ಆದಿಕಾಂಡ 15 : 1 (ERVKN)
{ದೇವರು ಅಬ್ರಾಮನೊಡನೆ ಮಾಡಿಕೊಂಡ ಒಡಂಬಡಿಕೆ} [PS] ಈ ಸಂಗತಿಗಳಾದ ಮೇಲೆ, ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ಸಂದೇಶ ಬಂದಿತು. ದೇವರು ಅವನಿಗೆ, “ಅಬ್ರಾಮನೇ ಭಯಪಡಬೇಡ; ನಾನೇ ನಿನಗೆ ಗುರಾಣಿಯಾಗಿದ್ದೇನೆ. ನಾನು ನಿನಗೆ ದೊಡ್ಡ ಪ್ರತಿಫಲವನ್ನು ಕೊಡುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 15 : 2 (ERVKN)
ಅದಕ್ಕೆ ಅಬ್ರಾಮನು, “ದೇವರಾದ ಯೆಹೋವನೇ, ನೀನು ನನಗೆ ಏನೇ ಕೊಟ್ಟರೂ ನನಗೆ ಸಂತೋಷವಾಗುವುದಿಲ್ಲ. ಯಾಕೆಂದರೆ, ನನಗೆ ಮಗನೇ ಇಲ್ಲ. ಆದ್ದರಿಂದ ನಾನು ಸತ್ತಮೇಲೆ ನನ್ನ ಆಸ್ತಿಯೆಲ್ಲ ನನ್ನ ಸೇವಕನಾದ ದಮಸ್ಕದ ಎಲೀಯೆಜರನ ಪಾಲಾಗುವುದು” ಎಂದು ಹೇಳಿದನು.
ಆದಿಕಾಂಡ 15 : 3 (ERVKN)
ಮತ್ತೆ ಅಬ್ರಾಮನು, “ನೀನು ನನಗೆ ಮಗನನ್ನೇ ಕೊಟ್ಟಿಲ್ಲ. ಆದ್ದರಿಂದ ನನ್ನ ಮನೆಯಲ್ಲಿ ಹುಟ್ಟಿದ ಸೇವಕನೊಬ್ಬನು ನನಗಿರುವುದನ್ನೆಲ್ಲ ಪಡೆದುಕೊಳ್ಳುವನು” ಎಂದು ಹೇಳಿದನು. [PE][PS]
ಆದಿಕಾಂಡ 15 : 4 (ERVKN)
ಆಗ ಯೆಹೋವನು ಅಬ್ರಾಮನಿಗೆ, “ನಿನ್ನ ಆಸ್ತಿಯನ್ನೆಲ್ಲ ಪಡೆದುಕೊಳ್ಳುವವನು ನಿನ್ನ ಸೇವಕನಲ್ಲ. ನೀನೇ ಮಗನನ್ನು ಪಡೆಯುವೆ; ನಿನ್ನ ಮಗನೇ ನಿನ್ನ ಆಸ್ತಿಯನ್ನೆಲ್ಲಾ ಪಡೆಯುವನು” ಎಂದು ಹೇಳಿದನು. [PE][PS]
ಆದಿಕಾಂಡ 15 : 5 (ERVKN)
ನಂತರ ದೇವರು ಅಬ್ರಾಮನನ್ನು ಹೊರಗೆ ಕರೆದುಕೊಂಡು ಬಂದು ಅವನಿಗೆ, “ಆಕಾಶದ ಕಡೆಗೆ ಕಣ್ಣೆತ್ತಿ ನಕ್ಷತ್ರಗಳನ್ನು ನೋಡು. ನೀನು ಲೆಕ್ಕ ಮಾಡಲಾರದಷ್ಟು ನಕ್ಷತ್ರಗಳಿವೆ. ಮುಂದಿನ ಕಾಲದಲ್ಲಿ ನಿನ್ನ ಕುಟುಂಬವು ಅದೇ ರೀತಿಯಲ್ಲಿರುವುದು” ಎಂದು ಹೇಳಿದನು. [PE][PS]
ಆದಿಕಾಂಡ 15 : 6 (ERVKN)
ಅಬ್ರಾಮನು ಯೆಹೋವನನ್ನು ನಂಬಿದನು. ಆ ನಂಬಿಕೆಯ ನಿಮಿತ್ತವೇ ಯೆಹೋವನು ಅಬ್ರಾಮನನ್ನು ನೀತಿವಂತನೆಂದು ಪರಿಗಣಿಸಿದನು.
ಆದಿಕಾಂಡ 15 : 7 (ERVKN)
ಆತನು ಅಬ್ರಾಮನಿಗೆ, “ಯೆಹೋವನಾದ ನಾನು ನಿನ್ನನ್ನು ಕಲ್ದೀಯರ ಊರ್ ಪಟ್ಟಣದಿಂದ ಬರಮಾಡಿದೆನು. ನಿನಗೆ ಈ ದೇಶವನ್ನು ಕೊಡಬೇಕೆಂತಲೂ ನೀನು ಈ ದೇಶವನ್ನು ಹೊಂದಿಕೊಳ್ಳಬೇಕೆಂತಲೂ ನಾನು ನಿನ್ನನ್ನು ಬರಮಾಡಿದೆನು” ಎಂದು ಹೇಳಿದನು. [PE][PS]
ಆದಿಕಾಂಡ 15 : 8 (ERVKN)
ಅದಕ್ಕೆ ಅಬ್ರಾಮನು, “ಯೆಹೋವನೇ, ನನ್ನ ಒಡೆಯನೇ, ನನಗೆ ಈ ದೇಶವು ದೊರೆಯುತ್ತದೆಯೆಂದು ಖಚಿತಪಡಿಸಿಕೊಳ್ಳುವುದು ಹೇಗೆ?” ಎಂದು ಕೇಳಿದನು. [PE][PS]
ಆದಿಕಾಂಡ 15 : 9 (ERVKN)
ದೇವರು ಅಬ್ರಾಮನಿಗೆ, “ನಾವು ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳೋಣ. ಮೂರು ವರ್ಷದ ಒಂದು ಹಸುವನ್ನೂ ಮೂರು ವರ್ಷದ ಒಂದು ಆಡನ್ನೂ ಮತ್ತು ಮೂರು ವರ್ಷದ ಒಂದು ಟಗರನ್ನೂ ತೆಗೆದುಕೊಂಡು ಬಾ. ಇದಲ್ಲದೆ ಒಂದು ಬೆಳವಕ್ಕಿಯನ್ನೂ ಒಂದು ಪಾರಿವಾಳವನ್ನೂ ತೆಗೆದುಕೊಂಡು ಬಾ” ಎಂದು ಹೇಳಿದನು. [PE][PS]
ಆದಿಕಾಂಡ 15 : 10 (ERVKN)
ಅಬ್ರಾಮನು ದೇವರಿಗೋಸ್ಕರ ಅವುಗಳನ್ನೆಲ್ಲ ತೆಗೆದುಕೊಂಡು ಬಂದನು. ಅಬ್ರಾಮನು ಅವುಗಳನ್ನು ಕತ್ತರಿಸಿ ಎರಡೆರಡು ಹೋಳು ಮಾಡಿದನು. ಆಮೇಲೆ ಅಬ್ರಾಮನು ತುಂಡಿಗೆ ತುಂಡನ್ನು ಎದುರಾಗಿಟ್ಟನು. ಅಬ್ರಾಮನು ಪಕ್ಷಿಗಳನ್ನು ಮಾತ್ರ ಎರಡೆರಡು ಹೋಳು ಮಾಡಲಿಲ್ಲ.
ಆದಿಕಾಂಡ 15 : 11 (ERVKN)
ಸ್ವಲ್ಪ ಸಮಯದ ನಂತರ, ದೊಡ್ಡ ಪಕ್ಷಿಗಳು ಆ ಪ್ರಾಣಿಗಳ ಮಾಂಸವನ್ನು ತಿನ್ನಲು ಹಾರಿ ಬಂದವು. ಆದರೆ ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು. [PE][PS]
ಆದಿಕಾಂಡ 15 : 12 (ERVKN)
ಸಾಯಂಕಾಲವಾಯಿತು, ಸೂರ್ಯ ಮುಳುಗತೊಡಗಿದಾಗ ಅಬ್ರಾಮನಿಗೆ ಗಾಢ ನಿದ್ರೆ ಬಂದಿತು. ಅವನು ನಿದ್ರೆ ಮಾಡುತ್ತಿರುವಾಗ ಕಾರ್ಗತ್ತಲಾಯಿತು.
ಆದಿಕಾಂಡ 15 : 13 (ERVKN)
ಆಗ ಯೆಹೋವನು ಅಬ್ರಾಮನಿಗೆ, “ನಿನಗೆ ಈ ವಿಷಯಗಳು ತಿಳಿದಿರಬೇಕು. ನಿನ್ನ ಸಂತತಿಯವರು ಪರದೇಶಿಯರಾಗಿ ತಮ್ಮದಲ್ಲದ ದೇಶದಲ್ಲಿ ವಾಸಮಾಡುವರು. ಅಲ್ಲಿನ ಜನರು ಅವರನ್ನು ಗುಲಾಮರನ್ನಾಗಿ ಮಾಡಿಕೊಳ್ಳುವರು. ಅಲ್ಲಿ ಅವರು ನಾನೂರು ವರ್ಷಗಳವರೆಗೆ ಬಾಧೆಪಡುವರು.
ಆದಿಕಾಂಡ 15 : 14 (ERVKN)
ಆದರೆ ನಾನೂರು ವರ್ಷಗಳಾದ ಮೇಲೆ ಅವರ ಮೇಲೆ ದೊರೆತನ ಮಾಡಿದ ಆ ದೇಶವನ್ನು ನಾನು ದಂಡಿಸುವೆನು; ನಿನ್ನ ಜನರು ಆ ದೇಶವನ್ನು ಬಿಟ್ಟು ಹೊರಡುವರು. ನಿನ್ನ ಜನರು ಅದನ್ನು ಬಿಡುವಾಗ ತಮ್ಮೊಡನೆ ಸಂಪತ್ತುಗಳನ್ನು ತೆಗೆದುಕೊಂಡು ಹೋಗುವರು. [PE][PS]
ಆದಿಕಾಂಡ 15 : 15 (ERVKN)
“ನೀನು ತುಂಬಾ ಮುದುಕನಾಗುವ ತನಕ ಜೀವಿಸಿ ಸಮಾಧಾನದಿಂದ ಸಾಯುವೆ; ನಿನ್ನನ್ನು ನಿನ್ನ ಕುಟುಂಬದವರೊಡನೆ ಸಮಾಧಿ ಮಾಡುವರು.
ಆದಿಕಾಂಡ 15 : 16 (ERVKN)
ನಾಲ್ಕು ತಲೆಮಾರುಗಳ ನಂತರ ನಿನ್ನ ಜನರು ಈ ನಾಡಿಗೆ ಹಿಂತಿರುಗುವರು. ಆ ಕಾಲದಲ್ಲಿ ನಿನ್ನ ಜನರು ಅಮೋರಿಯರನ್ನು ಸೋಲಿಸುವರು. ಇಲ್ಲಿ ವಾಸಿಸುತ್ತಿರುವ ಅಮೋರಿಯರನ್ನು ನಿನ್ನ ಜನರ ಮೂಲಕ ನಾನೇ ಶಿಕ್ಷಿಸುವೆನು. ಇದು ಮುಂದೆ ನಡೆಯುವ ಸಂಗತಿ. ಯಾಕೆಂದರೆ ಆ ಸಮಯದಲ್ಲಿ ಅಮೋರಿಯರು ಅಂಥ ಶಿಕ್ಷೆ ಅನುಭವಿಸುವಷ್ಟು ಕೆಟ್ಟವರಾಗಿರಲಿಲ್ಲ” ಎಂದು ಹೇಳಿದನು. [PE][PS]
ಆದಿಕಾಂಡ 15 : 17 (ERVKN)
ಸೂರ್ಯನು ಮುಳುಗಿದ ಮೇಲೆ ತುಂಬ ಕತ್ತಲಾಯಿತು. ಕಡಿದುಹಾಕಿದ್ದ ಪ್ರತಿಯೊಂದು ಪ್ರಾಣಿಗಳ ದೇಹದ ಎರಡೆರಡು ಹೋಳುಗಳು ಇನ್ನೂ ನೆಲದ ಮೇಲೆ ಇದ್ದವು. ಆ ಸಮಯದಲ್ಲಿ ಇದ್ದಕ್ಕಿದ್ದಂತೆ ಹೊಗೆ ಮತ್ತು ಬೆಂಕಿಗಳಿಂದ ಕೂಡಿದ ದೀವಿಟಿಗೆಯು ಈ ತುಂಡುಗಳ ನಡುವೆ ಹಾದುಹೋಯಿತು. [PE][PS]
ಆದಿಕಾಂಡ 15 : 18 (ERVKN)
ಆದ್ದರಿಂದ ಅಂದು ಯೆಹೋವನು ಒಂದು ವಾಗ್ದಾನವನ್ನು ಮಾಡಿ ಅಬ್ರಾಮನೊಡನೆ ಒಂದು ಒಡಂಬಡಿಕೆಯನ್ನು ಮಾಡಿಕೊಂಡನು. ಯೆಹೋವನು ಅವನಿಗೆ, “ನಾನು ನಿನ್ನ ಸಂತತಿಯವರಿಗೆ ಈ ನಾಡನ್ನು ಕೊಡುವೆನು. ನಾನು ಅವರಿಗೆ ಈಜಿಪ್ಟ್ ನದಿಯಿಂದ ಯೂಫ್ರೇಟೀಸ್ ಮಹಾನದಿಯವರೆಗೂ ಇರುವ ನಾಡನ್ನು ಕೊಡುವೆನು.
ಆದಿಕಾಂಡ 15 : 19 (ERVKN)
ಇದು ಕೇನಿಯರ, ಕೆನಿಜೀಯರ, ಕದ್ಮೋನಿಯರ,
ಆದಿಕಾಂಡ 15 : 20 (ERVKN)
ಹಿತ್ತಿಯರ, ಪೆರಿಜೀಯರ, ರೆಷಾಯರ,
ಆದಿಕಾಂಡ 15 : 21 (ERVKN)
ಅಮೋರಿಯರ, ಕಾನಾನ್ಯರ, ಗಿರ್ಗಾಷಿಯರ ಮತ್ತು ಯೆಬೂಸಿಯರ ನಾಡು” ಎಂದು ಹೇಳಿದನು. [PE]

1 2 3 4 5 6 7 8 9 10 11 12 13 14 15 16 17 18 19 20 21

BG:

Opacity:

Color:


Size:


Font: