ಆದಿಕಾಂಡ 17 : 1 (ERVKN)
ಅಬ್ರಾಮನಿಗೆ ತೊಂಭತ್ತೊಂಬತ್ತು ವರ್ಷವಾಗಿದ್ದಾಗ ಯೆಹೋವನು ಅವನಿಗೆ ಪ್ರತ್ಯಕ್ಷನಾಗಿ, “ನಾನು ಸರ್ವಶಕ್ತನಾದ ದೇವರು. ನನಗೆ ವಿಧೇಯನಾಗಿದ್ದು ನಿರ್ದೋಷಿಯಾಗಿರು.
ಆದಿಕಾಂಡ 17 : 2 (ERVKN)
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ನಿನ್ನನ್ನು ದೊಡ್ಡ ಜನಾಂಗವನ್ನಾಗಿ ಮಾಡುವುದಾಗಿ ವಾಗ್ದಾನ ಮಾಡುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 17 : 3 (ERVKN)
ಆ ಕೂಡಲೇ ಅಬ್ರಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ದೇವರು ಅವನಿಗೆ,
ಆದಿಕಾಂಡ 17 : 4 (ERVKN)
“ನಾನು ನಿನಗೆ ಮಾಡುವ ವಾಗ್ದಾನವೇನೆಂದರೆ:
ಆದಿಕಾಂಡ 17 : 5 (ERVKN)
‘ಅಬ್ರಾಮ’ ಎಂಬ ನಿನ್ನ ಹೆಸರನ್ನು ಬದಲಾಯಿಸಿ ನಿನಗೆ ‘ಅಬ್ರಹಾಮ’ ಎಂದು ಹೆಸರಿಡುವೆನು. ನಿನ್ನನ್ನು ಅಬ್ರಹಾಮ ಎಂದೇ ಕರೆಯುವರು; ಯಾಕೆಂದರೆ ನೀನು ಅನೇಕ ಜನಾಂಗಗಳಿಗೆ ಮೂಲಪಿತೃವಾಗುವೆ.
ಆದಿಕಾಂಡ 17 : 6 (ERVKN)
ಹೊಸ ಜನಾಂಗಗಳು ನಿನ್ನಿಂದ ಹುಟ್ಟುವವು; ರಾಜರುಗಳು ನಿನ್ನಿಂದ ಬರುವರು.
ಆದಿಕಾಂಡ 17 : 7 (ERVKN)
ನಾನು ನಿನ್ನೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಯು ನಿನ್ನ ಎಲ್ಲಾ ಸಂತತಿಯವರಿಗೆ ಶಾಶ್ವತವಾಗಿ ಅನ್ವಯಿಸುವುದು. ನಾನೇ ನಿನಗೂ ನಿನ್ನ ಎಲ್ಲಾ ಸಂತತಿಯವರಿಗೂ ದೇವರಾಗಿರುವೆನು.
ಆದಿಕಾಂಡ 17 : 8 (ERVKN)
ನೀನು ಪ್ರಯಾಣ ಮಾಡುತ್ತಿರುವ ಈ ಕಾನಾನ್ ದೇಶವನ್ನೆಲ್ಲ ನಿನಗೂ ನಿನ್ನ ಸಂತತಿಯವರಿಗೂ ಶಾಶ್ವತವಾಗಿ ಕೊಡುವೆನು. ನಾನೇ ನಿಮ್ಮ ದೇವರಾಗಿರುವೆನು” ಎಂದು ಹೇಳಿದನು. [PE][PS]
ಆದಿಕಾಂಡ 17 : 9 (ERVKN)
ಇದಲ್ಲದೆ ದೇವರು ಅಬ್ರಹಾಮನಿಗೆ, “ನಮ್ಮ ಒಡಂಬಡಿಕೆಯ ಪ್ರಕಾರ ನೀನು ಮತ್ತು ನಿನ್ನ ಸಂತತಿಯವರೆಲ್ಲರೂ ನನ್ನ ಒಡಂಬಡಿಕೆಗೆ ವಿಧೇಯರಾಗಬೇಕು.
ಆದಿಕಾಂಡ 17 : 10 (ERVKN)
ನೀನೂ ಮತ್ತು ನಿನ್ನ ಎಲ್ಲಾ ಸಂತತಿಯವರು ಕೈಕೊಳ್ಳಬೇಕಾದ ನಿಬಂಧನೆಯೇನೆಂದರೆ, ನಿಮ್ಮಲ್ಲಿ ಹುಟ್ಟಿದ ಪ್ರತಿಯೊಂದು ಗಂಡುಮಗುವಿಗೂ ಸುನ್ನತಿ ಮಾಡಿಸಬೇಕು.
ಆದಿಕಾಂಡ 17 : 11 (ERVKN)
(11-12) ಇಂದಿನಿಂದ ನಿಮ್ಮಲ್ಲಿ ಗಂಡುಮಗು ಹುಟ್ಟಿ ಎಂಟು ದಿನಗಳಾದ ಮೇಲೆ ಆ ಮಗುವಿಗೆ ಸುನ್ನತಿ ಮಾಡಿಸಬೇಕು; ಈ ನಿಯಮವು ನಿಮ್ಮ ಮನೆಯಲ್ಲಿ ಹುಟ್ಟಿದ ಸೇವಕರಿಗೂ, ಪರದೇಶದಿಂದ ಕೊಂಡುತಂದ ಸೇವಕರಿಗೂ ಸಹ ಅನ್ವಯಿಸುತ್ತದೆ. ನನಗೂ ನಿನಗೂ ಆದ ಒಡಂಬಡಿಕೆಗೆ ಇದು ಗುರುತಾಗಿರುವುದು.
ಆದಿಕಾಂಡ 17 : 12 (ERVKN)
ಆದಿಕಾಂಡ 17 : 13 (ERVKN)
(13-14) ಹೀಗೆ ಪ್ರತಿಯೊಬ್ಬನಿಗೂ ಸುನ್ನತಿಯಾಗಲೇಬೇಕು. ನಾನು ನಿನ್ನೊಂದಿಗೆ ಮಾಡಿಕೊಂಡ ಒಡಂಬಡಿಕೆಯು ಶಾಶ್ವತವಾದದ್ದು ಎಂಬುದಕ್ಕೆ ಈ ಸುನ್ನತಿಯೇ ದೈಹಿಕ ಗುರುತಾಗಿದೆ. ಸುನ್ನತಿಯಾಗಿಲ್ಲದ ಪುರುಷನು ನನ್ನ ಒಡಂಬಡಿಕೆಗೆ ವಿಧೇಯನಾಗದ ಕಾರಣ ಅವನನ್ನು ಕುಲದಿಂದ ತೆಗೆದುಹಾಕಲ್ಪಡಬೇಕು” ಎಂದು ಹೇಳಿದನು. [PS]
ಆದಿಕಾಂಡ 17 : 14 (ERVKN)
ಆದಿಕಾಂಡ 17 : 15 (ERVKN)
{ಇಸಾಕನು ವಾಗ್ದಾನದ ಮಗನು} [PS] ದೇವರು ಅಬ್ರಹಾಮನಿಗೆ, “ನಿನ್ನ ಹೆಂಡತಿಯಾದ, ಸಾರಯಳಿಗೆ ನಾನು ಒಂದು ಹೆಸರನ್ನು ಕೊಡುತ್ತೇನೆ. ಆಕೆಯ ಹೊಸ ಹೆಸರು ಸಾರಾ.
ಆದಿಕಾಂಡ 17 : 16 (ERVKN)
ನಾನು ಆಕೆಯನ್ನು ಆಶೀರ್ವದಿಸಿ ಆಕೆಗೆ ಒಬ್ಬ ಮಗನನ್ನು ದಯಪಾಲಿಸುವೆನು; ನೀನೇ ಅವನ ತಂದೆ. ಅನೇಕ ಜನಾಂಗಗಳಿಗೂ ರಾಜರುಗಳಿಗೂ ಆಕೆಯು ಮೂಲಮಾತೆಯಾಗಿರುವಳು” ಎಂದು ಹೇಳಿದನು. [PE][PS]
ಆದಿಕಾಂಡ 17 : 17 (ERVKN)
ಅಬ್ರಹಾಮನು ದೇವರಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಆದರೆ ಅವನು ಮನಸ್ಸಿನಲ್ಲಿ ನಗುತ್ತಾ, “ನನಗೆ ನೂರು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ನನಗೂ ಸಾಧ್ಯವಿಲ್ಲ. ಸಾರಳಿಗೆ ತೊಂಭತ್ತು ವರ್ಷ ವಯಸ್ಸಾಗಿರುವುದರಿಂದ ಮಗನನ್ನು ಪಡೆಯಲು ಆಕೆಗೂ ಸಾಧ್ಯವಿಲ್ಲ” ಅಂದುಕೊಂಡನು. [PE][PS]
ಆದಿಕಾಂಡ 17 : 18 (ERVKN)
ಆಮೇಲೆ ಅಬ್ರಹಾಮನು ದೇವರಿಗೆ, “ಇಷ್ಮಾಯೇಲನೇ ನಿನ್ನ ಆಶೀರ್ವಾದವನ್ನು ಹೊಂದಿಕೊಂಡು ಜೀವಿಸಬಾರದೇಕೆ?” ಎಂದು ಕೇಳಿದನು. [PE][PS]
ಆದಿಕಾಂಡ 17 : 19 (ERVKN)
ಅದಕ್ಕೆ ದೇವರು ಅವನಿಗೆ, “ಇಲ್ಲ! ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ, ‘ಇಸಾಕ’ ಎಂದು ಹೆಸರಿಡಬೇಕು. ನಾನು ಒಂದು ಒಡಂಬಡಿಕೆಯನ್ನು ಅವನೊಡನೆ ಮಾಡಿಕೊಳ್ಳುವೆನು. ಆ ಒಡಂಬಡಿಕೆಯು ಅವನ ಎಲ್ಲಾ ಸಂತತಿಯವರಲ್ಲಿಯೂ ಶಾಶ್ವತವಾಗಿರುವುದು. [PE][PS]
ಆದಿಕಾಂಡ 17 : 20 (ERVKN)
“ನೀನು ಇಷ್ಮಾಯೇಲನ ಬಗ್ಗೆ ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ನಾನು ಅವನನ್ನು ಆಶೀರ್ವದಿಸುವೆನು. ಅವನು ಅನೇಕ ಮಕ್ಕಳನ್ನು ಪಡೆದುಕೊಳ್ಳುವನು. ಹನ್ನೆರಡು ಮಹಾನಾಯಕರುಗಳಿಗೆ ಅವನು ತಂದೆಯಾಗುವನು. ಅವನ ಸಂತತಿಯು ಮಹಾಜನಾಂಗವಾಗುವುದು.
ಆದಿಕಾಂಡ 17 : 21 (ERVKN)
ಆದರೆ ನಾನು ನನ್ನ ಒಡಂಬಡಿಕೆಯನ್ನು ಇಸಾಕನೊಡನೆ ಮಾಡಿಕೊಳ್ಳುವೆನು. ಸಾರಳಲ್ಲಿ ಹುಟ್ಟುವ ಮಗನೇ ಇಸಾಕನು. ಮುಂದಿನ ವರ್ಷ ಇದೇ ಸಮಯದಲ್ಲಿ ಇಸಾಕನು ಹುಟ್ಟುವನು” ಎಂದು ಹೇಳಿದನು. [PE][PS]
ಆದಿಕಾಂಡ 17 : 22 (ERVKN)
ದೇವರು ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿದ ಮೇಲೆ ಮೇಲೋಕಕ್ಕೆ ಹೊರಟುಹೋದನು.
ಆದಿಕಾಂಡ 17 : 23 (ERVKN)
ಅದೇ ದಿನದಲ್ಲಿ ಅಬ್ರಹಾಮನು ಇಷ್ಮಾಯೇಲನಿಗೂ ತನ್ನ ಮನೆಯಲ್ಲಿದ್ದ ಸೇವಕರಿಗೆ ಹುಟ್ಟಿದ ಗಂಡುಮಕ್ಕಳಿಗೂ ಪರದೇಶಿಯರಿಂದ ಕೊಂಡುತಂದಿದ್ದ ಸೇವಕರಿಗೂ ದೇವರು ಹೇಳಿದಂತೆಯೇ ಸುನ್ನತಿ ಮಾಡಿಸಿದನು. [PE][PS]
ಆದಿಕಾಂಡ 17 : 24 (ERVKN)
ಅಬ್ರಹಾಮನು ಸುನ್ನತಿ ಮಾಡಿಸಿಕೊಂಡಾಗ ತೊಂಭತ್ತೊಂಭತ್ತು ವರ್ಷದವನಾಗಿದ್ದನು.
ಆದಿಕಾಂಡ 17 : 25 (ERVKN)
ಇಷ್ಮಾಯೇಲನಿಗೆ ಸುನ್ನತಿಯಾದಾಗ ಅವನಿಗೆ ಹದಿಮೂರು ವರ್ಷವಾಗಿತ್ತು.
ಆದಿಕಾಂಡ 17 : 26 (ERVKN)
ಅಬ್ರಹಾಮನಿಗೂ ಅವನ ಮಗನಿಗೂ ಒಂದೇ ದಿನದಲ್ಲಿ ಸುನ್ನತಿಯಾಯಿತು.
ಆದಿಕಾಂಡ 17 : 27 (ERVKN)
ಅಬ್ರಹಾಮನ ಮನೆಯಲ್ಲಿದ್ದ ಎಲ್ಲಾ ಗಂಡಸರಿಗೆ ಅಂದರೆ ಅವನ ಮನೆಯಲ್ಲಿ ಹುಟ್ಟಿದ ಎಲ್ಲಾ ಸೇವಕರಿಗೆ ಮತ್ತು ಅವನು ಕ್ರಯಕ್ಕೆ ತೆಗೆದುಕೊಂಡಿದ್ದ ಎಲ್ಲಾ ಸೇವಕರಿಗೆ ಸುನ್ನತಿಯಾಯಿತು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27

BG:

Opacity:

Color:


Size:


Font: