ಆದಿಕಾಂಡ 2 : 1 (ERVKN)
ಏಳನೆ ದಿನ — ವಿಶ್ರಾಂತಿ ಹೀಗೆ ಭೂಮಿಯೂ ಆಕಾಶವೂ ಅವುಗಳಲ್ಲಿರುವ ಪ್ರತಿಯೊಂದೂ ನಿರ್ಮಿತವಾದವು.
ಆದಿಕಾಂಡ 2 : 2 (ERVKN)
ದೇವರು ತನ್ನ ಸೃಷ್ಟಿಕಾರ್ಯವನ್ನು ಮುಕ್ತಾಯಗೊಳಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡನು.
ಆದಿಕಾಂಡ 2 : 3 (ERVKN)
ದೇವರು ತನ್ನ ಎಲ್ಲಾ ಸೃಷ್ಟಿಕಾರ್ಯಗಳನ್ನೆಲ್ಲಾ ಮುಗಿಸಿ ಏಳನೆ ದಿನದಲ್ಲಿ ವಿಶ್ರಮಿಸಿಕೊಂಡದ್ದರಿಂದ ಆ ದಿನವು “ಪರಿಶುದ್ಧ ದಿನವಾಗಿರಲಿ” ಎಂದು ಆಶೀರ್ವದಿಸಿದನು.
ಆದಿಕಾಂಡ 2 : 4 (ERVKN)
ಮಾನವನ ಪ್ರಾರಂಭ ಇದು ಆಕಾಶದ ಮತ್ತು ಭೂಮಿಯ ಚರಿತ್ರೆ. ದೇವರು ಭೂಮಿಯನ್ನು ಮತ್ತು ಆಕಾಶವನ್ನು ಸೃಷ್ಟಿಸಿದಾಗ ನಡೆದ ಸಂಗತಿಗಳೇ ಈ ಚರಿತ್ರೆ.
ಆದಿಕಾಂಡ 2 : 5 (ERVKN)
ಆಗ ಭೂಮಿಯ ಮೇಲೆ ಯಾವ ಮರಗಿಡಗಳೂ ಇರಲಿಲ್ಲ. ಭೂಮಿಯ ಮೇಲೆ ಯಾವ ಸಸಿಯೂ ಬೆಳೆಯುತ್ತಿರಲಿಲ್ಲ; ಯಾಕೆಂದರೆ ಯೆಹೋವನು ಭೂಮಿಯ ಮೇಲೆ ಇನ್ನೂ ಮಳೆಯನ್ನು ಸುರಿಸಿರಲಿಲ್ಲ; ಭೂಮಿಯನ್ನು ಬೇಸಾಯ ಮಾಡಲು ಯಾರೂ ಇರಲಿಲ್ಲ.
ಆದಿಕಾಂಡ 2 : 6 (ERVKN)
ಭೂಮಿಯಿಂದ ನೀರು* ನೀರು ಅಥವಾ “ಇಬ್ಬನಿ.” ಚಿಮ್ಮಿಬಂದು ನೆಲವನ್ನೆಲ್ಲಾ ತೋಯಿಸುತ್ತಿತ್ತು.
ಆದಿಕಾಂಡ 2 : 7 (ERVKN)
ಹೀಗಿರಲು ದೇವರಾದ ಯೆಹೋವನು ನೆಲದಿಂದ ಮಣ್ಣನ್ನು ತೆಗೆದುಕೊಂಡು ಮನುಷ್ಯನನ್ನು ರೂಪಿಸಿ ಮೂಗಿನಲ್ಲಿ ಜೀವಶ್ವಾಸವನ್ನು ಊದಿದನು. ಆಗ ಮನುಷ್ಯನು ಸಜೀವಿಯಾದನು.
ಆದಿಕಾಂಡ 2 : 8 (ERVKN)
ದೇವರಾದ ಯೆಹೋವನು ಪೂರ್ವ ದಿಕ್ಕಿನಲ್ಲಿದ್ದ ಏದೆನ್ ಸೀಮೆಯಲ್ಲಿ ಒಂದು ತೋಟವನ್ನು ಮಾಡಿ ತಾನು ಸೃಷ್ಟಿಸಿದ ಮನುಷ್ಯನನ್ನು ಆ ತೋಟದಲ್ಲಿರಿಸಿದನು.
ಆದಿಕಾಂಡ 2 : 9 (ERVKN)
ದೇವರಾದ ಯೆಹೋವನು ಆ ತೋಟದಲ್ಲಿ ಸುಂದರವಾದ ಪ್ರತಿಯೊಂದು ಮರವನ್ನು ಮತ್ತು ಊಟಕ್ಕೆ ಬೇಕಾದ ಒಳ್ಳೆಯ ಹಣ್ಣುಗಳನ್ನು ಬಿಡುವ ಪ್ರತಿಯೊಂದು ಮರವನ್ನು ಬೆಳೆಸಿದನು. ಇದಲ್ಲದೆ ತೋಟದ ಮಧ್ಯಭಾಗದಲ್ಲಿ ಜೀವದಾಯಕ ಮರವನ್ನೂ ಅಲ್ಲದೆ ಒಳ್ಳೆಯದರ ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರವನ್ನೂ ಬೆಳೆಸಿದನು.
ಆದಿಕಾಂಡ 2 : 10 (ERVKN)
ಏದೆನಿನಿಂದ ಹರಿದುಬರುತ್ತಿದ್ದ ನದಿಯು ತೋಟಕ್ಕೆ ಬೇಕಾದ ನೀರನ್ನು ಒದಗಿಸುತ್ತಿತ್ತು. ಬಳಿಕ ಅದೇ ನದಿಯು ಶಾಖೆಗಳಾಗಿ ಒಡೆದು ನಾಲ್ಕು ಉಪನದಿಗಳಾಯಿತು.
ಆದಿಕಾಂಡ 2 : 11 (ERVKN)
ಮೊದಲನೆ ನದಿಯ ಹೆಸರು ಪೀಶೋನ್. ಹವೀಲ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.
ಆದಿಕಾಂಡ 2 : 12 (ERVKN)
ಈ ದೇಶದಲ್ಲಿ ಒಳ್ಳೆಯ ಬಂಗಾರ ದೊರೆಯುತ್ತಿತ್ತು. ಅಲ್ಲದೆ ಗುಗ್ಗುಲ ಗೋಮೇಧಿಕ ರತ್ನವೂ ದೊರಕುತ್ತಿದ್ದವು.
ಆದಿಕಾಂಡ 2 : 13 (ERVKN)
ಎರಡನೆ ನದಿಯ ಹೆಸರು ಗೀಹೋನ್. ಇಥಿಯೋಪಿಯ ದೇಶದಲ್ಲೆಲ್ಲಾ ಹರಿಯುತ್ತಿದ್ದ ನದಿ ಇದೇ.
ಆದಿಕಾಂಡ 2 : 14 (ERVKN)
ಮೂರನೆ ನದಿಯ ಹೆಸರು ಟೈಗ್ರಿಸ್. ದಕ್ಷಿಣ ಅಸ್ಸೀರಿಯ ದೇಶದಲ್ಲಿ ಹರಿಯುತ್ತಿದ್ದ ನದಿ ಇದೇ. ನಾಲ್ಕನೆ ನದಿಯ ಹೆಸರು ಯೂಫ್ರೇಟೀಸ್.
ಆದಿಕಾಂಡ 2 : 15 (ERVKN)
ದೇವರಾದ ಯೆಹೋವನು ಆ ಮನುಷ್ಯನನ್ನು ಏದೆನ್ ತೋಟಕ್ಕೆ ಕರೆದೊಯ್ದು ವ್ಯವಸಾಯ ಮಾಡುವುದಕ್ಕಾಗಿಯೂ ಅದನ್ನು ನೋಡಿಕೊಳ್ಳುವುದಕ್ಕೂ ಅದರಲ್ಲಿರಿಸಿದನು.
ಆದಿಕಾಂಡ 2 : 16 (ERVKN)
ದೇವರಾದ ಯೆಹೋವನು ಆ ಮನುಷ್ಯನಿಗೆ, “ತೋಟದಲ್ಲಿರುವ ಯಾವ ಮರದ ಹಣ್ಣನ್ನು ಬೇಕಾದರೂ ನೀನು ತಿನ್ನಬಹುದು.
ಆದಿಕಾಂಡ 2 : 17 (ERVKN)
ಆದರೆ ಒಳ್ಳೆಯದು ಮತ್ತು ಕೆಟ್ಟದ್ದರ ಬಗ್ಗೆ ಜ್ಞಾನ ಕೊಡುವ ಮರದ ಹಣ್ಣನ್ನು ಮಾತ್ರ ನೀನು ತಿನ್ನಕೂಡದು. ಒಂದುವೇಳೆ ಆ ಮರದ ಹಣ್ಣನ್ನು ತಿಂದರೆ ನೀನು ಸಾಯುವೆ!” ಎಂದು ಆಜ್ಞಾಪಿಸಿದನು.
ಆದಿಕಾಂಡ 2 : 18 (ERVKN)
ಮೊದಲನೆ ಸ್ತ್ರೀ ಬಳಿಕ ದೇವರಾದ ಯೆಹೋವನು, “ಮನುಷ್ಯನು ಒಬ್ಬಂಟಿಗನಾಗಿರುವುದು ಒಳ್ಳೆಯದಲ್ಲವೆಂದು ನನಗೆ ತೋರುತ್ತದೆ. ಅವನಿಗೆ ಸರಿಹೊಂದುವ ಸಹಕಾರಿಣಿಯನ್ನು ಉಂಟುಮಾಡುವೆನು” ಎಂದುಕೊಂಡನು.
ಆದಿಕಾಂಡ 2 : 19 (ERVKN)
ದೇವರಾದ ಯೆಹೋವನು ನೆಲದ ಮಣ್ಣಿನಿಂದ ಭೂಮಿಯ ಮೇಲಿರುವ ಪ್ರತಿಯೊಂದು ಪಶುವನ್ನೂ ಆಕಾಶದಲ್ಲಿರುವ ಪ್ರತಿಯೊಂದು ಪಕ್ಷಿಯನ್ನೂ ನಿರ್ಮಿಸಿ ಮನುಷ್ಯನ ಬಳಿಗೆ ಬರಮಾಡಿದನು. ಅವುಗಳಿಗೆಲ್ಲಾ ಮನುಷ್ಯನು ಹೆಸರಿಟ್ಟನು.
ಆದಿಕಾಂಡ 2 : 20 (ERVKN)
ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.
ಆದಿಕಾಂಡ 2 : 21 (ERVKN)
ಆದ್ದರಿಂದ ದೇವರಾದ ಯೆಹೋವನು ಮನುಷ್ಯನಿಗೆ ಗಾಢವಾದ ನಿದ್ರೆಯನ್ನು ಬರಮಾಡಿ ಅವನ ದೇಹದ ಪಕ್ಕೆಲುಬುಗಳಲ್ಲಿ ಒಂದನ್ನು ತೆಗೆದುಕೊಂಡು ಆ ಪಕ್ಕೆಲುಬಿನ ಸ್ಥಳವನ್ನು ಮಾಂಸದಿಂದ ಮುಚ್ಚಿದನು.
ಆದಿಕಾಂಡ 2 : 22 (ERVKN)
ಆತನು ಮನುಷ್ಯನ ಪಕ್ಕೆಲುಬಿನಿಂದ ಸ್ತ್ರೀಯನ್ನು ಸೃಷ್ಟಿಸಿ ಅವಳನ್ನು ಮನುಷ್ಯನ ಬಳಿಗೆ ಕರೆದುಕೊಂಡು ಬಂದನು.
ಆದಿಕಾಂಡ 2 : 23 (ERVKN)
ಆಗ ಅವನು ಆಕೆಯನ್ನು ನೋಡಿ, “ಈಗ ಸರಿ, ಈಕೆ ನನ್ನಂತೆಯೇ ಇದ್ದಾಳೆ. ಈಕೆಯ ಎಲುಬುಗಳು ನನ್ನ ಎಲುಬುಗಳಿಂದ ಬಂದಿವೆ. ಈಕೆಯ ದೇಹವು ನನ್ನ ದೇಹದಿಂದ ಬಂದಿದೆ. ಈಕೆ ಮನುಷ್ಯನಿಂದ ಉತ್ಪತ್ತಿಯಾದವಳು. ಆದ್ದರಿಂದ ಈಕೆಗೆ ನಾನು ‘ಸ್ತ್ರೀ’ ಎಂದು ಹೆಸರಿಡುವೆ” ಎಂದನು.
ಆದಿಕಾಂಡ 2 : 24 (ERVKN)
ಆದ್ದರಿಂದ ಪುರುಷನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರೂ ಒಂದೇ ಶರೀರವಾಗುವರು.
ಆದಿಕಾಂಡ 2 : 25 (ERVKN)
ಆ ಪುರುಷನು ಮತ್ತು ಅವನ ಹೆಂಡತಿ ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25