ಆದಿಕಾಂಡ 35 : 1 (ERVKN)
ಬೇತೇಲಿನಲ್ಲಿ ಯಾಕೋಬನು ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.
ಆದಿಕಾಂಡ 35 : 2 (ERVKN)
ಆದ್ದರಿಂದ ಯಾಕೋಬನು ತನ್ನ ಕುಟುಂಬದವರಿಗೂ ತನ್ನ ಎಲ್ಲಾ ಸೇವಕರಿಗೂ, “ನಿಮ್ಮಲ್ಲಿರುವ ಮರದ ಮತ್ತು ಲೋಹದ ಎಲ್ಲಾ ಅನ್ಯದೇವರುಗಳನ್ನು ನಾಶಮಾಡಿರಿ. ನಿಮ್ಮನ್ನು ಶುದ್ಧಿ ಮಾಡಿಕೊಂಡು ಶುದ್ಧವಾದ ಬಟ್ಟೆಗಳನ್ನು ಧರಿಸಿಕೊಳ್ಳಿರಿ.
ಆದಿಕಾಂಡ 35 : 3 (ERVKN)
ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.
ಆದಿಕಾಂಡ 35 : 4 (ERVKN)
ಆದ್ದರಿಂದ ಅವರು ತಮ್ಮಲ್ಲಿದ್ದ ಎಲ್ಲಾ ಅನ್ಯದೇವರುಗಳನ್ನೂ ತಮ್ಮ ಕಿವಿಗಳಲ್ಲಿದ್ದ ವಾಲೆಗಳನ್ನೂ ಯಾಕೋಬನಿಗೆ ಕೊಟ್ಟರು. ಯಾಕೋಬನು ಅವುಗಳನ್ನೆಲ್ಲಾ ಶೆಕೆಮ್ ಪಟ್ಟಣದ ಸಮೀಪದಲ್ಲಿರುವ ಏಲಾವೃಕ್ಷದ ಬುಡದಲ್ಲಿ ಹೂಳಿಟ್ಟನು.
ಆದಿಕಾಂಡ 35 : 5 (ERVKN)
ಯಾಕೋಬನು ಮತ್ತು ಅವನ ಗಂಡುಮಕ್ಕಳು ಆ ಸ್ಥಳದಿಂದ ಹೊರಟರು. ಆ ಪ್ರದೇಶದಲ್ಲಿದ್ದ ಜನರು ಅವರನ್ನು ಹಿಂಬಾಲಿಸಿ ಕೊಲ್ಲಬೇಕೆಂದಿದ್ದರು. ಆದರೆ ಅವರು ಭಯಪಟ್ಟು ಯಾಕೋಬನನ್ನು ಹಿಂಬಾಲಿಸಲಿಲ್ಲ.
ಆದಿಕಾಂಡ 35 : 6 (ERVKN)
ಯಾಕೋಬನು ಮತ್ತು ಅವರ ಜನರು ಲೂಜಿಗೆ ಹೋದರು. ಈಗ ಲೂಜನ್ನು “ಬೇತೇಲ್” ಎಂದು ಕರೆಯುತ್ತಾರೆ. ಅದು ಕಾನಾನ್ ದೇಶದಲ್ಲಿದೆ.
ಆದಿಕಾಂಡ 35 : 7 (ERVKN)
ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಆ ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಆ ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.
ಆದಿಕಾಂಡ 35 : 8 (ERVKN)
ರೆಬೆಕ್ಕಳ ದಾಸಿಯಾದ ದೆಬೋರಳು ಅಲ್ಲಿ ಸತ್ತುಹೋದಳು. ಆದ್ದರಿಂದ ಅವರು ಆಕೆಯನ್ನು ಬೇತೇಲಿನ ಬಳಿಯಲ್ಲಿರುವ ಏಲಾವೃಕ್ಷದ ಬುಡದಲ್ಲಿ ಸಮಾಧಿ ಮಾಡಿದರು. ಆ ಸ್ಥಳಕ್ಕೆ “ಅಲ್ಲೋನ್ ಬಾಕೂತ್” ಎಂದು ಹೆಸರಿಟ್ಟರು.
ಆದಿಕಾಂಡ 35 : 9 (ERVKN)
ಯಾಕೋಬನ ಹೊಸ ಹೆಸರು ಯಾಕೋಬನು ಪದ್ದನ್ಅರಾಮಿನಿಂದ ಹಿಂತಿರುಗಿ ಬಂದಾಗ, ದೇವರು ಅವನಿಗೆ ಮತ್ತೆ ಕಾಣಿಸಿಕೊಂಡು ಅವನನ್ನು ಆಶೀರ್ವದಿಸಿದನು.
ಆದಿಕಾಂಡ 35 : 10 (ERVKN)
ದೇವರು ಯಾಕೋಬನಿಗೆ, “ನಿನ್ನ ಹೆಸರು ಯಾಕೋಬ. ಆದರೆ ನಾನು ಆ ಹೆಸರನ್ನು ಬದಲಾಯಿಸುವೆನು. ಇನ್ನು ಮುಂದೆ ನೀನು ಯಾಕೋಬನೆಂದು ಕರೆಸಿಕೊಳ್ಳುವುದಿಲ್ಲ. ನಿನ್ನ ಹೊಸ ಹೆಸರು ‘ಇಸ್ರೇಲ್’ ” ಎಂದು ಹೇಳಿ ಅವನಿಗೆ “ಇಸ್ರೇಲ್” ಎಂದು ಹೆಸರಿಟ್ಟನು.
ಆದಿಕಾಂಡ 35 : 11 (ERVKN)
ದೇವರು ಅವನಿಗೆ, “ನಾನೇ ಸರ್ವಶಕ್ತನಾದ ದೇವರು. ನೀನು ಅನೇಕ ಮಕ್ಕಳನ್ನು ಪಡೆದು ಮಹಾಜನಾಂಗವಾಗಿ ಬೆಳೆಯುವೆ. ಅನೇಕ ಜನಾಂಗಗಳೂ ರಾಜರುಗಳೂ ನಿನ್ನೊಳಗಿಂದ ಬರುವರು.
ಆದಿಕಾಂಡ 35 : 12 (ERVKN)
ನಾನು ಅಬ್ರಹಾಮನಿಗೂ ಇಸಾಕನಿಗೂ ವಿಶೇಷವಾದ ದೇಶವನ್ನು ಕೊಟ್ಟೆನು. ಈಗ ನಾನು ಆ ದೇಶವನ್ನು ನಿನಗೆ ಕೊಡುವೆನು. ನಾನು ಆ ದೇಶವನ್ನು ನಿನ್ನ ಮುಂದಿನ ಸಂತತಿಗಳವರಿಗೆ ಕೊಡುವೆನು” ಎಂದು ಹೇಳಿದನು.
ಆದಿಕಾಂಡ 35 : 13 (ERVKN)
ಆಮೇಲೆ ದೇವರು ಆ ಸ್ಥಳದಿಂದ ಹೊರಟುಹೋದನು.
ಆದಿಕಾಂಡ 35 : 14 (ERVKN)
(14-15) ಯಾಕೋಬನು ಈ ಸ್ಥಳದಲ್ಲಿ ಜ್ಞಾಪಕಾರ್ಥವಾಗಿ ಒಂದು ಸ್ಮಾರಕಕಲ್ಲನ್ನು ನಿಲ್ಲಿಸಿ ಅದರ ಮೇಲೆ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಸುರಿದನು. ಇದು ಒಂದು ವಿಶೇಷವಾದ ಸ್ಥಳ. ಯಾಕೆಂದರೆ ಅಲ್ಲಿ ದೇವರು ಯಾಕೋಬನೊಂದಿಗೆ ಮಾತಾಡಿದನು. ಯಾಕೋಬನು ಆ ಸ್ಥಳಕ್ಕೆ “ಬೇತೇಲ್” ಎಂದು ಹೆಸರಿಟ್ಟನು.
ಆದಿಕಾಂಡ 35 : 16 (ERVKN)
ಹೆರಿಗೆ ಬೇನೆಯಿಂದ ರಾಹೇಲಳ ಮರಣ ಯಾಕೋಬನು ಮತ್ತು ಅವನ ಜನರು ಬೇತೇಲಿನಿಂದ ಹೊರಟು ಬೆತ್ಲೆಹೇಮೆಂಬ ಎಫ್ರಾತೂರಿಗೆ ಬರುವುದಕ್ಕಿಂತ ಸ್ವಲ್ಪಮುಂಚೆ ರಾಹೇಲಳಿಗೆ ಹೆರಿಗೆ ಕಾಲ ಬಂದಿತು.
ಆದಿಕಾಂಡ 35 : 17 (ERVKN)
ಆದರೆ ರಾಹೇಲಳು ಈ ಹೆರಿಗೆಯಲ್ಲಿ ತುಂಬ ಕಷ್ಟಪಡಬೇಕಾಯಿತು. ಆಕೆಗೆ ಬಹಳ ನೋವಿತ್ತು. ರಾಹೇಲಳ ದಾದಿಯು ಇದನ್ನು ಕಂಡು, ಆಕೆಗೆ, “ರಾಹೇಲಳೇ, ಭಯಪಡಬೇಡ. ನೀನು ಮತ್ತೊಬ್ಬ ಮಗನಿಗೆ ಜನನ ಕೊಡುತ್ತಿರುವೆ” ಎಂದು ಹೇಳಿದಳು.
ಆದಿಕಾಂಡ 35 : 18 (ERVKN)
ರಾಹೇಲಳು ಮಗನನ್ನು ಹೆರುವಾಗ ಸತ್ತುಹೋದಳು; ಸಾಯುವುದಕ್ಕೆ ಮೊದಲು, ರಾಹೇಲಳು ಆ ಮಗುವಿಗೆ ಬೆನೋನಿ ಎಂದು ಹೆಸರಿಟ್ಟಳು. ಆದರೆ ಯಾಕೋಬನು ಅವನಿಗೆ ಬೆನ್ಯಾಮೀನ್ ಎಂದು ಹೆಸರಿಟ್ಟನು. ಹಾಗೆ ರಾಹೇಳಲು ಮೃತಪಟ್ಟಳು.
ಆದಿಕಾಂಡ 35 : 19 (ERVKN)
ರಾಹೇಲಳನ್ನು ಬೆತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಸಮಾಧಿ ಮಾಡಲಾಯಿತು.
ಆದಿಕಾಂಡ 35 : 20 (ERVKN)
ಯಾಕೋಬನು ರಾಹೇಲಳ ಗೌರವಾರ್ಥವಾಗಿ ಆಕೆಯ ಸಮಾಧಿಯ ಮೇಲೆ ವಿಶೇಷವಾದ ಒಂದು ಕಲ್ಲನ್ನು ಇಟ್ಟನು. ಇಂದಿಗೂ ಆ ವಿಶೇಷವಾದ ಕಲ್ಲು ಅಲ್ಲಿದೆ.
ಆದಿಕಾಂಡ 35 : 21 (ERVKN)
ಆಮೇಲೆ ಇಸ್ರೇಲನು ತನ್ನ ಪ್ರಯಾಣವನ್ನು ಮುಂದುವರೆಸಿ “ಮಿಗ್ದಲ್ಏದರ್” ಗೋಪುರದ ದಕ್ಷಿಣದಲ್ಲಿ ಗುಡಾರವನ್ನು ಹಾಕಿಸಿದನು.
ಆದಿಕಾಂಡ 35 : 22 (ERVKN)
ಇಸ್ರೇಲನು ಸ್ವಲ್ಪಕಾಲದವರೆಗೆ ಅಲ್ಲಿ ಇಳಿದುಕೊಂಡನು. ಅವನು ಅಲ್ಲಿದ್ದಾಗ ರೂಬೇನನು ಇಸ್ರೇಲನ ದಾಸಿಯಾದ *ದಾಸಿ ಅಥವಾ “ಉಪಪತ್ನಿ” ದಾಸಿಯಾಗಿದ್ದರೂ ಹೆಂಡತಿಯಂತಿದ್ದಳು. ಬಿಲ್ಹಳೊಡನೆ ಮಲಗಿಕೊಂಡನು. ಇಸ್ರೇಲನು ಇದರ ಬಗ್ಗೆ ಕೇಳಿದಾಗ ತುಂಬ ಕೋಪಗೊಂಡನು. ಯಾಕೋಬನಿಗೆ (ಇಸ್ರೇಲ) ಹನ್ನೆರಡು ಗಂಡುಮಕ್ಕಳಿದ್ದರು.
ಆದಿಕಾಂಡ 35 : 23 (ERVKN)
ಇಸ್ರಾಯೇಲನ ಕುಟುಂಬ ಲೇಯಳ ಗಂಡುಮಕ್ಕಳು: ಯಾಕೋಬನ ಚೊಚ್ಚಲ ಮಗನಾದ ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್ ಮತ್ತು ಜೆಬುಲೂನ್.
ಆದಿಕಾಂಡ 35 : 24 (ERVKN)
ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.
ಆದಿಕಾಂಡ 35 : 25 (ERVKN)
ಬಿಲ್ಹಳು ರಾಹೇಲಳ ದಾಸಿ. ಬಿಲ್ಹಳ ಗಂಡುಮಕ್ಕಳು: ದಾನ್ ಮತ್ತು ನಫ್ತಾಲಿ.
ಆದಿಕಾಂಡ 35 : 26 (ERVKN)
ಜಿಲ್ಪಳು ಲೇಯಳ ದಾಸಿ. ಜಿಲ್ಪಳ ಗಂಡುಮಕ್ಕಳು: ಗಾದ್ ಮತ್ತು ಆಶೇರ್. ಇವರೆಲ್ಲರು ಯಾಕೋಬನಿಗೆ ಪದ್ದನ್ಅರಾಮಿನಲ್ಲಿ ಹುಟ್ಟಿದ ಗಂಡುಮಕ್ಕಳು.
ಆದಿಕಾಂಡ 35 : 27 (ERVKN)
ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೆಬ್ರೋನೆಂಬ ಕಿರ್ಯತರ್ಬದಲ್ಲಿದ್ದ ಮಮ್ರೆಗೆ ಬಂದನು. ಅಬ್ರಹಾಮನು ಮತ್ತು ಇಸಾಕನು ವಾಸವಾಗಿದ್ದದ್ದು ಇಲ್ಲೇ.
ಆದಿಕಾಂಡ 35 : 28 (ERVKN)
ಇಸಾಕನು ನೂರೆಂಭತ್ತು ವರ್ಷಗಳವರೆಗೆ ಜೀವಿಸಿದನು.
ಆದಿಕಾಂಡ 35 : 29 (ERVKN)
ಆಮೇಲೆ ಇಸಾಕನು ದಿನ ತುಂಬಿದ ಮುದುಕನಾಗುವವರೆಗೆ ಜೀವಿಸಿ ತೀರಿಕೊಂಡನು. ಅವನ ಮಕ್ಕಳಾದ ಏಸಾವನು ಮತ್ತು ಯಾಕೋಬನು ತಮ್ಮ ಅಜ್ಜನಿಗೆ ಸಮಾಧಿಯಾಗಿದ್ದ ಸ್ಥಳದಲ್ಲೇ ತಮ್ಮ ತಂದೆಗೆ ಸಮಾಧಿ ಮಾಡಿದರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29