ಆದಿಕಾಂಡ 37 : 1 (ERVKN)
{ಕನಸುಗಾರ ಯೋಸೇಫ} [PS] ಯಾಕೋಬನು ಕಾನಾನ್ ದೇಶದಲ್ಲಿ ನೆಲೆಸಿದನು. ಅವನ ತಂದೆ ಆ ದೇಶದಲ್ಲೇ ವಾಸವಾಗಿದ್ದನು.
ಆದಿಕಾಂಡ 37 : 2 (ERVKN)
ಯಾಕೋಬನ ಕುಟುಂಬದ ಚರಿತ್ರೆಯಿದು: [PE][PS] ಯೋಸೇಫನು ಹದಿನೇಳು ವರ್ಷದ ಯೌವನಸ್ಥನಾಗಿದ್ದನು. ಆಡುಕುರಿಗಳನ್ನು ಸಾಕುವುದು ಅವನ ಕಸುಬಾಗಿತ್ತು. ತನ್ನ ಅಣ್ಣಂದಿರೊಡನೆ ಅಂದರೆ ಬಿಲ್ಹಾ ಮತ್ತು ಜಿಲ್ಪಾ ಎಂಬ ತನ್ನ ಮಲತಾಯಿಗಳ ಮಕ್ಕಳೊಡನೆ ಯೋಸೇಫನು ಆಡುಕುರಿಗಳನ್ನು ಮೇಯಿಸುತ್ತಿದ್ದನು. ಅವರೇನಾದರೂ ಕೆಟ್ಟದ್ದನ್ನು ಮಾಡಿದರೆ ಯೋಸೇಫನು ತಂದೆಗೆ ತಿಳಿಸುತ್ತಿದ್ದನು.
ಆದಿಕಾಂಡ 37 : 3 (ERVKN)
ಇಸ್ರೇಲನು ತುಂಬ ಮುಪ್ಪಿನವನಾಗಿದ್ದಾಗ ಯೋಸೇಫನು ಹುಟ್ಟಿದ್ದರಿಂದ ಇಸ್ರೇಲನು ತನ್ನ ಬೇರೆ ಗಂಡುಮಕ್ಕಳಿಗಿಂತಲೂ ಹೆಚ್ಚಾಗಿ ಯೋಸೇಫನನ್ನು ಪ್ರೀತಿಸಿದನು. ಯಾಕೋಬನು ತನ್ನ ಮಗನಿಗೆ ಸುಂದರವಾದ ನಿಲುವಂಗಿಯನ್ನು ಮಾಡಿಸಿ ಕೊಟ್ಟಿದ್ದನು.
ಆದಿಕಾಂಡ 37 : 4 (ERVKN)
ತಮ್ಮ ತಂದೆಗೆ ಯೋಸೇಫನ ಮೇಲೆ ಹೆಚ್ಚು ಪ್ರೀತಿಯಿರುವುದನ್ನು ಗಮನಿಸಿದ ಯೋಸೇಫನ ಅಣ್ಣಂದಿರು ಯೋಸೇಫನನ್ನು ದ್ವೇಷಿಸತೊಡಗಿ ಅವನೊಡನೆ ಸ್ನೇಹಭಾವದಿಂದ ಮಾತಾಡುತ್ತಿರಲಿಲ್ಲ. [PE][PS]
ಆದಿಕಾಂಡ 37 : 5 (ERVKN)
ಒಂದು ದಿನ ಯೋಸೇಫನು ವಿಶೇಷವಾದ ಕನಸನ್ನು ಕಂಡನು. ಯೋಸೇಫನು ಈ ಕನಸನ್ನು ತನ್ನ ಅಣ್ಣಂದಿರಿಗೆ ತಿಳಿಸಿದಾಗ ಅವರು ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು. [PE][PS]
ಆದಿಕಾಂಡ 37 : 6 (ERVKN)
ಯೋಸೇಫನು ಅವರಿಗೆ, “ನನಗೆ ಒಂದು ಕನಸಾಯಿತು.
ಆದಿಕಾಂಡ 37 : 7 (ERVKN)
ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು. [PE][PS]
ಆದಿಕಾಂಡ 37 : 8 (ERVKN)
ಅವನ ಅಣ್ಣಂದಿರು, “ನೀನು ರಾಜನಾಗಿ ನಮ್ಮನ್ನು ಆಳುವೆ ಎಂಬುದು ಇದರ ಅರ್ಥವೆಂದು ನಿನ್ನ ಆಲೋಚನೆಯೋ?” ಎಂದು ಪ್ರಶ್ನಿಸಿ ಆ ಕನಸಿನ ನಿಮಿತ್ತ ಅವನನ್ನು ಮತ್ತಷ್ಟು ದ್ವೇಷಿಸತೊಡಗಿದರು. [PE][PS]
ಆದಿಕಾಂಡ 37 : 9 (ERVKN)
ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು. [PE][PS]
ಆದಿಕಾಂಡ 37 : 10 (ERVKN)
ಯೋಸೇಫನು ತನ್ನ ತಂದೆಗೂ ಸಹ ಈ ಕನಸಿನ ಬಗ್ಗೆ ತಿಳಿಸಿದನು. ಆದರೆ ಅವನ ತಂದೆ ಅವನನ್ನು ಗದರಿಸಿ, “ಇದೆಂಥಾ ಕನಸು? ನಾನೂ ನಿನ್ನ ತಾಯಿಯೂ ಮತ್ತು ನಿನ್ನ ಸಹೋದರರೂ ನಿನಗೆ ಅಡ್ಡಬೀಳುತ್ತೇವೆಂದು ನಂಬುತ್ತೀಯೋ?” ಎಂದು ಕೇಳಿದನು.
ಆದಿಕಾಂಡ 37 : 11 (ERVKN)
ಯೋಸೇಫನ ಅಣ್ಣಂದಿರಿಗೆ ಅವನ ಮೇಲೆ ಹೊಟ್ಟೆಕಿಚ್ಚು ಹೆಚ್ಚಾಯಿತು. ಆದರೆ ಯೋಸೇಫನ ತಂದೆಯು ಆ ಕನಸುಗಳ ಬಗ್ಗೆ ಆಶ್ಚರ್ಯಚಕಿತನಾಗಿ ಆಲೋಚಿಸತೊಡಗಿದನು. [PE][PS]
ಆದಿಕಾಂಡ 37 : 12 (ERVKN)
ಒಂದು ದಿನ ಯೋಸೇಫನ ಅಣ್ಣಂದಿರು ತಮ್ಮ ತಂದೆಯ ಆಡುಕುರಿಗಳನ್ನು ಕಾಯಲು ಶೆಕೆಮಿಗೆ ಹೋದರು.
ಆದಿಕಾಂಡ 37 : 13 (ERVKN)
ಇಸ್ರೇಲನು ಯೋಸೇಫನಿಗೆ, “ಶೆಕೆಮಿಗೆ ಹೋಗು. ನಿನ್ನ ಅಣ್ಣಂದಿರು ಅಲ್ಲಿ ನನ್ನ ಆಡುಕುರಿಗಳನ್ನು ಮೇಯಿಸುತ್ತಿದ್ದಾರೆ” ಎಂದು ಹೇಳಿದನು. [PE][PS] ಯೋಸೇಫನು, “ಸರಿ, ಹೋಗುವೆನು” ಎಂದು ಉತ್ತರಿಸಿದನು. [PE][PS]
ಆದಿಕಾಂಡ 37 : 14 (ERVKN)
ಇಸ್ರೇಲನು, “ನಿನ್ನ ಅಣ್ಣಂದಿರ ಮತ್ತು ಆಡುಕುರಿಗಳ ಕ್ಷೇಮವನ್ನು ವಿಚಾರಿಸಿಕೊಂಡು ಬಂದು ನನಗೆ ತಿಳಿಸು” ಎಂದು ಹೇಳಿ ಅವನನ್ನು ಹೆಬ್ರೋನಿನ ಕಣಿವೆಯಿಂದ ಶೆಕೆಮಿಗೆ ಕಳುಹಿಸಿಕೊಟ್ಟನು. [PE][PS]
ಆದಿಕಾಂಡ 37 : 15 (ERVKN)
ಶೆಕೆಮಿನಲ್ಲಿ ದಾರಿತಪ್ಪಿ ಯೋಸೇಫನು ಹೊಲಗಳಲ್ಲಿ ಅಲೆದಾಡುತ್ತಿರಲು ಅವನನ್ನು ಕಂಡ ಒಬ್ಬನು, “ಏನು ಹುಡುಕುತ್ತಿರುವೆ?” ಎಂದು ಕೇಳಿದನು. [PE][PS]
ಆದಿಕಾಂಡ 37 : 16 (ERVKN)
ಯೋಸೇಫನು, “ನನ್ನ ಅಣ್ಣಂದಿರನ್ನು ಹುಡುಕುತ್ತಿದ್ದೇನೆ. ಅವರು ತಮ್ಮ ಆಡುಕುರಿಗಳನ್ನು ಎಲ್ಲಿ ಮೇಯಿಸುತ್ತಿದ್ದಾರೆ?” ಎಂದು ಕೇಳಿದನು. [PE][PS]
ಆದಿಕಾಂಡ 37 : 17 (ERVKN)
ಅದಕ್ಕೆ ಅವನು, “ಅವರು ಇಲ್ಲಿಂದ ಹೊರಟುಹೋದರು. ದೋತಾನಿಗೆ ಹೋಗೋಣ ಎಂದು ಅವರು ಮಾತಾಡಿಕೊಳ್ಳುವುದನ್ನು ನಾನು ಕೇಳಿದೆ” ಎಂದು ಹೇಳಿದನು. ಆದ್ದರಿಂದ ಯೋಸೇಫನು ಅವರನ್ನು ಹುಡುಕುತ್ತಾ ಹೋಗಿ ದೋತಾನಿನಲ್ಲಿ ಅವರನ್ನು ಕಂಡನು. [PS]
ಆದಿಕಾಂಡ 37 : 18 (ERVKN)
{ಯೋಸೇಫನನ್ನು ಗುಲಾಮತನಕ್ಕೆ ಮಾರಿದ್ದು} [PS] ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.
ಆದಿಕಾಂಡ 37 : 19 (ERVKN)
ಅವರು ಒಬ್ಬರಿಗೊಬ್ಬರು, “ಅಗೋ, ಅಲ್ಲಿ ಬರುತ್ತಿದ್ದಾನೆ ಕನಸುಗಾರನಾದ ಯೋಸೇಫ.
ಆದಿಕಾಂಡ 37 : 20 (ERVKN)
ಅವನನ್ನು ಕೊಲ್ಲಲು ಇದೇ ತಕ್ಕ ಸಮಯ. ಅವನನ್ನು ಕೊಂದು ನೀರಿಲ್ಲದ ಬಾವಿಯೊಳಗೆ ದಬ್ಬಿ, ಕ್ರೂರ ಪ್ರಾಣಿಯೊಂದು ಅವನನ್ನು ತಿಂದುಬಿಟ್ಟಿತೆಂದು ನಮ್ಮ ತಂದೆಗೆ ಹೇಳೋಣ. ಆಗ ಅವನ ಕನಸುಗಳೆಲ್ಲ ಹೇಗೆ ನಿಜವಾಗುತ್ತವೊ ನೋಡೋಣ” ಎಂದು ಮಾತಾಡಿಕೊಂಡರು. [PE][PS]
ಆದಿಕಾಂಡ 37 : 21 (ERVKN)
ಆದರೆ ರೂಬೇನನು ಅವರಿಗೆ, “ಅವನನ್ನು ಕೊಲ್ಲಬೇಡಿ;
ಆದಿಕಾಂಡ 37 : 22 (ERVKN)
ಅರಣ್ಯದಲ್ಲಿರುವ ಬರಿದಾದ ಬಾವಿಗೆ ಅವನನ್ನು ನೂಕಿಬಿಡಿ; ಆದರೆ ಅವನಿಗೆ ನೋವು ಮಾಡಬೇಡಿ” ಎಂದು ಹೇಳಿದನು. ತರುವಾಯ ಯೋಸೇಫನನ್ನು ಬಾವಿಯಿಂದ ಮೇಲೆತ್ತಿ ತಂದೆಗೆ ಅವನನ್ನು ಒಪ್ಪಿಸಬೇಕೆಂಬುದೇ ರೂಬೇನನ ಅಪೇಕ್ಷೆಯಾಗಿತ್ತು.
ಆದಿಕಾಂಡ 37 : 23 (ERVKN)
ಯೋಸೇಫನು ಬಂದಾಗ ಅವನ ಅಣ್ಣಂದಿರು ಅವನನ್ನು ಹಿಡಿದು ಅವನ ನಿಲುವಂಗಿಯನ್ನು ಹರಿದುಹಾಕಿ
ಆದಿಕಾಂಡ 37 : 24 (ERVKN)
ನೀರಿಲ್ಲದ ಒಂದು ಬಾವಿಯೊಳಗೆ ತಳ್ಳಿದರು. [PE][PS]
ಆದಿಕಾಂಡ 37 : 25 (ERVKN)
ಯೋಸೇಫನು ಬಾವಿಯೊಳಗಿದ್ದಾಗ, ಅವನ ಅಣ್ಣಂದಿರು ಊಟಕ್ಕೆ ಕುಳಿತುಕೊಂಡರು. ಅವರು ಕಣ್ಣೆತ್ತಿ ನೋಡಿದಾಗ ಗಿಲ್ಯಾದಿನಿಂದ ಈಜಿಪ್ಟಿಗೆ ಹೋಗುತ್ತಿದ್ದ ವ್ಯಾಪಾರಿಗಳನ್ನು ಕಂಡರು. ಅವರ ಒಂಟೆಗಳು ಅನೇಕ ಬಗೆಯ ಸಾಂಬಾರ ಪದಾರ್ಥಗಳನ್ನು ಮತ್ತು ಬೆಲೆಬಾಳುವ ವಸ್ತುಗಳನ್ನು ಹೊತ್ತುಕೊಂಡು ಹೋಗುತ್ತಿದ್ದವು.
ಆದಿಕಾಂಡ 37 : 26 (ERVKN)
ಆದ್ದರಿಂದ ಯೆಹೂದನು ತನ್ನ ಸಹೋದರರಿಗೆ, “ನಾವು ನಮ್ಮ ತಮ್ಮನನ್ನು ಕೊಂದು ಅವನ ಮರಣವನ್ನು ಮರೆಮಾಡಿದರೆ ನಮಗಾಗುವ ಲಾಭವೇನು?
ಆದಿಕಾಂಡ 37 : 27 (ERVKN)
ಈ ವ್ಯಾಪಾರಿಗಳಿಗೆ ನಾವು ಅವನನ್ನು ಮಾರಿದರೆ ನಮಗೆ ಹೆಚ್ಚು ಲಾಭವಾಗುವುದು; ಆಮೇಲೆ ನಮ್ಮ ತಮ್ಮನನ್ನು ಕೊಂದ ಅಪರಾಧವೂ ನಮ್ಮ ಮೇಲಿರುವುದಿಲ್ಲ” ಎಂದು ಹೇಳಿದನು. ಅದಕ್ಕೆ ಉಳಿದ ಸಹೋದರರೆಲ್ಲ ಒಪ್ಪಿಕೊಂಡರು.
ಆದಿಕಾಂಡ 37 : 28 (ERVKN)
ಮಿದ್ಯಾನಿನ ವ್ಯಾಪಾರಿಗಳು ಸಮೀಪಿಸಿದಾಗ, ಅಣ್ಣಂದಿರು ಯೋಸೇಫನನ್ನು ಬಾವಿಯೊಳಗಿಂದ ಹೊರತೆಗೆದು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು. ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿಗೆ ಕೊಂಡೊಯ್ದರು. [PE][PS]
ಆದಿಕಾಂಡ 37 : 29 (ERVKN)
ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.
ಆದಿಕಾಂಡ 37 : 30 (ERVKN)
ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು.
ಆದಿಕಾಂಡ 37 : 31 (ERVKN)
ಬಳಿಕ ಅವರು ಒಂದು ಆಡನ್ನು ಕತ್ತರಿಸಿ ಆಡಿನ ರಕ್ತವನ್ನು ಯೋಸೇಫನ ಸುಂದರವಾದ ನಿಲುವಂಗಿಯ ಮೇಲೆ ಹಾಕಿದರು.
ಆದಿಕಾಂಡ 37 : 32 (ERVKN)
ಬಳಿಕ ಆ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತೆಗೆದುಕೊಂಡು ಹೋಗಿ, “ನಾವು ಈ ನಿಲುವಂಗಿಯನ್ನು ಕಂಡೆವು. ಇದು ಯೋಸೇಫನ ನಿಲುವಂಗಿಯೋ?” ಎಂದು ಕೇಳಿದರು. [PE][PS]
ಆದಿಕಾಂಡ 37 : 33 (ERVKN)
ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ
ಆದಿಕಾಂಡ 37 : 34 (ERVKN)
ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.
ಆದಿಕಾಂಡ 37 : 35 (ERVKN)
ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು. [PE][PS]
ಆದಿಕಾಂಡ 37 : 36 (ERVKN)
ಮಿದ್ಯಾನಿನ ವ್ಯಾಪಾರಿಗಳು ಯೋಸೇಫನನ್ನು ಈಜಿಪ್ಟಿನಲ್ಲಿ ಮಾರಿದರು. ಅವರು ಅವನನ್ನು ಫರೋಹನ ಕಾವಲುಗಾರರಿಗೆ ನಾಯಕನಾಗಿದ್ದ ಪೋಟೀಫರನಿಗೆ ಮಾರಿದರು. [PE]

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36

BG:

Opacity:

Color:


Size:


Font: