ಆದಿಕಾಂಡ 30 : 1 (ERVKN)
ರಾಹೇಲಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿದಳು. ರಾಹೇಲಳಿಗೆ ತನ್ನ ಅಕ್ಕನಾದ ಲೇಯಳ ಮೇಲೆ ಹೊಟ್ಟೆಕಿಚ್ಚಾಯಿತು. ಆದ್ದರಿಂದ ರಾಹೇಲಳು ಯಾಕೋಬನಿಗೆ, “ನನಗೆ ಮಕ್ಕಳನ್ನು ಕೊಡು, ಇಲ್ಲವಾದರೆ ನಾನು ಸಾಯುವೆ” ಎಂದು ಹೇಳಿದಳು.
ಆದಿಕಾಂಡ 30 : 2 (ERVKN)
ಯಾಕೋಬನಿಗೆ ರಾಹೇಲಳ ಮೇಲೆ ಕೋಪವಾಯಿತು. ಅವನು ಆಕೆಗೆ, “ನಾನು ದೇವರಲ್ಲ. ನಿನಗೆ ಮಕ್ಕಳಾಗದಂತೆ ಮಾಡಿರುವವನು ದೇವರು” ಎಂದು ಹೇಳಿದನು.
ಆದಿಕಾಂಡ 30 : 3 (ERVKN)
ನಂತರ ರಾಹೇಲಳು, “ನೀನು ನನ್ನ ಸೇವಕಿಯಾದ ಬಿಲ್ಹಾಳನ್ನು ತೆಗೆದುಕೊಳ್ಳಬಹುದು. ಆಕೆಯೊಡನೆ ಮಲಗಿಕೊ; ಆಕೆ ನನಗೋಸ್ಕರ ಒಂದು ಮಗುವನ್ನು ಹೆರುವಳು. ಆಗ ನಾನು ಆಕೆಯ ಮೂಲಕ ತಾಯಿಯಾಗುವೆನು” ಎಂದು ಹೇಳಿದಳು.
ಆದಿಕಾಂಡ 30 : 4 (ERVKN)
ಅಂತೆಯೇ ರಾಹೇಲಳು ಬಿಲ್ಹಾಳನ್ನು ತನ್ನ ಗಂಡನಾದ ಯಾಕೋಬನಿಗೆ ಕೊಟ್ಟಳು. ಯಾಕೋಬನು ಬಿಲ್ಹಾಳನ್ನು ಕೂಡಿದನು.
ಆದಿಕಾಂಡ 30 : 5 (ERVKN)
ಬಿಲ್ಹಾ ಬಸುರಾಗಿ ಯಾಕೋಬನಿಗೆ ಒಬ್ಬ ಮಗನನ್ನು ಹೆತ್ತಳು.
ಆದಿಕಾಂಡ 30 : 6 (ERVKN)
ರಾಹೇಲಳು, “ದೇವರು ನನ್ನ ಪ್ರಾರ್ಥನೆಯನ್ನು ಕೇಳಿ ನನಗೆ ಒಬ್ಬ ಮಗನನ್ನು ಕೊಡಲು ನಿರ್ಧರಿಸಿದನು” ಎಂದು ಹೇಳಿ ಆ ಮಗುವಿಗೆ ದಾನ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 7 (ERVKN)
ಬಿಲ್ಹಾ ಮತ್ತೆ ಬಸುರಾಗಿ ಯಾಕೋಬನಿಗೆ ಎರಡನೆ ಮಗನನ್ನು ಹೆತ್ತಳು.
ಆದಿಕಾಂಡ 30 : 8 (ERVKN)
ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.
ಆದಿಕಾಂಡ 30 : 9 (ERVKN)
ಲೇಯಳು ತನಗೆ ಮಕ್ಕಳಾಗದಿರುವುದನ್ನು ಗಮನಿಸಿ ತನ್ನ ಸೇವಕಿಯಾದ ಜಿಲ್ಪಳನ್ನು ಯಾಕೋಬನಿಗೆ ಕೊಟ್ಟಳು.
ಆದಿಕಾಂಡ 30 : 10 (ERVKN)
ಜಿಲ್ಪಳಿಗೂ ಒಬ್ಬ ಮಗನು ಹುಟ್ಟಿದನು.
ಆದಿಕಾಂಡ 30 : 11 (ERVKN)
ಲೇಯಳು, “ನಾನು ಅದೃಷ್ಟವಂತೆ” ಎಂದು ಹೇಳಿ, ಆ ಮಗುವಿಗೆ ಗಾದ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 12 (ERVKN)
ಜಿಲ್ಪಳು ಮತ್ತೊಬ್ಬ ಮಗನನ್ನು ಹೆತ್ತಳು. ಲೇಯಳು, “ನಾನು ಧನ್ಯಳಾದೆ.
ಆದಿಕಾಂಡ 30 : 13 (ERVKN)
ಈಗ ಸ್ತ್ರೀಯರು ನನ್ನನ್ನು ಧನ್ಯಳೆಂದು ಕರೆಯುವರು” ಎಂದು ಹೇಳಿ ಆ ಮಗುವಿಗೆ ಆಶೇರ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 14 (ERVKN)
ಗೋಧಿಯ ಸುಗ್ಗಿಕಾಲದಲ್ಲಿ, ರೂಬೇನನು ಹೊಲಕ್ಕೆ ಹೋಗಿದ್ದಾಗ ಕಾಮಜನಕಗಿಡದ ಹೂವುಗಳನ್ನು ಕಂಡನು. ರೂಬೇನನು ಈ ಹೂವುಗಳನ್ನು ತನ್ನ ತಾಯಿಯಾದ ಲೇಯಳಿಗೆ ತಂದುಕೊಟ್ಟನು. ರಾಹೇಲಳು ಲೇಯಳಿಗೆ, “ದಯವಿಟ್ಟು, ನಿನ್ನ ಮಗನು ತಂದಿರುವ ಹೂವುಗಳಲ್ಲಿ ನನಗೆ ಸ್ವಲ್ಪಕೊಡು” ಎಂದು ಕೇಳಿದಳು.
ಆದಿಕಾಂಡ 30 : 15 (ERVKN)
ಲೇಯಳು, “ನೀನು ಈಗಾಗಲೇ ನನ್ನ ಗಂಡನನ್ನು ತೆಗೆದುಕೊಂಡಿರುವೆ. ಈಗ ನನ್ನ ಮಗನು ತಂದಿರುವ ಹೂವುಗಳನ್ನು ತೆಗೆದುಕೊಳ್ಳಲು ಪ್ರಯತ್ನಿಸುತ್ತಿರುವೆ” ಎಂದು ಹೇಳಿದಳು. ರಾಹೇಲಳು, “ನಿನ್ನ ಮಗನು ತಂದಿರುವ ಹೂವುಗಳನ್ನು ನನಗೆ ಕೊಟ್ಟರೆ, ನೀನು ಈ ರಾತ್ರಿ ಯಾಕೋಬನ ಸಂಗಡ ಮಲಗಿಕೊಳ್ಳಬಹುದು” ಎಂದು ಹೇಳಿದಳು.
ಆದಿಕಾಂಡ 30 : 16 (ERVKN)
ಆ ರಾತ್ರಿ ಯಾಕೋಬನು ಹೊಲದಿಂದ ಬಂದನು. ಲೇಯಳು ಅವನನ್ನು ಕಂಡು ಭೇಟಿಯಾಗಲು ಹೋದಳು. ಅವಳು ಅವನಿಗೆ, “ಈ ರಾತ್ರಿ ನೀನು ನನ್ನ ಸಂಗಡ ಮಲಗಿಕೊಳ್ಳುವೆ. ನನ್ನ ಮಗನು ತಂದ ಹೂವುಗಳನ್ನು ನಾನು ನಿನಗೋಸ್ಕರವಾಗಿ ಕೊಟ್ಟಿರುವೆ” ಎಂದು ಹೇಳಿದಳು. ಆದ್ದರಿಂದ ಯಾಕೋಬನು ಆ ರಾತ್ರಿ ಲೇಯಳೊಡನೆ ಮಲಗಿಕೊಂಡನು.
ಆದಿಕಾಂಡ 30 : 17 (ERVKN)
ಲೇಯಳು ಮತ್ತೆ ಬಸುರಾಗುವಂತೆ ದೇವರು ಅನುಗ್ರಹಿಸಿದನು. ಆಕೆ ತನ್ನ ಐದನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 18 (ERVKN)
ಲೇಯಳು, “ದೇವರು ನನಗೆ ಒಂದು ಬಹುಮಾನವನ್ನು ಕೊಟ್ಟನು; ಯಾಕೆಂದರೆ ನಾನು ನನ್ನ ಸೇವಕಿಯನ್ನು ನನ್ನ ಗಂಡನಿಗೆ ಕೊಟ್ಟೆನು” ಎಂದು ಹೇಳಿ, ಆ ಮಗುವಿಗೆ ಇಸ್ಸಾಕಾರ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 19 (ERVKN)
ಲೇಯಳು ಮತ್ತೆ ಬಸುರಾಗಿ ಆರನೆಯ ಮಗನನ್ನು ಹೆತ್ತಳು.
ಆದಿಕಾಂಡ 30 : 20 (ERVKN)
ಲೇಯಳು, “ದೇವರು ನನಗೆ ಒಂದು ಒಳ್ಳೆಯ ಬಹುಮಾನವನ್ನು ಕೊಟ್ಟಿದ್ದಾನೆ. ಈಗ ಖಂಡಿತವಾಗಿ ಯಾಕೋಬನು ನನ್ನನ್ನು ಸ್ವೀಕರಿಸುವನು, ಯಾಕೆಂದರೆ ನಾನು ಅವನಿಗೆ ಆರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ, ಜೆಬುಲೂನ್ ಎಂದು ಹೆಸರಿಟ್ಟಳು.
ಆದಿಕಾಂಡ 30 : 21 (ERVKN)
ತರುವಾಯ ಲೇಯಳು ಒಬ್ಬ ಮಗಳನ್ನು ಹೆತ್ತಳು. ಆಕೆ ತನ್ನ ಮಗಳಿಗೆ ದೀನಾ ಎಂದು ಹೆಸರಿಟ್ಟಳು.
ಆದಿಕಾಂಡ 30 : 22 (ERVKN)
ನಂತರ, ದೇವರು ರಾಹೇಲಳ ಪ್ರಾರ್ಥನೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಅನುಗ್ರಹಿಸಿದನು.
ಆದಿಕಾಂಡ 30 : 23 (ERVKN)
[This verse may not be a part of this translation]
ಆದಿಕಾಂಡ 30 : 24 (ERVKN)
[This verse may not be a part of this translation]
ಆದಿಕಾಂಡ 30 : 25 (ERVKN)
ಯೋಸೇಫನು ಹುಟ್ಟಿದ ಮೇಲೆ, ಯಾಕೋಬನು ಲಾಬಾನನಿಗೆ, “ಈಗ ನಾನು ನನ್ನ ಸ್ವಂತ ಮನೆಗೆ ಹೋಗಲು ಅನುಮತಿ ಕೊಡು.
ಆದಿಕಾಂಡ 30 : 26 (ERVKN)
ನನ್ನ ಹೆಂಡತಿಯರನ್ನೂ ಮಕ್ಕಳನ್ನೂ ನನಗೆ ಕೊಡು. ನಾನು ಹದಿನಾಲ್ಕು ವರ್ಷ ನಿನ್ನ ಸೇವೆಮಾಡಿ ಅವರನ್ನು ಸಂಪಾದಿಸಿಕೊಂಡಿದ್ದೇನೆ. ನಾನು ನಿನಗೆ ಒಳ್ಳೆಯ ಸೇವೆ ಮಾಡಿರುವುದು ನಿನಗೆ ತಿಳಿದಿದೆ” ಎಂದು ಹೇಳಿದನು.
ಆದಿಕಾಂಡ 30 : 27 (ERVKN)
ಲಾಬಾನನು ಅವನಿಗೆ, “ನಾನು ಹೇಳುವುದನ್ನು ಕೇಳು; ಯೆಹೋವನು ನಿನ್ನ ನಿಮಿತ್ತವಾಗಿ ನನ್ನನ್ನು ಆಶೀರ್ವದಿಸಿದ್ದಾನೆಂದು ನನಗೆ ತಿಳಿದಿದೆ.
ಆದಿಕಾಂಡ 30 : 28 (ERVKN)
ಹೇಳು, ನಾನು ನಿನಗೆ ಎಷ್ಟು ಸಂಬಳ ಕೊಡಬೇಕು? ನೀನು ಹೇಳಿದಷ್ಟು ಕೊಡುತ್ತೇನೆ” ಎಂದು ಹೇಳಿದನು.
ಆದಿಕಾಂಡ 30 : 29 (ERVKN)
ಯಾಕೋಬನು, “ನಾನು ನಿನಗೋಸ್ಕರ ಕಷ್ಟಪಟ್ಟು ಕೆಲಸ ಮಾಡಿರುವುದು ನಿನಗೆ ಗೊತ್ತಿದೆ. ನಾನು ನಿನ್ನ ಕುರಿಮಂದೆಗಳನ್ನು ನೋಡಿಕೊಂಡಿದ್ದರಿಂದ ಅವು ಹೆಚ್ಚಾಗಿವೆ.
ಆದಿಕಾಂಡ 30 : 30 (ERVKN)
ನಾನು ಬಂದಾಗ ನಿನಗೆ ಸ್ವಲ್ಪವಿತ್ತು, ಈಗ ನಿನಗೆ ಬೇಕಾದಷ್ಟಿದೆ. ನಾನು ನಿನಗೋಸ್ಕರ ಮಾಡಿದ್ದನ್ನೆಲ್ಲ ಯೆಹೋವನು ಆಶೀರ್ವದಿಸಿದನು. ನಾನು ನನಗೋಸ್ಕರ ಕೆಲಸ ಮಾಡುವ ಸಮಯವಿದು. ನನ್ನ ಸ್ವಂತ ಮನೆಗೆ ಒದಗಿಸುವ ಸಮಯವಿದು” ಎಂದು ಹೇಳಿದನು.
ಆದಿಕಾಂಡ 30 : 31 (ERVKN)
ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.
ಆದಿಕಾಂಡ 30 : 32 (ERVKN)
ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.
ಆದಿಕಾಂಡ 30 : 33 (ERVKN)
ಮುಂದಿನ ದಿನಗಳಲ್ಲಿ ನೀನು ಬಂದು ಪರೀಕ್ಷಿಸಿದಾಗ ನಾನು ಯಥಾರ್ಥನೊ ಇಲ್ಲವೊ ಎಂಬುದನ್ನು ನೀನು ಸುಲಭವಾಗಿ ಕಂಡುಕೊಳ್ಳಬಹುದು. ನಾನೇನಾದರೂ ಚುಕ್ಕೆಯಿಲ್ಲದ ಮೇಕೆಗಳನ್ನಾಗಲಿ ಅಥವಾ ಕಪ್ಪಿಲ್ಲದ ಕುರಿಗಳನ್ನಾಗಲಿ ಹೊಂದಿದ್ದರೆ, ನಾನು ಅದನ್ನು ಕದ್ದುಕೊಂಡದ್ದೆಂದು ನೀನು ಪರಿಗಣಿಸಬಹುದು” ಎಂದು ಹೇಳಿದನು.
ಆದಿಕಾಂಡ 30 : 34 (ERVKN)
ಲಾಬಾನನು, “ನಾನು ಅದಕ್ಕೆ ಒಪ್ಪಿಕೊಂಡಿದ್ದೇನೆ. ನೀನು ಹೇಳಿದಂತೆ ನಾವು ಮಾಡೋಣ” ಎಂದು ಹೇಳಿದನು.
ಆದಿಕಾಂಡ 30 : 35 (ERVKN)
ಆ ದಿನ ಲಾಬಾನನು ಚುಕ್ಕೆಗಳಿದ್ದ ಎಲ್ಲಾ ಹೋತಗಳನ್ನೂ ಮೇಕೆಗಳನ್ನೂ ಕಪ್ಪಾದ ಕುರಿಗಳನ್ನೂ ಪ್ರತ್ಯೇಕಿಸಿದನು. ಲಾಬಾನನು ತನ್ನ ಗಂಡುಮಕ್ಕಳಿಗೆ ಆ ಕುರಿಗಳನ್ನು ನೋಡಿಕೊಳ್ಳಲು ಹೇಳಿದನು.
ಆದಿಕಾಂಡ 30 : 36 (ERVKN)
ಆದ್ದರಿಂದ ಅವನ ಗಂಡುಮಕ್ಕಳು ಚುಕ್ಕೆಗಳಿದ್ದ ಅವುಗಳೊಂದಿಗೆ ಮತ್ತೊಂದು ಸ್ಥಳಕ್ಕೆ ಹೋದರು. ಅವರು ಮೂರು ದಿನಗಳವರೆಗೆ ಪ್ರಯಾಣ ಮಾಡಿದರು. ಯಾಕೋಬನು ಅಲ್ಲಿದ್ದುಕೊಂಡು ಉಳಿದವುಗಳನ್ನೆಲ್ಲ ನೋಡಿಕೊಳ್ಳತೊಡಗಿದನು.
ಆದಿಕಾಂಡ 30 : 37 (ERVKN)
ಆದ್ದರಿಂದ ಯಾಕೋಬನು ಲಿಬ್ನೆ, ಲೂಜ್ ಮತ್ತು ಅರ್ಮೋನ್ ಎಂಬ ಮರಗಳಿಂದ ಹಸಿರುಕೊಂಬೆಗಳನ್ನು ಕತ್ತರಿಸಿದನು. ಅವುಗಳನ್ನು ಪಟ್ಟಿಪಟ್ಟಿಯಾಗಿ ತೊಗಟೆ ಸುಲಿದು ಅವುಗಳಲ್ಲಿರುವ ಬಿಳುಪುಬಣ್ಣವು ಕಾಣಿಸುವಂತೆ ಮಾಡಿದನು.
ಆದಿಕಾಂಡ 30 : 38 (ERVKN)
ಯಾಕೋಬನು ಆ ಕೊಂಬೆಗಳನ್ನು ಮಂದೆಗಳ ಎದುರಿಗೆ ನೀರು ಕುಡಿಯುವ ಸ್ಥಳದಲ್ಲಿಟ್ಟನು. ಪ್ರಾಣಿಗಳು ನೀರು ಕುಡಿಯುವುದಕ್ಕೆ ಬಂದಾಗ ಆ ಸ್ಥಳದಲ್ಲಿ ಸಂಗಮ ಮಾಡುತ್ತಿದ್ದವು.
ಆದಿಕಾಂಡ 30 : 39 (ERVKN)
ಮೇಕೆಗಳು ಆ ಕೊಂಬೆಗಳ ಎದುರಿನಲ್ಲಿ ಸಂಗಮ ಮಾಡಿದಾಗ, ಅವುಗಳಲ್ಲಿ ಹುಟ್ಟಿದ ಮರಿಗಳೆಲ್ಲ ಚುಕ್ಕೆಮಚ್ಚೆಗಳಿಂದಲೂ ಕಪ್ಪು ಬಣ್ಣದಿಂದಲೂ ಕೂಡಿದ್ದವು.
ಆದಿಕಾಂಡ 30 : 40 (ERVKN)
ಯಾಕೋಬನು ಚುಕ್ಕೆಯುಳ್ಳ ಮತ್ತು ಕಪ್ಪಾಗಿರುವ ಆಡುಕುರಿಗಳನ್ನು ಮಂದೆಯ ಇತರ ಆಡುಕುರಿಗಳಿಂದ ಬೇರ್ಪಡಿಸಿದನು. ಯಾಕೋಬನು ತನ್ನ ಪಶುಗಳನ್ನು ಲಾಬಾನನ ಪಶುಗಳಿಂದ ಪ್ರತ್ಯೇಕವಾಗಿರಿಸಿದನು.
ಆದಿಕಾಂಡ 30 : 41 (ERVKN)
ಬಲವಾದ ಆಡುಕುರಿಗಳು ಸಂಗಮ ಮಾಡುವಾಗಲೆಲ್ಲ ಯಾಕೋಬನು ಆ ಕೊಂಬೆಗಳನ್ನು ಅವುಗಳ ಕಣ್ಣಿಗೆ ಎದುರಾಗಿಡುತ್ತಿದ್ದನು. ಅವುಗಳು ಆ ಕೊಂಬೆಗಳ ಸಮೀಪದಲ್ಲಿ ಸಂಗಮ ಮಾಡುತ್ತಿದ್ದವು.
ಆದಿಕಾಂಡ 30 : 42 (ERVKN)
ಆದರೆ ಬಲಹೀನವಾದ ಪ್ರಾಣಿಗಳು ಸಂಗಮ ಮಾಡುವಾಗ ಯಾಕೋಬನು ಆ ಕೊಂಬೆಗಳನ್ನು ಅಲ್ಲಿ ಇಡುತ್ತಿರಲಿಲ್ಲ. ಆದ್ದರಿಂದ ಬಲಹೀನವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಲಾಬಾನನಿಗೆ ಸೇರಿಕೊಂಡವು. ಬಲವಾದ ಆಡುಕುರಿಗಳಿಗೆ ಹುಟ್ಟಿದ ಮರಿಗಳೆಲ್ಲ ಯಾಕೋಬನಿಗೆ ಸೇರಿಕೊಂಡವು.
ಆದಿಕಾಂಡ 30 : 43 (ERVKN)
ಹೀಗೆ ಯಾಕೋಬನು ತುಂಬ ಐಶ್ವರ್ಯವಂತನಾದನು. ಅವನಿಗೆ ದೊಡ್ಡ ಮಂದೆಗಳಿದ್ದವು. ಅನೇಕ ಸೇವಕರಿದ್ದರು; ಒಂಟೆಗಳಿದ್ದವು ಮತ್ತು ಕತ್ತೆಗಳಿದ್ದವು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: