ಆದಿಕಾಂಡ 36 : 1 (ERVKN)
{ಏಸಾವನ ಕುಟುಂಬ} [PS] ಎದೋಮನೆಂಬ ಏಸಾವನ ಕುಟುಂಬ ಚರಿತ್ರೆ:
ಆದಿಕಾಂಡ 36 : 2 (ERVKN)
ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ;
ಆದಿಕಾಂಡ 36 : 3 (ERVKN)
ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್.
ಆದಿಕಾಂಡ 36 : 4 (ERVKN)
ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತಳಿಗೆ ರೆಗೂವೇಲನೆಂಬ ಮಗನಿದ್ದನು.
ಆದಿಕಾಂಡ 36 : 5 (ERVKN)
ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು. [PE][PS]
ಆದಿಕಾಂಡ 36 : 6 (ERVKN)
(6-8) ಯಾಕೋಬ ಮತ್ತು ಏಸಾವರ ಕುಟುಂಬಗಳು ಬಹಳ ವೃದ್ಧಿಯಾದ ಕಾರಣ ಕಾನಾನ್ ದೇಶವು ಅವರಿಗೆ ಸಾಕಾಗಲಿಲ್ಲ. ಆದ್ದರಿಂದ ಏಸಾವನು ತನ್ನ ತಮ್ಮನಾದ ಯಾಕೋಬನಿಂದ ದೂರ ಹೋದನು. ಏಸಾವನು ತನ್ನ ಹೆಂಡತಿಯರನ್ನೂ ಗಂಡುಹೆಣ್ಣುಮಕ್ಕಳನ್ನೂ ಎಲ್ಲಾ ಸೇವಕರನ್ನೂ ದನಗಳನ್ನೂ ಮತ್ತು ಇತರ ಪಶುಗಳನ್ನೂ ತನಗೆ ಕಾನಾನಿನಲ್ಲಿದ್ದ ಪ್ರತಿಯೊಂದು ಆಸ್ತಿಯನ್ನೂ ತೆಗೆದುಕೊಂಡು ಸೇಯೀರ್ ಬೆಟ್ಟದ ಸೀಮೆಗೆ ಹೋದನು. (ಏಸಾವನಿಗೆ ಎದೋಮ್ ಎಂಬ ಹೆಸರೂ ಇದೆ. ಎದೋಮ್ ಎಂಬುದು ಸೇಯೀರ್ ದೇಶದ ಮತ್ತೊಂದು ಹೆಸರು.) [PE][PS]
ಆದಿಕಾಂಡ 36 : 7 (ERVKN)
ಆದಿಕಾಂಡ 36 : 8 (ERVKN)
ಆದಿಕಾಂಡ 36 : 9 (ERVKN)
ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು:
ಆದಿಕಾಂಡ 36 : 10 (ERVKN)
ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.
ಆದಿಕಾಂಡ 36 : 11 (ERVKN)
ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.
ಆದಿಕಾಂಡ 36 : 12 (ERVKN)
ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
ಆದಿಕಾಂಡ 36 : 13 (ERVKN)
ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
ಆದಿಕಾಂಡ 36 : 14 (ERVKN)
ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ. (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
ಆದಿಕಾಂಡ 36 : 15 (ERVKN)
ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,
ಆದಿಕಾಂಡ 36 : 16 (ERVKN)
ಕೋರಹ, ಗತಾಮ ಮತ್ತು ಅಮಾಲೇಕ. ಈ ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು.
ಆದಿಕಾಂಡ 36 : 17 (ERVKN)
ಏಸಾವನ ಮಗನಾದ ರೆಗೂವೇಲನು ಈ ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಈ ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
ಆದಿಕಾಂಡ 36 : 18 (ERVKN)
ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಈ ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
ಆದಿಕಾಂಡ 36 : 19 (ERVKN)
ಈ ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ.
ಆದಿಕಾಂಡ 36 : 20 (ERVKN)
ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
ಆದಿಕಾಂಡ 36 : 21 (ERVKN)
ದೀಶೋನ್, ಏಚೆರ್ ಮತ್ತು ದೀಶಾನ್, ಆ ಗಂಡುಮಕ್ಕಳು ಕುಲಪತಿಗಳಾಗಿದ್ದರು.
ಆದಿಕಾಂಡ 36 : 22 (ERVKN)
ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.)
ಆದಿಕಾಂಡ 36 : 23 (ERVKN)
ಶೋಬಾಲನು ಅಲ್ಪಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್ ಎಂಬವರ ತಂದೆ.
ಆದಿಕಾಂಡ 36 : 24 (ERVKN)
ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
ಆದಿಕಾಂಡ 36 : 25 (ERVKN)
ಅನಾಹನು ದೀಶೋನ್ ಮತ್ತು ಓಹೊಲೀಬಾಮಳ ತಂದೆ.
ಆದಿಕಾಂಡ 36 : 26 (ERVKN)
ದಿಶೋನನಿಗೆ ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬ ನಾಲ್ಕ ಮಂದಿ ಗಂಡುಮಕ್ಕಳಿದ್ದರು.
ಆದಿಕಾಂಡ 36 : 27 (ERVKN)
ಏಚೆರನಿಗೆ ಬಿಲ್ಹಾನ್, ಚಾವಾನ್ ಮತ್ತು ಅಕಾನ್ ಎಂಬ ಮೂರು ಮಂದಿ ಗಂಡುಮಕ್ಕಳಿದ್ದರು.
ಆದಿಕಾಂಡ 36 : 28 (ERVKN)
ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು.
ಆದಿಕಾಂಡ 36 : 29 (ERVKN)
ಹೋರಿಯರ ಕುಟುಂಬಗಳ ನಾಯಕರುಗಳ ಹೆಸರುಗಳು ಇಂತಿವೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
ಆದಿಕಾಂಡ 36 : 30 (ERVKN)
ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.
ಆದಿಕಾಂಡ 36 : 31 (ERVKN)
ಆ ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.
ಆದಿಕಾಂಡ 36 : 32 (ERVKN)
ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು.
ಆದಿಕಾಂಡ 36 : 33 (ERVKN)
ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು.
ಆದಿಕಾಂಡ 36 : 34 (ERVKN)
ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.
ಆದಿಕಾಂಡ 36 : 35 (ERVKN)
ಹುಷಾಮನು ಸತ್ತಮೇಲೆ, ಹದದನು ಆ ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
ಆದಿಕಾಂಡ 36 : 36 (ERVKN)
ಹದದನು ಸತ್ತಮೇಲೆ, ಸಮ್ಲಾಹನು ಆ ದೇಶವನ್ನು ಆಳಿದನು; ಸಮ್ಲಾಹನು ಮಸ್ರೇಕದವನು.
ಆದಿಕಾಂಡ 36 : 37 (ERVKN)
ಸಮ್ಲಾಹನು ಸತ್ತಮೇಲೆ ಸೌಲನು ಆ ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತೂರಿನವನು.
ಆದಿಕಾಂಡ 36 : 38 (ERVKN)
ಸೌಲನು ಸತ್ತಮೇಲೆ ಆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು.
ಆದಿಕಾಂಡ 36 : 39 (ERVKN)
ಬಾಳ್ಹಾನಾನನು ಸತ್ತಮೇಲೆ ಆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
ಆದಿಕಾಂಡ 36 : 40 (ERVKN)
(40-43) ಏಸಾವನು ಎದೋಮ್ಯರಿಗೆ ಮೂಲಪಿತೃ: ತಿಮ್ನ ಅಲ್ವಾ, ಯತೇತ, ಓಹೊಲೀಬಾಮಾ, ಏಲಾ, ಪೀನೋನ್, ಕೆನೆಜ್, ತೇಮಾನ್, ಮಿಪ್ಚಾರ, ಮಗ್ದೀಯೇಲ್ ಮತ್ತು ಗೀರಾಮ್ ಕುಟುಂಬಗಳವರು ತಮ್ಮ ಕುಟುಂಬಗಳ ಹೆಸರುಗಳನ್ನು ಹೊಂದಿದ್ದ ಪ್ರದೇಶಗಳಲ್ಲಿ ವಾಸಿಸಿದರು. [PE]
ಆದಿಕಾಂಡ 36 : 41 (ERVKN)
ಆದಿಕಾಂಡ 36 : 42 (ERVKN)
ಆದಿಕಾಂಡ 36 : 43 (ERVKN)

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43

BG:

Opacity:

Color:


Size:


Font: