ಕೂಡ ಹಾಗೆಯೇ ಮಾಡುವೆನು. ಸೇಯೀರ್ ಪರ್ವತ ಮತ್ತು ಎದೋಮ್ ರಾಜ್ಯವೆಲ್ಲಾ ನಾಶವಾಗುವದು. ಆಗ ನಾನು ಯೆಹೋವನೆಂದು ನೀನು ತಿಳಿಯುವಿ.”

1 2 3 4 5 6 7 8 9 10 11 12 13 14 15