ಗಲಾತ್ಯದವರಿಗೆ 1 : 1 (ERVKN)
ಅಪೊಸ್ತಲನಾದ ಪೌಲನು ಬರೆಯುವ ಪತ್ರ. ನನ್ನನ್ನು ಅಪೊಸ್ತಲನನ್ನಾಗಿ ಆರಿಸಿದವರು ಮನುಷ್ಯರಲ್ಲ. ನಾನು ಮನುಷ್ಯರಿಂದ ಕಳುಹಿಸಲ್ಪಟ್ಟವನಲ್ಲ. ನನ್ನನ್ನು ಅಪೊಸ್ತಲನನ್ನಾಗಿ ಮಾಡಿದವರು ಯಾರೆಂದರೆ, ಯೇಸು ಕ್ರಿಸ್ತನು ಮತ್ತು ತಂದೆಯಾದ ದೇವರು. ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ದೇವರೇ.
ಗಲಾತ್ಯದವರಿಗೆ 1 : 2 (ERVKN)
ನಾನು ಮತ್ತು ನನ್ನೊಂದಿಗಿರುವ ಎಲ್ಲಾ ಸಹೋದರರು ಈ ಪತ್ರವನ್ನು ಗಲಾತ್ಯದಲ್ಲಿರುವ ಸಭೆಗಳವರಿಗೆ ಬರೆದಿದ್ದೇವೆ. [PE][PS]
ಗಲಾತ್ಯದವರಿಗೆ 1 : 3 (ERVKN)
ನಮ್ಮ ತಂದೆಯಾದ ದೇವರೂ ಪ್ರಭುವಾದ ಯೇಸು ಕ್ರಿಸ್ತನೂ ನಿಮಗೆ ಕೃಪೆ ತೋರಲಿ ಮತ್ತು ಶಾಂತಿಕೊಡಲಿ ಎಂದು ನಾವು ಪ್ರಾರ್ಥಿಸುತ್ತೇವೆ.
ಗಲಾತ್ಯದವರಿಗೆ 1 : 4 (ERVKN)
ನಾವು ವಾಸಿಸುತ್ತಿರುವ ಈ ಕೆಟ್ಟ ಲೋಕದೊಳಗಿಂದ ನಮ್ಮನ್ನು ಬಿಡುಗಡೆ ಮಾಡಬೇಕೆಂದು ಯೇಸು ನಮ್ಮ ಪಾಪಗಳಿಗಾಗಿ ತನ್ನನ್ನೇ ಕೊಟ್ಟುಬಿಟ್ಟನು. ಇದು ತಂದೆಯಾದ ದೇವರ ಚಿತ್ತವಾಗಿತ್ತು.
ಗಲಾತ್ಯದವರಿಗೆ 1 : 5 (ERVKN)
ಎಂದೆಂದಿಗೂ ದೇವರಿಗೆ ಮಹಿಮೆಯಾಗಲಿ. ಆಮೆನ್. [PS]
ಗಲಾತ್ಯದವರಿಗೆ 1 : 6 (ERVKN)
{ಸತ್ಯಸುವಾರ್ತೆ ಒಂದೇ ಒಂದು} [PS] ಸ್ವಲ್ಪಕಾಲದ ಹಿಂದೆ ತನ್ನನ್ನು ಹಿಂಬಾಲಿಸುವುದಕ್ಕಾಗಿ ನಿಮ್ಮನ್ನು ಕರೆದಾತನು ದೇವರೇ. ಆತನು ನಿಮ್ಮನ್ನು ಯೇಸು ಕ್ರಿಸ್ತನ ಮೂಲಕವಾಗಿ ಬಂದ ತನ್ನ ಕೃಪೆಯ ಮೂಲಕ ಕರೆದನು. ಆದರೆ ಈಗ ನಾನು ನಿಮ್ಮೆಲ್ಲರ ವಿಷಯದಲ್ಲಿ ಆಶ್ಚರ್ಯಗೊಂಡಿದ್ದೇನೆ. ನೀವು ಈಗಾಗಲೇ ವಿಮುಖರಾಗಿ ಬೇರೊಂದು ಸುವಾರ್ತೆಯನ್ನು ನಂಬಿಕೊಂಡಿದ್ದೀರಿ.
ಗಲಾತ್ಯದವರಿಗೆ 1 : 7 (ERVKN)
ನಿಜವಾಗಿ ಹೇಳಬೇಕಾದರೆ, ಬೇರೊಂದು ಸತ್ಯಸುವಾರ್ತೆಯು ಇಲ್ಲವೇ ಇಲ್ಲ. ಆದರೆ ಕೆಲವು ಜನರು ನಿಮ್ಮನ್ನು ಗಲಿಬಿಲಿಗೊಳಿಸುತ್ತಿದ್ದಾರೆ. ಅವರು ಕ್ರಿಸ್ತನ ಸುವಾರ್ತೆಯನ್ನು ಬದಲಾಯಿಸಬೇಕೆಂದಿದ್ದಾರೆ.
ಗಲಾತ್ಯದವರಿಗೆ 1 : 8 (ERVKN)
ನಾವು ನಿಮಗೆ ಸತ್ಯಸುವಾರ್ತೆಯನ್ನು ತಿಳಿಸಿದೆವು. ಆದ್ದರಿಂದ ನಾವೇ ಆಗಲಿ, ಪರಲೋಕದ ದೇವದೂತರೇ ಆಗಲಿ ಮತ್ತೊಂದು ಸುವಾರ್ತೆಯನ್ನು ತಿಳಿಸಿದರೆ ಶಾಪಗ್ರಸ್ತರಾಗಲಿ.
ಗಲಾತ್ಯದವರಿಗೆ 1 : 9 (ERVKN)
ನಾನು ನಿಮಗೆ ಇದನ್ನು ಮೊದಲೇ ತಿಳಿಸಿದ್ದರೂ ಈಗ ಮತ್ತೆ ಹೇಳುತ್ತೇನೆ. ನೀವು ಈಗಾಗಲೇ ಸ್ವೀಕರಿಸಿಕೊಂಡಿರುವ ಸತ್ಯಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ಸಾರಿದರೆ ಅವನು ಶಾಪಗ್ರಸ್ತನಾಗಲಿ. [PE][PS]
ಗಲಾತ್ಯದವರಿಗೆ 1 : 10 (ERVKN)
ಮನುಷ್ಯರು ನನ್ನನ್ನು ಸ್ವೀಕರಿಸಿಕೊಳ್ಳುವಂತೆ ಮಾಡುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೆಂದು ನೀವು ಭಾವಿಸುತ್ತೀರೋ? ಇಲ್ಲ! ನಾನು ದೇವರನ್ನೇ ಮೆಚ್ಚಿಸಲು ಪ್ರಯತ್ನಿಸುತ್ತಿದ್ದೇನೆ. ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿ ನಾನು ಪ್ರಯತ್ನಿಸುತ್ತಿದ್ದೇನೋ? ನಾನು ಮನುಷ್ಯರನ್ನು ಮೆಚ್ಚಿಸಬೇಕೆಂದಿದ್ದರೆ ಯೇಸು ಕ್ರಿಸ್ತನ ಸೇವಕನಾಗುತ್ತಿರಲಿಲ್ಲ. [PS]
ಗಲಾತ್ಯದವರಿಗೆ 1 : 11 (ERVKN)
{ಪೌಲನ ಅಧಿಕಾರ ದೇವರಿಂದ ಬಂದದ್ದು} [PS] ಸಹೋದರರೇ, ನಾವು ಸಾರಿದ ಸುವಾರ್ತೆ ಮನುಷ್ಯರಿಂದ ಬಂದದ್ದಲ್ಲವೆಂಬುದು ನಿಮಗೆ ತಿಳಿದಿರಲಿ.
ಗಲಾತ್ಯದವರಿಗೆ 1 : 12 (ERVKN)
ನನಗೆ ಸುವಾರ್ತೆ ದೊರೆತದ್ದು ಮನುಷ್ಯರಿಂದಲ್ಲ. ಯಾವನೂ ನನಗೆ ಸುವಾರ್ತೆಯನ್ನು ಉಪದೇಶಿಸಲಿಲ್ಲ. ನಾನು ಜನರಿಗೆ ಉಪದೇಶಿಸಬೇಕಾದ ಸುವಾರ್ತೆಯನ್ನು ಯೇಸು ಕ್ರಿಸ್ತನೇ ನನಗೆ ಪ್ರಕಟಿಸಿದನು. [PE][PS]
ಗಲಾತ್ಯದವರಿಗೆ 1 : 13 (ERVKN)
ನನ್ನ ಹಿಂದಿನ ಜೀವಿತದ ಬಗ್ಗೆ ನೀವು ಕೇಳಿದ್ದೀರಿ. ನಾನು ಯೆಹೂದ್ಯಧರ್ಮಕ್ಕೆ ಸೇರಿದವನಾಗಿದ್ದೆನು. ದೇವರ ಸಭೆಯನ್ನು ಬಹಳವಾಗಿ ಹಿಂಸಿಸಿದೆನು. ಕ್ರೈಸ್ತ ಸಭೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದ್ದೆನು.
ಗಲಾತ್ಯದವರಿಗೆ 1 : 14 (ERVKN)
ಯೆಹೂದ್ಯಧರ್ಮದ ನಾಯಕನಾಗಲು ನನ್ನ ಸಮವಯಸ್ಕರರಿಗಿಂತ ಎಷ್ಟೋ ಕಾರ್ಯಗಳನ್ನು ಮಾಡಿದೆನು. ನಮ್ಮ ಪೂರ್ವಿಕರ ಸಂಪ್ರದಾಯಗಳನ್ನು ಬೇರೆಲ್ಲರಿಗಿಂತಲೂ ಅತ್ಯಧಿಕ ನಿಷ್ಠೆಯಿಂದ ಅನುಸರಿಸಿದೆನು. [PE][PS]
ಗಲಾತ್ಯದವರಿಗೆ 1 : 15 (ERVKN)
ಆದರೆ ನಾನು ಹುಟ್ಟುವುದಕ್ಕಿಂತ ಮೊದಲೇ ನನ್ನ ವಿಷಯದಲ್ಲಿ ದೇವರಿಗೆ ವಿಶೇಷವಾದ ಯೋಜನೆಯಿತ್ತು. ಆದ್ದರಿಂದ ದೇವರು ತನ್ನ ಕೃಪೆಯಿಂದ ನನ್ನನ್ನು ಕರೆದನು.
ಗಲಾತ್ಯದವರಿಗೆ 1 : 16 (ERVKN)
ಆತನ ಮಗನ ವಿಷಯವಾದ ಸುವಾರ್ತೆಯನ್ನು ನಾನು ಯೆಹೂದ್ಯರಲ್ಲದವರಿಗೆ ತಿಳಿಸಬೇಕೆಂಬುದು ದೇವರ ಚಿತ್ತವಾಗಿತ್ತು. ಆದ್ದರಿಂದ ದೇವರು ತನ್ನ ಮಗನನ್ನು ನನಗೆ ತೋರಿಸಿದನು. ಆತನು ನನ್ನನ್ನು ಕರೆದಾಗ ನಾನು ಯಾರಿಂದಲೂ ಸಲಹೆಯನ್ನಾಗಲಿ ಸಹಾಯವನ್ನಾಗಲಿ ತೆಗೆದುಕೊಳ್ಳಲಿಲ್ಲ.
ಗಲಾತ್ಯದವರಿಗೆ 1 : 17 (ERVKN)
ಅಪೊಸ್ತಲರನ್ನು ನೋಡುವುದಕ್ಕಾಗಿ ಜೆರುಸಲೇಮಿಗೂ ಹೋಗಲಿಲ್ಲ. ಅವರು ನನಗಿಂತ ಮೊದಲೇ ಅಪೊಸ್ತಲರಾಗಿದ್ದರು. ಆದರೆ, ನಾನು ತಡಮಾಡದೆ ಅರೇಬಿಯಾಕ್ಕೆ ಹೋದೆನು. ಆ ಬಳಿಕ ದಮಸ್ಕ ಪಟ್ಟಣಕ್ಕೆ ಹಿಂತಿರುಗಿದೆನು. [PE][PS]
ಗಲಾತ್ಯದವರಿಗೆ 1 : 18 (ERVKN)
ಮೂರು ವರ್ಷಗಳ ನಂತರ ಪೇತ್ರನನ್ನು ಭೇಟಿಯಾಗಲು ಜೆರುಸಲೇಮಿಗೆ ಹೋದೆನು. ಅವನೊಂದಿಗೆ ಹದಿನೈದು ದಿನಗಳ ಕಾಲ ಇದ್ದೆನು.
ಗಲಾತ್ಯದವರಿಗೆ 1 : 19 (ERVKN)
ಪ್ರಭುವಿನ (ಯೇಸು) ಸಹೋದರನಾದ ಯಾಕೋಬನನ್ನು ಹೊರತು ಬೇರೆ ಯಾವ ಅಪೊಸ್ತಲರನ್ನೂ ನಾನು ಭೇಟಿಯಾಗಲಿಲ್ಲ.
ಗಲಾತ್ಯದವರಿಗೆ 1 : 20 (ERVKN)
ನಾನು ಬರೆಯುತ್ತಿರುವ ಈ ಸಂಗತಿಗಳು ಸುಳ್ಳಲ್ಲವೆಂದು ದೇವರಿಗೆ ಗೊತ್ತಿದೆ.
ಗಲಾತ್ಯದವರಿಗೆ 1 : 21 (ERVKN)
ತರುವಾಯ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು. [PE][PS]
ಗಲಾತ್ಯದವರಿಗೆ 1 : 22 (ERVKN)
ಕ್ರಿಸ್ತನಲ್ಲಿರುವ ಜುದೇಯದ ಸಭೆಗಳವರು ನನ್ನನ್ನು ಹಿಂದೆಂದೂ ಭೇಟಿಯಾಗಿರಲಿಲ್ಲ.
ಗಲಾತ್ಯದವರಿಗೆ 1 : 23 (ERVKN)
“ಈ ಮನುಷ್ಯನು ನಮ್ಮನ್ನು ಹಿಂಸಿಸುತ್ತಿದ್ದನು. ಆದರೆ ಈಗ ಇವನು ತಾನು ಮೊದಲೊಮ್ಮೆ ನಾಶಮಾಡಲು ಪ್ರಯತ್ನಿಸಿದ ನಂಬಿಕೆಯ ಬಗ್ಗೆ ಜನರಿಗೆ ಹೇಳುತ್ತಿದ್ದಾನೆ” ಎಂಬುದನ್ನು ಮಾತ್ರ ಅವರು ಕೇಳಿದ್ದರು.
ಗಲಾತ್ಯದವರಿಗೆ 1 : 24 (ERVKN)
ಅವರು ನನ್ನ ನಿಮಿತ್ತ ದೇವರನ್ನು ಕೊಂಡಾಡಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: