ಆದಿಕಾಂಡ 25 : 1 (ERVKN)
{ಅಬ್ರಹಾಮನ ಕುಟುಂಬ} [PS] ಅಬ್ರಹಾಮನು ಮತ್ತೆ ಮದುವೆಯಾದನು. ಅವನ ಹೊಸ ಹೆಂಡತಿಯ ಹೆಸರು ಕೆಟೂರ.
ಆದಿಕಾಂಡ 25 : 2 (ERVKN)
ಆಕೆ ಅವನಿಗೆ; ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬವರನ್ನು ಹೆತ್ತಳು.
ಆದಿಕಾಂಡ 25 : 3 (ERVKN)
ಯೊಕ್ಷಾನನು ಶೆಬಾ ಮತ್ತು ದೆದಾನ್ ಎಂಬವರ ತಂದೆ. ದೆದಾನನ ಸಂತತಿಯವರು: ಅಶ್ಶೂರ್ಯರು ಲೆಟೂಶ್ಯರು ಮತ್ತು ಲೆಯುಮ್ಯರು.
ಆದಿಕಾಂಡ 25 : 4 (ERVKN)
ಮಿದ್ಯಾನನ ಗಂಡುಮಕ್ಕಳು: ಗೇಫಾ, ಗೇಫೆರ್, ಹನೋಕ್, ಅಬೀದಾ ಮತ್ತು ಎಲ್ದಾಗ. ಇವರೆಲ್ಲರೂ ಕೆಟೂರಳ ಸಂತತಿಯವರು.
ಆದಿಕಾಂಡ 25 : 5 (ERVKN)
(5-6) ಅಬ್ರಹಾಮನು ಸಾಯುವುದಕ್ಕಿಂತ ಮುಂಚೆ ತನ್ನ ದಾಸಿಯ ಗಂಡುಮಕ್ಕಳಿಗೆ ಕೆಲವು ಉಡುಗೊರೆಗಳನ್ನು ಕೊಟ್ಟನು. ಅಬ್ರಹಾಮನು ಆ ಗಂಡುಮಕ್ಕಳನ್ನು ಪೂರ್ವದ ಕಡೆಯಲ್ಲಿದ್ದ ಕೆದೆಮೆಂಬ ದೇಶಕ್ಕೆ ಕಳುಹಿಸಿ ಅವರನ್ನು ಇಸಾಕನಿಂದ ದೂರಮಾಡಿದನು; ಬಳಿಕ ತನ್ನ ಆಸ್ತಿಯನ್ನೆಲ್ಲ ಇಸಾಕನಿಗೆ ಕೊಟ್ಟನು. [PE][PS]
ಆದಿಕಾಂಡ 25 : 6 (ERVKN)
ಆದಿಕಾಂಡ 25 : 7 (ERVKN)
ಅಬ್ರಹಾಮನು ನೂರೆಪ್ಪತ್ತೈದು ವರ್ಷ ಜೀವಿಸಿದನು.
ಆದಿಕಾಂಡ 25 : 8 (ERVKN)
ಅವನು ಪೂರ್ಣಾಯುಷ್ಯದಿಂದ ದಿನತುಂಬಿದ ವೃದ್ಧನಾಗಿ ಪ್ರಾಣಬಿಟ್ಟು ತನ್ನ ಪಿತೃಗಳ ಬಳಿಗೆ ಸೇರಿದನು.
ಆದಿಕಾಂಡ 25 : 9 (ERVKN)
ಅವನ ಗಂಡುಮಕ್ಕಳಾದ ಇಸಾಕ ಮತ್ತು ಇಷ್ಮಾಯೇಲರು ಅವನನ್ನು ಮಕ್ಪೇಲದ ಗವಿಯಲ್ಲಿ ಸಮಾಧಿಮಾಡಿದರು. ಈ ಗವಿಯು ಹಿತ್ತಿಯನಾದ ಚೋಹರನ ಮಗ ಎಫ್ರೋನನ ಜಮೀನಿನಲ್ಲಿದೆ. ಅದು ಮಮ್ರೆಗೆ ಪೂರ್ವದಿಕ್ಕಿನಲ್ಲಿದೆ.
ಆದಿಕಾಂಡ 25 : 10 (ERVKN)
ಅಬ್ರಹಾಮನು ಹಿತ್ತಿಯರಿಂದ ಕೊಂಡುಕೊಂಡ ಈ ಗವಿಯಲ್ಲೇ ಅಬ್ರಹಾಮನನ್ನು ಅವನ ಹೆಂಡತಿಯಾದ ಸಾರಳ ಜೊತೆಯಲ್ಲಿ ಸಮಾಧಿಮಾಡಲಾಯಿತು.
ಆದಿಕಾಂಡ 25 : 11 (ERVKN)
ಅಬ್ರಹಾಮನು ತೀರಿಕೊಂಡ ಮೇಲೆ, ದೇವರು ಇಸಾಕನನ್ನು ಆಶೀರ್ವದಿಸಿದನು; ಇಸಾಕನು ಬೀರ್‌ಲಹೈರೋಯಿಯಲ್ಲಿ ತನ್ನ ಜೀವನವನ್ನು ಮುಂದುವರೆಸಿದನು. [PE][PS]
ಆದಿಕಾಂಡ 25 : 12 (ERVKN)
ಇದು ಇಷ್ಮಾಯೇಲನ ವಂಶಾವಳಿ: ಇಷ್ಮಾಯೇಲನು ಅಬ್ರಹಾಮನ ಮತ್ತು ಹಾಗರಳ ಮಗನು. (ಈಜಿಪ್ಟಿನವಳಾದ ಹಾಗರಳು ಸಾರಳ ಸೇವಕಿ.)
ಆದಿಕಾಂಡ 25 : 13 (ERVKN)
ಇಷ್ಮಾಯೇಲನ ಗಂಡುಮಕ್ಕಳ ಹೆಸರುಗಳು: ಮೊದಲನೆ ಮಗನು ನೆಬಾಯೋತ್. ಆಮೇಲೆ ಹುಟ್ಟಿದವರು: ಕೇದಾರ್, ಅದ್ಬಯೇಲ್, ಮಿಬ್ಸಾಮ್,
ಆದಿಕಾಂಡ 25 : 14 (ERVKN)
ಮಿಷ್ಮಾ, ದೂಮಾ, ಮಸ್ಸಾ,
ಆದಿಕಾಂಡ 25 : 15 (ERVKN)
ಹದದ್, ತೇಮಾ, ಯಟೂರ್, ನಾಫೀಷ್ ಮತ್ತು ಕೇದ್ಮಾ.
ಆದಿಕಾಂಡ 25 : 16 (ERVKN)
ಪ್ರತಿಯೊಬ್ಬನೂ ತನ್ನದೇ ಆದ ಪಾಳೆಯವನ್ನು ಹೊಂದಿದ್ದನು. ಆ ಪಾಳೆಯಗಳೇ ಮುಂದೆ ಚಿಕ್ಕ ಪಟ್ಟಣಗಳಾದವು. ಈ ಹನ್ನೆರಡು ಮಂದಿ ಗಂಡುಮಕ್ಕಳು ತಮ್ಮ ಜನರಿಗೆ ಹನ್ನೆರಡು ಮಂದಿ ರಾಜರುಗಳಂತಿದ್ದರು.
ಆದಿಕಾಂಡ 25 : 17 (ERVKN)
ಇಷ್ಮಾಯೇಲನು ನೂರ ಮೂವತ್ತೇಳು ವರ್ಷ ಬದುಕಿದನು. ಅವನು ಸತ್ತ ನಂತರ ಅವನನ್ನು ತನ್ನ ಪೂರ್ವಜರ ಸಮಾಧಿಯಲ್ಲಿ ಹೂಣಿಟ್ಟರು.
ಆದಿಕಾಂಡ 25 : 18 (ERVKN)
ಇಷ್ಮಾಯೇಲನ ಸಂತತಿಯವರು ಮರುಭೂಮಿ ಪ್ರದೇಶದ ಉದ್ದಕ್ಕೂ ಪಾಳೆಯಗಳನ್ನು ಮಾಡಿಕೊಂಡಿದ್ದರು. ಈ ಪ್ರದೇಶವು ಹವೀಲ ಮತ್ತು ಈಜಿಪ್ಟಿನ ಸಮೀಪದಲ್ಲಿರುವ ಶೂರಿನಿಂದ ಆರಂಭಗೊಂಡು ಅಶ್ಶೂರದವರೆಗೂ ಇತ್ತು. ಇಷ್ಮಾಯೇಲನ ಸಂತತಿಗಳವರು ಪದೇಪದೇ ತಮ್ಮ ಸಹೋದರನ ಜನರಿಗೆ ವಿರೋಧವಾಗಿ ಆಕ್ರಮಣ ಮಾಡುತ್ತಿದ್ದರು. [PS]
ಆದಿಕಾಂಡ 25 : 19 (ERVKN)
{ಇಸಾಕನ ಕುಟುಂಬ} [PS] ಇದು ಇಸಾಕನ ಚರಿತ್ರೆ. ಅಬ್ರಹಾಮನಿಗೆ ಇಸಾಕ ಎಂಬ ಹೆಸರಿನ ಮಗನಿದ್ದನು.
ಆದಿಕಾಂಡ 25 : 20 (ERVKN)
ಇಸಾಕನು ನಲವತ್ತು ವರ್ಷದವನಾಗಿದ್ದಾಗ ರೆಬೆಕ್ಕಳನ್ನು ಮದುವೆಯಾದನು. ರೆಬೆಕ್ಕಳು ಪದ್ದನ್ ಅರಾಮಿನವಳು. ಆಕೆ ಬೆತೂವೇಲನ ಮಗಳು ಮತ್ತು ಅರಾಮ್ಯನಾದ ಲಾಬಾನನ ತಂಗಿ.
ಆದಿಕಾಂಡ 25 : 21 (ERVKN)
ಇಸಾಕನ ಹೆಂಡತಿ ಮಕ್ಕಳನ್ನು ಪಡೆಯಲಾಗಲಿಲ್ಲ. ಆದ್ದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಯೆಹೋವನಲ್ಲಿ ಪ್ರಾರ್ಥಿಸಿದನು. ಯೆಹೋವನು ಇಸಾಕನ ಪ್ರಾರ್ಥನೆಯನ್ನು ಕೇಳಿ ರೆಬೆಕ್ಕಳಿಗೆ ಗರ್ಭಧಾರಣೆಯನ್ನು ಅನುಗ್ರಹಿಸಿದನು. [PE][PS]
ಆದಿಕಾಂಡ 25 : 22 (ERVKN)
ರೆಬೆಕ್ಕಳು ಗರ್ಭಿಣಿಯಾಗಿದ್ದಾಗ, ಅವಳ ಗರ್ಭದಲ್ಲಿದ್ದ ಕೂಸುಗಳು ಒಂದನ್ನೊಂದು ನೂಕಾಡಿದ್ದರಿಂದ ಅವಳು ಬಹಳ ತೊಂದರೆಪಡಬೇಕಾಯಿತು. ರೆಬೆಕ್ಕಳು ಯೆಹೋವನಿಗೆ ಪ್ರಾರ್ಥಿಸಿ, “ನನಗೇಕೆ ಹೀಗೆ ಆಗುತ್ತಿದೆ?” ಎಂದು ಕೇಳಿದಳು.
ಆದಿಕಾಂಡ 25 : 23 (ERVKN)
ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. [QBR2] ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; [QBR2] ಅವರು ವಿಭಾಗವಾಗುವರು. [QBR] ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. [QBR2] ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು. [PE][PS]
ಆದಿಕಾಂಡ 25 : 24 (ERVKN)
ದಿನ ತುಂಬಿದ ಮೇಲೆ ರೆಬೆಕ್ಕಳು ಅವಳಿಜವಳಿ ಮಕ್ಕಳನ್ನು ಹೆತ್ತಳು.
ಆದಿಕಾಂಡ 25 : 25 (ERVKN)
ಮೊದಲನೆಯ ಮಗುವು ಕೆಂಪಗಿತ್ತು. ಅವನ ಚರ್ಮವು ಕೂದಲಿನ ಉಡುಪಿನಂತಿತ್ತು. ಆದ್ದರಿಂದ ಅವನಿಗೆ “ಏಸಾವ್” ಎಂದು ಹೆಸರಿಡಲಾಯಿತು.
ಆದಿಕಾಂಡ 25 : 26 (ERVKN)
ಎರಡನೆಯ ಮಗು ಹುಟ್ಟಿದಾಗ ಅದು ಏಸಾವನ ಹಿಮ್ಮಡಿಯನ್ನು ಗಟ್ಟಿಯಾಗಿ ಹಿಡಿದುಕೊಂಡಿತ್ತು. ಆದ್ದರಿಂದ ಆ ಮಗುವಿಗೆ “ಯಾಕೋಬ” ಎಂದು ಹೆಸರಿಡಲಾಯಿತು. ಯಾಕೋಬ ಮತ್ತು ಏಸಾವ ಹುಟ್ಟಿದಾಗ ಇಸಾಕನಿಗೆ ಅರವತ್ತು ವರ್ಷ ವಯಸ್ಸಾಗಿತ್ತು. [PE][PS]
ಆದಿಕಾಂಡ 25 : 27 (ERVKN)
ಆ ಬಾಲಕರು ಬೆಳೆದು ದೊಡ್ಡವರಾದರು. ಏಸಾವನು ಚತುರ ಬೇಟೆಗಾರನಾದನು. ಹೊಲದಲ್ಲಿರುವುದು ಅವನಿಗೆ ಪ್ರಿಯವಾಗಿತ್ತು. ಆದರೆ ಯಾಕೋಬನು ಸಾಧು ಮನುಷ್ಯನಾಗಿದ್ದನು. ಅವನು ತನ್ನ ಗುಡಾರದಲ್ಲಿರುತ್ತಿದ್ದನು.
ಆದಿಕಾಂಡ 25 : 28 (ERVKN)
ಇಸಾಕನು ಏಸಾವನನ್ನು ಪ್ರೀತಿಸಿದನು. ಏಸಾವನು ಬೇಟೆಯಾಡಿ ತಂದ ಪ್ರಾಣಿಗಳ ಮಾಂಸ ಅವನಿಗೆ ಇಷ್ಟವಾಗಿತ್ತು. ಆದರೆ ರೆಬೆಕ್ಕಳು ಯಾಕೋಬನನ್ನು ಪ್ರೀತಿಸಿದಳು. [PE][PS]
ಆದಿಕಾಂಡ 25 : 29 (ERVKN)
ಒಂದು ಸಲ ಏಸಾವನು ಬೇಟೆಯಿಂದ ಹಿಂತಿರುಗಿ ಬಂದಾಗ ಹಸಿವೆಯಿಂದ ಆಯಾಸಗೊಂಡಿದ್ದನು ಮತ್ತು ಬಲಹೀನನಾಗಿದ್ದನು. ಯಾಕೋಬನು ಅಲಸಂಧಿ ಗುಗ್ಗರಿ ಮಾಡುತ್ತಿದ್ದನು.
ಆದಿಕಾಂಡ 25 : 30 (ERVKN)
ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.) [PE][PS]
ಆದಿಕಾಂಡ 25 : 31 (ERVKN)
ಆದರೆ ಯಾಕೋಬನು, “ನಿನ್ನ ಚೊಚ್ಚಲತನದ ಹಕ್ಕನ್ನು ನೀನು ನನಗೆ ಈ ದಿನ ಮಾರಬೇಕು” ಎಂದು ಹೇಳಿದನು. [PE][PS]
ಆದಿಕಾಂಡ 25 : 32 (ERVKN)
ಏಸಾವನು, “ನನಗೆ ಹಸಿವೆಯಿಂದ ಸಾಯುವಂತಾಗಿದೆ. ನಾನು ಸತ್ತುಹೋದರೆ, ನನ್ನ ತಂದೆಯ ಐಶ್ವರ್ಯವೆಲ್ಲ ನನಗೆ ಸಹಾಯ ಮಾಡಲಾರದು. ಆದ್ದರಿಂದ ನಾನು ನನ್ನ ಹಕ್ಕನ್ನು ನಿನಗೆ ಕೊಡುವೆನು” ಎಂದು ಹೇಳಿದನು. [PE][PS]
ಆದಿಕಾಂಡ 25 : 33 (ERVKN)
ಆದರೆ ಯಾಕೋಬನು, “ನೀನು ಅದನ್ನು ಕೊಡುವುದಾಗಿ ಪ್ರಮಾಣಮಾಡು” ಅಂದನು. ಆದ್ದರಿಂದ ಏಸಾವನು ಯಾಕೋಬನಿಗೆ ಪ್ರಮಾಣ ಮಾಡಿದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಯಾಕೋಬನಿಗೆ ಮಾರಿಕೊಂಡನು.
ಆದಿಕಾಂಡ 25 : 34 (ERVKN)
ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿ ಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34

BG:

Opacity:

Color:


Size:


Font: