ಆದಿಕಾಂಡ 20 : 1 (ERVKN)
{ಅಬ್ರಹಾಮನು ಗೆರಾರಿಗೆ ಹೋದದ್ದು} [PS] ಅಬ್ರಹಾಮನು ಅಲ್ಲಿಂದ ಹೊರಟು ನೆಗೆವ್‌ಗೆ ಪ್ರಯಾಣಮಾಡಿ ಕಾದೇಶಿಗೂ ಶೂರಿಗೂ ನಡುವೆ ಇದ್ದ ಗೆರಾರ್ ನಗರದಲ್ಲಿ ನೆಲೆಸಿದನು.
ಆದಿಕಾಂಡ 20 : 2 (ERVKN)
ಅಬ್ರಹಾಮನು ಗೆರಾರಿನಲ್ಲಿದ್ದಾಗ ಸಾರಳು ತನಗೆ ತಂಗಿಯಾಗಬೇಕೆಂದು ಹೇಳಿಕೊಂಡನು. ಗೆರಾರಿನ ರಾಜನಾಗಿದ್ದ ಅಬೀಮೆಲೆಕನು ಇದನ್ನು ಕೇಳಿ ಸಾರಳನ್ನು ಪಡೆದುಕೊಳ್ಳಲು ಬಯಸಿದನು. ಬಳಿಕ ಅವನು ಕೆಲವು ಸೇವಕರನ್ನು ಕಳುಹಿಸಿ ಆಕೆಯನ್ನು ಕರೆಯಿಸಿಕೊಂಡನು.
ಆದಿಕಾಂಡ 20 : 3 (ERVKN)
ಆದರೆ ಅಂದು ರಾತ್ರಿ ದೇವರು ಅಬೀಮೆಲೆಕನೊಡನೆ ಕನಸಿನಲ್ಲಿ ಮಾತಾಡಿ, “ನೀನು ಸಾಯುವೆ. ನೀನು ತೆಗೆದುಕೊಂಡಿರುವ ಆ ಸ್ತ್ರೀಗೆ ಮದುವೆಯಾಗಿದೆ” ಎಂದು ಹೇಳಿದನು. [PE][PS]
ಆದಿಕಾಂಡ 20 : 4 (ERVKN)
ಅಬೀಮೆಲೆಕನು ಇನ್ನೂ ಸಾರಳೊಡನೆ ಮಲಗಿಕೊಂಡಿರಲಿಲ್ಲ. ಆದ್ದರಿಂದ ಅಬೀಮೆಲೆಕನು, “ಸ್ವಾಮಿ, ನಾನು ತಪ್ಪಿತಸ್ಥನಲ್ಲ. ಒಬ್ಬ ನಿರಪರಾಧಿಯನ್ನು ನೀನು ಕೊಲ್ಲುವೆಯಾ?
ಆದಿಕಾಂಡ 20 : 5 (ERVKN)
‘ಈಕೆ ನನಗೆ ತಂಗಿಯಾಗಬೇಕು’ ಎಂದು ಅಬ್ರಹಾಮನೇ ಹೇಳಿದನು. ಅಲ್ಲದೆ ಈಕೆಯೂ ‘ಅವನು ನನ್ನ ಸಹೋದರ’ ಎಂದು ಹೇಳಿದಳು. ನಾನು ನಿರಪರಾಧಿ. ನಾನು ಮಾಡಲಿದ್ದ ತಪ್ಪು ನನಗೆ ತಿಳಿದಿರಲಿಲ್ಲ” ಎಂದು ಹೇಳಿದನು. [PE][PS]
ಆದಿಕಾಂಡ 20 : 6 (ERVKN)
ಆಗ ದೇವರು ಅಬೀಮೆಲೆಕನಿಗೆ ಕನಸಿನಲ್ಲಿ, “ಹೌದು, ನೀನು ನಿರಪರಾಧಿಯೆಂದು ನನಗೆ ಗೊತ್ತಿದೆ. ನೀನು ಮಾಡಲಿದ್ದ ತಪ್ಪು ನಿನಗೆ ತಿಳಿದಿರಲಿಲ್ಲವೆಂದೂ ನನಗೆ ಗೊತ್ತಿದೆ. ಆದ್ದರಿಂದಲೇ ನಾನು ನಿನ್ನನ್ನು ಕಾಪಾಡಿದೆ. ನನಗೆ ವಿರೋಧವಾಗಿ ಪಾಪಮಾಡಲು ನಾನು ನಿನಗೆ ಅವಕಾಶ ಕೊಡಲಿಲ್ಲ.
ಆದಿಕಾಂಡ 20 : 7 (ERVKN)
ಆದ್ದರಿಂದ ಅಬ್ರಹಾಮನಿಗೆ ಅವನ ಹೆಂಡತಿಯನ್ನು ಒಪ್ಪಿಸಿಬಿಡು. ಅಬ್ರಹಾಮನು ಪ್ರವಾದಿಯಾಗಿರುವುದರಿಂದ ನಿನಗೋಸ್ಕರ ಪ್ರಾರ್ಥಿಸುವನು, ಆಗ ನೀನು ಬದುಕಿಕೊಳ್ಳುವೆ. ನೀನು ಸಾರಳನ್ನು ಅಬ್ರಹಾಮನಿಗೆ ಹಿಂತಿರುಗಿಸದಿದ್ದರೆ, ನೀನೂ ನಿನ್ನ ಇಡೀ ಕುಟುಂಬದವರೂ ಸಾಯುವಿರೆಂದು ನಾನು ಪ್ರಮಾಣ ಮಾಡುತ್ತೇನೆ” ಎಂದು ಹೇಳಿದನು. [PE][PS]
ಆದಿಕಾಂಡ 20 : 8 (ERVKN)
ಆದ್ದರಿಂದ ಮರುದಿನ ಮುಂಜಾನೆ, ಅಬೀಮೆಲೆಕನು ತನ್ನ ಸೇವಕರನ್ನೆಲ್ಲ ಕರೆಸಿ ತನ್ನ ಕನಸನ್ನು ತಿಳಿಸಿದನು. ಅವರಿಗೆಲ್ಲಾ ತುಂಬ ಭಯವಾಯಿತು.
ಆದಿಕಾಂಡ 20 : 9 (ERVKN)
ಆಮೇಲೆ ಅಬೀಮೆಲೆಕನು ಅಬ್ರಹಾಮನನ್ನು ಕರೆಸಿ, “ನೀನು ನಮಗೆ ಹೀಗೇಕೆ ಮಾಡಿದೆ? ನಿನಗೆ ವಿರೋಧವಾಗಿ ನಾನೇನು ಮಾಡಿದೆ? ಆಕೆ ತಂಗಿಯಾಗಬೇಕೆಂದು ನೀನೇಕೆ ಸುಳ್ಳು ಹೇಳಿದೆ? ನೀನು ನನ್ನ ರಾಜ್ಯಕ್ಕೆ ಕೇಡನ್ನು ಬರಮಾಡಿರುವೆ. ನೀನು ಹೀಗೆ ಮಾಡಬಾರದಿತ್ತು.
ಆದಿಕಾಂಡ 20 : 10 (ERVKN)
ನೀನು ಭಯಪಟ್ಟಿದ್ದೇಕೆ? ನನಗೆ ಹೀಗೆ ಮಾಡಿದ್ದೇಕೆ?” ಎಂದು ಕೇಳಿದನು. [PE][PS]
ಆದಿಕಾಂಡ 20 : 11 (ERVKN)
ಅಬ್ರಹಾಮನು ಅವನಿಗೆ, “ನನಗೆ ಹೆದರಿಕೆಯಾಗಿತ್ತು. ಈ ಸ್ಥಳದವರಿಗೆ ದೇವರಲ್ಲಿ ಭಯಭಕ್ತಿಯಿಲ್ಲವೆಂದು ನಾನು ಭಾವಿಸಿಕೊಂಡೆ. ಯಾರಾದರೂ ನನ್ನನ್ನು ಕೊಂದು ಸಾರಳನ್ನು ತೆಗೆದುಕೊಳ್ಳಬಹುದೆಂದು ಯೋಚಿಸಿದೆ.
ಆದಿಕಾಂಡ 20 : 12 (ERVKN)
ಆಕೆ ನನ್ನ ಹೆಂಡತಿಯೇನೋ ನಿಜ, ಆದರೆ ಆಕೆ ನನಗೆ ತಂಗಿಯೂ ಆಗಬೇಕು. ಆಕೆ ನನ್ನ ತಂದೆಯ ಮಗಳು; ನನ್ನ ತಾಯಿಯ ಮಗಳಲ್ಲ.
ಆದಿಕಾಂಡ 20 : 13 (ERVKN)
ದೇವರು ನನ್ನನ್ನು ತಂದೆಯ ಮನೆಯಿಂದ ಹೊರಡಿಸಿ ಪರಸ್ಥಳಗಳಲ್ಲಿ ಸಂಚರಿಸುವಂತೆ ಮಾಡಿದ್ದರಿಂದ ನಾನು ಸಾರಳಿಗೆ, ‘ನಿನ್ನಿಂದ ನನಗೆ ಒಂದು ಉಪಕಾರವಾಗಬೇಕು. ಅದೇನೆಂದರೆ ನೀನು ನನ್ನನ್ನು ಅಣ್ಣನೆಂಬುದಾಗಿ ಹೇಳಬೇಕು ಎಂದು ಆಕೆಗೆ ತಿಳಿಸಿದೆನು’ ” ಎಂದನು. [PE][PS]
ಆದಿಕಾಂಡ 20 : 14 (ERVKN)
ಆಗ ನಡೆದ ಸಂಗತಿಯನ್ನೆಲ್ಲ ಅರ್ಥಮಾಡಿಕೊಂಡು ಸಾರಳನ್ನು ಅಬ್ರಹಾಮನಿಗೆ ಒಪ್ಪಿಸಿದನು; ಅಲ್ಲದೆ ಕುರಿಗಳನ್ನೂ ದನಗಳನ್ನೂ ಸೇವಕಸೇವಕಿಯರನ್ನೂ ಕೊಟ್ಟನು.
ಆದಿಕಾಂಡ 20 : 15 (ERVKN)
ಅಬೀಮೆಲೆಕನು ಅಬ್ರಹಾಮನಿಗೆ, “ಇಗೋ, ಇದು ನನ್ನ ದೇಶ. ನಿನಗೆ ಇಷ್ಟವಾದ ಸ್ಥಳದಲ್ಲಿ ವಾಸಮಾಡು” ಎಂದು ಹೇಳಿದನು. [PE][PS]
ಆದಿಕಾಂಡ 20 : 16 (ERVKN)
ಅಬೀಮೆಲೆಕನು ಸಾರಳಿಗೆ, “ನಾನು ನಿನ್ನ ಅಣ್ಣನಾದ ಅಬ್ರಹಾಮನಿಗೆ ಒಂದು ಸಾವಿರ ಬೆಳ್ಳಿಯ ನಾಣ್ಯಗಳನ್ನು ಕೊಡುವೆ. ನಡೆದ ಈ ಘಟನೆಗಳಿಗೆ ಇದು ಪ್ರಾಯಶ್ಚಿತ್ತವಾಗಿದೆ. ನೀನು ನಿಷ್ಕಳಂಕಳೆಂದು ಇದು ಪ್ರತಿಯೊಬ್ಬರಿಗೂ ಸಾಕ್ಷಿಯಾಗಿರಲಿ” ಎಂದು ಹೇಳಿದನು. [PE][PS]
ಆದಿಕಾಂಡ 20 : 17 (ERVKN)
(17-18) ದೇವರು ಅಬೀಮೆಲೆಕನ ಕುಟುಂಬದಲ್ಲಿರುವ ಎಲ್ಲ ಸ್ತ್ರೀಯರನ್ನು ಬಂಜೆಯರನ್ನಾಗಿ ಮಾಡಿದ್ದನು. ಅಬ್ರಹಾಮನ ಹೆಂಡತಿಯಾದ ಸಾರಳನ್ನು ಅಬೀಮೆಲೆಕನು ಕರೆಸಿಕೊಂಡಿದ್ದೇ ಅದಕ್ಕೆ ಕಾರಣ. ಅಬ್ರಹಾಮನು ದೇವರಲ್ಲಿ ಪ್ರಾರ್ಥಿಸಿದಾಗ ದೇವರು ಅಬೀಮೆಲೆಕನನ್ನೂ ಅವನ ಹೆಂಡತಿಯನ್ನೂ ಸೇವಕಿಯರನ್ನೂ ಗುಣಪಡಿಸಿದ್ದರಿಂದ ಅವರಿಗೆ ಮಕ್ಕಳಾದರು. [PE]
ಆದಿಕಾಂಡ 20 : 18 (ERVKN)

1 2 3 4 5 6 7 8 9 10 11 12 13 14 15 16 17 18

BG:

Opacity:

Color:


Size:


Font: