ಆದಿಕಾಂಡ 13 : 1 (ERVKN)
{ಕಾನಾನಿಗೆ ಅಬ್ರಾಮನ ಮರುಪ್ರಯಾಣ} [PS] ಅಬ್ರಾಮನು ಈಜಿಪ್ಟಿನಿಂದ ಹೊರಟನು. ಅಬ್ರಾಮನು ತನ್ನ ಹೆಂಡತಿಯನ್ನು ಕರೆದುಕೊಂಡು ತನ್ನವುಗಳನ್ನೆಲ್ಲಾ ತೆಗೆದುಕೊಂಡು ನೆಗೆವ್ ಮೂಲಕ ಪ್ರಯಾಣ ಮಾಡಿದನು. ಲೋಟನು ಸಹ ಅವರೊಡನೆ ಇದ್ದನು.
ಆದಿಕಾಂಡ 13 : 2 (ERVKN)
ಆಗ ಅಬ್ರಾಮನು ತುಂಬ ಐಶ್ವರ್ಯವಂತನಾಗಿದ್ದನು. ಅವನಿಗೆ ಅನೇಕ ಪಶುಗಳಿದ್ದವು; ಬಹಳ ಬೆಳ್ಳಿಬಂಗಾರಗಳಿದ್ದವು. [PE][PS]
ಆದಿಕಾಂಡ 13 : 3 (ERVKN)
ಅಬ್ರಾಮನು ತನ್ನ ಪ್ರಯಾಣವನ್ನು ಮುಂದುವರಿಸಿ ನೆಗೆವ್‌ವನ್ನು ಬಿಟ್ಟು ಬೇತೇಲಿಗೆ ಹಿಂತಿರುಗಿಹೋದನು. ಅವನು ಬೇತೇಲ್‌ ನಗರಕ್ಕೂ ಆಯಿ ನಗರಕ್ಕೂ ಮಧ್ಯದಲ್ಲಿರುವ ಸ್ಥಳಕ್ಕೆ ಹೋದನು. ಅಬ್ರಾಮನು ಮತ್ತು ಅವನ ಕುಟುಂಬದವರು ಇಳಿದುಕೊಂಡಿದ್ದ ಸ್ಥಳವೇ ಇದು.
ಆದಿಕಾಂಡ 13 : 4 (ERVKN)
ಅಬ್ರಾಮನು ಯಜ್ಞವೇದಿಕೆಯನ್ನು ಕಟ್ಟಿದ್ದು ಈ ಸ್ಥಳದಲ್ಲೇ. ಅಬ್ರಾಮನು ಯೆಹೋವನನ್ನು ಆರಾಧಿಸಿದ್ದು ಈ ಸ್ಥಳದಲ್ಲೇ. [PS]
ಆದಿಕಾಂಡ 13 : 5 (ERVKN)
{ಅಬ್ರಾಮನು ಮತ್ತು ಲೋಟನು ಅಗಲಿದ್ದು} [PS] ಈ ಕಾಲದಲ್ಲಿ ಲೋಟನು ಸಹ ಅಬ್ರಾಮನೊಡನೆ ಪ್ರಯಾಣಮಾಡುತ್ತಿದ್ದನು. ಲೋಟನಿಗೂ ಸಹ ಕುರಿಮಂದೆಗಳೂ ಪಶುಹಿಂಡುಗಳೂ ಗುಡಾರಗಳೂ ಇದ್ದವು.
ಆದಿಕಾಂಡ 13 : 6 (ERVKN)
ಅಬ್ರಾಮನಿಗೂ ಲೋಟನಿಗೂ ಬಹಳ ಪಶುಗಳಿದ್ದುದರಿಂದ ಅವುಗಳ ಪೋಷಣೆಗೆ ಆ ಸ್ಥಳವು ಸಾಕಾಗಲಿಲ್ಲ.
ಆದಿಕಾಂಡ 13 : 7 (ERVKN)
ಅಬ್ರಾಮನ ಮಂದೆಕಾಯುವವರು ಮತ್ತು ಲೋಟನ ಮಂದೆಕಾಯುವವರು ವಾದ ಮಾಡಲಾರಂಭಿಸಿದರು. ಆ ಕಾಲದಲ್ಲಿ ಕಾನಾನ್ಯರು ಮತ್ತು ಪೆರಿಜೀಯರು ಸಹ ಆ ಸ್ಥಳದಲ್ಲಿ ವಾಸವಾಗಿದ್ದರು. [PE][PS]
ಆದಿಕಾಂಡ 13 : 8 (ERVKN)
ಆದ್ದರಿಂದ ಅಬ್ರಾಮನು ಲೋಟನಿಗೆ, “ನಿನಗೂ ನನಗೂ ಯಾವ ವಾಗ್ವಾದವೂ ಇರಬಾರದು. ನಿನ್ನ ಜನರೂ ನನ್ನ ಜನರೂ ವಾಗ್ವಾದ ಮಾಡಬಾರದು; ನಾವೆಲ್ಲರೂ ಸಹೋದರರಾಗಿದ್ದೇವೆ.
ಆದಿಕಾಂಡ 13 : 9 (ERVKN)
ನಾವು ಪ್ರತ್ಯೇಕವಾಗೋಣ. ನಿನಗೆ ಬೇಕಾದ ಸ್ಥಳವನ್ನು ನೀನು ಆರಿಸಿಕೊ. ನೀನು ಎಡಗಡೆಗೆ ಹೋಗುವುದಾದರೆ, ನಾನು ಬಲಗಡೆಗೆ ಹೋಗುತ್ತೇನೆ. ನೀನು ಬಲಗಡೆಗೆ ಹೋಗುವುದಾದರೆ, ನಾನು ಎಡಗಡೆಗೆ ಹೋಗುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 13 : 10 (ERVKN)
ಲೋಟನು ಕಣ್ಣೆತ್ತಿ ನೋಡಿದಾಗ ಜೋರ್ಡನ್ ಕಣಿವೆಯೆಲ್ಲಾ ಕಾಣಿಸಿತು. ಅಲ್ಲಿ ಬೇಕಾದಷ್ಟು ನೀರಿರುವುದನ್ನು ಲೋಟನು ನೋಡಿದನು. (ಆ ಕಾಲದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳು ಯೆಹೋವನಿಂದ ನಾಶವಾಗಿರಲಿಲ್ಲ. ಆ ಕಾಲದಲ್ಲಿ ಜೋರ್ಡನ್ ಕಣಿವೆಯು ಚೋಗರ್ ತನಕ ಯೆಹೋವನ ತೋಟದಂತಿತ್ತು. ಅದು ಈಜಿಪ್ಟಿನ ಭೂಮಿಯಂತೆ ಫಲವತ್ತಾಗಿತ್ತು.)
ಆದಿಕಾಂಡ 13 : 11 (ERVKN)
ಆದ್ದರಿಂದ ಲೋಟನು ಜೋರ್ಡನ್ ಕಣಿವೆಯನ್ನೆಲ್ಲಾ ತನಗಾಗಿ ಆರಿಸಿಕೊಂಡನು. ಅವರಿಬ್ಬರೂ ಪ್ರತ್ಯೇಕವಾದರು. ಲೋಟನು ಪೂರ್ವದ ಕಡೆಗೆ ಪ್ರಯಾಣ ಮಾಡಿದನು.
ಆದಿಕಾಂಡ 13 : 12 (ERVKN)
ಅಬ್ರಾಮನು ಕಾನಾನ್ ಪ್ರದೇಶದಲ್ಲಿ ಉಳಿದುಕೊಂಡನು. ಲೋಟನು ಕಣಿವೆಯಲ್ಲಿದ್ದ ಪಟ್ಟಣಗಳ ಮಧ್ಯದಲ್ಲಿ ವಾಸಿಸಿದನು; ದಕ್ಷಿಣದಲ್ಲಿದ್ದ ಸೊದೋಮಿನವರೆಗೂ ಗುಡಾರಗಳನ್ನು ಹಾಕಿಕೊಂಡು ಪಾಳೆಯಮಾಡಿಕೊಂಡನು.
ಆದಿಕಾಂಡ 13 : 13 (ERVKN)
ಸೊದೋಮಿನ ಜನರು ತುಂಬ ಕೆಟ್ಟವರಾಗಿದ್ದರು. ಅವರು ಯಾವಾಗಲೂ ಯೆಹೋವನಿಗೆ ವಿರೋಧವಾಗಿ ಪಾಪಮಾಡುತ್ತಿದ್ದರು. [PE][PS]
ಆದಿಕಾಂಡ 13 : 14 (ERVKN)
ಲೋಟನು ಹೊರಟುಹೋದ ಮೇಲೆ ಯೆಹೋವನು ಅಬ್ರಾಮನಿಗೆ, “ಸುತ್ತಲೂ ನೋಡು, ಉತ್ತರದಕ್ಷಿಣಗಳ ಕಡೆಗೂ ಪೂರ್ವಪಶ್ಚಿಮಗಳ ಕಡೆಗೂ ನೋಡು.
ಆದಿಕಾಂಡ 13 : 15 (ERVKN)
ನೀನು ನೋಡುವ ಈ ದೇಶವನ್ನೆಲ್ಲಾ ನಿನಗೂ ನಿನ್ನ ನಂತರ ಜೀವಿಸುವ ನಿನ್ನ ಸಂತತಿಯವರಿಗೂ ಕೊಡುತ್ತೇನೆ. ಇದು ಎಂದೆಂದಿಗೂ ನಿನ್ನದಾಗಿರುವುದು.
ಆದಿಕಾಂಡ 13 : 16 (ERVKN)
ನಾನು ನಿನ್ನ ಜನರನ್ನು ಭೂಮಿಯ ಮೇಲಿರುವ ಧೂಳಿನಷ್ಟು ಹೆಚ್ಚಿಸುವೆನು. ಯಾವನಾದರೂ ಭೂಮಿಯ ಮೇಲಿರುವ ಧೂಳಿನ ಕಣಗಳನ್ನು ಲೆಕ್ಕಮಾಡಬಹುದಾದರೆ ನಿನ್ನ ಸಂತತಿಯವರ ಸಂಖ್ಯೆಯು ಅದರಷ್ಟೇ ಇರುವುದು.
ಆದಿಕಾಂಡ 13 : 17 (ERVKN)
ಆದ್ದರಿಂದ ಹೋಗು, ನಿನ್ನ ಭೂಮಿಯಲ್ಲೆಲ್ಲಾ ತಿರುಗಾಡು. ಅದರ ಉದ್ದಗಲಗಳಲ್ಲೆಲ್ಲಾ ತಿರುಗಾಡು; ಯಾಕೆಂದರೆ ನಾನು ಅದನ್ನು ನಿನಗೆ ಕೊಡುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 13 : 18 (ERVKN)
ಆದ್ದರಿಂದ ಅಬ್ರಾಮನು ತನ್ನ ಗುಡಾರಗಳನ್ನು ಕೀಳಿಸಿ, ದೊಡ್ಡ ಮರಗಳಿರುವ ಮಮ್ರೆಯ ಸಮೀಪಕ್ಕೆ ಹೋಗಿ ವಾಸಿಸತೊಡಗಿದನು. ಇದು ಹೆಬ್ರೋನ್ ನಗರಕ್ಕೆ ಸಮೀಪದಲ್ಲಿತ್ತು. ಆ ಸ್ಥಳದಲ್ಲಿ ಅಬ್ರಾಮನು ಯೆಹೋವನನ್ನು ಆರಾಧಿಸುವುದಕ್ಕಾಗಿ ಯಜ್ಞವೇದಿಕೆಯನ್ನು ಕಟ್ಟಿದನು. [PE]

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: