ಆದಿಕಾಂಡ 28 : 1 (ERVKN)
ಇಸಾಕನು ಯಾಕೋಬನನ್ನು ಕರೆದು ಅವನನ್ನು ಆಶೀರ್ವದಿಸಿ ಅವನಿಗೆ, “ನೀನು ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದು.
ಆದಿಕಾಂಡ 28 : 2 (ERVKN)
ಆದ್ದರಿಂದ ಈ ಸ್ಥಳವನ್ನು ಬಿಟ್ಟು ಪದ್ದನ್‌ಅರಾಮಿಗೆ ಹೊರಟು ನಿನ್ನ ತಾಯಿಯ ತಂದೆಯಾದ ಬೆತೂವೇಲನ ಮನೆಗೆ ಹೋಗು. ನಿನ್ನ ತಾಯಿಯ ಅಣ್ಣನಾದ ಲಾಬಾನನು ಅಲ್ಲಿ ವಾಸಿಸುತ್ತಿದ್ದಾನೆ. ಅವನ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊ.
ಆದಿಕಾಂಡ 28 : 3 (ERVKN)
ಸರ್ವಶಕ್ತನಾದ ದೇವರು ನಿನ್ನನ್ನು ಆಶೀರ್ವದಿಸಿ, ನಿನಗೆ ಅನೇಕ ಮಕ್ಕಳನ್ನು ಕೊಡುವಂತೆಯೂ ನೀನು ಮಹಾಜನಾಂಗದ ತಂದೆಯಾಗುವಂತೆಯೂ ನಾನು ಪ್ರಾರ್ಥಿಸುವೆನು.
ಆದಿಕಾಂಡ 28 : 4 (ERVKN)
ದೇವರು ಅಬ್ರಹಾಮನನ್ನು ಆಶೀರ್ವದಿಸಿದ ರೀತಿಯಲ್ಲಿ ನಿನ್ನನ್ನೂ ನಿನ್ನ ಮಕ್ಕಳನ್ನೂ ಆಶೀರ್ವದಿಸುವಂತೆಯೂ ನೀನು ವಾಸಿಸುವ ಸ್ಥಳದಲ್ಲಿ ಸ್ವಂತ ಭೂಮಿಯನ್ನು ಪಡೆದುಕೊಳ್ಳುವಂತೆಯೂ ನಾನು ಪ್ರಾರ್ಥಿಸುವೆನು. ದೇವರು ಅಬ್ರಹಾಮನಿಗೆ ಕೊಟ್ಟ ಭೂಮಿಯೇ ಅದು” ಎಂದು ಹೇಳಿ ಕಳುಹಿಸಿಕೊಟ್ಟನು.
ಆದಿಕಾಂಡ 28 : 5 (ERVKN)
ಅಂತೆಯೇ ಯಾಕೋಬನು ಪದ್ದನ್‌ಅರಾಮಿಗೆ ಹೊರಟು ರೆಬೆಕ್ಕಳ ಅಣ್ಣನಾದ ಲಾಬಾನನ ಬಳಿಗೆ ಹೋದನು. ಬೆತೂವೇಲನು ಲಾಬಾನನ ಮತ್ತು ರೆಬೆಕ್ಕಳ ತಂದೆ. ರೆಬೆಕ್ಕಳು ಯಾಕೋಬನ ಮತ್ತು ಏಸಾವನ ತಾಯಿ.
ಆದಿಕಾಂಡ 28 : 6 (ERVKN)
ತನ್ನ ತಂದೆಯಾದ ಇಸಾಕನು ಯಾಕೋಬನನ್ನು ಆಶೀರ್ವದಿಸಿದ್ದೂ, ಮದುವೆ ಮಾಡಿಕೊಳ್ಳಲು ಪದ್ದನ್‌ಅರಾಮಿಗೆ ಕಳುಹಿಸಿದ್ದೂ, ಕಾನಾನಿನ ಸ್ತ್ರೀಯನ್ನು ಮದುವೆಯಾಗಕೂಡದೆಂದು ಯಾಕೋಬನಿಗೆ ಆಜ್ಞಾಪಿಸಿರುವುದೂ ಏಸಾವನಿಗೆ ತಿಳಿಯಿತು.
ಆದಿಕಾಂಡ 28 : 7 (ERVKN)
ಇದಲ್ಲದೆ ಯಾಕೋಬನು ತನ್ನ ತಂದೆತಾಯಿಗಳಿಗೆ ವಿಧೇಯನಾಗಿ ಪದ್ದನ್‌ಅರಾಮಿಗೆ ಹೋದದ್ದೂ ಏಸಾವನಿಗೆ ಗೊತ್ತಾಯಿತು.
ಆದಿಕಾಂಡ 28 : 8 (ERVKN)
ತನ್ನ ತಂದೆಗೆ ತನ್ನ ಗಂಡುಮಕ್ಕಳು ಕಾನಾನಿನ ಸ್ತ್ರೀಯರನ್ನು ಮದುವೆಯಾಗುವುದು ಇಷ್ಟವಿಲ್ಲವೆಂಬುದೂ ಏಸಾವನಿಗೆ ತಿಳಿಯಿತು.
ಆದಿಕಾಂಡ 28 : 9 (ERVKN)
ಏಸಾವನಿಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದರು. ಆದರೂ ಅವನು ಇಷ್ಮಾಯೇಲನ ಬಳಿಗೆ ಹೋಗಿ ಅವನ ಮಗಳಾದ ಮಹಲತ್ ಎಂಬಾಕೆಯನ್ನು ಮದುವೆ ಮಾಡಿಕೊಂಡನು. ಇಷ್ಮಾಯೇಲನು ಅಬ್ರಹಾಮನ ಮಗನು. ಮಹಲತಳು ನೆಬಾಯೋತನ ತಂಗಿ. ದೇವರ ಮನೆ — ಬೇತೇಲ್
ಆದಿಕಾಂಡ 28 : 10 (ERVKN)
ಯಾಕೋಬನು ಬೇರ್ಷೆಬವನ್ನು ಬಿಟ್ಟು ಹಾರಾನಿಗೆ ಹೋದನು.
ಆದಿಕಾಂಡ 28 : 11 (ERVKN)
ಯಾಕೋಬನು ಪ್ರಯಾಣ ಮಾಡುತ್ತಿರುವಾಗ ಸೂರ್ಯಾಸ್ತವಾಯಿತು. ಆದ್ದರಿಂದ ಯಾಕೋಬನು ಆ ರಾತ್ರಿ ಇಳಿದುಕೊಳ್ಳಲು ಒಂದು ಸ್ಥಳಕ್ಕೆ ಹೋದನು. ಯಾಕೋಬನು ಆ ಸ್ಥಳದಲ್ಲಿ ಒಂದು ಕಲ್ಲನ್ನು ಕಂಡು ಅದರ ಮೇಲೆ ತಲೆಯಿಟ್ಟು ಮಲಗಿಕೊಂಡನು.
ಆದಿಕಾಂಡ 28 : 12 (ERVKN)
ಯಾಕೋಬನಿಗೆ ಒಂದು ಕನಸಾಯಿತು. ಆ ಕನಸಿನಲ್ಲಿ ಒಂದು ಏಣಿ ನೆಲದ ಮೇಲೆ ನಿಂತಿತ್ತು, ಅದರ ತುದಿ ಆಕಾಶವನ್ನು ಮುಟ್ಟಿತ್ತು. ದೇವದೂತರು ಅದರಲ್ಲಿ ಮೇಲೆರುತ್ತಾ ಕೆಳಗಿಳಿಯುತ್ತಾ ಇರುವುದನ್ನು ಯಾಕೋಬನು ಕಂಡನು.
ಆದಿಕಾಂಡ 28 : 13 (ERVKN)
ಯೆಹೋವನು ಏಣಿಯ ತುದಿಯಲ್ಲಿ ನಿಂತಿರುವುದನ್ನು ಯಾಕೋಬನು ಕಂಡನು. ಯೆಹೋವನು ಅವನಿಗೆ, “ನಿನ್ನ ತಾತನಾದ ಅಬ್ರಹಾಮನ ದೇವರಾಗಿರುವ ಯೆಹೋವನೇ ನಾನು. ನಾನು ಇಸಾಕನ ದೇವರು. ಈಗ ನೀನು ಮಲಗಿಕೊಂಡಿರುವ ದೇಶವನ್ನು ನಾನು ನಿನಗೆ ಕೊಡುವೆನು. ನಾನು ಈ ದೇಶವನ್ನು ನಿನಗೂ ನಿನ್ನ ಮಕ್ಕಳಿಗೂ ಕೊಡುವೆನು.
ಆದಿಕಾಂಡ 28 : 14 (ERVKN)
ಭೂಮಿಯ ಮೇಲೆ ಧೂಳಿನ ಕಣಗಳಿರುವಂತೆ ನಿನಗೆ ಅನೇಕಾನೇಕ ಸಂತತಿಗಳಿರುವರು. ಅವರು ಪೂರ್ವಪಶ್ಚಿಮಗಳಿಗೂ ಉತ್ತರದಕ್ಷಿಣಗಳಿಗೂ ಹರಡಿಕೊಳ್ಳುವರು. ನಿನ್ನ ಮೂಲಕವೂ ನಿನ್ನ ಸಂತತಿಯವರ ಮೂಲಕವೂ ಭೂಮಿಯ ಮೇಲಿರುವ ಎಲ್ಲಾ ಕುಲಗಳವರು ಆಶೀರ್ವಾದ ಹೊಂದುವರು.
ಆದಿಕಾಂಡ 28 : 15 (ERVKN)
“ನಾನು ನಿನ್ನ ಸಂಗಡವಿದ್ದು ನೀನು ಹೋಗುವ ಪ್ರತಿಯೊಂದು ಸ್ಥಳದಲ್ಲಿಯೂ ನಿನ್ನನ್ನು ಕಾಪಾಡುವೆನು; ನಿನ್ನನ್ನು ಈ ಸ್ಥಳಕ್ಕೆ ಮತ್ತೆ ಕರೆದುಕೊಂಡು ಬರುವೆನು. ನಾನು ವಾಗ್ದಾನ ಮಾಡಿದ್ದನ್ನು ನೆರವೇರಿಸುವ ತನಕ ನಾನು ನಿನ್ನನ್ನು ಬಿಟ್ಟು ಹೋಗುವುದಿಲ್ಲ” ಎಂದು ಹೇಳಿದನು.
ಆದಿಕಾಂಡ 28 : 16 (ERVKN)
ಆಗ ಯಾಕೋಬನು ನಿದ್ರೆಯಿಂದ ಎಚ್ಚೆತ್ತು, “ಖಂಡಿತವಾಗಿಯೂ ಈ ಸ್ಥಳದಲ್ಲಿ ದೇವರಿದ್ದಾನೆ, ಆದರೆ ಅದು ನನಗೆ ಗೊತ್ತಿರಲಿಲ್ಲ” ಎಂದು ಹೇಳಿದನು.
ಆದಿಕಾಂಡ 28 : 17 (ERVKN)
ಯಾಕೋಬನಿಗೆ ಭಯವಾಗಿತ್ತು. ಅವನು, “ಇದು ತುಂಬ ಮಹತ್ವವಾದ ಸ್ಥಳ. ಇದು ದೇವರ ಮನೆ. ಇದು ಸ್ವರ್ಗಕ್ಕೆ ಬಾಗಿಲು” ಎಂದು ಹೇಳಿದನು.
ಆದಿಕಾಂಡ 28 : 18 (ERVKN)
ಯಾಕೋಬನು ಮರುದಿನ ಮುಂಜಾನೆ ಬೇಗನೆ ಎದ್ದು, ತಾನು ಮಲಗಿಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಕಂಬವಾಗಿ ನೆಲದಲ್ಲಿ ನಿಲ್ಲಿಸಿದನು. ನಂತರ ಆ ಕಲ್ಲಿನ ಮೇಲೆ ಎಣ್ಣೆಯನ್ನು ಸುರಿದನು. ಹೀಗೆ ಅವನು ಆ ಕಲ್ಲನ್ನು ದೇವರ ನೆನಪಿಗಾಗಿ ಪ್ರತಿಷ್ಠಿಸಿದನು.
ಆದಿಕಾಂಡ 28 : 19 (ERVKN)
ಆ ಸ್ಥಳದ ಹೆಸರು ಲೂಜ್. ಆದರೆ ಯಾಕೋಬನು ಅದಕ್ಕೆ ಬೇತೇಲ್ ಎಂದು ಹೆಸರಿಟ್ಟನು.
ಆದಿಕಾಂಡ 28 : 20 (ERVKN)
ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,
ಆದಿಕಾಂಡ 28 : 21 (ERVKN)
ನಾನು ಸಮಾಧಾನದಿಂದ ನನ್ನ ತಂದೆಯ ಮನೆಗೆ ಹಿಂತಿರುಗಿ ಬರುವಂತೆ ಮಾಡಿದರೆ ಯೆಹೋವನೇ ನನ್ನ ದೇವರಾಗಿರುವನು.
ಆದಿಕಾಂಡ 28 : 22 (ERVKN)
ನಾನು ಕಲ್ಲನ್ನು ನೆಟ್ಟಿರುವ ಈ ಸ್ಥಳವು ದೇವರ ಪವಿತ್ರಸ್ಥಳವಾಗುವುದು. ಇದಲ್ಲದೆ ದೇವರು ನನಗೆ ಕೊಡುವುದರಲ್ಲೆಲ್ಲಾ ಹತ್ತನೆಯ ಒಂದು ಭಾಗವನ್ನು ನಾನು ಆತನಿಗೆ ಕೊಡುತ್ತೇನೆ.”

1 2 3 4 5 6 7 8 9 10 11 12 13 14 15 16 17 18 19 20 21 22