ಆದಿಕಾಂಡ 22 : 1 (ERVKN)
ಇವುಗಳಾದ ಮೇಲೆ, ದೇವರು ಅಬ್ರಹಾಮನ ನಂಬಿಕೆಯನ್ನು ಪರೀಕ್ಷಿಸಲು ನಿರ್ಧರಿಸಿ, “ಅಬ್ರಹಾಮನೇ!” ಎಂದು ಕರೆದನು. [PE][PS] ಅಬ್ರಹಾಮನು, “ಇಗೋ ಇದ್ದೇನೆ” ಅಂದನು. [PE][PS]
ಆದಿಕಾಂಡ 22 : 2 (ERVKN)
ಆಗ ದೇವರು ಅವನಿಗೆ, “ನಿನಗೆ ಪ್ರಿಯನಾಗಿರುವ ನಿನ್ನ ಒಬ್ಬನೇ ಮಗನಾದ ಇಸಾಕನನ್ನು ಮೊರೀಯ ದೇಶಕ್ಕೆ ಕರೆದುಕೊಂಡು ಹೋಗು. ನಾನು ನಿನಗೆ ತಿಳಿಸುವ ಬೆಟ್ಟದ ಮೇಲೆ ಅವನನ್ನು ಯಜ್ಞವನ್ನಾಗಿ ಅರ್ಪಿಸು” ಎಂದು ಹೇಳಿದನು. [PE][PS]
ಆದಿಕಾಂಡ 22 : 3 (ERVKN)
ಮುಂಜಾನೆ ಅಬ್ರಹಾಮನು ಎದ್ದು ಕತ್ತೆಗೆ ತಡಿ ಹಾಕಿಸಿದನು; ಇಸಾಕನನ್ನೂ ಅವನೊಂದಿಗೆ ಇಬ್ಬರು ಸೇವಕರನ್ನೂ ಕರೆದುಕೊಂಡನು; ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದುಕೊಂಡನು. ಬಳಿಕ ದೇವರು ಹೇಳಿದ್ದ ಸ್ಥಳಕ್ಕೆ ಅವರು ಹೊರಟರು.
ಆದಿಕಾಂಡ 22 : 4 (ERVKN)
ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಅಬ್ರಹಾಮನು ದೃಷ್ಟಿಸಿ ನೋಡಿದಾಗ ತಾವು ಹೋಗಲಿದ್ದ ಸ್ಥಳವು ದೂರದಲ್ಲಿ ಅವನಿಗೆ ಕಾಣಿಸಿತು.
ಆದಿಕಾಂಡ 22 : 5 (ERVKN)
ಆಮೇಲೆ ಅಬ್ರಹಾಮನು ತನ್ನ ಸೇವಕರಿಗೆ, “ನೀವು ಇಲ್ಲೇ ಕತ್ತೆಯೊಂದಿಗಿರಿ; ನಾನೂ ನನ್ನ ಮಗನೂ ಆ ಸ್ಥಳಕ್ಕೆ ಹೋಗಿ ಆರಾಧಿಸುತ್ತೇವೆ. ಬಳಿಕ ನಾವು ಹಿಂತಿರುಗಿ ನಿಮ್ಮ ಬಳಿಗೆ ಬರುತ್ತೇವೆ” ಎಂದು ಹೇಳಿದನು. [PE][PS]
ಆದಿಕಾಂಡ 22 : 6 (ERVKN)
ಅಬ್ರಹಾಮನು ಯಜ್ಞಕ್ಕಾಗಿ ಕಟ್ಟಿಗೆಯನ್ನು ತೆಗೆದು ತನ್ನ ಮಗನ ಭುಜದ ಮೇಲೆ ಹೊರಿಸಿದನು. ಅಬ್ರಹಾಮನು ವಿಶೇಷವಾದ ಕತ್ತಿಯನ್ನು ಮತ್ತು ಬೆಂಕಿಯನ್ನು ತೆಗೆದುಕೊಂಡನು. ಅವರಿಬ್ಬರೂ ಆರಾಧಿಸುವುದಕ್ಕಾಗಿ ಆ ಸ್ಥಳಕ್ಕೆ ಹೊರಟರು. [PE][PS]
ಆದಿಕಾಂಡ 22 : 7 (ERVKN)
ಇಸಾಕನು ತನ್ನ ತಂದೆಯಾದ ಅಬ್ರಹಾಮನಿಗೆ, “ಅಪ್ಪಾ” ಎಂದು ಕರೆದನು. [PE][PS] ಅಬ್ರಹಾಮನು, “ಏನು ಮಗನೇ?” ಎಂದು ಉತ್ತರಿಸಿದನು. [PE][PS] ಇಸಾಕನು, “ಕಟ್ಟಿಗೆ ಮತ್ತು ಬೆಂಕಿ ನನಗೆ ಕಾಣಿಸುತ್ತಿವೆ. ಆದರೆ ಯಜ್ಞಕ್ಕೆ ಬೇಕಾದ ಕುರಿಮರಿ ಎಲ್ಲಿ?” ಎಂದು ಕೇಳಿದನು. [PE][PS]
ಆದಿಕಾಂಡ 22 : 8 (ERVKN)
ಅಬ್ರಹಾಮನು, “ಮಗನೇ, ಯಜ್ಞಕ್ಕೆ ಬೇಕಾದ ಕುರಿಮರಿಯನ್ನು ದೇವರೇ ಒದಗಿಸುವನು” ಎಂದು ಹೇಳಿದನು. [PE][PS] ಹೀಗೆ ಅಬ್ರಹಾಮನು ಮತ್ತು ಅವನ ಮಗನು ಆ ಸ್ಥಳಕ್ಕೆ ಹೊರಟು
ಆದಿಕಾಂಡ 22 : 9 (ERVKN)
ದೇವರು ತಿಳಿಸಿದ್ದ ಸ್ಥಳಕ್ಕೆ ಬಂದರು. ಅಲ್ಲಿ ಅಬ್ರಹಾಮನು ಒಂದು ಯಜ್ಞವೇದಿಕೆಯನ್ನು ಕಟ್ಟಿ ಅದರ ಮೇಲೆ ಕಟ್ಟಿಗೆಯನ್ನು ಜೋಡಿಸಿದನು; ಆಮೇಲೆ ಅವನು ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಕಟ್ಟಿ ಯಜ್ಞವೇದಿಕೆಯ ಮೇಲಿದ್ದ ಕಟ್ಟಿಗೆಯ ಮೇಲೆ ಮಲಗಿಸಿದನು.
ಆದಿಕಾಂಡ 22 : 10 (ERVKN)
ಬಳಿಕ ಅವನು ತನ್ನ ಮಗನನ್ನು ವಧಿಸಲು ಕತ್ತಿಯನ್ನು ಮೇಲೆತ್ತಲು, [PE][PS]
ಆದಿಕಾಂಡ 22 : 11 (ERVKN)
ಯೆಹೋವನ ದೂತನು ಪರಲೋಕದಿಂದ, “ಅಬ್ರಹಾಮನೇ, ಅಬ್ರಹಾಮನೇ!” ಎಂದು ಕರೆದನು. [PE][PS] ಅಬ್ರಹಾಮನು, “ಇಗೋ ಇದ್ದೇನೆ” ಎಂದು ಉತ್ತರಿಸಿದನು. [PE][PS]
ಆದಿಕಾಂಡ 22 : 12 (ERVKN)
ಯೆಹೋವನ ದೂತನು, “ನಿನ್ನ ಮಗನನ್ನು ವಧಿಸಬೇಡ. ಅವನಿಗೆ ನೋವು ಮಾಡಬೇಡ. ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ಸಮರ್ಪಿಸುವುದಕ್ಕೂ ಹಿಂಜರಿಯಲಿಲ್ಲ; ಆದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ತೋರಿಬಂದಿದೆ” ಎಂದು ಹೇಳಿದನು. [PE][PS]
ಆದಿಕಾಂಡ 22 : 13 (ERVKN)
ಅಬ್ರಹಾಮನು ಕಣ್ಣೆತ್ತಿ ನೋಡಿದಾಗ ಒಂದು ಟಗರನ್ನು ಕಂಡನು. ಆ ಟಗರಿನ ಕೊಂಬುಗಳು ಒಂದು ಪೊದೆಗೆ ಸಿಕ್ಕಿಕೊಂಡಿದ್ದವು. ಕೂಡಲೇ ಅವನು ಹೋಗಿ, ಆ ಟಗರನ್ನು ಎಳೆದುಕೊಂಡು ಬಂದು ದೇವರಿಗೆ ತನ್ನ ಮಗನ ಬದಲಾಗಿ ಯಜ್ಞವಾಗಿ ಅರ್ಪಿಸಿದನು.
ಆದಿಕಾಂಡ 22 : 14 (ERVKN)
ಅಲ್ಲದೆ ಆ ಸ್ಥಳಕ್ಕೆ “ಯೆಹೋವ ಯೀರೆ” ಎಂದು ಹೆಸರಿಟ್ಟನು. ಇಂದಿಗೂ ಜನರು, “ಯೆಹೋವನ ಬೆಟ್ಟದಲ್ಲಿ ಒದಗಿಸಲ್ಪಡುವುದು” ಎಂದು ಹೇಳುತ್ತಾರೆ. [PE][PS]
ಆದಿಕಾಂಡ 22 : 15 (ERVKN)
ಯೆಹೋವನ ದೂತನು ಆಕಾಶದಿಂದ ಅಬ್ರಹಾಮನನ್ನು ಎರಡನೆ ಸಲ ಕರೆದು ಅವನಿಗೆ,
ಆದಿಕಾಂಡ 22 : 16 (ERVKN)
“ನೀನು ನನಗೋಸ್ಕರವಾಗಿ ನಿನ್ನ ಒಬ್ಬನೇ ಮಗನನ್ನು ವಧಿಸಲು ಸಿದ್ಧನಾಗಿದ್ದೆ. ಆದ್ದರಿಂದ ನಾನು ನಿನಗೆ ಈ ವಾಗ್ದಾನವನ್ನು ಮಾಡುತ್ತೇನೆ:
ಆದಿಕಾಂಡ 22 : 17 (ERVKN)
ನಾನು ನಿನ್ನನ್ನು ಖಂಡಿತವಾಗಿಯೂ ಆಶೀರ್ವದಿಸುವೆನು; ನಿನ್ನ ಸಂತತಿಯನ್ನು ಖಂಡಿತವಾಗಿಯೂ ಹೆಚ್ಚಿಸುವೆನು; ನಿನ್ನ ಸಂತತಿಯವರನ್ನು ಆಕಾಶದ ನಕ್ಷತ್ರಗಳಂತೆಯೂ ಸಮುದ್ರತೀರದ ಮರಳಿನಂತೆಯೂ ಅಸಂಖ್ಯಾತರನ್ನಾಗಿ ಮಾಡುವೆನು. ಅವರು ತಮ್ಮ ಶತ್ರುಗಳ ಪಟ್ಟಣಗಳನ್ನು ವಶಪಡಿಸಿಕೊಳ್ಳುವರು.
ಆದಿಕಾಂಡ 22 : 18 (ERVKN)
ನೀನು ನನಗೆ ವಿಧೇಯನಾದದ್ದರಿಂದ ನಿನ್ನ ಸಂತತಿಗಳವರ ಮೂಲಕವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜನಾಂಗವೂ ಆಶೀರ್ವಾದ ಹೊಂದುವುದು” ಎಂದು ಹೇಳಿದನು. [PE][PS]
ಆದಿಕಾಂಡ 22 : 19 (ERVKN)
ತರುವಾಯ ಅಬ್ರಹಾಮನು ತನ್ನ ಸೇವಕರ ಬಳಿಗೆ ಹಿಂತಿರುಗಿ ಹೋದನು. ಅವರೆಲ್ಲರೂ ಬೇರ್ಷೆಬಕ್ಕೆ ಮರಳಿ ಪ್ರಯಾಣ ಮಾಡಿದರು. ಬಳಿಕ ಅಬ್ರಹಾಮನು ಅಲ್ಲೇ ವಾಸಿಸಿದನು. [PE][PS]
ಆದಿಕಾಂಡ 22 : 20 (ERVKN)
ಈ ಸಂಗತಿಗಳೆಲ್ಲ ನಡೆದ ಮೇಲೆ ಅಬ್ರಹಾಮನಿಗೆ ಒಂದು ಸಂದೇಶ ಬಂದಿತು. ಆ ಸಂದೇಶವು ಹೀಗಿತ್ತು: “ನಿನ್ನ ತಮ್ಮನಾದ ನಾಹೋರ ಮತ್ತು ಅವನ ಹೆಂಡತಿಯಾದ ಮಿಲ್ಕ ಈಗ ಮಕ್ಕಳನ್ನು ಹೊಂದಿದ್ದಾರೆ.
ಆದಿಕಾಂಡ 22 : 21 (ERVKN)
ಮೊದಲನೆ ಮಗನ ಹೆಸರು ಊಚ್; ಎರಡನೆ ಮಗನ ಹೆಸರು ಬೂಚ್; ಮೂರನೆ ಮಗನ ಹೆಸರು ಕೆಮೂವೇಲ್. ಇವನು ಅರಾಮನ ತಂದೆ.
ಆದಿಕಾಂಡ 22 : 22 (ERVKN)
ಇವರಲ್ಲದೆ ಕೆಸೆದ್, ಹಜೋ, ಪಿಲ್ದಾಷ್, ಇದ್ಲಾಫ್, ಬೆತೂವೇಲ್ ಎಂಬವರು ಸಹ ಇದ್ದಾರೆ.”
ಆದಿಕಾಂಡ 22 : 23 (ERVKN)
ಬೆತೂವೇಲನು ರೆಬೆಕ್ಕಳ ತಂದೆ. ಮಿಲ್ಕಳು ಈ ಎಂಟು ಮಕ್ಕಳ ತಾಯಿ; ನಾಹೋರನು ಅವರ ತಂದೆ. ನಾಹೋರನು ಅಬ್ರಹಾಮನ ಸಹೋದರ.
ಆದಿಕಾಂಡ 22 : 24 (ERVKN)
ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24

BG:

Opacity:

Color:


Size:


Font: